Connect with us

Uncategorized

Ajith Rai KAS | ಬೇನಾಮಿ ಆಸ್ತಿಯೊಂದಿಗೆ ಕಂತೆ ಕಂತೆ ನೋಟ್ ಪತ್ತೆ – ಪುತ್ತೂರು ಮೂಲದ ಬೆಂಗಳೂರಿನ ತಹಸೀಲ್ದಾರ್ ಅಜಿತ್ ರೈ ಬಂಧನ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಕೆ.ಆರ್.ಪುರ ತಾಲ್ಲೂಕಿನ ತಹಶೀಲ್ದಾರ್ ,ಕೆಎಎಸ್ ಅಧಿಕಾರಿ, ಪುತ್ತೂರಿನ ಸೊರಕೆಯ ಅಜಿತ್ ಕುಮಾರ್ ರೈ (Ajith Rai KAS) ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

‘ಅಜಿತ್‌ ಭಾರಿ ಪ್ರಮಾಣದ ಬೇನಾಮಿ ಆಸ್ತಿಗಳನ್ನು ಹೊಂದಿರುವ ದಾಖಲೆಗಳು ಪತ್ತೆಯಾಗಿವೆ. ಅವುಗಳ ಕುರಿತು ವಿಚಾರಣೆ ನಡೆಸಬೇಕಿದೆ. ಬೇನಾಮಿ ವ್ಯಕ್ತಿಗಳನ್ನೂ ವಿಚಾರಣೆ ಮಾಡಬೇಕಿದೆ. ಬುಧವಾರ ತಡ ರಾತ್ರಿ ಆರೋಪಿಯನ್ನು ವಶಕ್ಕೆ ಪಡೆದಿದ್ದೆವು. ಗುರುವಾರ ಬೆಳಿಗ್ಗೆ ಬಂಧಿಸಿದ್ದೇವೆ’ ಎಂದು ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ ಪಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈವರೆಗೆ 150 ಎಕರೆಗೂ ಹೆಚ್ಚು ಬೇನಾಮಿ ಆಸ್ತಿಗಳ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ಆಸ್ತಿಗಳ ಮೂಲ ಮತ್ತು ಖರೀದಿ ಕುರಿತು ಸರಿಯಾದ ಮಾಹಿತಿ ಒದಗಿಸುತ್ತಿಲ್ಲ. ಈ ಕಾರಣದಿಂದ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ಲೋಕಾಯುಕ್ತ ದಾಳಿ ಸಂದರ್ಭ ಅಜಿತ್ ರೈ ಮನೆಯಲ್ಲಿ ಸಹೋದರರ ಮನೆಯಲ್ಲಿ , ಆಪ್ತರ ಮನೆಗಳಲ್ಲಿ ಹಾಗೂ ಪುತ್ತೂರಿನ ಸೊರಕೆಯ ಮನೆಯಲ್ಲಿ ಭಾರಿ ಪ್ರಮಾಣದ ಕಂತೆ ಕಂತೆ ಹಣ, ಚಿನ್ನ, ವಾಚ್ , ವಿದೇಶಿ ಮದ್ಯಗಳು ಪತ್ತೆಯಾಗಿದೆ.



Ad Widget
Ad Widget
Click to comment

Leave a Reply

Uncategorized

ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು

Published

on



Ad Widget

Ad Widget

Ad Widget

Ad Widget

ಪುತ್ತೂರು, ಅ.5: ವಿಚಾರಣೆ ನಡೆಯುತ್ತಿದ್ದ ವೇಳೆ ನ್ಯಾಯಾಲಯದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್., ಶಾಹಿರ್ ಅಲಿಯಾಸ್ ಶಾಕಿರ್ (41) ಶಿಕ್ಷೆಗೆ ಗುರಿಯಾದ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 120/2008ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 450, 302 ಮತ್ತು 201ರ ಅಡಿಯಲ್ಲಿ ಆರೋಪಿಯಾಗಿದ್ದ ಶಾಕಿರ್‌ನನ್ನು 2016ರ ಏಪ್ರಿಲ್ 5ರಂದು ಮಂಗಳೂರು ಕಾರಾಗೃಹದಿಂದ ವಿಚಾರಣೆಗಾಗಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

Ad Widget

Ad Widget <> Ad Widget

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಲು ಆತ ಯತ್ನಿಸಿದ್ದ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 224ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.



Ad Widget

ಪ್ರಕರಣದ ತನಿಖೆ ನಡೆಸಿದ ಅಂದಿನ ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಖಾದರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಅ.5ರಂದು ಆರೋಪಿಗೆ ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದರು.

Ad Widget

Ad Widget

ಕಾನೂನು ಅಭಿಯೋಜಕ ಮನೋಜ್ ಕುಮಾರ್ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Ad Widget
Continue Reading

Uncategorized

ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ

Published

on



Ad Widget

Ad Widget

Ad Widget

Ad Widget

ಪುತ್ತೂರು, ಅ.5: ಪರವಾನಿಗೆ ಇಲ್ಲದೆ 11 ಜಾನುವಾರುಗಳನ್ನು ಪಿಕಪ್‌ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಅ.5ರಂದು ಬೆಳಗಿನ ಜಾವ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ದೊರೆತಿತ್ತು. ಅದರಂತೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್‌ ವಾಹನವನ್ನು ತಡೆದು ಪರಿಶೀಲಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ವೇಳೆ ವಾಹನದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ. ವಾಹನ ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸಕ್ಕಾಗಿ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(d) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



Ad Widget

ತನಿಖೆ ಮುಂದುವರಿಸಿದ ಪೊಲೀಸರು, ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪದ ಮೇರೆಗೆ ಶಿವಪ್ರಸಾದ್‌ನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿರುವ ವಾಹನ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading

Uncategorized

Mangalore-ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿ; ವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ

Published

on



Ad Widget

Ad Widget

Ad Widget

Ad Widget

ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ – ತೃತೀಯ ಬಿಬಿಎ, ಭೂಮಿಕಾ – ತೃತೀಯ ಬಿಎ, ಹೇಮಲತಾ – ತೃತೀಯ ಬಿಎ, ರಶ್ಮಿತ. ಎನ್ – ತೃತೀಯ ಬಿಸಿಎ, ನಿಕ್ಷಿತ – ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ – ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ – ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ – ಪ್ರಥಮ ಬಿಕಾಂ, ಸೋನಾಲಿ ಎಸ್ಎನ್ – ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.

Ad Widget

Ad Widget <> Ad Widget

ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading