ಬಿಗ್ ನ್ಯೂಸ್
Crop Insurence : ಹಿಂದಿನ ಬಿಜೆಪಿ ಅಡಳಿತಾವಧಿಯಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಅಡಿಕೆಗೆ ಸಂಬಂಧಿಸಿದ ಹವಾಮಾನ ಆಧಾರಿತ ಬೆಳೆ ವಿಮೆಗೆ ಅನುಮೋದನೆ ನೀಡಿಲ್ಲ : ದಾಖಲೆ ಬಿಡುಗಡೆಗೊಳಿಸಿ ಕಾಂಗ್ರೆಸ್ ಆರೋಪ
ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲೆ ಈ ಮುಂಗಾರು ಹಂಗಾಮಿನ ರಾಜ್ಯ ಮಟ್ಟದ ಬೆಳೆ ವಿಮೆ ಸಮನ್ವಯ ಸಮಿತಿ ಸಭೆ ನಡೆದಿದ್ದು, ಪರಿಷ್ಕೃತ ಮಾರ್ಗಸೂಚಿಯನ್ವಯ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಮಾತ್ರ ರಾಜ್ಯದಲ್ಲಿ ಅನುಮೋದನೆ ನೀಡಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜೀವನಾಡಿಯಾದ ಅಡಕೆ ಹಾಗೂ ಕಾಳುಮೆಣಸಿಗೆಸಿಗುವ ಹವಾಮಾನ ಆಧಾರಿತ ಬೆಳೆ ವಿಮೆಗೆ ಸಂಬಂಧಿಸಿ ಯಾವುದೇ ಅನುಮೋದನೆಯನ್ನು ಸರ್ಕಾರ ಇಲ್ಲಿಯವರೆಗೆ ತೆಗೆದುಕೊಂಡಿಲ್ಲ. ಹೀಗಾಗಿ ಹಿಂದಿನ ಬಿಜೆಪಿ ಸರಕಾರದ ತಪ್ಪು ನಿರ್ಧಾರದಿಂದ ಇಲ್ಲಿನ ರೈತರಿಗೆ ಸಿಗಬೇಕಾದ ಬೆಳೆ ವಿಮೆ ಸಿಗದಂತಾಗಿದೆ. ಆದರೆ ಈ ಸತ್ಯವನ್ನು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುವ ಹಾಗೂ ಇದನ್ನು ಮತ್ತೆ ರೈತರಿಗೆ ಕೊಡಿಸಲು ಶ್ರಮಿಸುತ್ತಿರುವ ಈಗಿನ ಶಾಸಕ ಅಶೋಕ್ ರೈಯವರನ್ನು ದೂರುವ ಕಾರ್ಯವನ್ನು ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠಂದೂರು ಮಾಡಿದ್ದಾರೆಂದು ಪುತ್ತೂರು ಕಾಂಗ್ರೆಸ್ ಆರೋಪಿಸಿದೆ. ಇದರ ಜತೆಗೆ ಪುತ್ತೂರು ಕಾಂಗ್ರೆಸ್ ಇದಕ್ಕೆ ಸಂಬಂಧಿಸಿದೆ ಎನ್ನಲಾದ ಕರ್ನಾಟಕ ಸರಕಾರದ ಸಚಿವಾಲಯ ಜೂ 20 ರಂದು 2023-24ನೇ ಸಾಲಿನ ಮುಂಗಾರು ಹಂಗಾಮಿನ ಬಗ್ಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಕುರಿತಾಗಿ ಹೊರಡಿಸಿದ ಅಧಿಸೂಚನೆಯನ್ನು ನೀಡಿದ್ದಾರೆ
ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲಿ ಮಾತನಾಡಿದ ಆರ್ಯಾಪು ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಮಹಮ್ಮದ್ ಆಲಿ ಮಾತನಾಡಿ ಪ್ರಸಕ್ತ ಸಾಲಿನಲ್ಲಿ ಹವಾಮಾನ ಆಧಾರಿತ ವಿಮಾ ಯೋಜನೆಯನ್ನು ಕೈಬಿಡಲಾಗಿದ್ದು, ಇದಕ್ಕೆ ಹಿಂದಿನ ಬಿಜೆಪಿ ಸರ್ಕಾರ ನೇರ ಕಾರಣವಾಗಿದೆ. ಆಗ ಸಂಜೀವ ಮಠಂದೂರು ಶಾಸಕರಾಗಿದ್ದರು. ಹೀಗಾಗಿ ವಿಮಾ ಯೋಜನೆ ಕೈಬಿಡಲು ಅವರೂ ಕೂಡಾ ಕಾರಣಕರ್ತರಾಗಿದ್ದಾರೆ. ಕಳೆದ 5 ವರ್ಷಗಳಿಂದ ಶಾಸಕರಾಗಿದ್ದ ಸಂಜೀವ ಮಠಂದೂರು ಅವರಿಗೆ ಈ ಯೋಜನೆಯ ಸರಿಯಾದ ಅರಿವೆ ಇಲ್ಲ ಎಂದರು.
ರೈತರಿಗಾದ ಅನ್ಯಾಯ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಅವರು ಈ ವಿಷಯವನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಅಡಕೆ ಮತ್ತು ಕಾಳುಮೆಣಸಿಗೆ ವಿಮಾ ಯೋಜನೆಯನ್ನು ಒದಗಿಸಲು ಪ್ರಯತ್ನ ಪಟ್ಟಿದ್ದಾರೆ. ರೈತರು ಈ ಕಾರ್ಯವನ್ನು ಉಭಯ ಜಿಲ್ಲೆಯ ರೈತರು ಶ್ಲಾಘಿಸುತ್ತಿದ್ದು ಇದು ಮಾಜಿ ಶಾಸಕರಿಗೆ ಹೊಟ್ಟೆ ನೋವಾಗಿದೆ. ಹಾಗಾಗಿಯೇ ಅಶೋಕ ಕುಮಾರ್ ರೈಯವರು ಬೆಳೆ ವಿಮೆ ಕುರಿತಾಗಿ ಜ್ಞಾನವಿಲ್ಲದೆ ಗೊಂದಲಕಾರಿ ಹೇಳಿಕೆ ನೀಡಿರುವುದಾಗಿ ಸಂಜೀವ ಮಠಂದೂರು ಆರೋಪಿಸಿದ್ದು ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಆಲಿ ಸ್ಪಷ್ಟಪಡಿಸಿದರು
ವಿಮಾ ಯೋಜನೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದ ಸಮಯದಿಂದಲೇ ಇದ್ದು, ಆ ವೇಳೆ ಸರಕಾರಿ ಕಂಪೆನಿಗಳು ಅದನ್ನು ನಿರ್ವಹಿಸುತ್ತಿದ್ದವು. ಆದರೆ ಬಿಜೆಪಿ ಸರ್ಕಾರ ಬಂದ ಬಳಿಕ ಅದನ್ನು ಖಾಸಗಿ ವಿಮಾ ಕಂಪನಿಗಳಿಗೆ ನೀಡುವ ಜತೆಗೆ ಕಡ್ಡಾಯಗೊಳಿಸಲಾಗಿದೆ. ಆ ಬಳಿಕ ಅದು ಹೆಚ್ಚು ಜನರನ್ನು ಅಕರ್ಷಿಸಿದೆ. ಈ ಯೋಜನೆ 5 ವರ್ಷಗಳ ಹಿಂದೆ ದೊಡ್ಡ ಮಟ್ಟದ ಪ್ರಚಾರಕ್ಕೆ ಬಂದಿದ್ದು, ಶಾಸಕ ಮಠಂದೂರು ಅವರು ಕೇವಲ 3 ವರ್ಷಗಳಿಂದ ಜಾರಿಯಲ್ಲಿದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಇದರಲ್ಲೆ ಗೊತ್ತಾಗುತ್ತದೆ , ಅವರಿಗೆ ಯೋಜನೆಯ ಬಗ್ಗೆ ಎಷ್ಟು ಜ್ಞಾನವಿದೆ ಎಂಬ ಸಂಗತಿ.
ಕೇಂದ್ರ ಸರ್ಕಾರದ ಯೋಜನೆಯೆಂದು ಪ್ರಚಾರವನ್ನು ಪಡೆದಿದ್ದರೂ, ವಿಮಾ ಕಂತಿನ ಸಿಂಹಪಾಲನ್ನು ರಾಜ್ಯ ಸರಕಾರ ಭರಿಸುತ್ತಿದೆ. ರಾಜ್ಯ ಸರ್ಕಾರ ವಿಮಾ ಕಂತಿನ ಶೇ.52.45 ರಷ್ಟು ಪಾವತಿಸಿದರೇ, ಕೇಂದ್ರ ಕೇವಲ ಶೇ.10 ಮಾತ್ರ ಪಾವತಿಸುತ್ತಿದೆ. ರೈತರು 5% ಪಾವತಿಸುತ್ತಿದೆ. ಆದರೆ ಈ ಬಗ್ಗೆ ಮಾಹಿತಿಯಿಲ್ಲದ ಮಠಂದೂರು ರಾಜ್ಯ ಸರಕಾರ ಕೇವಲ 10% ಮಾತ್ರ ಭರಿಸುತ್ತಿದೆ ಎಂದು ತಪ್ಪು ಮಾಹಿತಿ ರವಾನಿಸಿದ್ದು ಈ ಮೂಲಕ ಯೋಜನೆಯ ಕುರಿತಾಗಿ ತಮಗಿರುವ ಅಜ್ಞಾನವನ್ನು ಭರಿಸಿದ್ದಾರೆ ಎಂದರು. ಇನ್ನೂ ಮಾಜಿ ಶಾಸಕರು ಈ ಯೋಜನೆಯಿಂದ ವಿಮೆ ಕಂಪನಿಗೆ ನಷ್ಟವಾಗಿದೆ ಎಂದು ಹೇಳುವ ಮೂಲಕ ವಿಮಾ ಕಂಪನಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ರೈತರಿಂದ ಕಂಪನಿ ಎಷ್ಟು ಲಾಭವನ್ನು ಪಡೆದಿದೆ ಎಂಬ ದಾಖಲೆಯನ್ನು ನಾವು ಹೊಂದಿದ್ದೇವೆ. ವಿಮಾ ಕಂತಿನ ಮೊತ್ತಕ್ಕಿಂತ ಕಡಿಮೆ ಮೊತ್ತವನ್ನುರೈತ ಪರಿಹಾರವಾಗಿ ಪಡೆದ ಹಲವು ದಾಖಲೆಗಳು ನಮ್ಮ ಬಳಿ ಇದೆ. ಅದುದರಿಂದ ಈ ಯೋಜನೆಯಿಂದ ವಿಮಾ ಕಂಪೆನಿಗೆ ನಷ್ಟವಾಗಿದೆ ಎಂಬ ಮಾಹಿತಿ ಶುದ್ದ ಸುಳ್ಳು ಎಂದು ತಿಳಿಸಿದರು.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.
ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.
-
ನಿಧನ ವಾರ್ತೆ22 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ16 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ20 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು19 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ21 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized14 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ15 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್16 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















