Connect with us

Uncategorized

Online Loan App : ಬೆಂಗಳೂರು : ಆನ್‌ಲೈನ್‌ ಕಂಪೆನಿಯ ಎಡಿಟೆಡ್‌ ಫೋಟೊ ವೈರಲ್‌ ಬೆದರಿಕೆಗೆ ಹೆದರಿ ಸ್ನೇಹಿತನಿಗೆ ಸಾಲ ಕೊಡಿಸಿ ಇಕ್ಕಟಿಗೆ ಸಿಲುಕಿದ ಇಂಜಿನೀಯರಿಂಗ್ ಕಾಲೇಜಿನ ಟಾಪರ್‌ ಆತ್ಮಹತ್ಯೆ

Published

on

Ad Widget

Ad Widget

Ad Widget

Ad Widget

ಬೆಂಗಳೂರು:Bangalore : ಜು 13:   ಅಧಿಕ ಬಡ್ಡಿ ವಿಧಿಸಿ ಅನ್ ಲೈನ್ ಮೂಲಕ ತ್ವರಿತವಾಗಿ ಸಾಲ ನೀಡುವ ಚೀನಾ ಆಪ್ ನ ಸಹವಾಸ ಮಾಡಿದ ಪ್ರತಿಭಾನ್ವಿತ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಸಕಾಲದಲ್ಲಿ ಅದನ್ನು ಮರು ಪಾವತಿ ಮಾಡಲು ಸಾಧ್ಯವಾಗದೇ ಕಂಪೆನಿಯ ಬ್ಲ್ಯಾಕ್ ಮೇಲ್ ತಂತ್ರಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.  ಸಾಲ ನೀಡಿದ ಕಂಪೆನಿಯು ಯುವತಿಯ ಜತೆ ಅಶ್ಲೀಲ ಭಂಗಿಯಲ್ಲಿರುವ ಯುವಕನ ಫೋಟೊಗೆ ತೇಜಸ್ ಪೋಟೊವನ್ನು ಎಡಿಟ್ ಮಾಡಿ ಆತನ ವಾಟ್ಸಾಪ್ ಗೆ ಕಳುಹಿಸಿ ಇದನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಸಿದ ಹಿನ್ನಲೆಯಲ್ಲಿ ಆತ್ಮಹತ್ಯೆ  ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

 ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಹಣಕಾಸು ವ್ಯವಹಾರದ ಜಾಲಕ್ಕೆ ಸಿಲುಕಿ ಮಾನದ ಜತೆ ಪ್ರಾಣವನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಈ ಅಪರಾಧದಲ್ಲಿ ಆನ್ಲೈನ್ ಲೋನ್ ಆ್ಯಪ್‌ ಗಳದೆ ಪಾರುಪತ್ಯ ಕಂಡುಬರುತ್ತಿದ್ದು, ನಿತ್ಯ ನೂರಾರು ಪ್ರಕರಣಗಳು ಸೈಬರ್ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿವೆ.

Ad Widget

Ad Widget alt="Ad Widget"/>

Ad Widget

ಜಾಲಹಳ್ಳಿಯ ಎಚ್ ಎಂಟಿ ಕ್ವಾಟ್ರಸ್ ನಿವಾಸಿ ಗೋಪಿನಾಥ್ ನಾಯರ್ ಹಾಗೂ ದಿಶಾ ದಂಪತಿಯ ಪುತ್ರ ತೇಜಸ್ ನಾಯರ್ ಆತ್ಮಹತ್ಯೆ ಮಾಡಿಕೊಂಡಾತ.  ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ತೇಜಸ್ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಕಾಲೇಜಿಗೆ ಟಾಪರ್ ಆಗಿದ್. ಈತನ ಸ್ನೇಹಿತ ಮಹೇಶ್ ಮಾಡಿದ್ದ ಸಾಲಕ್ಕೆ ಈಗ ಬಲಿಯಾಗಿದ್ದಾನೆ.

Ad Widget

Ad Widget <> Ad Widget

ಮಂಗಳವಾರ ಸಂಜೆ ತೇಜಸ್ ಡೆತ್ ನೋಟ್ ಬರೆದಿಟ್ಟು ತಾಯಿಯ ಚೂಡಿದಾರದ ವೇಲ್ ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. “ ಅಪ್ಪ ಅಮ್ಮ ನನ್ನನ್ನು ಕ್ಷಮಿಸಿ ಬಿಡಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ. ನನ್ನ ಹೆಸರಿನಲ್ಲಿ ಮಾಡಿರುವ ಸಾಲ ತೀರಿಸಲು ಆಗುತ್ತಿಲ್ಲ. ಅದಕ್ಕಾಗಿ ಇದು ನನ್ನ ಅಂತಿಮ ನಿರ್ಧಾರ. ಥ್ಯಾಂಕ್ಯೂ ಗುಡ್ ಬೈ ಎಂದು  ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ತೇಜಸ್ ಪೋಷಕರಿಗೆ ಮಾಹಿತಿ ನೀಡದೆ ಗೆಳೆಯನಿಗೆ ಚೀನಾ ಆಪ್ ಮೂಲಕ ಸಾಲ ತೆಗೆಸಿಕೊಟ್ಟಟಿದ್ದ. ಆದರೆ ಗೆಳೆಯ ಸಾಲ ಮರು ಪಾವತಿಸಿರಲಿಲ್ಲ. ಆದರೆ ಸಾಲ ನೀಡಿದ ಕಂಪೆನಿ ಹೆಚ್ಚು ಬಡ್ಡಿ ಹಾಕಿ ಪಾವತಿಸುವಂತೆ ಕಿರುಕುಳ ನೀಡಿತ್ತು. ಆಗ ತೇಜಸ್  ಒಂದು  ಆಪ್ ನ ಸಾಲ ತೀರಿಸಲು ಇನ್ನೊಂದು ಆಪ್ ಕಂಪೆನಿಯಿಂದ ಸಾಲ ಪಡೆದಿದ್ದ. ಅದನ್ನು ತೀರಿಸಲು ಮತ್ತೊಂದು ಆಪ್ ನ ಮೊರೆ ಹೋಗಿದ್ದ.  ಈ ರೀತಿ ಸಾಲ ನೀಡುವ ಆಪ್ ಕಂಪೆನಿಗಳ ವಿಷ ವರ್ತುಲಕ್ಕೆ ಸಿಲುಕಿದ್ದ . ಕೊನೆಯದಾಗಿ ಸಾಲ ಪಡೆದಿದ್ದ ಕಂಪೆನಿಯವರು ಸಾಲ ಮರು ಪಾವತಿಸಲು ವಿಪರೀತ ಒತ್ತಡ ಹಾಕಿದ್ದು ಮನೆಗೆ ಬಂದು ಬೆದರಿಸಿ ಹೋಗಿದ್ದರು. ಈ ಹಿನ್ನಲೆಯಲ್ಲಿ ಬೇರೆ ದಾರಿ ಕಾಣದೆ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

Ad Widget

Ad Widget

ಸರಿ ಸುಮಾರು 6 ತಿಂಗಳ ಹಿಂದೆ ಸ್ನೇಹಿತ ಮಹೇಶ್ ಗೆ ಸ್ಲೈಲ್ಸ್ ಪೇ ಎಂಬ ಅನ್ ಲೈನ್ ಲೋನ್ ಆಪ್ ನಲ್ಲಿ 15 ಸಾವಿರ ಸಾಲ ಪಡೆದು ಕೊಟ್ಟಿದ್ದ. ಅದರೆ ಮಹೇಶ್ ಸಾಲ ಮರು ಪಾವತಿಸದ ಕಾರಣ ಬಡ್ಡಿ ಸೇರಿ ಒಟ್ಟು  46 ಸಾವಿರ ಕಟ್ಟುವಂತೆ ಕಂಪೆನಿ ಸೂಚಿಸಿತ್ತು. ಇದನ್ನು ಪಾವತಿಸಲು ತೇಜಸ್   ಕಿಸಾತ್ ಹಾಗೂ ಕೋಟೆಕ್ ಎಂಬ ಕಂಪೆನಿಯಿಂದ ಸಾಲ ಮಾಡಿದ್ದ. ಈ ಸಾಲ ಹಿಂತಿರುಗಿಸದ ಹಿನ್ನಲೆಯಲ್ಲಿ ಕಂಪೆನಿಯ ಸಿಬಂದಿ ತೇಜಸ್ ನನ್ನು ಬೇಟಿಯಾಗಿ ವಾಚಮಗೋಚರವಾಗಿ ಬೈದಿದ್ದಾರೆ.  ಬಳಿಕ ಕಂಪೆನಿಯು ಯುವತಿಯ ಜತೆ ಅಶ್ಲೀಲ ಭಂಗಿಯಲ್ಲಿರುವ ಯುವಕನ ಫೋಟೊಗೆ ತೇಜಸ್ ಪೋಟೊವನ್ನು ಎಡಿಟ್ ಮಾಡಿ  ಆತನ ವಾಟ್ಸಾಪ್ ಗೆ ಕಳುಹಿಸಿದ್ದಾರೆ. ಬಡ್ಡಿ ಸಮೇತ ಸಾಲ ಹಿಂದಿರುಗಿಸದಿದ್ದರೆ ಅಶ್ಲೀಲ ಫೊಟೊಗಳನ್ನು ಸಾಮಾಜಿಕ ಜಾಲತಾಣ, ಕುಟುಂಬಸ್ಥರು, ಫೇಸ್ಬುಕ್ ಸ್ನೇಹಿತರಿಗೆ ಕಳುಹಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ.  ಬಳಿಕ ಮಂಗಳವಾರ ಬೆಳಿಗ್ಗೆ ಮತ್ತೆ ತೇಜಸ್ಸನ್ನು ಭೇಟಿಯಾದ ಆಪ್ ಕಂಪೆನಿ ಸಿಬ್ಬಂದಿ ಕಿರುಕುಳ ಕೊಟ್ಟಿದ್ದಾರೆ. ಅಲ್ಲದೆ ತೇಜಸ್ ತಂದೆಗೂ ಕರೆ ಮಾಡಿ ಸಾಲಗಾರರು ಒತ್ತಡ ಹಾಕಿದ್ದು, ಪುತ್ರ ಸಾಲ ಪಡೆದು ಕರೆ ಸ್ವೀಕರಿಸುತ್ತಿಲ್ಲ ಮನೆಗೆ ನುಗ್ಗುತ್ತೇವೆ ಎಂದು ಬೆದರಿಸಿದ್ದಾರೆ

ರಾಜ್ಯದಲ್ಲಿ ಬಹಳಷ್ಟು ನಕಲಿ ಲೋನ್ ಆ್ಯಪ್ಗಳು ತಲೆ ಎತ್ತಿವೆ. ಸೈಬರ್ ವಂಚಕರು, ಆಟೋ ಚಾಲಕರು, ಕಾರ್ಮಿಕರು, ಸ್ಥಳೀಯರಿಗೆ ಹಣದ ಆಮಿಷವೊಡ್ಡಿ ಆಧಾರ್, ಪಾನ್ ಕಾರ್ಡ್, ಬ್ಯಾಂಕ್ ಖಾತೆ ದಾಖಲೆಗಳನ್ನು ಪಡೆದು ಚೈನ್ ಲಿಂಕ್ ಬ್ಯುಸಿನೆಸ್ ಹಾಗೂ ಆನ್ಲೈನ್ ಲೋನ್ ಆ್ಯಪ್ಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಆ್ಯಪ್ಗಳ ಮೂಲಕ ಸಾಲ ಪಡೆಯುವುದು ಸಮಸ್ಯೆಗೆ ಆಹ್ವಾನ ನೀಡಿದಂತೆ. ಲೋನ್ ಆ್ಯಪ್ ಕಂಪೆನಿಗಳ ವಂಚನೆ ಮತ್ತು ಕಿರುಕುಳ ಸಂಬಂಧ ಸಾಕಷ್ಟು ಮಂದಿ ದೂರು ಕೊಡುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಸಹ ಮಾಡುತ್ತಿದ್ದೇವೆ. ಆದರೆ, ಬಹುತೇಕ ವಂಚಕರು ಹೊರ ರಾಜ್ಯ ಮತ್ತು ಹೊರ ದೇಶಗಳಲ್ಲಿರುವುದರಿಂದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುತ್ತಿಲ್ಲ ಎಂದು ಸೈಬರ್ ಪೊಲೀಸರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!