ಕೊಡಗು
Kodagu Rain | ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ : ಜು .7 ರಂದೂ ಶಾಲಾ ಕಾಲೇಜು ರಜೆ – ಸಂಪರ್ಕ ಕಡಿತದ ಭೀತಿಯಲ್ಲಿ ಸಂಪಾಜೆ ಘಾಟ್…!
ಕೊಡಗು ಜಿಲ್ಲೆಯಲ್ಲಿ (Kodagu Rain) ಮಳೆ ಬಿರುಸು ಪಡೆದಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಆಲರ್ಟ್ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಚುರುಕು ಪಡೆದುಕೊಂಡಿದೆ.
ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಗಾಳಿಬೀಡು, ವಿರಾಜಪೇಟೆ ಸೇರಿದಂತೆ ವಿವಿಧ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೊಡಗಿನ ಹಲವು ಭಾಗಗಳಲ್ಲಿ ಮಳೆ ಜೊತೆಗೆ ಗಾಳಿಯೂ ಹೆಚ್ಚಾಗಿದ್ದು, ಮರಗಳು ಧರೆಗುರುಳಿವೆ. ಬೋಹಿಕೇರಿ ಮತ್ತು ಕುಶಾಲನಗರಕ್ಕೆ ತೆರಳುವ ರಸ್ತೆಯಲ್ಲಿ ಮರ ಬಿದ್ದಿದ್ದು, ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಬಳಿಕ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ, ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ವಿದ್ಯುತ್ ಸಮಸ್ಯೆ ಎದುರಾಗುತ್ತಿದೆ.
ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ಜು.7 ರಂದು ರಜೆ ಘೋಷಣೆಯಾಗಿದೆ.
ಹೆದ್ದಾರಿ ಕುಸಿಯುವ ಭೀತಿ :-
ಭಾರಿ ಮಳೆ ಹಿನ್ನೆಲೆಯಲ್ಲಿ ಮಾಣಿ ಮೈಸೂರು ಹೆದ್ದಾರಿಯ ಕೊಡಗು- ಸಂಪಾಜೆ ಗ್ರಾಮದ ಕೊಯನಾಡು ಅರಣ್ಯ ಇಲಾಖೆ ಕಚೇರಿಯ ಬಳಿ ಮತ್ತೆ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದ್ದು, ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಲಾಗಿದೆ. ಮುಖ್ಯ ರಸ್ತೆಯ ಬದಿಯಲ್ಲಿ ಕಳೆದ ಸಲ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು
Kodagu-ಕೊಡಗಿನಲ್ಲಿ ವರುಣನ ಅಬ್ಬರ: ಮರಳಿ ಮೈದುಂಬಿದ ಭಾಗಮಂಡಲದ ತ್ರಿವೇಣಿ ಸಂಗಮ..!
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಜಲಾವೃತಗೊಂಡ ತಟದ ಪ್ರದೇಶಗಳು:
ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ತಟದಲ್ಲಿರುವ ಪ್ರವಾಸಿ ಉದ್ಯಾನವನ ಹಾಗೂ ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿ ಪಾತ್ರದ ನಿವಾಸಿಗಳು ಮತ್ತು ರೈತರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ ಭಾಗದಲ್ಲಿ ಮಳೆ ಬಿರುಸಾಗಿದ್ದರೆ ಸೋಮವಾರಪೇಟೆ ಭಾಗದಲ್ಲಿ ನಿರಂತರ ಸಾಧಾರಣ ಮಳೆ ಸುರಿಯುತ್ತಿದೆ.
-
ನಿಧನ ವಾರ್ತೆ22 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ16 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ20 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು19 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ21 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized14 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ15 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್16 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ




















