ರಾಜಕೀಯ
Lokayukta Raid on Ajit Rai : ಅಜಿತ್ ರೈ ಸೊರಕೆ ಬಳಿ 500 ಕೋ. ರೂ. ಅಸ್ತಿ ಪತ್ತೆ – ತನಿಖೆಗೆ ಇತಿಹಾಸದಲ್ಲೆ ಮೊದಲ ಬಾರಿಗೆ ಲೋಕಾಯುಕ್ತದಿಂದ SIT ರಚನೆ ;
ಬೆಂಗಳೂರು: ಅಕ್ರಮ ಅಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ. ಕೆ ಅರ್. ಪುರ ತಾಲೂಕಿನ ಹಿಂದಿನ ತಹಶಿಲ್ದಾರ್ ಅಜೀತ್ ರೈ ಸೊರಕೆ ವಿರುದ್ದದ ತನಿಖೆಗೆ ಲೋಕಾಯುಕ್ತ ಪೊಲೀಸರು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದ್ದಾರೆ. ಒಬ್ಬ ವ್ಯಕ್ತಿಯ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಲೋಕಾಯುಕ್ತದಲ್ಲಿ ಇದೇ ಮೊದಲ ಬಾರಿಗೆ ಎಸ್ಐಟಿ ರಚಿಸಲಾಗಿದೆ. ಅಜಿತ್ ಬಳಿ ದ.ಕ ಮೂಲದ ಪ್ರತಿಷ್ಟಿತ ರಾಜಕಾರಣಿಯೊಬ್ಬರ ಬೇನಾಮಿ ಅಸ್ತಿ ಇರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಎಸ್ಐಟಿ ರಚಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆ ಅರ್.ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್ ಆಗಿರುವ ಅಜಿತ್ ಕುಮಾರ್ ರೈ ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ಬಳಿಯ ಸಾಗು ನಿವಾಸಿ ದಿ. ಅನಂದ ರೈಯವರ ಪುತ್ರ. ರೂ. 500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿ ಗಳಿಸಿರುವ ಆರೋಪ ಅವರ ಮೇಲಿದೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಡಿವೈಎಸ್ಪಿ ಪ್ರಮೋದ್ ಕುಮಾರ್ ಎಸ್ಐಟಿಯ ನೇತೃತ್ವ ವಹಿಸಿದ್ದಾರೆ. ಅವರ ಜತೆ ಇಬ್ಬರು ಡಿವೈಎಸ್ಪಿ, ನಾಲ್ವರು ಇನ್ಸ್ಪೆಕ್ಟರ್ಗಳು ತಂಡದಲ್ಲಿದ್ದಾರೆ. ಹಲವು ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಈ ತಂಡಕ್ಕೆ ನಿಯೋಜಿಸಲಾಗಿದೆ.
ಪ್ರತಿಷ್ಟಿತ ರಾಜಕಾರಣಿಯ ಬೇನಾಮಿ ಅಸ್ತಿ…!
ಅಜಿತ್ ಕುಮಾರ್ ಬಳಿ ಇರುವ ಅಸ್ತಿಯಲ್ಲಿ ರಾಜ್ಯದ ಪ್ರತಿಷ್ಟಿತ ಹಾಗೂ ಮನೆ ಸಮೀಪದ ರಾಜಕಾರಣಿಯೊಬ್ಬರ ಪಾಲು ಇದೆ ಎಂಬ ಗುಮಾನಿಗಳಿರುವ ಹಾಗೂ ಈ ಬಗ್ಗೆ ಮಹತ್ವದ ದಾಖಲೆಗಳು ಲಭಿಸಿರುವ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ದಳ ರಚಿಸಿದೆ ಎಂದು ತಿಳಿದು ಬಂದಿದೆ. ಬಿಟ್ ಕಾಯಿನ್ ಪ್ರಕರಣಕ್ಕೂ ಅಜಿತ್ ರೈಗೂ ಲಿಂಕ್ ಇದೆ ಎಂಬ ಅನುಮಾನಗಳು ಲೋಕಾಯುಕ್ತಕ್ಕಿದೆ ಎನ್ನಲಾಗುತ್ತಿದೆ. ಈ ಕುರಿತು ಸಾರ್ವಜನಿಕರು ಮಾಹಿತಿ ನೀಡಿದ್ದು, ಆ ಬಗ್ಗೆಯೂ ಪರಿಶೀಲನೆಗೆ ತನಿಖಾ ತಂಡ ಮುಂದಾಗಿದೆ.
11 ಸ್ಥಳಗಳಿಗೆ ದಾಳಿ
ಈ ಹಿನ್ನಲೆಯಲ್ಲಿ ಅಜಿತ್ ರೈ ಮನೆ ಹಾಗೂ ಅವರ ಬೇನಾಮಿಗಳೆಂದು ಶಂಕಿಸಲಾದ ಹಲವರ ಮನೆಗಳು ಸೇರಿದಂತೆ 11 ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು.
ಇನ್ನೂ ಶೋಧ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿಲ್ಲ. 150 ಎಕರೆಗೂ ಹೆಚ್ಚು ಜಮೀನು, ದುಬಾರಿ ಬೆಲೆಯ 11 ಐಷಾರಾಮಿ ಕಾರುಗಳು ಸೇರಿದಂತೆ ಸದ್ಯದ ಮಾರುಕಟ್ಟೆ ಬೆಲೆಯಲ್ಲಿ ₹500 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಪತ್ತೆಮಾಡಲಾಗಿದೆ.
ಅಜಿತ್ ಕುಮಾರ್ ರೈ ತಮ್ಮ ಸೇವಾವಧಿಯಲ್ಲಿ ವೇತನ ಮತ್ತು ಭತ್ಯೆ ರೂಪದಲ್ಲಿ ಒಟ್ಟು ₹1.20 ಕೋಟಿಯಷ್ಟು ಪಡೆದಿದ್ದಾರೆ. ಅವರ ಬಳಿ 11 ದುಬಾರಿ ಬೆಲೆಯ ಕಾರುಗಳು ಪತ್ತೆಯಾಗಿವೆ. ಅವುಗಳಲ್ಲಿ ಲ್ಯಾಂಡ್ ಕ್ರೂಸರ್ (₹2.5 ಕೋಟಿ) ಒಂದರ ಬೆಲೆಯೇ ಆರೋಪಿಯ ಒಟ್ಟು ವೇತನ ಭತ್ಯೆಯ ಎರಡು ಪಟ್ಟಿಗಿಂತ ಹೆಚ್ಚಾಗಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಹೇಳಿವೆ.
ಸಾವಿರಾರು ಪುಟಗಳ ದಾಖಲೆ ವಶ
ಶೋಧದ ವೇಳೆ ಸಾವಿರಾರು ಪುಟಗಳಷ್ಟು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳನ್ನು ಪರಿಶೀಲಿಸಿ, ವಿಂಗಡಿಸುವ ಕೆಲಸವನ್ನು ತನಿಖಾ ತಂಡ ಮಾಡುತ್ತಿದೆ.ಬೇನಾಮಿಗಳ ಜತೆ ಅಜಿತ್ ರೈ ನಿಕಟ ನಂಟು ಹೊಂದಿರುವುದಕ್ಕೆ ಹಲವು ಪುರಾವೆಗಳೂ ಲಭಿಸಿವೆ. ಈ ಎಲ್ಲ ದಾಖಲೆಗಳ ಆಧಾರದಲ್ಲಿ ತನಿಖೆಯನ್ನು ಮತ್ತಷ್ಟು ವಿಸ್ತರಿಸಲು ಸಿದ್ಧತೆ ನಡೆದಿದೆ.
‘ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಅಜಿತ್ ರೈ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಆದರೆ, ಈಗ ಪ್ರಕರಣವು ಒಂದು ಹಗರಣದ ಸ್ವರೂಪಕ್ಕೆ ತಲುಪಿದೆ. ಬಹು ಆಯಾಮದಲ್ಲಿ ತನಿಖೆ ನಡೆಸುವುದು ಅಗತ್ಯವಿದೆ. ಈ ಕಾರಣದಿಂದ ಎಸ್ಐಟಿ ರಚಿಸಲಾಗಿದೆ. ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆ ನಡೆಸಲಿದೆ’ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಬೇನಾಮಿದಾರರ ವಿಚಾರಣೆಗೆ ಸಿದ್ಧತೆ:
ಆರೋಪಿಯ ಸಹೋದರ ಆಶಿತ್ ರೈ, ನಿಕಟವರ್ತಿಗಳಾದ ಗೌರವ್ ಶೆಟ್ಟಿ ಮತ್ತು ಕೃಷ್ಣಪ್ಪ ಸೇರಿದಂತೆ ಕೆಲವರ ಹೆಸರಿನಲ್ಲಿ ಹೆಚ್ಚಿನ ಸ್ಥಿರಾಸ್ತಿಗಳಿವೆ. ಬೇನಾಮಿಗಳೆಂದು ಗುರುತಿಸಿರುವ ಎಲ್ಲ ವ್ಯಕ್ತಿಗಳನ್ನೂ ವಿಚಾರಣೆ ನಡೆಸಲು ತನಿಖಾ ತಂಡ ಮುಂದಾಗಿದೆ. ಒಂದೆರಡು ದಿನಗಳಲ್ಲಿ ಎಲ್ಲರಿಗೂ ನೋಟಿಸ್ ಜಾರಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಏಳು ದಿನ ತನಿಖಾ ತಂಡದ ವಶಕ್ಕೆ
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಕುರಿತು ಹೆಚ್ಚಿನ ವಿಚಾರಣೆಗಾಗಿ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಗುರುವಾರ ಅಜಿತ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-78) ಆರೋಪಿಯನ್ನು ಶುಕ್ರವಾರ ಮಧ್ಯಾಹ್ನ ಹಾಜರುಪಡಿಸಿದರು.
ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಅದನ್ನು ಮಾನ್ಯ ಮಾಡಿದ ನ್ಯಾಯಾಧೀಶ ಎಸ್.ವಿ. ಶ್ರೀಕಾಂತ್ ಆರೋಪಿಯನ್ನು ತನಿಖಾ ತಂಡದ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ನಗುತ್ತಲೇ ಇದ್ದ ರೈ:
ಶುಕ್ರವಾರ ಬೆಳಿಗ್ಗೆ ಅಜಿತ್ ರೈ ಅವರನ್ನು ಲೋಕಾಯುಕ್ತ ಕಚೇರಿಗೆ ಕರೆತಂದು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಲೋಕಾಯುಕ್ತ ಕಚೇರಿಗೆ ಬರುವಾಗ ನ್ಯಾಯಾಲಯಕ್ಜೆ ಹಾಜರಾಗುವಾಗ ಹಿಂತಿರುಗುವಾಗ ಆರೋಪಿ ಅಧಿಕಾರಿ ನಗುಮೊಗದಲ್ಲೇ ಇದ್ದರು.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್ಅಪ್ಗಳು, ಡೀಪ್ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
ಅಂತರ ರಾಜ್ಯ
CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.
“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.
“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್–ಎಸ್ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್ಪಿ ವಿರುದ್ಧ ಕಿಡಿಕಾರಿದ್ದಾರೆ.
ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
-
ನಿಧನ ವಾರ್ತೆ9 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಪರಾಧ8 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ9 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ9 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ9 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಬಿಗ್ ನ್ಯೂಸ್3 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ7 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ಬಿಗ್ ನ್ಯೂಸ್3 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ















