ರಾಜಕೀಯ
Karnataka Budget 2023: ರಾಜ್ಯ ಬಜೆಟ್ : ಮದ್ಯ ಪ್ರಿಯರಿಗೆ ನಿರಾಶೆ ; ಅಬಕಾರಿ ತೆರಿಗೆ ಹೆಚ್ಚಳ – ಬಿಯರ್ ತುಟ್ಟಿ
ಬೆಂಗಳೂರು, ಜುಲೈ 7: ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಸರ್ಕಾರ ಕಹಿ ಸುದ್ದಿಯೊಂದನ್ನು ನೀಡಿದೆ. ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಸರಕಾರ, ಅದನ್ನು ಈ ಸಾಲಿನ ಬಜೆಟ್ ನಲ್ಲಿಯೇ ಅನುಷ್ಟಾನಗೊಳಿಸಲು ಮುಂದಾಗಿದೆ. ಗ್ಯಾರಂಟಿ ಅನುಷ್ಟಾನಕ್ಕೆ ರಾಜ್ಯ ಸರಕಾರಕ್ಕೆ ವಾರ್ಷಿಕ 52 ಸಾವಿರ ಕೋಟಿ ಬೇಕು . ಇದರ ಒಂದು ಪಾಲನ್ನು ಮದ್ಯ ಪ್ರಿಯರ ಮೇಲೂ ಹೊರಿಸಲು ಇದೀಗ ರಾಜ್ಯ ಸರಕಾರ ಮುಂದಾಗಿದೆ
ಇಂದು ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಅಬಕಾರಿ ತೆರಿಗೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಇದರಿಂದ ಮದ್ಯ ದುಬಾರಿಯಾಗಲಿದೆ. ಭಾರತೀಯ ನಿರ್ಮಿತ ವಿದೇಶಿ ಮದ್ಯದ (ಐಎಂಎಫ್ಎಲ್) ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಶೇ 20 ರಷ್ಟು ಹೆಚ್ಚಿಸಲಾಗಿದೆ. ಬಿಯರ್ಗೆ, ಅಬಕಾರಿ ಸುಂಕವನ್ನು ಶೇಕಡಾ 10 ರಷ್ಟು ಹೆಚ್ಚಿಸಲಾಗಿದೆ, ಅದನ್ನು ಶೇಕಡಾ 175 ರಿಂದ ಶೇಕಡಾ 185 ಕ್ಕೆ ಹೆಚ್ಚಾಗಲಿದೆ. ಮುಖ್ಯಮಂತ್ರಿಗಳು ಅಬಕಾರಿಯ ಎಲ್ಲಾ 18 ಸ್ಲ್ಯಾಬ್ಗಳಲ್ಲಿ ಶೇ.20 ರಷ್ಟು ತೆರಿಗೆ ವಿಧಿಸಿದ್ದಾರೆ
ಬಿಯರ್ ದರ ಹೆಚ್ಚಳ, ಮದ್ಯವೂ ದುಬಾರಿ
ಅಬಕಾರಿ ಸುಂಕ ಹೆಚ್ಚಳದಿಂದ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ದರಗಳು ಹೆಚ್ಚಾಗಲಿವೆ. ಬಿಯರ್ ದರ 10-20 ರೂಪಾಯಿವರೆಗೆ ಹೆಚ್ಚಾಗಲಿದ್ದು ಮದ್ಯ ಪ್ರಿಯರಿಗೆ ಹೆಚ್ಚಿನ ಹೊರೆ ಬೀಳಲಿದೆ. ಈ ಮೊದಲು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮದ್ಯ ಮಾರಾಟಗಾರರಿಂದ 35 ಸಾವಿರ ಕೋಟಿ ರೂ. ಸಂಗ್ರಹ ಮಾಡುವ ಗುರಿ ಹೊಂದಿತ್ತು, ಆದರೆ 29 ಸಾವಿರ ಕೋಟಿ ರೂಪಾಯಿ ಮಾತ್ರ ಸಂಗ್ರಹವಾಗಿತ್ತು.
ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ ಎಂದು ಅಕ್ಕಪಕ್ಕದ ರಾಜ್ಯಗಳಲ್ಲಿ ಮದ್ಯದ ಬೆಲೆಯು ಕರ್ನಾಟಕದಲ್ಲಿನ ದರಕ್ಕಿಂತ ಇನ್ನೂ ಅಧಿಕವಾಗಿದೆ ಎಂಬ ಸಮಜಾಯಿಷಿ ನೀಡಿದ್ದಾರೆ.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ಅಂತರ ರಾಜ್ಯ23 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು17 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
Uncategorized23 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಕಾರ್ಯಕ್ರಮಗಳು17 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು16 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ನಿಧನ ವಾರ್ತೆ23 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು23 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
-
Uncategorized17 hours agoAmbika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ


















