ಪುತ್ತೂರು
ವಿಜಯೋತ್ಸವದ ಪಟಾಕಿ ದುಂದುವೆಚ್ಚದ ಬದಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ’ವಿದ್ಯಾರ್ಥಿ ಉದ್ಯೋಗ ಮಿತ್ರ’ ಹಂಚಿದ ಪುತ್ತೂರು ಶಾಸಕ ಅಶೋಕ್ ರೈ ಅಭಿಮಾನಿಗಳು – ಎ.ಆರ್ ವಾರಿಯರ್ಸ್ 7 ವರ್ಷದ ಸಂಭ್ರಮ
ಪುತ್ತೂರು: ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದಿಂದ ವಿಜಯವನ್ನು ಸಾಧಿಸಿದ ಅಶೋಕ್ ಕುಮಾರ್ ರೈ ಅವರು ಅಭಿಮಾನಿಗಳಲ್ಲಿ ವಿಜಯೋತ್ಸವದ ಹೆಸರಿನಲ್ಲಿ ದುಂದುವೆಚ್ಚವನ್ನು ಮಾಡದೆ, ಬಡವರಿಗೆ ನೆರವಾಗುವಂತೆ ಕರೆಯನ್ನು ನೀಡಿದ್ದರು. ಎ. ಆರ್. ವಾರಿಯರ್‍ಸ್ ತಂಡ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೆರವಾಗುವ ’ವಿಜಯವಾಣಿ ಪತ್ರಿಕೆಯ’ ’ವಿದ್ಯಾರ್ಥಿ ಉದ್ಯೋಗ ಮಿತ್ರ’ ಪತ್ರಿಕೆಯನ್ನು ಶೈಕ್ಷಣಿಕ ವರ್ಷ ಪೂರ್ತಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಚುನಾವಣೆಯನ್ನು ಗೆದ್ದಾಗ ಮೆರವಣೆಗೆ, ಸನ್ಮಾನ, ವಿಜಯೋತ್ಸವ ಮಾಡದೆ, ಆ ಹಣವನ್ನು ಸಮಾಜದ ಬಡವರಿಗಾಗಿ ವಿನಿಯೋಗ ಮಾಡಬೇಕು ಎಂಬ ಸೂಚನೆಯನ್ನು ಕಾರ್ಯಾಕರ್ತರಿಗೆ ನೀಡಲಾಗಿದ್ದು, ವಿಜಯವಾಣಿ ಪತ್ರಿಕೆಯನ್ನು ಬಡ ವಿದ್ಯಾರ್ಥಿಗಳಿಗೆ ಒಂದು ವರ್ಷ ಉಚಿತವಾಗಿ ನೀಡುವ ಮೂಲಕ ಸಹಾಯಕ್ಕೆ ಮುಂದಾಗಿದ್ದಾರೆ ಎಂದು ತಿಳಿಸಿದರು.
ಎ.ಆರ್ ವಾರಿಯರ್ಸ್ ಕಾರ್ಯ ಚಟುವಟಿಕೆ:
ಅಶೋಕ್ ಕುಮಾರ್ ರೈ ಅಭಿಮಾನ ಬಳಗವಾದ ಎ.ಆರ್. ವಾರಿಯರ್‍ಸ್ ಪ್ರಜ್ವಲ್ ರೈ ಪಾತಾಜೆ ನೇತೃತ್ವದಲ್ಲಿ 7 ವರ್ಷದಿಂದ ಮುನ್ನೆಡೆಯುತ್ತಿದೆ. ಕಳೆದ ಏಳು ವರ್ಷಗಳಿಂದ ರಕ್ತದಾನ, ಕೋವಿಡ್ ಸಂದರ್ಭದಲ್ಲಿ ಆಹಾರದ ಕಿಟ್ ವಿತರಣೆ, ವಿವಿಧ ಕಡೆಯಲ್ಲಿ ಶ್ರಮಧಾನ, ಬದವರಿಗೆ ಪಡಿತರ ವಿತರಣೆ, ದೇವಸ್ಥಾನದ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಕಾರ್ಯ ಮಾಡಿಕೊಂಡು ಬರುತ್ತಿದೆ.
ಚುನಾವಣೆ ಗೆಲುವಿನ ಸಂದರ್ಭ ವಿಜಯೋತ್ಸವದಲ್ಲಿ ಪಟಾಕಿ ಸಿಡಿಸದೆ ಉಳಿಕೆ ಮಾಡಿದ ಹಣದಲ್ಲಿ ಸುಮಾರು ೨೦೦ ವಿದ್ಯಾರ್ಥಿಗಳಿಗೆ ಒಂದು ವರ್ಷ ಶೈಕ್ಷಣಿಕ ಚಟುವಟಿಕೆಗೆ ಸಹಾಯವಾಗುವ ವಿದ್ಯಾರ್ಥಿ ಮಿತ್ರವನ್ನು ಉಚಿತವಾಗಿ ಪೂರೈಕೆ ಮಾಡುತ್ತಿದ್ದಾರೆ.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
-
ಪುತ್ತೂರು22 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು
-
ಅಪರಾಧ24 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
Uncategorized3 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized3 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ




















