Connect with us

Uncategorized

Leaf spot disease: ರಬ್ಬರ್‌ ಕೃಷಿ ಇರುವಲ್ಲಿ ವೇಗವಾಗಿ ಅಡಿಕೆಗೆ ಹಬ್ಬುತ್ತಿರುವ ಎಲೆಚುಕ್ಕಿ ರೋಗ – ರೈತರ ಅನುಮಾನ ಪರಿಹರಿಸಲು ಅಧ್ಯನಕ್ಕೆ ಮುಂದಾದ ಕೇಂದ್ರ ರಬ್ಬರ್‌ ಮಂಡಳಿ  

Published

on

Ad Widget

Ad Widget

Ad Widget

Ad Widget
Leaf spot disease : ಹಳದಿ ಎಲೆ (Yellow Leaf disease) ಹಾಗೂ ಕೊಳೆ ರೋಗದಿಂದ ಬಸವಳಿದಿರುವ ಕರಾವಳಿ ಕರ್ನಾಟಕದ ಅಡಿಕೆ ಬೆಳೆಗಾರರನ್ನು ಕಳೆದೆರಡು ವರ್ಷದಿಂದ ಎಲೆಚುಕ್ಕಿ ರೋಗ ಕಾಡುತ್ತಿದ್ದು, ಆತನ ತೋಟವನ್ನು ನಿಧಾನಕ್ಕೆ ಆಪೋಶನ ತೆಗೆದುಕೊಳ್ಳುತ್ತಿದ್ದೆ. ಈ ರೋಗ ತೀವ್ರಗತಿಯಲ್ಲಿ ಹಾಗೂ ವ್ಯಾಪಕವಾಗಿ ಹಬ್ಬುತ್ತಿದ್ದು ಅಡಿಕೆ ಗಿಡಗಳನ್ನು ಸಾಯಿಸುತ್ತಿದೆ. ಈ ರೋಗಕ್ಕೆ ನಿಖರ ಕಾರಣ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ವಿಜ್ಞಾನಿಗಳು ಹಾಗೂ ರೈತರು ತಲೆ ಕೆಡಿಸಿಕೊಳ್ಳುತ್ತಿರುವ ಸಮಯದಲ್ಲೆ ಹೊಸತೊಂದು ಜಿಜ್ಞಾಸೆ ಬೆಳೆಗಾರರನ್ನು ಕಾಡಲು ಆರಂಭಿಸಿದೆ. ಒಂದಕ್ಕೊಂದು ಪರ್ಯಾಯ ಬೆಳೆಯಾಗಿ ಅಕ್ಕಪಕ್ಕದ ತೋಟಗಳಲ್ಲಿ ಬೆಳೆಯಲಾಗುತ್ತಿರುವ ಅಡಿಕೆ (arecanut) ಹಾಗೂ ರಬ್ಬರ್‌ ಬೆಳೆಯಲ್ಲಿ (rubber cultivation) ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗ ಎರಡು ಕಾಣಿಸುತ್ತಿರುವುದರಿಂದ ಈ ಎರಡು ಬೆಳೆಗಳಲ್ಲೂ ರೋಗ ಹಬ್ಬಲು ಒಂದೇ ಪ್ರಭೇದದ ಸೂಕ್ಮಾಣು ಜೀವಿಗಳು ಕಾರಣವಾಗಿರಬಹುದೆಂಬ ಅನುಮಾನ ರೈತರಲ್ಲಿ ಮೂಡಿದೆ.   

ಈ ಕುರಿತು ಈಗ ರೈತರಿಗೊಂದು ಸಂತಸದ ಸುದ್ದಿ ಸಿಕ್ಕಿದೆ. ಕೇರಳದ ಕೊಟ್ಟಾಯಂನಲ್ಲಿರುವ ಕೇಂದ್ರ ಸರಕಾರದ ಅಧೀನದ  ರಬ್ಬರ್‌ ಮಂಡಳಿ ರೈತರ ಈ ಅನುಮಾನವನ್ನು ಪರಿಹರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಸಂಶೋಧನೆಗೆ ಮುಂದಡಿಯಿಟ್ಟಿದೆ. ಇತ್ತೀಚೆಗೆ ಕೊಟ್ಟಾಯಂನಲ್ಲಿ ನಡೆದ ರಬ್ಬರ್‌ ಮಂಡಳಿಯ ಸಭೆಯಲ್ಲಿ ಅದರ ಸದಸ್ಯರಾಗಿರುವ ಸುಳ್ಯದ ಕೃಷಿಕ ಮುಳಿಯ ಕೇಶವ ಭಟ್‌ ಅವರು ರೈತರಿಗಿರುವ ಅನುಮಾನದ ಬಗ್ಗೆ ಬೆಳಕು ಚೆಲ್ಲಿದ್ದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಅಡಿಕೆ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ಈ ಕುರಿತು ಅಧ್ಯಯನ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಶೇಷವಾಗಿ ಕರಾವಳಿ ಕರ್ನಾಟಕ ಭಾಗದಲ್ಲಿ ಅಡಿಕೆ ಮತ್ತು ರಬ್ಬರ್‌ ಬೆಳೆಯನ್ನು ಅಕ್ಕಪಕ್ಕದ ತೋಟ ಮತ್ತು ಗುಡ್ಡಗಳಲ್ಲಿ ಬೆಳೆಯುತ್ತಾರೆ. ಈ ಎರಡು ಬೆಳೆಗಳನ್ನು ಕೊಳೆ ರೋಗ ಮತ್ತು ಎಲೆ ಚುಕ್ಕಿ ರೋಗ ಭಾದಿಸುತ್ತಿದೆ, ಅದರಲ್ಲಿ ಕೊಳೆ ರೋಗ ಎರಡು ಬೆಳೆಗಳನ್ನು ಕಾಡಲು ಆರಂಭಿಸಿ ಹಲವು ದಶಕಗಳೇ ಸಂದಿವೆ. ಅದಕ್ಕೆ ನಿಗದಿತ ಔಷಧಿ ಸಿಂಪಡಿಸಿದರೆ ತಕ್ಷಣ ರೋಗ ನಿಯಂತ್ರಣಕ್ಕೂ ಬರುತ್ತಿದೆ.ಹೀಗಾಗಿ ರೈತರು ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆದರೆ ಇದೇ ಮಾತನ್ನು ಅಡಿಕೆಗೆ  ತಗಲುವ ಎಲೆ ಚುಕ್ಕಿ ರೋಗದ ಕುರಿತಾಗಿ ಹೇಳುವಂತಿಲ್ಲ. ರೋಗದ  ಪರಿಣಾಮ ಅಡಿಕೆ ಗಿಡಗಳ ಮೇಲೆ ವೇಗವಾಗಿ ಆಗುತ್ತಿರುವುದರಿಂದ ರೋಗ ತಗುಲಿದ ತಕ್ಷಣ ಔಷಧಿ ಸಿಂಪಡನೆ  ಮಾಡುವ ಅನಿವಾರ್ಯತೆ ಬಂದೊದಗಿದೆ. ಇದು ಬಹಳಷ್ಟು ಬಾರಿ ರೈತರಿಗೆ ಕಷ್ಟ ಸಾಧ್ಯವಾಗಿದ್ದೂ  ಅಡಿಕೆ ಗಿಡಗಳು ಸತ್ತು ರೈತರು ಭಾರೀ ಪ್ರಮಾಣದ ನಷ್ಟವನ್ನು ಅನುಭವಿಸುತಿದ್ದಾರೆ.

Ad Widget

Ad Widget alt="Ad Widget"/>

Ad Widget

ಹೀಗಾಗಿ ಈ ಬಗ್ಗೆ  ಸಾಕಷ್ಟು  ತಲೆ ಕೆಡಿಸಕೊಂಡಿರುವ ಅದ್ಯಯನಾಸಕ್ತ ರೈತರು  ರಬ್ಬರ್‌ ಕೃಷಿ ಇರುವ ಕಡೆ ಅಡಿಕೆಗೆ ಎಲೆಚುಕ್ಕಿ ರೋಗ  ಉಳಿದೆಡೆಗಿಂತ  ವೇಗವಾಗಿ ಹರಡಿದೆ ಎಂಬುದನ್ನು ಗಮನಿಸಿದ್ದಾರೆ. ಅಲ್ಲದೇ ಈ ವಿಚಾರವನ್ನು  ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌ ಅವರ ಗಮನಕ್ಕೂ ತಂದಿದ್ದಾರೆ.  ಈ ಬಗ್ಗೆ ವೈಜ್ಞಾನಿಕ ಸಂಶೋಧನೆ ನಡೆಸಿದ್ದಲ್ಲಿ ರೋಗ ನಿಯಂತ್ರಣಕ್ಕೊಂದು ಮಾರ್ಗ ದೊರಕಬಹುದೆಂಬ ಇರಾದೆಯಿಂದ ಇದನ್ನು ರಬ್ಬರ್‌ ಮಂಡಳಿ ಸಭೆಯಲ್ಲಿ ಚರ್ಚಿಸುವಂತೆ ರೈತರು ಮುಳಿಯ ಕೇಶವ ಭಟ್‌ ಅವರಲ್ಲಿ ಮನವಿ ಮಾಡಿದ್ದರು.

Ad Widget

Ad Widget <> Ad Widget

ಈ ಹಿನ್ನಲೆಯಲ್ಲಿ ಅವರು ರಬ್ಬರ್‌ ಮಂಡಳಿ ಸಭೆಯಲ್ಲಿ ಅಲ್ಲಿನ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗಕ್ಕೆ ಕಾರಣವಾಗುವ ಸೂಕ್ಷ್ಮಾಣು ಜೀವಿಯೂ ರಬ್ಬರ್‌ ಹಾಗೂ ಅಡಿಕೆಯಲ್ಲಿ ಸಾಮ್ಯತೆ ಹೊಂದಿದೆಯೇ ಎಂಬುದರ ಬಗ್ಗೆ ವಿಜ್ಞಾನಿಗಳು ಸಂಶೋಧನೆ ನಡೆಸಬೇಕೆಂದು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಈ ಬಗ್ಗೆ ಅಧ್ಯಯನಕ್ಕೆ ಉತ್ಸಾಹ ತೋರಿದ್ದಾರೆ.

ಸುಳ್ಯ ಭಾಗದಲ್ಲಿ ರಬ್ಬರ್ ಹಾಗೂ ಅಡಿಕೆ ಎರಡರಲ್ಲೂ ಎಲೆ ಚುಕ್ಕಿರೋಗ  ಕಾಣಿಸಿಕೊಳ್ಳುತ್ತಿದೆ. ಕೇರಳ ಭಾಗದಲ್ಲಿ ಎರಡು ಬೆಳೆಗಳಲ್ಲೂ ರೋಗದ ಪ್ರಮಾಣ ನಿಗದಿಗಿಂತ ಹೆಚ್ಚಾಗಿರುವ ಬಗ್ಗೆ ಅಲ್ಲಿನ ರೈತರು ರಬ್ಬರ್ ಬೋರ್ಡ್‌ನ ಗಮನಕ್ಕೆ ತಂದಿದ್ದಾರೆ. ರಬ್ಬರ್ ಬೆಳೆಯಲ್ಲಿ ಹಿಂದಿನಿಂದಲೂ ಎಲೆ ಚುಕ್ಕಿರೋಗವಿದ್ದು, ಇದು ಈಗ ಅಡಿಕೆಗೆ  ಹಬ್ಬುತ್ತಿದ್ದೆಯೇ ಎಂಬ ಪ್ರಶ್ನೆ ಕೃಷಿಕರಲ್ಲಿ ಮೂಡಿದೆ. ಎಲೆಚುಕ್ಕಿ ರೋಗ ಮತ್ತು ಕೊಳೆರೋಗ ಎರಡೂ ಕೂಡಾ ರಬ್ಬರ್ ಹಾಗೂ ಅಡಕೆ ತೋಟದಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿರುವುದರಿಂದ ಈ ಎರಡು ಬೆಳೆಗಳಿಗೆ ರೋಗ ಹರಡುವ ಸೂಕ್ಷ್ಮಾಣು ಜೀವಿ ಒಂದೆ ಆಗಿರಬಹುದೆಂಬ  ಅನುಮಾನವಿದ್ದು ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆಯನ್ನು ನಡೆಸಿ ರೈತರ ಆತಂಕ ದೂರ ಮಾಡಬೇಕಾಗಿದೆ.

ಮುಳಿಯ ಕೇಶವ ಭಟ್
ಸದಸ್ಯರು, ರಬ್ಬರ್ ಮಂಡಳಿ ಕೊಟ್ಟಾಯಂ
Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!