Connect with us

ರಾಜಕೀಯ

Puttila meets BL Santhosh : ಪುತ್ತಿಲರಿಗೆ ಸಿಗುತ್ತಾ ಬಿಜೆಪಿಯಲ್ಲಿ ಸ್ಥಾನಮಾನ ? ಸ್ಥಳೀಯ ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾದ ಬಿ ಎಲ್‌ ಸಂತೋಷ್‌ ಪುತ್ತಿಲ ಭೇಟಿ

Published

on

Ad Widget

Ad Widget

Ad Widget

Ad Widget

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ದ ಬಂಡೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ( Arun Kumar Puttila) ಹಾಗೂ ಅವರ ಬಣದ ಪ್ರಮುಖರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santhosh) ಅವರು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.  ಈ ಮೂಲಕ ಈಗ ಒಡೆದ ಮನೆಯಾಗಿರುವ  ಪುತ್ತೂರು ಬಿಜೆಪಿ ಮತ್ತೆ ಒಂದಾಗುವ ಸಾಧ್ಯತೆಗಳು ಗೋಚರಿಸಿವೆ. ಅರುಣ್ ಪುತ್ತಿಲರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುವ ನಿಟ್ಟಿನಲ್ಲಿ ಈ ಮಾತುಕತೆ ನಡೆದಿದೆ ಎಂದು ನಿಯೋಗದಲ್ಲಿದ್ದ , ಆದರೇ ಹೆಸರು ಬಹಿರಂಗಪಡಿಸಲಿಚ್ಚಸದ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.  ಬೇಟಿ ನಡೆದಿರುವುದನ್ನು ಪುತ್ತಿಲರವರು ಖಚಿತ ಪಡಿಸಿದರಾದರೂ. ಮಾತುಕತೆಯ ವೇಳೆ ಸ್ಥಾನಮಾನದ ಬಗ್ಗೆ ಯಾವುದೇ  ಚರ್ಚೆಗಳು ನಡೆದಿಲ್ಲ ಎಂದು ನಿಖರ ನ್ಯೂಸಿಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ರಾಜಕೀಯ ದಾಳ ಉರುಳಿಸಿದ ಸ್ಥಳೀಯ ನಾಯಕರು

Ad Widget

Ad Widget alt="Ad Widget"/>

Ad Widget

ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ ಹಾಗೂ ರಾಮ್ ಭಟ್ ಉದಾಹರಣೆಯನ್ನು ನೀಡಿ ಎಷ್ಟೇ ದೊಡ್ಡ ನಾಯಕನಾದರೂ ,  ಒಮ್ಮೆ ಪಕ್ಷದ ವಿರುದ್ದವಾಗಿ  ನಡೆದುಕೊಂಡರೆ  ಮತ್ತೆ ಅವರಿಗೆ ಪಕ್ಷದ ಬಾಗಿಲು ಮುಚ್ಚಿದಂತೆ ಎಂದು ಬಿಂಬಿಸುತ್ತಿದ್ದ ಪುತ್ತೂರಿನ ಬಿಜೆಪಿಯ ಹಿರಿ ತಲೆಗಳಿಗೆ ಈ ಬೆಳವಣಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.  ಪಕ್ಷದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕಳೆದ ಮೂವತ್ತು ವರ್ಷದಿಂದ ಹೊಸ ನೆತ್ತರಿಗೆ ಅವಕಾಶ ಮಾಡಿಕೊಡದೆ  ಪಕ್ಷದ  ಅಯಕಟ್ಟಿನ ಹುದ್ದೆಯಲ್ಲಿ ರೋಟೆಷನ್ ಪದ್ದತಿಯಲ್ಲಿ ವಿರಾಜಮಾನರಾಗಿದ್ದವರಿಗೆ ಈ ಬೆಳವಣಿಗೆ ಅಭದ್ರತೆಯನ್ನು ತಂದೊಡ್ಡಿದೆ. ಹೀಗಾಗಿ ಪುತ್ತಿಲ ಬಣದ ದೆಹಲಿ ಭೇಟಿಯ ಮಾಹಿತಿ ಬಹಿರಂಗವಾಗುತ್ತಿದ್ದಂತೆ , ರಾಜಕೀಯ ಚದುರಂಗದಾಟದಲ್ಲಿ ನಿಪುಣರಾಗಿರುವ ಈ ಪ್ರಮುಖರು  ಪುತ್ತಿಲ ಪರಿವಾರ ಹಾಗೂ ಬಿಜೆಪಿ ನಡುವಿನ ಅಂತರವನ್ನು ಹೆಚ್ಚಿಸುವ ಉದ್ದೇಶದಿಂದ ಗಣೇಶೋತ್ಸವ ಸಮಿತಿಯ ಮೂಲಕ ತಮ್ಮ ದಾಳ ಉರುಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Ad Widget

Ad Widget <> Ad Widget

ಇದು ಎರಡನೇ ಭೇಟಿ

ಅರುಣ್ ಪುತ್ತಿಲ, ಭಾಸ್ಕರ್ ಆಚಾರ್ಯ ಹಿಂದಾರು, ಪುತ್ತೂರಿನ ಖ್ಯಾತ ವೈದ್ಯ ಹಾಗೂ ಪುತ್ತಿಲ ಪರಿವಾರದ ಬೆನ್ನೆಲುಬು ಎಂದೆ ಪರಿಗಣಿತರಾಗಿರುವ ಡಾ. ಸುರೇಶ್ ಪುತ್ತೂರಾಯ, ಉದ್ಯಮಿ ಗಣೇಶ್ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪುತ್ತಿಲ ಪರ ಬ್ಯಾಟ್ ಬೀಸಿದ ರಾಜರಾಮ್ ಬಿ ಎಲ್ ಸಂತೋಷರನ್ನು ಭೇಟಿ ಮಾಡಿದ ಪ್ರಮುಖರು. ಈ ಭೇಟಿ ಎರಡು ವಾರದ ಹಿಂದೆ ದೆಹಲಿಯಲ್ಲಿ  ನಡೆದಿದೆ. ಅದಕ್ಕೂ ಮೊದಲು ,ಚುನಾವಣೆ ನಡೆದ ಎರಡು  ವಾರದ ಬಳಿಕ, ಅರುಣ್ ಪುತ್ತಿಲರನ್ನು ಹೊರತುಪಡಿಸಿ,  ಪುತ್ತಿಲ ಪರಿವಾರದ ಕೆಲ ಪ್ರಮುಖರು  ಕರಾವಳಿಯ ಪ್ರಮುಖ ಮಠಾದೀಶರೊಬ್ಬರ ಮೂಲಕ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ನಿಯೋಗದಲ್ಲೂ ಭಾಸ್ಕರ್ ಆಚಾರ್ಯ ಹಿಂದಾರು ಮತ್ತು ಸುರೇಶ್ ಪುತ್ತೂರಾಯರಿದ್ದರು. ಅದರ ಮುಂದಿನ ಬೆಳವಣಿಗೆಯಾಗಿ ದೆಹಲಿ ಭೇಟಿ ನಡೆದಿದೆ ಎಂದು ಹೇಳಲಾಗುತ್ತಿದೆ.

Ad Widget

Ad Widget

ವಸ್ತು ಸ್ಥಿತಿಯ ಮಾಹಿತಿ

ಮೂಲಗಳ ಪ್ರಕಾರ ದೆಹಲಿಯಲ್ಲಿ  ಬಿ ಎಲ್ ಸಂತೋಷ್ ಅವರು ಎರಡು ಗಂಟೆಗೂ ಅಧಿಕ ಕಾಲ ಪುತ್ತಿಲ ಪರಿವಾರದ  ಪ್ರಮುಖರ ಜತೆ ಮಾತುಕತೆ ನಡೆಸಿದ್ದು ಈ ವೇಳೆ  ಪುತ್ತೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ವಸ್ತು ಸ್ಥಿತಿಯ ಬಗ್ಗೆ ವಿವರವಾದ ಮಾಹಿತಿ ಪಡೆದಿದ್ದಾರೆ. ಪಕ್ಷದ ಸ್ಥಳೀಯ ಮುಖಂಡರು, ಹೊಸ ನಾಯಕರನ್ನು ಹಾಗೂ  ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ , ಇದರಿಂದ ಪಕ್ಷದ ಬಗ್ಗೆ ಕಾರ್ಯಕರ್ತರಿಗಿರುವ ಅತೃಪ್ತಿಯ ಬಗ್ಗೆ ಮನದಟ್ಟು ಮಾಡಿದ್ದಾರೆ. ಈ ಕುರಿತ   ಬಹುತೇಕ ಮಾಹಿತಿ ಈಗಾಗಲೇ ಸಂತೋಷ್ ಬಳಿಯಿತ್ತು ಎಂದು ತಿಳಿದು ಬಂದಿದೆ. 

ಹಳಬರ ಕಪಿ ಮುಷ್ಟಿ

ಪುತ್ತೂರಿನಲ್ಲಿ ಪಕ್ಷ ಕೆಲವೇ ಕೆಲವು ಹಳಬರ ಕಪಿ ಮುಷ್ಟಿಯಲ್ಲಿರುವುದು ಸಂತೋಷ್ ಅವರ ಗಮನಕ್ಕೂ ಬಂದಿದೆ ಎನ್ನಲಾಗುತ್ತಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬಳಿಕ, ಪಕ್ಷದ ಸಂಘಟನೆಯ ಪ್ರಮುಖರು ಹಲವು ದಿನಗಳ ಕಾಲ ಅಭ್ಯರ್ಥಿ ಪರ ಮತ ಯಾಚನೆಯಲ್ಲಿ ತೊಡಗಿಸಿಕೊಳ್ಳದಿರುವುದು ಹಾಗೂ ಪಕ್ಷದ ಕಾರ್ಯಕರ್ತರನ್ನು ಹುರಿದಂಬಿಸುವ ಯಾ ಕೆಲಸಕ್ಕೆ ಹಚ್ಚುವ ಕಾರ್ಯ ಮಾಡದಿರುವುದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೂ ಬಂದಿತರುವುದಾಗಿ ತಿಳಿದು ಬಂದಿದೆ. ಚುನಾವಣೆಯ ಪ್ರಮುಖ ಕಾಲಘಟ್ಟದಲ್ಲಿ ಪಕ್ಷದ ಸ್ಥಳೀಯ ನಾಯಕರ ವರ್ತನೆ ಹೈಕಮಾಂಡ್ ಗೆ ಕಗ್ಗಾಂಟಾಗಿ ಪರಿಣಮಿಸಿತ್ತು.  ಹೀಗಾಗಿ  ಚುನಾವಣಾ ಸಂದರ್ಭದಲ್ಲಿ ಸ್ವತ: ಸಂತೋಷ್ ಪುತ್ತೂರಿಗೆ ಭೇಟಿ ನೀಡಿ ಪಕ್ಷದ ನಾಯಕರಿಗೆ ಚಾರ್ಜ್ ಮಾಡಿದ್ದರು ಎನ್ನಲಾಗಿದೆ.

ಸಂಘದ ಇಮೇಜಿಗೂ ದಕ್ಕೆ

ಪುತ್ತೂರಿನ ಬಿಜೆಪಿಯ ಅಯಕಟ್ಟಿನಲ್ಲಿರುವ ಮುಖಂಡರುಗಳಿಗೆ ಕಾರ್ಯಕರ್ತರ ಹಿಡಿತವಾಗಲಿ , ಅವರ ಜತೆ ಅನೊನ್ಯ ಸಂಬಂಧವಾಗಲಿ ಇಲ್ಲದಿರುವುದು ಈ ಚುನಾವಣಾ ಸಂದರ್ಭ ಪಕ್ಷದ ಉನ್ನತ ನಾಯಕರ ಗಮನಕ್ಕೆ ಬಂದಿದೆ. ಪಕ್ಷ ಅನಿವಾರ್ಯವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಜಿಲ್ಲೆಯ  ಮುಖಂಡರನ್ನು ಹಾಗೂ ಜಿಲ್ಲೆಯ  ಮತ್ತು ಹೊರ ಜಿಲ್ಲೆಯ ಸ್ವಯಂ ಸೇವಕರನ್ನು ಚುನಾವಣಾ ಪ್ರಚಾರಕ್ಕೆ ಬಹಿರಂಗವಾಗಿ ಬಳಸಿಕೊಳ್ಳ ಬೇಕಾಗಿ ಬಂದಿತ್ತು.  ಸಂಘ ನೇರವಾಗಿ ಚುನಾವಣೆಯಲ್ಲಿ ಗುರುತಿಸಿಕೊಂಡದ್ದು ಸಂಘದ ಇಮೇಜಿಗೂ ದಕ್ಕೆ ತಂದಿತ್ತು.  ಅಲ್ಲದೇ ಸಂಘ ಒಂದು ಬಾರಿ ಚುನಾವಣಾ ಪ್ರಚಾರಕ್ಕಿಳಿದರೆ , ಅದರ ಪ್ರಯೋಗ ಶಾಲೆಯಲ್ಲಿ ಸೋಲೆಂಬ ಮಾತೆ ಇಲ್ಲ ಎಂಬ ಅಲಿಖಿತ ನಿಯಮ ಈ ಬಾರಿ ಪುತ್ತೂರಿನಲ್ಲಿ ಮಣ್ಣು ಪಾಲಾಗಿತ್ತು.  ಅಲ್ಲದೇ ಪಕ್ಷ ಇಲ್ಲಿ ಮೂರನೇ ಸ್ಥಾನಕ್ಕೆ ಕುಸಿಯುವ ಮೂಲಕ ಸಂಘ ಕೂಡ  ಮುಖಭಂಗ ಅನುಭವಿಸುವಂತೆ ಮಾಡಿತ್ತು.

ಅಮೊಲಾಗ್ರ ಬದಲಾವಣೆ

ಹೀಗಾಗಿ ಪುತ್ತೂರು ಬಿಜೆಪಿಯಲ್ಲಿ ಅಮೊಲಾಗ್ರ ಬದಲಾವಣೆ ತರಲು ಹೈಕಮಾಂಡ್ ಮನ ಮಾಡಿದೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ  ಬಿಜೆಪಿಯಲ್ಲಿರುವ ಹಳೇ ತಲೆಗಳಿಗೆ ವಿಶ್ರಾಂತಿ ಕೊಟ್ಟು ಹೊಸ ತಲೆಮಾರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪಕ್ಷದ ಒಳಗಡೆ ಗಂಭೀರ ಚಿಂತನೆ ನಡೆದಿದೆ ಎನ್ನಲಾಗಿದೆ. ಇದರ ಪೂರ್ವಭಾವಿಯಾಗಿ ಪುತ್ತಿಲ ಬಳಗ ಹಾಗೂ ಬಿ ಎಲ್ ಸಂತೋಷ್ ಮದ್ಯೆ ಮಾತುಕತೆ ನಡೆದಿದೆಯೆಂದು ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

Ad Widget
Click to comment

Leave a Reply

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ರಾಜಕೀಯ

Puttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ

Published

on

Ad Widget

Ad Widget

Ad Widget

Ad Widget

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಬಂಟರ ಭವನದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರ ವಿವಾಹ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಇದಲ್ಲದೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಬಿಜೆಪಿ ಶಾಸಕರು ಕೂಡ ಈ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೂಲತಃ ಕಡಬ ತಾಲೂಕಿನ ಸವಣೂರು ಸಮೀಪದ ಕೆಡೆಂಜಿ ಬಳಿಯ ಅರಲ್ತೆಡಿ ನಿವಾಸಿಯಾಗಿರುವ ಪ್ರಶಾಂತ್ ಅವರು ಪ್ರಸ್ತುತ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಾಯಕರ ಈ ಭೇಟಿ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆಯುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪುತ್ತೂರಿನ ವಿವಾಹ ಸಮಾರಂಭಕ್ಕೆ ಆಗಮಿಸಿ, ಕಾರ್ಯಕ್ರಮ ಮುಗಿದ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Ad Widget

Ad Widget

ಪುತ್ತೂರು ಬಿಜೆಪಿಯ ಪುನಶ್ಚೇತನಕ್ಕೆ ಸಿಗಲಿದೆಯೇ ಹೊಸ ದಿಕ್ಸೂಚಿ?
ಇನ್ನೊಂದೆಡೆ, ಕಳೆದ ಮೂರು ವರ್ಷಗಳಿಂದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ರಾಜಕೀಯ ಸಂಘರ್ಷಗಳಿಂದಾಗಿ ಸಂಘಟನಾತ್ಮಕವಾಗಿ ಸವಾಲುಗಳನ್ನು ಎದುರಿಸುತ್ತಿರುವ ಪುತ್ತೂರು ಬಿಜೆಪಿಗೆ ಈ ನಾಯಕರ ಭೇಟಿ ಹೊಸ ಚೈತನ್ಯ ನೀಡುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ನಾಳಿನ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ. ಸ್ಥಳೀಯ ಮಟ್ಟದಲ್ಲಿ ಮುಖಂಡರ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ನಾಯಕರು ಮಧ್ಯಪ್ರವೇಶಿಸಬಹುದೇ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ನಾಯಕರು ಖಾಸಗಿ ಕಾರ್ಯಕ್ರಮಕ್ಕೆ ಮಾತ್ರ ಆಗಮಿಸುತ್ತಿದ್ದರೂ, ಪುತ್ತೂರು ಬಿಜೆಪಿಯ ಇಂದಿನ ಸ್ಥಿತಿಗತಿ ಮತ್ತು ಸಂಘಟನೆಯ ಭವಿಷ್ಯದ ಕುರಿತು ಯಾವುದೇ ಅನೌಪಚಾರಿಕ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ, ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರ ಈ ಭೇಟಿಯು ಕೇವಲ ವಿವಾಹ ಸಮಾರಂಭಕ್ಕೆ ಸೀಮಿತವಾಗುತ್ತದೆಯೇ ಅಥವಾ ಅಥವಾ ಪುತ್ತೂರಿನ ಸ್ಥಳೀಯ ರಾಜಕೀಯಕ್ಕೆ ಯಾವುದಾದರೂ ಹೊಸ ಸಂದೇಶ ನೀಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Ad Widget
Continue Reading

ಅಂತರ ರಾಜ್ಯ

Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಆತಂಕ ವ್ಯಕ್ತಪಡಿಸಿದ್ದರು.

Ad Widget

Ad Widget <> Ad Widget

ರಾಜ್ಯದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿದ್ದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ ಎಂದು ಅವರು ಆರೋಪಿಸಿದ್ದರು. ಈ ವ್ಯತ್ಯಾಸಗಳ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದೂ ತಿಳಿಸಿದ್ದರು.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ, ಚುನಾವಣಾ ಇಲಾಖೆಯು ಮತದಾರರ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ. ಹೀಗಾಗಿ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಅಧಿಕೃತ ವಿಶ್ಲೇಷಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Ad Widget

Ad Widget

ಮತದಾರರ ದತ್ತಾಂಶದಲ್ಲಿ ಹೆಸರು, ತಂದೆ ಅಥವಾ ಸಂಗಾತಿಯ ಹೆಸರು, ವಯಸ್ಸು, ಮನೆ ಸಂಖ್ಯೆ ಹಾಗೂ ಲಿಂಗದಂತಹ ವಿವರಗಳು ಮಾತ್ರ ದಾಖಲಾಗಿರುತ್ತವೆ. ಧರ್ಮ ಮತ್ತು ಜಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗದ ಡೇಟಾಬೇಸ್‌ನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಅವರು ವಿವರಿಸಿದರು.

ಮತದಾರರ ಪಟ್ಟಿಗಳು ಸಾರ್ವಜನಿಕ ದಾಖಲೆಗಳಾಗಿರುವುದರಿಂದ ಮಾಧ್ಯಮ ಸಂಸ್ಥೆಗಳು ಹಾಗೂ ಸ್ವತಂತ್ರ ವಿಶ್ಲೇಷಕರು ಮತದಾರರ ಹೆಸರುಗಳು ಮತ್ತು ಲಭ್ಯವಿರುವ ಇತರ ಮಾಹಿತಿಗಳ ಆಧಾರದಲ್ಲಿ ತಮ್ಮದೇ ಆದ ವಿಶ್ಲೇಷಣೆ ನಡೆಸಬಹುದು. ಆದರೆ ಅಂತಹ ವಿಶ್ಲೇಷಣೆಗಳನ್ನು ಚುನಾವಣಾ ಇಲಾಖೆಯ ಅಧಿಕೃತ ದತ್ತಾಂಶ ಅಥವಾ ಸಂಶೋಧನೆ ಎಂದು ಪರಿಗಣಿಸಬಾರದು ಎಂದು ರಿನ್ವಾ ಸ್ಪಷ್ಟಪಡಿಸಿದರು.

ಯುಪಿಯಲ್ಲಿ 13.58 ಕೋಟಿ ಮತದಾರರು
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 13.58 ಕೋಟಿ ಮತದಾರರಿದ್ದು, ಅವರಲ್ಲಿ 6.20 ಕೋಟಿ ಮಹಿಳಾ ಮತದಾರರು ಸೇರಿದ್ದಾರೆ ಎಂದು ನವದೀಪ್ ರಿನ್ವಾ ಮಾಹಿತಿ ನೀಡಿದರು.

ಏಪ್ರಿಲ್‌ನಲ್ಲಿ ಘೋಷಿಸಲಾಗಿದ್ದ ಎಸ್‌ಐಆರ್ ಪ್ರಕ್ರಿಯೆಯ ನಂತರ ನಡೆದ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್‌ಎಸ್‌ಆರ್) ಅವಧಿಯಲ್ಲಿ 18 ಲಕ್ಷಕ್ಕೂ ಅಧಿಕ ಮತದಾರರ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.

ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳು ಮತ್ತು ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!