ಅಪರಾಧ
Bangalore Double Murder : ಹೆಣ್ಣಿಗಾಗಿ ನಡೆಯಿತೇ ಬೆಂಗಳೂರು ಜೋಡಿ ಹತ್ಯೆ ? ಅದರ ಹಿಂದಿದೆಯಾ ಬ್ಯುಸಿನೆಸ್ ವೈರತ್ವ ? ಕೊಲೆ ಕುರಿತು ಪೊಲೀಸರು ಹೇಳಿದ್ದೇನು ?
ಬೆಂಗಳೂರು: ಮಂಗಳವಾರ ಮಧ್ಯಾಹ್ನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಜ್ಯವೇ ಬೆಚ್ಚಿ ಬೀಳುವ ಡಬ್ಬಲ್ ಮರ್ಡರ್ ನಡೆದಿದ್ದು, ಕೃತ್ಯ ನಡೆದ 24 ಗಂಟೆಯೊಳಗಡೆ ಮೂವರು ಹಂತಕರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬೇಂಗಳೂರಿನಿಂದ ಮಂಗಳೂರಿಗೆ ಓಡಿ ಹೋಗುವ ಹವಣಿಕೆಯಲ್ಲಿದ್ದ ಹಂತಕರನ್ನು ದಾರಿ ಮಧ್ಯೆ ಕುಣಿಗಲ್ ಎಂಬಲ್ಲಿ ಬಲೆ ಬೀಸಿದ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ.
ಬೆಂಗಳೂರು ನಗರದ ಅಮೃತ ಹಳ್ಳಿಯ ಪಂಪ ಬಡಾವಣೆಯ 6ನೇ ಅಡ್ಡ ರಸ್ತೆಯಲ್ಲಿರುವ ಏರೋನಿಕ್ಸ್ ಮೀಡಿಯಾ ಸಂಸ್ಥೆಯೊಳಗಡೆ ಏ. 11ರಂದು ಸಂಜೆ ಈ ಜೋಡಿ ಕೊಲೆ ನಡೆದಿತ್ತು. ಏರೋನಿಕ್ಸ್ ಮೀಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಸುಬ್ರಹ್ಮಣ್ಯ ಹಾಗೂ ಅದೇ ಕಂಪನಿಯ ಸಿಇಒ ವಿನುಕುಮಾರ್ ರವರನ್ನು ಮೂವರು ದುಷ್ಕರ್ಮಿಗಳು ಮಚ್ಚು, ಲಾಂಗುಗಳಿಂದ ಯದ್ವತದ್ವಾ ಕಡಿದು ಕೊಲೆ ಮಾಡಿದ್ದರು. ಹಂತಕರು ಮಚ್ಚು ಬೀಸಿದ ರಭಸಕ್ಕೆ ಕೊಲೆಯಾದ ಒಬ್ಬರ ತಲೆಯಂತೂ ತೆಂಗಿನ ಒಡೆದ ಹಾಗೆ ಎರಡು ಹೋಳಾಗಿತ್ತು. ಆ ದೃಶ್ಯ ಹಂತಕರ ಕ್ರೌರ್ಯ ಹಾಗೂ ಘಟನೆಯ ಬೀಭತ್ಸೆಯನ್ನು ಪ್ರದರ್ಶಿಸಿದೆ.
ಹತ್ಯೆಗೆ ಮೊದಲು ಅದರ ಸುಳಿವನ್ನು ನೀಡುವ ಸ್ಟೇಸ್ಟಸ್ ವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಪ್ರಧಾನ ಆರೋಪಿ ಟಿಕ್ ಸ್ಟಾರ್ ಶಬರೀಷ್ ಅಲಿಯಾಸ್ ಫಿಲಿಕ್ಸ್ (27), ರೂಪೇನಾ ಅಗ್ರಹಾರದ ವಿನಯ್ ರೆಡ್ಡಿ (23) ಹಾಗೂ ಮಾರೇನಹಳ್ಳಿ ಸಂತು ಅಲಿಯಾಸ್ ಸಂತೋಷ್ ಬಂಧಿತರು.
ಈ ಡಬಲ್ ಮರ್ಡರ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಫಿಲಿಕ್ಸ್, ಪೊಲೀಸರಿಗೆ ಮುಂದೆ ನೀಡಿರುವ ತಪ್ಪೊಪ್ಪಿಗೆ ಹೇಳಿಕೆಯಲ್ಲಿ, ಈ ಕೊಲೆಗಳಿಗೆ ಹುಡುಗಿಯೊಬ್ಬಳಿಗಾಗಿ ನಡೆದ ಕಿತ್ತಾಟವೇ ಕಾರಣ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇದು ಸುಳ್ಳೆಂದು ಪೊಲೀಸರು ತಿಳಿಸಿದ್ದು ನಿಜ ಕಾರಣವನ್ನು ಬಹಿರಂಗ ಪಡಿಸಿದ್ದರು.

ಮಾದ್ಯಮಗಳು ವರದಿ ಮಾಡಿದ್ದೇನು ?
“ಕೊಲೆಯಾದ ಫಣೀಂದ್ರ ಹಾಗೂ ಆರೋಪಿ ಫೆಲಿಕ್ಸ್ ಇಬ್ಬರೂ ‘ಜಿನೆಟ್’ ಎಂಬ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ, ಅಲ್ಲಿಯೇ ಕೆಲಸ ಮಾಡುತ್ತಿದ್ದ ಹುಡುಗಿಯೊಬ್ಬಳೊಂದಿಗೆ ಫೆಲಿಕ್ಸ್ ಗೆ ಪ್ರೇಮಾಂಕುರವಾಗಿ ಆಕೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ. ಅದೇ ಹುಡುಗಿಯೊಂದಿಗೆ ಫಣೀಂದ್ರ ಕೂಡ ಪ್ರೇಮ ಬೆಸೆಯಲು ಮುಂದಾಗಿದ್ದ. ಇದು ಫೆಲಿಕ್ಸ್ ಹಾಗೂ ಫಣೀಂದ್ರ ನಡುವಿನ ತಿಕ್ಕಾಟಕ್ಕೆ ಕಾರಣವಾಗಿತ್ತು. ಆನಂತರ ಫಣೀಂದ್ರ ಏರೋನಿಕ್ಸ್ ಕಂಪನಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಹುಡುಗಿ ವಿಚಾರವಾಗಿ ದ್ವೇಷ ಮುಂದುವರಿದಿತ್ತು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದನ್ನು ಪೊಲೀಸರು ಅಲ್ಲಗಳೆದಿದ್ದಾರೆ.

ಮಂಗಳವಾರ ಏನಾಯಿತು?
ಮೂವರು ಆರೋಪಿಗಳು ಮಂಗಳವಾರ ಏ. 11 ರಂದು ಸಂಜೆ ಕೆಲಸ ಕೇಳುವ ನೆಪದಲ್ಲಿ ಏರೋನಿಕ್ಸ್ ಮೀಡಿಯಾ ಸಂಸ್ಥೆಗೆ ಬಂದಿದ್ದಾರೆ. ಹೀಗೆ ಬಂದವರೇ ಫಣೀಂದ್ರ ಸುಬ್ರಹ್ಮಣ್ಯ ಕೊಠಡಿಗೆ ಹೋಗಿದ್ದಾರೆ . ಈ ವೇಳೆ ಅಲ್ಲಿ ಕಂಪನಿಯ ಸಿಇಒ ವಿನು ಕುಮಾರ್ ಕೂಡ ಅದೇ ಕೊಠಡಿಯಲ್ಲಿದ್ದರು. ಒಳಗೆ ಬಂದ ಫಿಲಿಕ್ಸ್ ಹಾಗೂ ಆತನ ಸಹಚರರು ಏಕಾಏಕಿ ಕತ್ತಿ ಹಾಗೂ ಡ್ರ್ಯಾಗರ್ ನಿಂದ ಫಣೀಂದ್ರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಡ್ಡ ಬಂದ ವಿನುಕುಮಾರ್ ಅವರ ಮೇಲೂ ದಾಳಿ ನಡೆಸಿ ಇಬ್ಬರನ್ನೂ ಕೊಂದು ಹಾಕಿದ್ದಾರೆ.
ಹಂತಕರು ಫಣೀಂದ್ರ ಸುಬ್ರಹ್ಮಣ್ಯ ಅವರಿಗೆ ಹಲವು ಬಾರಿ ಇರಿದಿದ್ದೂ, ಇದರಿಂದ ವಿನಯ್ ಕುಮಾರ್ ತಲೆ ಎರಡು ಭಾಗವಾಗಿದೆ. ಮೆದುಳು ಹೊರಬಂದಿತ್ತು. ಫಣೀಂದ್ರ ಸುಬ್ರಹ್ಮಣ್ಯ ಅವರ ಮುಖ, ತಲೆ, ಬೆನ್ನು, ಎದೆ, ಹೊಟ್ಟೆ ಮತ್ತು ದೇಹದ ಇತರ ಭಾಗಗಳ ಗಂಭೀರ ಗಾಯಗಳಾಗಿದ್ದವು. ಅವರು ಸಂಜೆ 4.20ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯ ಮೂಲಗಳು ತಿಳಿಸಿವೆ. ‘ನಮ್ಮ ಸಿಬ್ಬಂದಿ ಫಣೀಂದ್ರ ಅವರ ಜೀವ ಉಳಿಸಲು ತೀವ್ರವಾಗಿ ಪ್ರಯತ್ನಪಟ್ಟರು. ಆದರೆ, ತೀವ್ರ ರಕ್ತ ಸ್ರಾವವಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಬಳಿಕ ಫಣೀಂದ್ರ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು’ ಎಂದು ಮೂಲಗಳು ಹೇಳಿವೆ.
ತೀವ್ರವಾಗಿ ಹಲ್ಲೆಗೊಳಗಾಗಿದ್ದ ವಿನುಕುಮಾರ್ ಅವರನ್ನು ಕರೆ ತಂದಾಗ ತಲೆಬುರುಡೆ ಎರಡು ಭಾಗವಾಗಿತ್ತು. ಮೆದುಳು ಹೊರಬಂದಿತ್ತು ಎಂದು ಆಸ್ಟರ್ ಸಿಎಂಐ ಆಸ್ಪತ್ರೆ ಮೂಲಗಳು ತಿಳಿಸಿವೆ. ‘ಚಿಕಿತ್ಸೆ ನೀಡಿದರೂ ಅವರು ಬದುಕುಳಿಯಲಿಲ್ಲ. ದೇಹದ ಬೇರೆ ಭಾಗಗಳಿಗೆ ಯಾವುದೇ ಗಾಯಗಳಾಗಿರಲಿಲ್ಲ’ ಎಂದು ಮಾಹಿತಿ ನೀಡಿವೆ. ಹಾಗೆಯೇ, ಹಲ್ಲೆ ಮಾಡಲು ಉದ್ದನೆಯ ಕತ್ತಿಯನ್ನು ಬಳಸಿದಂತೆ ಕಾಣುತ್ತದೆ. ಎಂದು ಅದು ಹೇಳಿದೆ.
ಕೊಲೆಗೆ ನಿಜವಾದ ಕಾರಣ- ಪೊಲೀಸರು ಹೇಳಿದ್ದೇನು ?
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಈ ಕೊಲೆಗಳ ಹಿಂದೆ ಏರೋನಿಕ್ಸ್ ಸಂಸ್ಥೆಯ ಪ್ರತಿಸ್ಪರ್ಧಿ ಸಂಸ್ಥೆಯಾದ ಜಿನಿಟ್ ಎಂಬ ಸಂಸ್ಥೆಯ ಮಾಲೀಕ ಅರುಣ್ ಇರುವುದಾಗಿ ತಿಳಿಸಿದ್ದಾರೆ. ಫಣೀಂದ್ರ ಅವರು ಹಿಂದೆ ಜಿನೆಟ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿ ಅನುಭವ ಪಡೆದು, ಅಲ್ಲಿ ರಾಜೀನಾಮೆ ಹೊರಬಂದಿದ್ದರು. ಬಳಿಕ ಫಿಲಿಕ್ಸ್ ಏರೋನಿಕ್ಸ್ ಎಂಬ ತಮ್ಮದೇ ಸ್ವಂತ ಕಂಪನಿ ಹುಟ್ಟು ಹಾಕಿದ್ದರು.
ಜಿನೆಟ್ ಕಂಪನಿಯಲ್ಲಿ ಕಲಿತ ವ್ಯವಹಾರದ ತಂತ್ರಗಾರಿಕೆಯನ್ನು ತಮ್ಮ ಕಂಪನಿಯಲ್ಲಿ ಬಳಸಿಕೊಂಡಿದ್ದ ಫಣೀಂದ್ರ ಅವರು ತಮ್ಮ ಕಂಪನಿಯನ್ನು ದೊಡ್ಡ ಕಂಪನಿಯಾಗಿ ಬೆಳೆಸಲು ಮುಂದಾಗಿದ್ದರು. ಅದರ ಪರಿಣಾಮ, 8 ತಿಂಗಳುಗಳಲ್ಲಿ ಕಂಪೆನಿ ಉತ್ತಮ ಬೆಳವಣಿಗೆ ಕಾಣಿಸಿದ್ದು, ಅದು ಲಾಭದತ್ತ ಮುಖ ಮಾಡಿತ್ತು. ಅತ್ತ, ಫಣೀಂದ್ರ ಕಂಪನಿಯು ಶುರುವಾದ ನಂತರ ಜಿನೆಟ್ ಕಂಪನಿಯ ಲಾಭದಲ್ಲಿ ದಿಢೀರ್ ಕುಸಿತ ಕಂಡಿದ್ದು, ಕೆಲ ಸಮಯದ ಬಳಿಕ ನಷ್ಟದತ್ತ ಮುಖ ಮಾಡಿತ್ತು. ತನ್ನ ಕಂಪನಿಗೆ ನಷ್ಟವಾಗಿದ್ದರಿಂದ ಕೋಪಗೊಂಡಿದ್ದ ಜಿನೆಟ್ ಕಂಪನಿಯ ಮಾಲೀಕ ಅರುಣ್, ಫಣೀಂದ್ರ ಕಂಪನಿಯನ್ನು ಇಲ್ಲವಾಗಿಸಲು ಅದರ ಮಾಲಕನನ್ನೆ ಮುಗಿಸಲು ಸಂಚು ರೂಪಿಸಿದ್ದ ಎನ್ನಲಾಗಿದೆ.
.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್‌ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್‌ನ 30 ಕ್ಯಾನ್‌ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್‌ಗಳು.
- ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
-
ರಾಜಕೀಯ22 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಬಿಗ್ ನ್ಯೂಸ್5 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಅಂತರ ರಾಜ್ಯ22 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು5 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized4 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು















