Connect with us

ದಕ್ಷಿಣ ಕನ್ನಡ

ಭಾರತದ ಮಣ್ಣಿನಲ್ಲಿ ಜನಿಸಿದ್ದು ನಮ್ಮ ಪುಣ್ಯ : ಡಾ.ಎಂ.ಬಿ.ಪುರಾಣಿಕ್ | ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ ಮತ್ತು ರೋಬೋಟಿಕ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತರಗತಿಗಳಿಗೆ ಚಾಲನೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ಭಾರತದ ಮಣ್ಣಿನಲ್ಲಿ ಜನಿಸಿದ್ದು ನಮ್ಮ ಪುಣ್ಯ.  ಹಾಗಾಗಿ ಬದುಕಿನುದ್ದಕ್ಕೂ ರಾಷ್ಟ್ರ ಸೇವೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಜನ್ಮ ಸಾರ್ಥಕಗೊಳಿಸಿಕೊಳ್ಳಬೇಕು.  ರಾಷ್ಟ್ರೀಯತೆಯನ್ನು ಮರೆತು ಬದುಕುವುದಕ್ಕೆ ಅರ್ಥವಿಲ್ಲ. ದೇಹದಲ್ಲಿ ಉಸಿರಿರುವವರೆಗೆ ದೇಶ ಹಾಗೂ ಹಿಂದೂ ಧರ್ಮಕ್ಕೆ ನಮ್ಮಿಂದಾದ ಸೇವೆಗಳನ್ನು ಸಲ್ಲಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಚಿಂತನೆಗಳನ್ನು ಮಕ್ಕಳಲ್ಲಿ ಒಡಮೂಡಿಸುವುದು ಅತ್ಯಂತ ಅಗತ್ಯ ಎಂದು ಮಂಗಳೂರಿನ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಹ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಹೇಳಿದರು.

Ad Widget

Ad Widget

Ad Widget

Ad Widget

 ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮ ಹಾಗೂ ರೋಬೋಟಿಕ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತರಬೇತಿ ತರಗತಿಗಳನ್ನು ಉದ್ಘಾಟನೆಗೈದು ಶುಕ್ರವಾರ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ರಾಷ್ಟ್ರೀಯತೆಯ ಕೊರತೆ ಭಾರತೀಯರಲ್ಲಿ ದಟ್ಟವಾಗಿದೆ. ದೇಶಾಭಿಮಾನ ಹೊಂದದಿದ್ದರೆ ಮುಂದಿನ ಜನಾಂಗಕ್ಕೆ ಅಪಾಯ. ಹಾಗಾಗಿ ಎಳವೆಯಿಂದಲೇ ರಾಷ್ಟ್ರ ಭಕ್ತಿಯನ್ನು ತುಂಬುವ ಅನಿವಾರ್ಯತೆಯಿದೆ. ಕೇವಲ ಒಂದೆರಡು ಸಂಸ್ಥೆಗಳ ಪ್ರಯತ್ನದಿಂದ ಬಹುದೊಡ್ಡ ಬದಲಾವಣೆ ಸಾಧ್ಯವಿಲ್ಲದಿದ್ದರೂ ಪ್ರಯತ್ನಿಸಿದ ತೃಪ್ತಿ ದೊರಕುತ್ತದೆ. ಮಕ್ಕಳನ್ನು ಶಾಲೆಗೆ ಸೇರಿಸುವಾಗ ಕಟ್ಟಡದ ವೈಭವ ನೋಡಿ ಸೇರಿಸುವ ಬದಲು ದೊರಕುವ ಶಿಕ್ಷಣದ ಗುಣಮಟ್ಟ ಹಾಗೂ ಸಂಸ್ಕಾರಗಳನ್ನು ತಿಳಿದುಕೊಳ್ಳಬೇಕು ಎಂದರು.

Ad Widget

Ad Widget <> Ad Widget

 ಇಂದು ಮಕ್ಕಳಿಗೆ ಡ್ರಗ್ಸ್ ಸುಲಭವಾಗಿ ದೊರಕುತ್ತಿದೆ. ಮಕ್ಕಳನ್ನು ಹಾಳುಗೆಡವಲೆಂದೇ ಉಚಿತವಾಗಿ ಡ್ರಗ್ಸ್ ಮಿಶ್ರಿತ ಚಾಕಲೇಟ್‌ಗಳನ್ನು ಹಂಚುವ ಕಾರ್ಯಗಳಾಗುತ್ತಿವೆ. ಇಂತಹ ಸಂದರ್ಭದಲ್ಲಿ ಹೆತ್ತವರ ಜವಾಬ್ದಾರಿ ಹೆಚ್ಚಿದೆ ಎಂದರಲ್ಲದೆ ಇಂದು ಮನಃಸ್ಥಿತಿಗಳು ಬದಲಾಗಿವೆ. ಹೆತ್ತವರೆಲ್ಲರೂ ತಮ್ಮ ಮಕ್ಕಳು ಇಂಜಿನಿಯರ್, ಡಾಕ್ಟರ್ ಆಗಬೇಕೆನ್ನುತ್ತಾರಲ್ಲದೆ ಶಿಕ್ಷಕರಾಗಬೇಕು, ಕೃಷಿಕರಾಗಬೇಕು ಎಂಬ ಭಾವನೆಯನ್ನು ಬೆಳೆಸಿಕೊಳ್ಳುತ್ತಿಲ್ಲ. ವ್ಯಕ್ತಿತ್ವ ನಿರ್ಮಾಣದ ಬಗೆಗೆ ಹಿರಿಯರು ಆಲೋಚಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.



Ad Widget

 ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಂಪ್ಯೂಟರ್‌ನಲ್ಲಿ ಕನ್ನಡ ಕೀಲಿಮಣೆಯನ್ನು ಆವಿಷ್ಕರಿಸಿದ ಹಿರಿಯ ಸಾಪ್ಟ್ವೇರ್ ತಂತ್ರಜ್ಞ ಪ್ರೊ ಕೆ.ಪಿ.ರಾವ್ ಮಾತನಾಡಿ ಕೃತಕ ಬುದ್ಧಿಮತ್ತೆಯ ಬಗೆಗೆ ಮೂರು ದಶಕಗಳ ಹಿಂದಿನಿಂದಲೇ ಚರ್ಚೆ ಆರಂಭವಾಗಿದೆ. ಆದರೆ ಈಗ ಆ ಚರ್ಚೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಿದೆ. ಪ್ರಶ್ನೆಯೊಂದನ್ನು ಕಂಪ್ಯೂಟರ್‌ನಲ್ಲಿ ಹಾಕಿದಾಗ ಅದು ನೂರಾರು ಉತ್ತರಗಳನ್ನು ನಮ್ಮ ಮುಂದೆ ಹರವಿಬಿಡುವುದು ಕೃತಕ ಬುದ್ಧಿಮತ್ತೆಯಿಂದಲೇ ಆಗಿದೆ. ಈ ಉತ್ತರಗಳೆಲ್ಲವೂ ಬೇರೆ ಭೇರೆ ವ್ಯಕ್ತಿಗಳು ಬೇರೆ ಬೇರೆ ಸಂದರ್ಭದಲ್ಲಿ ನೀಡಿದ ವಿವರಣೆಗಳಾಗಿವೆ. ಹಾಗಾಗಿ ಮೊದಲೆಲ್ಲ ಒಬ್ಬ ಗುರುವಿನಿಂದ ಜ್ಞಾನ ಪಡೆಯುವುದಕ್ಕೆ ಸಾಧ್ಯವಿದ್ದರೆ ಈಗ ನೂರಾರು ಗುರುಗಳಿಂದ ಕಂಪ್ಯೂಟರ್ ಮೂಲಕ ಜ್ಞಾನ ಹೊಂದುವುದಕ್ಕೆ ಅನುಕೂಲವೆನಿಸಿದೆ ಎಂದರು.

Ad Widget

Ad Widget

 ಕೃತಕ ಬುದ್ಧಿಮತ್ತೆಯ ಬಗೆಗೆ ಮಾತನಾಡುವಾಗ ಸಹಜ ಬುದ್ಧಿಮತ್ತೆಯನ್ನು ಮರೆಯಬಾರದು. ನಮ್ಮ ಮೆದುಳಿಗಿರುವ ಅಪಾರ ಶಕ್ತಿಯನ್ನು ಗುರುತಿಸುವ ಕಾರ್ಯ ಆಗಬೇಕು. ಎಷ್ಟು ಒಳ್ಳೆಯ ಪ್ರಶ್ನೆಗಳು ನಮ್ಮಲ್ಲಿ ಮೂಡುತ್ತವೆ ಎಂಬುದರ ಮೇಲೆ ಉತ್ಕೃಷ್ಟ ಉತ್ತರಗಳು ನಮ್ಮ ಮುಂದೆ ತೆರೆದುಕೊಳ್ಳುತ್ತವೆ. ಜಗತ್ತಿನಲ್ಲಿ ಅಧ್ಯಯನಕ್ಕಿಂತ ಖುಷಿ ಕೊಡುವ ಸಂಗತಿ ಮತ್ತೊಂದಿಲ್ಲ. ಇಂದು ಕಂಪ್ಯೂಟರ್‌ನಲ್ಲಿ ಅವೆಷ್ಟೋ ಮಂದಿ ನಡೆಸಿದ ಅಧ್ಯಯನ, ಜ್ಞಾನಗಳು ನಮಗೆ ಸುಲಭವಾಗಿ ದೊರೆಯುವಂತಾಗಿದೆ ಎಂದು ನುಡಿದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮುಂದಿನ ದಿನಗಳನ್ನು ಕೃತಕ ಬುದ್ಧಿಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಬಹುತೇಕ ದಶಕವೊಂದರ ಒಳಗಾಗಿ ಕೃತಕ ಬುದ್ಧಿಮತ್ತೆಯ ವಿರಾಟ್ ದರ್ಶನವನ್ನು ನಾವು ಕಾಣುವುದಕ್ಕಿದ್ದೇವೆ. ಭ್ರಷ್ಟಾಚಾರ ಮುಕ್ತ ಸಮಾಜಕ್ಕೆ ಇದು ಬುದೊಡ್ಡ ಕೊಡುಗೆಯನ್ನು ನೀಡಬಲ್ಲುದು ಎಂದರಲ್ಲದೆ ಇಂದು ಅಮೇರಿಕದ ಡಾಲರ್ ಪ್ರಪಂಚವನ್ನು ಆಳುತ್ತಿದೆ. ಆ ಜಾಗದಲ್ಲಿ ನಮ್ಮ ರೂಪಾಯಿಯನ್ನು ಕಾಣುವ ದಿನಗಳು ಬರಬೇಕಿವೆ. ಅದಕ್ಕಾಗಿ ನಮ್ಮ ಮಕ್ಕಳು ತಯಾರಾಗುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

 ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ.ಎಚ್.ಮಾಧವ ಭಟ್, ಹಿರಿಯ ನ್ಯಾಯವಾದಿ ಮಹೇಶ್ ಕಜೆ ಶುಭಾಶಂಸನೆಗೈದರು. ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಸುರೇಶ್ ಶೆಟ್ಟಿ, ಬಾಲಕೃಷ್ಣ ಬೋರ್ಕರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ, ನ್ಯಾಯವಾದಿ ಸೀಮಾ ನಾಗರಾಜ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಘವೇಂದ್ರ ಇನ್ವಾರ್ಟರ್ ಸಂಸ್ಥೆಯ ಕೃಷ್ಣರಾಜ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರಾದ ಪುರಂದರ ಭಟ್, ಡಾ.ಶ್ರೀಕಾಂತ ರಾವ್, ಕಾಂಚನ ಈಶ್ವರ ಭಟ್, ವಿಶ್ರಾಂತ ಪ್ರಾಚಾರ್ಯ ಪ್ರೊ.ವೇದವ್ಯಾಸ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಿ.ಬಿ.ಅರ್ತಿಕಜೆ, ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ಯ ಹಿಂದಾರ್, ಮಾಣಿಯ ಬಾಲವಿಕಾಸ ವಿದ್ಯಾಸಂಸ್ಥೆಯ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ, ಕಾರ್ಯದರ್ಶಿ ಮಹೇಶ ಶೆಟ್ಟಿ ಜೆ, ಪುತ್ತೂರಿನ ಶ್ರೀ ರಾಮಕೃಷ್ಣ ಸೇವಾ ಸಮಾಜದ ಕಾರ್ಯದರ್ಶಿ ಗುಣಪಾಲ ಜೈನ್, ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಬಿ.ಎಸ್.ರವಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮುಕ್ತೇಸರ ಎನ್.ಕೆ.ಜಗನ್ನಿವಾಸ ರಾವ್ ಮತ್ತಿತರ ಗಣ್ಯರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 ವಿದ್ಯಾರ್ಥಿ ಶ್ರೀಕೃಷ್ಣ ನಟ್ಟೋಜ ಶಂಖನಾದಗೈದರು. ವಿದ್ಯಾರ್ಥಿನಿಯರಾದ ವೈಷ್ಣವಿ, ನಿಧಿ ಹಾಗೂ ರಕ್ಷಾ ಪ್ರಾರ್ಥಿಸಿದರು. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಂಶುಪಾಲೆ ಮಾಲತಿ ಡಿ ಸ್ವಾಗತಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ ಪ್ರಸ್ತಾವನೆಗೈದರು. ಅಂಬಿಕಾ ವಿದ್ಯಾಲಯದ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ವಂದಿಸಿದರು. ಶಿಕ್ಷಕಿಯರಾದ ಗೌರಿ ಹಾಗೂ ದಿವ್ಯಾ ಕಾರ್ಯಕ್ರಮ ನಿರ್ವಹಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಗೆಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಶಾಲಾ ಶಿಕ್ಷಕಿ ಸುಷ್ಮಾ ಮಿಥುನ್ ಮಾಹಿತಿ ನೀಡಿದರು. ಶಿಕ್ಷಕಿ ಸುಜಾತಾ ಸಹಕರಿಸಿದರು.

Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading