Connect with us

ದಕ್ಷಿಣ ಕನ್ನಡ

Veerendra Heggade | ಒಳ್ಳೆಯ ಕೆಲಸ ಅನ್ನೋದು ಎರಡು ಅಲಗಿನ ಕತ್ತಿಯಿದ್ದ ಹಾಗೆ – ನಾವು ಸುಮ್ಮನಿರೋದು ಸಂಭಾಷಣೆ ಆರಂಭವಾಗಬಾರದು ಎಂಬ ಕಾರಣಕ್ಕಾಗಿ : ಕ್ಷೇತ್ರದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಡಾ.ವೀರೇಂದ್ರ ಹೆಗ್ಗಡೆ

Published

on

Ad Widget

Ad Widget

Ad Widget

Ad Widget

ಹನ್ನೆರಡು ವರ್ಷಗಳ ಹಿಂದೆ ಉಜಿರೆಯಲ್ಲಿ ನಡೆದ ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಮತ್ತು ಅತ್ಯಾಚಾರ ಪ್ರಕರಣದ ತೀರ್ಪು ಸಿಬಿಐ ನ್ಯಾಯಾಲಯ ಪ್ರಕಟಿಸಿದ ತಿಂಗಳ ಬಳಿಕ ಮೌನ ಮುರಿದಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Veerendra Heggade) ಯವರು ಆ ಕುರಿತು ತನ್ನ ಹಾಗೂ ಕ್ಷೇತ್ರದ ಕುರಿತು ನಡೆಯುತ್ತಿರುವ ಅಪಪ್ರಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಧರ್ಮಸ್ಥಳದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಈ ಕುರಿತು ಮಾತನಾಡಿದ ಧರ್ಮಾಧಿಕಾರಿಗಳು ಈ ಅಪಪ್ರಚಾರದ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರವಿಲ್ಲ. ಕ್ಷೇತ್ರವನ್ನು ಮೈಲಿಗೆ ಮಾಡುವ ವಿಚಾರವಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget

Ad Widget

Ad Widget


“ ಒಳ್ಳೆಯ ಕೆಲಸ ಅನ್ನೋದು ಎರಡು ಅಲಗಿನ ಕತ್ತಿಯಿದ್ದ ಹಾಗೆ. ಅದು ಎರಡೂ ಕಡೆಯಿಂದ ಕೊಯ್ತದೆ. ಪ್ರಚಾರದ ದೃಷ್ಟಿಯಿಂದ ಒಳ್ಳೆಯ ವಿಷಯವಾದರೂ ಅದೆ ವೇಳೆ ದ್ವೇಷವನ್ನು ಕೂಡ ಅದು ಉಂಟು ಮಾಡುತ್ತದೆ. ನಮಗೆ ಕೋಟ್ಯಾಂತರ ಅಭಿಮಾನಿಗಳ ಬಳಗವಿದೆ. ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ. ಇದಕ್ಕೆ ದ್ವೇಷ, ಅಸೂಯೆ ಕಾರಣ ಎಂದರು.
ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗ್ತಿದೆ ಅಂತ ಕ್ಷೇತ್ರದ ಸಂಪತ್ತನ್ನ ಹೇಗೆ ಬಳಸ್ತೀವಿ ಅನ್ನೋದ್ರ ಮೇಲೆ ಅದರ ಪರಿಣಾಮ ಇದೆ.

Ad Widget

Ad Widget alt="Ad Widget"/>

Ad Widget

ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಸೌಜನ್ಯ ಪ್ರಕರಣದ ತನಿಖೆ ಮಾಡಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ. ಇಗಲೂ ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ ಅದರಿಂದ ನಮಗೆ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯ ಯಾಕೆ ಎಳೀತಾರೆ ಅಂತ ಗೊತ್ತಾಗ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

Ad Widget

Ad Widget <> Ad Widget


ಇದರ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರ ಇಲ್ಲ, ಕ್ಷೇತ್ರದ ವಿಚಾರ ಇದೆನನಗೆ ಯಾವುದೇ ಭಯ, ಸಂಕೋಚ ಹಾಗೂ ಸಂದೇಹ ಇಲ್ಲ. ಶತೃತ್ವಕ್ಕೆ ಕಾರಣ ಏನು ಅನ್ನೋದೇ ನಮಗೆ ಇರೋ ಸಮಸ್ಯೆ. ಹಾಗಾಗಿ ನಮ್ಮ ಸಿಬ್ಬಂದಿಗಳಿಗೆ ಈ ಸತ್ಯ ಗೊತ್ತಿರಬಹುದು, ನಾವು ಯಾಕೆ ಸುಮ್ಮನಿದ್ದೇವೆ ಅಂತ ಅನಿಸಬಾರದು. ನಾವು ಸುಮ್ಮನಿರೋದು ಸಂಭಾಷಣೆ ಆರಂಭವಾಗಬಾರದು ಅಂತ ಅಂತಾ ಅವರು ವಿವರಿಸಿದರು.


ಅನೇಕರು ಬಂದು ಕಣ್ಣೀರು ಹಾಕ್ತಾ ಇದಾರೆ, ನಿಮಗೆ ಹೀಗಾದರೆ ಹೇಗೆ ತಡೆಯೋದು ಅಂತ. ಆದರೆ ಈಗ ಪ್ರೀತಿ ಮತ್ತು ದ್ವೇಷ ಯಾರಿಗಿದೆ ಅಂತ ಗೊತ್ತಾಗ್ತಿದೆ. ನಮ್ಮ ಆತ್ಮ ಮತ್ತು ವ್ಯವಹಾರ ಎಲ್ಲವೂ ಸ್ವಚ್ಛವಾಗಿದೆ. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯವೇ ಇಲ್ಲ. ನೀವೆಲ್ಲಾ ನಿಮ್ಮ ಸಿಬ್ಬಂದಿ ಕರೆದು ಈ ಬಗ್ಗೆ ಗಟ್ಟಿಯಾಗಿ ಹೇಳಿ. ಧರ್ಮಸ್ಥಳದ ಸಿಬ್ಬಂದಿ ಕಾರಣಕ್ಕೆ ಇಲ್ಲಿ ಎಲ್ಲವೂ ಚೆನ್ನಾಗಿದೆ. ನಮ್ಮ ಒಳ್ಳೆಯ ಕಾರ್ಯಕಗಳು ನಡೆಯುತ್ತೆ, ಇದು ಮಧ್ಯದಲ್ಲಿ ಬಂದ ಮೋಡವಷ್ಟೇ ಈ ಪರದೆ ತೆಗೀಬೇಕು, ಅದನ್ನ ದೇವರು ತೆಗೀಬೇಕಾಷ್ಟೆ ಎಂದರು.

Ad Widget

Ad Widget


ನಿಮ್ಮ ಶಿಸ್ತು ಮತ್ತು ನಿಯಮ ಬಿಡಬೇಡಿ, ನನಗೆ ಯಾವ ಭಯವೂ ಇಲ್ಲ. ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ಕೊಡಲ್ಲ. ವೈಯಕ್ತಿತ ಅವಮಾನ ಮತ್ತು ವೈಯಕ್ತಿಕ ಸಂಭಾಷಣೆ ಸರಿಯಲ್ಲ, ನಿಲ್ಲಿಸಬೇಕು. ನಮ್ಮ ಅಭಿಮಾನಿಗಳು ರೆಡಿ ಇದ್ದಾರೆ, ಏನಾದ್ರೂ ಮಾಡಲಿಕ್ಕೆ. ಆದರೆ ನಾನು ಏನೂ ಮಾಡಬೇಡಿ ಅಂದಿದ್ದೇನೆ, ನೈತಿಕ ಶಕ್ತಿ ದೊಡ್ಡದು ಅಂದಿದ್ದೇನೆ ಎಂದು ಕ್ಷೇತ್ರದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ದರ್ಮಾಧಿಕಾರಿಗಳು ತಿಳಿಸಿದರು.

Ad Widget
Click to comment

Leave a Reply

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಶಿಕ್ಷಣ

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!