Connect with us

ದಕ್ಷಿಣ ಕನ್ನಡ

Siddu Budget | ಸಿದ್ದರಾಮಯ್ಯ ಬಜೇಟ್ – ಅಡಿಕೆ ಕೃಷಿಕರಿಗೆ ಕೃಷಿ ಕಾರ್ಯಕ್ಕೆ ಪಿಕ ಅಪ್ ಖರೀದಿಗೆ ಆಫರ್ , ಶೂನ್ಯ ಬಡ್ಡಿದರದ ಅಲ್ಪಾವಧಿ ಸಾಲ ಮತ್ತೆ 2 ಲಕ್ಷ ಏರಿಕೆ : ‘ಅನುಗ್ರಹ’ ಯೋಜನೆಯಲ್ಲಿ ಮೃತಪಟ್ಟ ಗೋವುಗೆ 10000 ರೂ. ಪರಿಹಾರ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೇಟ್ (Siddu Budget) ನಲ್ಲಿ ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ.

Ad Widget

Ad Widget

Ad Widget

Ad Widget

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್‌ ವ್ಯಾನ್‌ (Pick-up Van) ಖರೀದಿಸಲು ಏಳು ಲಕ್ಷ ರೂ. ವರೆಗಿನ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ವಿತರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್‌ ಹಾರ್ವೆಸ್ಟರ್‌ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು,
2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು.

Ad Widget

Ad Widget <> Ad Widget

ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. 2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.



Ad Widget

ಕಾಂಗ್ರೇಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ʻಅನುಗ್ರಹʼ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರ ಅದನ್ನು ನಿ‍ರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್‌ಸ್ಥಾಪಿಸಿ ಕುರಿ ಮತ್ತು ಮೇಕೆಗಳಿಗೆ 5,000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂ. ಪರಿಹಾರ ಒದಗಿಸಲಾಗುವುದು ಎಂದು ಸಿಎಂ ಬಜೇಟ್ ಭಾಷಣದಲ್ಲಿ ಹೇಳಿದರು.

Ad Widget

Ad Widget

ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ ಚರ್ಮಗಂಟು ರೋಗದ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಹಾಲಿನ ಇಳುವರಿಯಲ್ಲಿ ಶೇ.5 ರಿಂದ ಶೇ.7 ರಷ್ಟು ಇಳಿಕೆಯಾಗಿರುತ್ತದೆ. ಉತ್ತಮ ಹಾಲು ನೀಡುವ ತಳಿಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಲಸಿಕೆಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು.

ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಚರ್ಮಗಂಟು ರೋಗದಿಂದ ಒಟ್ಟು 32,045 ಜಾನುವಾರುಗಳು ಮರಣ ಹೊಂದಿರುತ್ತವೆ. ಈ ಪೈಕಿ ಒಟ್ಟು 25,859 ಮರಣ ಹೊಂದಿದ ಜಾನುವಾರುಗಳಿಗೆ 53 ಕೋಟಿ ರೂ. ಪರಿಹಾರಧನವನ್ನು ವಿತರಿಸಲಾಗಿದೆ. ಬಾಕಿ ಇರುವ 5,851 ಮರಣಹೊಂದಿದ ಜಾನುವಾರುಗಳ ಮಾಲೀಕರಿಗೆ 12 ಕೋಟಿ ರೂ. ಪರಿಹಾರಧನವನ್ನು ವಿತರಿಸಲು ಕ್ರಮ ವಹಿಸಲಾಗುವುದು. 

ಗ್ರಾಹಕರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಪ್ರೋಟೀನ್‌ಯುಕ್ತ ಮಾಂಸ ಮತ್ತು ಮೊಟ್ಟೆ ಪೂರೈಕೆಗೆ ಅವಕಾಶ ಕಲ್ಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳು ಹಾಗೂ ಉತ್ತಮವಾದ ಮಾರುಕಟ್ಟೆ ಅಭಿವೃದ್ಧಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

Ad Widget
Click to comment

Leave a Reply

ಶಿಕ್ಷಣ

Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಸಾನಿಧ್ಯ ಎಸ್. ರಾವ್‌ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್‌ಜಿಎಫ್‌ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.



Ad Widget

ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Continue Reading

ಕಾರ್ಯಕ್ರಮಗಳು

‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್‌ನಲ್ಲಿ ʻಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್ʼ ಶುಭಾರಂಭ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget <> Ad Widget

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.



Ad Widget

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ 94493 24436 ಅನ್ನು ಸಂರ್ಪಕಿಸಬಹುದು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್‌ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.



Ad Widget

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

Ad Widget

Ad Widget

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್‌ಅಪ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading