ಬೆಂಗಳೂರು
Belthangady | ಧರ್ಮಸ್ಥಳ : ಮೂರು ವಾಹನಗಳಲ್ಲಿ ಹಿಂಸಾತ್ಮಕ ರೀತಿ ಅಕ್ರಮ ಗೋವು ಸಾಗಾಟ ಪತ್ತೆ – 8 ಜಾನುವಾರು ರಕ್ಷಣೆ , ಬಿಜೆಪಿ ಮುಖಂಡ ಸೇರಿದಂತೆ 4 ಆರೋಪಿಗಳ ಬಂಧನ : ಪ್ರಮುಖ ಬಿಜೆಪಿ ಮುಖಂಡರಿಗೆ ಸೇರಿದ ವಾಹನಗಳು ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಮೂರು ವಾಹನಗಳಲ್ಲಿ ಹಿಂಸಾತ್ಮಕ ರೀತಿಯಲ್ಲಿ ಏಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ (Belthangady).
ಜುಲೈ 12 ರಂದು ಧರ್ಮಸ್ಥಳ ಪೊಲೀಸ್ ಠಾಣಾ ಎಸ್ಐ ಅನೀಲಕುಮಾರ್ ರವರು ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್ ವಾಹನಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ರಮಾನಂದ ಸಾಲ್ಯಾನ್ ಸೇರಿದ ಪಿಕಪ್ ವಾಹನ KA-21B-7389 ಮತ್ತು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್ ಸೇರಿದ ಪಿಕಪ್ ವಾಹನ KA-70-0312 ಹಾಗೂ ಕೃಷ್ಣ ಎಂಬವರಿಗೆ ಸೇರಿದ KA670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಸದ್ರಿ ವಾಹನದಲ್ಲಿ ಕಪ್ಪು ಮತ್ತು ಕಂದು ಬಣ್ಣದ ದನ -3, ಬಿಳಿ ಬಣ್ಣದಲ್ಲಿ ಕಂದು ಮಿಶ್ರಿತ ಇರುವ ದನ-1 , ಕಂದು ಬಣ್ಣದ ದನ -2 , ಕಂದು ಬಣ್ಣದ 2 ಗಂಡು ಕರುಗಳು ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.
ವಾಹನದಲ್ಲಿದ್ದ 1ನೇ ಆರೋಪಿ ಚೆನ್ನಕೇಶವ ವಶಕ್ಕೆ ಪಡೆದು ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಜಾನುವಾರುಗಳನ್ನು ಖರೀದಿಸಿ ಹಾಸನ ಕಡೆಗೆ ಮಾರಾಟ ಮಾಡಲು ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು
ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ ವಾಹನಗಳ ಸಹಿತ ಜಾನುವಾರುಗಳನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಮುಖಂಡರು ಭಾಗಿ..?: ಅಕ್ರಮ ಜಾನುವಾರು ಸಾಗಾಟದ ಹಿಂದೆ ಬಿಜೆಪಿ ಮುಖಂಡರ ನೇತೃತ್ವದ ಇರುವ ಬಗ್ಗೆ ಅನುಮಾನ ಇದ್ದು. ಪ್ರಕರಣದಲ್ಲಿ ವಶಪಡಿಸಿಕೊಂಡ ವಾಹನಗಳು ನಾವೂರು ಬಿಜೆಪಿ ಮುಖಂಡರಿಗೆ ಸೇರಿದ್ದಾಗಿದೆ.
ತಾಲೂಕಿನಲ್ಲಿ ಗೋವು ಅಕ್ರಮವಾಗಿ ಸಾಗಾಟದ ಹಿಂದೆ ಬಿಜೆಪಿ ಮುಖಂಡರು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮರವಳಲು ನಿವಾಸಿ
ಬೇಲೂರಯ್ಯಮ ಮಗನಾದ ಚೆನ್ನಕೇಶವ , ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಒಳಗದ್ದೆ ನಿವಾಸಿ ಉಮೇಶ್ ಗೌಡರ ಮಗ ಪುಷ್ಪರಾಜ್ ,ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಆನಂದ ಬಂಗೇರ ಮಗನಾದ ಪ್ರಮೋದ್ ಸಾಲ್ಯಾನ್,
ಹೊಳೆನರಸೀಪುರ ತಾಲೂಕಿನ ಹಳೇಕೋಟೆ ನಿವಾಸಿ ವೀರಭದ್ರಯ್ಯ ಮಗನಾದ ಸಂದೀಪ್ ಬಂಧಿತ ಆರೋಪಿಗಳು.
ಆರೋಪಿ ಪ್ರಮೋದ್ ಸಾಲಿಯಾನ್ ಮೋರ್ತಾಜೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹಾಗೂ ವಿಶ್ವ ಹಿಂದೂ ಪರಿಷತ್ತಿನ ಮಾಜಿ ಅಧ್ಯಕ್ಷನಾಗಿದ್ದ, ಬಿಜೆಪಿ ಮುಖಂಡ ಮಾಜಿ ಗ್ರಾ.ಪಂ ಅಧ್ಯಕ್ಷ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಅವರ ಸಹೋದರ. ಗೋವಾ ಸಾಗಟದ ಒಂದು ವಾಹನ ಬೆಳ್ತಂಗಡಿ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಇತ್ತಿಚೆಗೆ ಖರೀದಿಸಿದ್ದರು ಎನ್ನಲಾಗಿದೆ.
ವಶಪಡಿಸಿಕೊಂಡ ಸಾಮಗ್ರಿಗಳು: ಜಾನುವಾರುಗಳ ಅಂದಾಜು ಮೌಲ್ಯ 65,000 ಸಾವಿರ ಹಾಗೂ ವಾಹನದ ಅಂದಾಜು ಮೌಲ್ಯ 7,00,000 ರೂಪಾಯಿ ಆಗಬಹುದು. ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂ 7,65,000 ರೂಪಾಯಿ ಅಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ: 8,9,11 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಜೊತೆಗೆ ಕಲಂ:66 ಜೊತೆಗೆ 192(ಎ) ಐ ಎಂ ವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
ಶಿಕ್ಷಣ
Special classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು: ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.
ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರಿಂದ ಕಡ್ಡಾಯವಾಗಿ ಲಿಖಿತ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಇಲಾಖೆ ಸೂಚಿಸಿದೆ.
ಅಲ್ಲದೆ, ವಿಶೇಷ ತರಗತಿಗಳನ್ನು ನಡೆಸುವ ಕುರಿತು ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ನಡವಳಿ ದಾಖಲಿಸಬೇಕು. ತರಗತಿಗಳನ್ನು ನಡೆಸುತ್ತಿರುವ ಮಾಹಿತಿಯನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ನೀಡುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.
ಬಿಗ್ ನ್ಯೂಸ್
KRS-ಕೆಆರ್‌ಎಸ್‌ಗೆ ಎತ್ತಿನಹೊಳೆ ನೀರು..! ನೀರಿನ ಮಟ್ಟ ಹೆಚ್ಚಿಸಲು ಹೊಸ ಮಾರ್ಗ
ಮಳೆ ಕೊರತೆ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ.
ಸಕಲೇಶಪುರ: ಮಳೆ ಕೊರತೆ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನಾಗರ ಗ್ರಾಮದ ವಿತರಣಾ ಘಟಕದಿಂದ ಕಳೆದ ಒಂದು ವಾರದಿಂದ ಎತ್ತಿನಹೊಳೆ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ. ಅಲ್ಲಿಂದ ಗೊರೂರು ಜಲಾಶಯದ ಮೂಲಕ ಕಾವೇರಿ ನದಿಗೆ ಸೇರಿ ಕೆಆರ್‌ಎಸ್ ಅಣೆಕಟ್ಟಿನತ್ತ ನೀರು ಸಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸಕ್ತ ವರ್ಷ ಮಳೆ ಪ್ರಮಾಣ ಕಡಿಮೆಯಾಗಿದ್ದು, ಕಾವೇರಿ ನೀರಾವರಿ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದಂತೆ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ ಎತ್ತಿನಹೊಳೆ ನೀರನ್ನು ಪರ್ಯಾಯವಾಗಿ ಬಳಸಲಾಗುತ್ತಿದೆ ಎನ್ನಲಾಗಿದೆ.
ಎತ್ತಿನಹೊಳೆ ಯೋಜನೆಯಡಿ ಮೇ 15ರಿಂದ ಅಕ್ಟೋಬರ್ ಅಂತ್ಯದವರೆಗೆ ಎಂಟು ಚೆಕ್‌ಡ್ಯಾಮ್‌ಗಳಿಂದ ನೀರನ್ನು ಮೇಲೆತ್ತಿ ಬೇಲೂರು-ಅರಸೀಕೆರೆ ಮಾರ್ಗವಾಗಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬರಪೀಡಿತ ಏಳು ಜಿಲ್ಲೆಗಳಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಆದರೆ ಅರಸೀಕೆರೆ ಹಾಗೂ ತುಮಕೂರು ಭಾಗಗಳಲ್ಲಿ ಯೋಜನೆಯ ಕಾಮಗಾರಿಗಳು ಇನ್ನೂ ಸಂಪೂರ್ಣಗೊಂಡಿಲ್ಲ.
ಯೋಜನಾ ಪ್ರದೇಶದ 32ನೇ ಕಿ.ಮೀ. ವ್ಯಾಪ್ತಿಯ ಬೆಟ್ಟದಲೂರು ಸಮೀಪ ಕಾಗೇಹಳ್ಳಕ್ಕೆ ನೀರು ಹರಿಸಿ, ಮಾರಿಕಣಿವೆ ಮೂಲಕ ಎತ್ತಿನಹೊಳೆ ನೀರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರಕ್ಕೆ ತಲುಪಿಸುವ ವ್ಯವಸ್ಥೆ ಇದೆ. ಈ ಮಾರ್ಗದಲ್ಲಿರುವ ಬಹುತೇಕ ಕೆರೆಕಟ್ಟೆಗಳು ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
2024ರಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಯಾಗಿದ್ದು, ಆ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಮೇಲೆತ್ತಲು ಸಾಧ್ಯವಾಗಿರಲಿಲ್ಲ. 2025ರಲ್ಲಿ ಸುಮಾರು 4.5 ಟಿಎಂಸಿ ನೀರನ್ನು ಮೇಲೆತ್ತಲಾಗಿತ್ತು. ಪ್ರಸಕ್ತ ವರ್ಷದ ಸೆಪ್ಟೆಂಬರ್ ಅಂತ್ಯದವರೆಗೆ 1.57 ಟಿಎಂಸಿ ನೀರನ್ನು ಮಾತ್ರ ಮೇಲೆತ್ತಲಾಗಿದೆ ಎಂದು ತಿಳಿದುಬಂದಿದೆ.
ಇದರಲ್ಲಿ ಸುಮಾರು 57 ಕ್ಯುಸೆಕ್ ನೀರನ್ನು ಹೇಮಾವತಿ ನದಿಗೆ ಹರಿಸಲಾಗಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆಯಡಿ ಮೇಲೆತ್ತಿದ ಸಂಪೂರ್ಣ ನೀರನ್ನು ಕಾಗೇಹಳ್ಳಕ್ಕೆ ಹರಿಸಿದರೆ ರೈತರ ಜಮೀನುಗಳು ಜಲಾವೃತವಾಗುವ ಸಾಧ್ಯತೆ ಇರುವುದರಿಂದ, ಸದ್ಯ ಅಲ್ಪ ಪ್ರಮಾಣದ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು20 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಅಂತರ ರಾಜ್ಯ24 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ20 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ23 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ19 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ


















