Connect with us

ದಕ್ಷಿಣ ಕನ್ನಡ

Belthangady | ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಬಿಗಿದು ಸಾವು – ಬೆಳ್ತಂಗಡಿಯಲ್ಲಿ ನಡೆಯಿತು ಹೃದಯವಿದ್ರಾವಕ ಘಟನೆ

Published

on



Ad Widget

Ad Widget

Ad Widget

Ad Widget

ಮಂಗಳೂರು: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಬಿಗಿದು ಸಾವು ಸಂಭವಿಸಿದ ಹೃದಯವಿದ್ರಾವಕ ಘಟನೆ ಬೆಳ್ತಂಗಡಿಯಲ್ಲಿ (Belthangady) ನಡೆದಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಘಟನೆ ನಡೆದಿದ್ದು , ರಜೆ ಹಿನ್ನಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಟವಾಡುತಿದ್ದಾಗ ದುರ್ಘಟನೆ ಸಂಭವಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

8ನೇ ತರಗತಿಯ ವಿದ್ಯಾರ್ಥಿ ಶ್ರೀಷಾ (14) ಆದಿತ್ಯವಾರ ರಜೆ ಇದ್ದ ಕಾರಣ ಸೀರೆಯಲ್ಲಿ ಮಾಡಿದ ಉಯ್ಯಾಲೆ‌ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಬಿಗಿದು ನೆಲದಲ್ಲಿ ಬಿದ್ದಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಆಸ್ಪತ್ರೆಗೆ ತಕ್ಷಣ ಕರೆದುಕೊಂಡು ಹೋದರು ಬಾಲಕನ ಜೀವ ಉಳಿಸಲು ಸಾಧ್ಯವಾಗಿಲ್ಲ. ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



Ad Widget

ಕೆಲ ವರ್ಷಗಳಿಂದ ಉಯ್ಯಾಲೆಯಲ್ಲಿ ಮಕ್ಕಳು ಸಾವನ್ನಪ್ಪಿದ ಘಟನೆ ಕೆಲವು ಕಡೆ ವರದಿಯಾಗಿದೆ.

Click to comment

Leave a Reply

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಮಂಗಳೂರು

Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!

Published

on



Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.



Ad Widget
Ad Widget
Continue Reading

ಅಪರಾಧ

Puttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2026ರ ಅಕ್ಟೋಬರ್ 14ರಂದು ಸಂಜೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ವಾಸು ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅಂಗಡಿ ಮಾಲೀಕ, ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬವರು ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ತಂದು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget <> Ad Widget

ಇದೇ ದಿನ ಪುತ್ತೂರು ಕಸಬ ಗ್ರಾಮದ ಲಿನೆಟ್ ಜಂಕ್ಷನ್ ಬಳಿಯ ಪಾನ್ ಸ್ಟಾಲ್ ಒಂದರಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸಹಾಯಕ ಪೊಲೀಸ್ ಉಪನಿರೀಕ್ಷಕ ಗಂಗಾಧರ ಎ.ಬಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅಂಗಡಿ ಮಾಲೀಕ, ಪುತ್ತೂರು ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಎಂಬವರ ಬಳಿ ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳದಿಂದ ಲಾಟರಿ ಟಿಕೆಟ್‌ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



Ad Widget

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading