ಉದ್ಯೋಗ
Agniveer Recruitment : ಸೇನೆ ಸೇರಬಯಸುವ ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ – 50% ಅಗ್ನಿವೀರರನ್ನು ಕಾಯಂ ಮಾಡಲು ಮುಂದಾದ ಕೇಂದ್ರ ಸರ್ಕಾರ
ನವದೆಹಲಿ : ಕೇಂದ್ರ ಸರ್ಕಾರವು ಅಗ್ನಿವೀರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ. ಅಗ್ನಿವೀರರಾಗಿ 4 ವರ್ಷ ಸೇವೆ ಪೂರೈಸಿದ ಶೇ. 50 ರಷ್ಟು ಮಂದಿಯ ಕಾಯಂ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ ಆರಂಭಿಸುವಾಗ ಕೇವಲ 25% ಅಗ್ನಿವೀರರನಷ್ಟೆ ಖಾಯಂ ಮಾಡುವುದಾಗಿ ರಕ್ಷಣಾ ಸಚಿವಲಾಯ ತಿಳಿಸಿತ್ತು
ಈಗ ಈ ಯೋಜನೆಗೆ ತಿದ್ದಪಡಿ ಮಾಡಿ ಶೇ.50ರಷ್ಟು ಅಗ್ನಿವೀರ ಸಿಬ್ಬಂದಿಯನ್ನು ಖಾಯಂ ಮಾಡುವ ಸಂಬಂಧ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಆದರೆ ಇನ್ನೂ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಹಿರಿಯ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 14, 2022 ರಂದು, ಸಶಸ್ತ್ರ ಪಡೆಗಳಲ್ಲಿ ಸೈನಿಕರ ನೇಮಕಾತಿಗಾಗಿ ಸರ್ಕಾರವು ಅಗ್ನಿಪಥ್ ಯೋಜನೆಯನ್ನು ನಾಲ್ಕು ವರ್ಷಗಳವರೆಗೆ ಘೋಷಿಸಿತು ಮತ್ತು ವಯಸ್ಸಿನ ಮಿತಿಯನ್ನು 17.5 ರಿಂದ 21 ವರ್ಷಗಳಿಗೆ ನಿಗದಿಪಡಿಸಲಾಗಿದ್ದು, ಇದೀಗ 23 ವರ್ಷಕ್ಕೆ ಹೆಚ್ಚಿಸಲು ಚಿಂತನೆ ನಡೆಸಿದೆ.
2026ರ ವೇಳೆಗೆ ಒಟ್ಟು 1.75 ಲಕ್ಷ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳಲಾಗುವುದು. ಅಗ್ನಿವೀರ್ ನೇಮಕಾತಿ ಅಡಿಯಲ್ಲಿ ಪ್ರಸ್ತುತ ನಿಯಮದ ಪ್ರಕಾರ, ಕೇವಲ 25 ಪ್ರತಿಶತದಷ್ಟು ಅಗ್ನಿವೀರ ಸಿಬ್ಬಂದಿಯನ್ನು ಮಾತ್ರ ಖಾಯಂ ಮಾಡಬೇಕು ಎಂಬುದಾಗಿತ್ತು. ಇದೀಗ ಇದನ್ನು ಶೇಕಡಾ 50 ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಭಾರತದ ರಕ್ಷಣಾ ಪಡೆಯಲ್ಲಿ ಸೈನಿಕರ ಸಂಖ್ಯೆ ಕಡಿಮೆಯಾಗುವುದನ್ನು ತಪ್ಪಿಸುವ ಸಲುವಾಗಿ ಅಗ್ನಿವೀರರಾಗಿ ನೇಮಕಗೊಂಡ ಶೇಕಡ 50ರಷ್ಟು ಸಿಬ್ಬಂದಿಯನ್ನು ಕಾಯಂ ಮಾಡಲು ಕೇಂದ್ರ ಸರಕಾರ ಚಿಂತಿಸಿದೆ. ದೇಶದ ಸೇನೆಯಲ್ಲಿ ಸೈನಿಕರ ಸಂಖ್ಯೆಯ ಕುಸಿತ ತಪ್ಪಿಸುವ ಸಲುವಾಗಿ ಸಶಸ್ತ್ರಪಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಗ್ನಿವೀರರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.
2026ರವರೆಗೆ ಸೇನಾ ನೇಮಕಾತಿ ಮಿತಿ ಇರುವ ಕಾರಣ ಅಗ್ನಿವೀರರ ನೇಮಕಾತಿ ಹೆಚ್ಚಳದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಲೋಚಿಸಲಾಗುತ್ತಿದೆ ಎನ್ನಲಾಗಿದೆ.
ಅಗ್ನಿವೀರರ ನೇಮಕದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವುದು ಸೇರಿದಂತೆ ಹಲವು ಬದಲಾವಣೆಗಳಿಗೆ ರಕ್ಷಣಾ ಪಡೆಯು ಪ್ರಸ್ತಾಪ ಮಾಡಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಏವಿಯೇಷನ್, ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಇಂತಹ ಇತರೆ ವಿಭಾಗಗಳಿಂದಲೂ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಲು ಆಲೋಚಿಸಲಾಗುತ್ತಿದೆ
ಅಗ್ನಿವೀರರ ನೇಮಕಾತಿಗೆ 21 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಿದರೆ ಈ ರೀತಿ ವಿವಿಧ ಶಿಕ್ಷಣ ಪಡೆದವರು ದೊರಕುವುದು ಕಷ್ಟ. ವಯೋಮಿತಿಯನ್ನು 23ಕ್ಕೆ ಹೆಚ್ಚಳ ಮಾಡಿದರೆ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದ ಅಭ್ಯರ್ಥಿಗಳು ದೊರಕಬಹುದು. 2022ರಿಂದ 2026ರ ನಡುವೆ ಸುಮಾರು 1.75 ಲಕ್ಷ ಅಗ್ನಿವೀರರನ್ನು ನೇಮಕ ಮಾಡುವ ನಿರೀಕ್ಷೆಯಿದೆ” ಎಂದು ವರದಿಗಳು ಹೇಳಿವೆ.
“ಈ ಅವಧಿಯಲ್ಲಿ ಈ ಹಿಂದಿನ ಮಿತಿಯಂತೆ 46 ಸಾವಿರ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳುವ ಬದಲು 1.25 ಲಕ್ಷ ಅಗ್ನಿವೀರರನ್ನು(ಸೈನಿಕ ವಿಭಾಗಕ್ಕೆ) ನೇಮಕ ಮಾಡುವ ನಿರೀಕ್ಷೆಯಿದೆ. ಮುಂದಿನ ಐದು ಆರು ವರ್ಷಗಳಲ್ಲಿ ಈಗಿನ 50-60 ಸಾವಿರ ನೇಮಕಾತಿ ಬದಲಾಗಿ, 90 ಸಾವಿರದಿಂದ 1 ಲಕ್ಷದಷ್ಟು ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ” ಎಂದು ಮಿಲಿಟರಿ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಹೇಳಿದ್ದಾರೆ.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಂತರ ರಾಜ್ಯ
Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್
ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.
ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.
ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
ಉದ್ಯೋಗ
Job opportunities-ಪುತ್ತೂರು-ಸುಳ್ಯದಲ್ಲಿ ಉದ್ಯೋಗಾವಕಾಶ; ಸೆ.13ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ
ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪುತ್ತೂರು: ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪ್ರತಿಷ್ಠಿತ NGO ಒಂದರ ‘ಪ್ರಾಜೆಕ್ಟ್ ಆಫೀಸರ್’ (Project Officer) ಹುದ್ದೆಗೆ MSW ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಸಂಸ್ಥೆಯ ‘ಕಚೇರಿ ಸಿಬ್ಬಂದಿ’ (Office Staff) ಹುದ್ದೆಗೆ ಅತ್ಯುತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಸಂದರ್ಶನದ ವಿವರ:
ದಿನಾಂಕ: 13 ಸೆಪ್ಟೆಂಬರ್ 2026, ಭಾನುವಾರ
ಸಮಯ: ಬೆಳಿಗ್ಗೆ 10:00 ಗಂಟೆಗೆ
ಸ್ಥಳ: ವಿದ್ಯಾಮಾತಾ ಅಕಾಡೆಮಿ, APMC ರಸ್ತೆ, ಪುತ್ತೂರು, ದ.ಕ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅಪ್‌ಡೇಟೆಡ್ ಬಯೋಡೇಟಾ (Resume) ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ (Photo) ನೇರ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು21 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ21 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ24 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ


















