Uncategorized
Koragajja Daiva : ವೇಣೂರು : ಕೊರಗಜ್ಜನ ಗುಡಿಗೆ ದುಷ್ಕರ್ಮಿಯಿಂದ ಬೆಂಕಿ – ಭಕ್ತ ಸಮೂಹದಿಂದ ಠಾಣೆಗೆ ದೂರು
ಮಂಗಳೂರು : ಇತ್ತೀಚಿನ ದಿನಗಳಲ್ಲಿ ತುಳುನಾಡಿನಲ್ಲಿ ಅತಿ ಹೆಚ್ಚು ಆರಾಧಿಸಲ್ಪಡುವ ದೈವವೆಂದರೆ (Daiva) ಕೊರಗಜ್ಜ (koragajja). ಕಳೆದುಹೋದ ಯಾವುದನ್ನಾದರೂ ಮರಳಿ ಪಡೆಯಲು, ಮಾಡಬೇಕಾದ ಯಾವುದೇ ಕೆಲಸ ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲು ಅಥವಾ ಯಾವುದೇ ಸಮಸ್ಯೆಯನ್ನು ಪರಿಹರಿಸಿಕೊಳ್ಳುಲು ಈ ದೈವಕ್ಕೆ ಹರಕೆ ಹೇಳುವುದು ಇಲ್ಲಿಯವರ ನಂಬಿಕೆ.
ಕಳೆದೆರಡು ವರ್ಷಗಳಿಂದ ತುಳುನಾಡಿನ ದೈವಗಳ ಕಾರಣಿಕತೆ ಜಿಲ್ಲೆಯ ಹೊರಗು ವಿಸ್ತರಿಸಿದ್ದು , ಪ್ರತಿ ನಿತ್ಯ ನೂರಾರು ಭಕ್ತರು ಬೇರೆ ಬೇರೆ ಜಿಲ್ಲೆ ರಾಜ್ಯಗಳಿಂದ ಕೊರಗಜ್ಜನ ಗುಡಿಗೆ, ನೇಮಕ್ಕೆ ಆಗಮಿಸುತ್ತಿದ್ದಾರೆ. ದೈವದ ಗುಡಿಯು ಅತ್ಯಂತ ಪವಿತ್ರ ಹಾಗೂ ಕಾರಣಿಕ ಸ್ಥಳ ಎಂದು ಭಕ್ತರು ನಂಬುತ್ತಾರೆ. ಇಂತಹ ದೈವದ ಗುಡಿಯೊಂದಕ್ಕೆ ಬೆಂಕಿಯಿಟ್ಟಿರುವ ಅಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ವರದಿಯಾಗಿದೆ
ವೇಣೂರು ಗ್ರಾಮದ ಬಾಡಾರು ಎಂಬಲ್ಲಿರುವ ಸಾರ್ವಜನಿಕರಿಂದ ಆರಾಧಿಸಲ್ಪಡುತ್ತಿದ್ದ ಕೊರಗಜ್ಜ ನ ಗುಡಿ ಬೆಂಕಿಗಾಹುತಿಯಾದ ಕೊರಗ ತನಿಯನ ಸಾನಿಧ್ಯ. ಗುಡಿಯಿರುವ ಜಾಗದ ವಿಚಾರವಾಗಿ ಗಲಾಟೆಯಿದ್ದು, ಇದೆ ಹಿನ್ನಲೆಯಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಹಾಗಾಗಿಯೂ ಅದೇ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನುವುದು ಖಚಿತಗೊಂಡಿಲ್ಲ.

ಬಾಡಾರಿನ ಕೊರಗಕಲ್ಲು ಎಂಬಲ್ಲಿ ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಸ್ಥಳೀಯ ವ್ಯಕ್ತಿಯೊಬ್ಬ ಕೊರಗಜ್ಜನ ಗುಡಿ ಇರುವ ಜಾಗದ ತನ್ನದೆಂದುಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕರಲ್ಲಿ ಅಲ್ಲಿ ಹಸ್ತಕ್ಷೇಪ ಮಾಡಬಾರದೆಂದು ಆ ವ್ಯಕ್ತಿ ತಗಾದೆ ಎತ್ತಿದ್ದರು.

ಈ ವಿಚಾರವಾಗಿ ಕಳೆದ ಕೆಲ ವರ್ಷಗಳಿಂದ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಗುಡಿಯಲ್ಲಿ ಪ್ರತಿ ವರ್ಷ ದೊಂಪದ ಬಲಿ ಉತ್ಸವ ಜರಗಿದ ಬಳಿಕ ಸಾರ್ವಜನಿಕ ನೇಮೋತ್ಸವ ನಡೆಯುತಿತ್ತು ಈಗ ಜಾಗದ ತಕರಾರು ಇರುವ ಸ್ಥಳೀಯ ವ್ಯಕ್ತಿಯೇ ಕೊರಗಜ್ಜನ ಗುಡಿಗೇ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ4 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















