Connect with us

Uncategorized

Illicit Relationship : ಗಂಡ ಬಿಟ್ಟ ಆಂಟಿ ಜತೆ ಸರಸ ಬೋರಾಗಿ ಹೊಸ ಯುವತಿ ಜತೆ ಪ್ರೀತಿ – ತಲೆ ಕೆಟ್ಟ ಎರಡು ಮಕ್ಕಳ ತಾಯಿಯಿಂದ ಯುವಕನಿಗೆ ಚೂರಿ ಇರಿತ

Published

on

Ad Widget

Ad Widget

Ad Widget

Ad Widget
ಜುಂಟಿ ದಾಸ್ ಹಾಗೂ ಜೊಗೀಶ್ 3 ವರ್ಷದ ಹಿಂದೆ ಅಸ್ಸಾಮ್‌ ನಿಂದ ಬೆಂಗಳೂರಿಗೆ ಪ್ರತ್ಯೇಕವಾಗಿ ಬಂದಿದ್ದರು. ಇಬ್ಬರೂ ಸಹ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಜುಂಟಿ ದಾಸ್ ಗೆ ಈ ಹಿಂದೆ ಮದುವೆಯಾಗಿದ್ದು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಆಕೆ ಗಂಡನಿಗೆ ವಿಚ್ಛೇಧನ ನೀಡಿದ್ದು ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದಳು

ಬೆಂಗಳೂರು: ಗಂಡನಿಂದ ಡೈವೊರ್ಸ್ ನೀಡಿ ಯುವಕನ ಜತೆ ಅಕ್ರಮ ಸಂಬಂಧವಿಟ್ಟುಕೊಂಡು ಹುಟ್ಟೂರಿನಿಂದ ದೂರದಲ್ಲಿದ್ದುಕೊಂಡು ಕದ್ದುಮುಚ್ಚಿ ಜೀವನ ಸಾಗಿಸುತ್ತಿದ್ದ ಮಹಿಳೆಯೊಬ್ಬಳು ಪ್ರಿಯಕರ ತನ್ನಿಂದ ದೂರವಾಗುತ್ತಿದ್ದಂತೆ ಆತನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆಯೊಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28ರ ಹರೆಯದ ಜೋಗೇಶ್ ಇರಿತಕ್ಕೊಳಗಾದ ಯುವಕ. 38 ವರ್ಷ ಮಧ್ಯವಯಸ್ಕ ಆಂಟಿ ಜುಂಟಿ ದಾಸ್ ಆರೋಪಿ ಮಹಿಳೆ. ಆರೋಪಿ ಮಹಿಳೆ ಹಾಗೂ ಸಂತ್ರಸ್ತ ಯುವಕ ಇಬ್ಬರು ಅಸ್ಸಾಂ ಮೂಲದವರೆಂದು ಹೇಳಲಾಗುತ್ತಿದೆ.

Ad Widget

Ad Widget

Ad Widget

Ad Widget

ಅಸ್ಸಾಂ ಜೋಡಿ :

Ad Widget

Ad Widget alt="Ad Widget"/>

Ad Widget

ಜುಂಟಿ ದಾಸ್ ಹಾಗೂ ಜೊಗೀಶ್ 3 ವರ್ಷದ ಹಿಂದೆ ಅಸ್ಸಾಮ್ ನಿಂದ ಬೆಂಗಳೂರಿಗೆ ಪ್ರತ್ಯೇಕವಾಗಿ ಬಂದಿದ್ದರು. ಇಬ್ಬರೂ ಸಹ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಜುಂಟಿ ದಾಸ್ ಗೆ ಈ ಹಿಂದೆ ಮದುವೆಯಾಗಿದ್ದು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಆಕೆ ಗಂಡನಿಗೆ ವಿಚ್ಛೇಧನ ನೀಡಿದ್ದು ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದಳು. ಇಬ್ಬರು ಮಕ್ಕಳನ್ನು ಅಸ್ಸಾಂನಲ್ಲಿ ಸಂಭಂದಿಕರ ಮನೆಯಲ್ಲಿ ಬಿಟ್ಟಿದ್ದಳು. ಬೆಂಗಳೂರಿನಲ್ಲಿ ಖಾಸಗಿ ಡೇ ಕೇರ್ ಸಂಸ್ಥೆಯಲ್ಲಿ ಆಯಾ ಆಗಿ ದುಡಿಯುತ್ತಿದ್ದಳು.

Ad Widget

Ad Widget <> Ad Widget

ಇನ್ನೂ ಜೋಗೇಶ್ ಸೆಕ್ಯೂರಿಟಿ ಗಾರ್ಡ್ ಆಗಿ ಬೆಂಗಳೂರಿನಲ್ಲಿ ದುಡಿಯುತ್ತಿದ್ದ. ಒಂದೇ ಭಾಷೆ ಮಾತನಾಡುವವರು ಹಾಗೂ ಒಂದೇ ರಾಜ್ಯದವರಾಗಿರುವುರಿಂದ ವರ್ಷದ ಹಿಂದೆ ಅವರಿಬ್ಬರ ಮಧ್ಯೆ ಪರಿಚಯ ಬೆಳೆದಿದ್ದು ಅದು ಪ್ರೀತಿಗೆ ತಿರುಗಿದೆ. ಬಳಿಕ ಅವರಿಬ್ಬರು ಒಂದೇ ಮನೆಯಲ್ಲಿ ವಾಸಿಸಲು ಆರಂಭಿಸಿದ್ದಾರೆ. ಅವರಿಬ್ಬರು ಹಲವು ಕಡೆ ಸುತ್ತಾಡಿ ಮಧುರ ಸಮಯವನ್ನು ಕಳೆದಿದ್ದರು. ಇದರ ಲಾಭ ಪಡೆದ ಜೋಗೀಶ್ ಮಹಿಳೆಯಿಂದ ಒಂದಿಷ್ಟು ಹಣ ಸಹ ಪಡೆದಿದ್ದ. ಗಂಡು ಆಸರೆಯಿಲ್ಲದ ಜುಂಟಿ ದಾಸ್ ಜೋಗೇಶ್ ನನ್ನೆ ತನ್ನ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಳು.ಅವರಿಬ್ಬರ ಮಧ್ಯೆ ದೈಹಿಕ ಸಂಬಂಧವು ಇತ್ತು. ಇಲ್ಲಿಯವರೆಗೆ ಎಲ್ಲವು ಸರಿಯಿತ್ತು.

ಆದರೇ ಜೋಗಿಶ್ ಇತ್ತೀಚಿಗೆ ಹೊಸ ಯುವತಿ ಜೊತೆ ಓಡಾಟ ಶುರು ಮಾಡಿದ್ದ. ಈ ವಿಚಾರ ತಿಳಿದ ಆರೋಪಿ ಮಹಿಳೆ ವಿವೇಕನಗರದ ಜೋಗಿಶ್ ಮನೆಗೆ ಬಂದು ಗಲಾಟೆ ಮಾಡಿದ್ದಾಳೆ. ಈ ವೇಳೆ ಜಗಳ ಅತಿರೇಕಕ್ಕೆ ಹೋಗಿ ಮಹಿಳೆ ಚಾಕುವಿನಿಂದ ಆತನ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾಳೆ. ಆ ಬಳಿಕ ಅಸ್ಸಾಂಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದ ಆರೋಪಿ ಮಹಿಳೆ, ವಿಲ್ಸನ್ ಗಾರ್ಡನ್‌ʼನಲ್ಲಿರುವ ಆಕೆಯ ಸಂಬಂಧಿಕರ ಮನೆಯಲ್ಲಿದ್ದಳು. ಈ ವೇಳೆ ಪೊಲೀಸರು ಆಕೆಯನ್ನ ಬಂಧಿಸಿದ್ದಾರೆ. ಸದ್ಯ ಗಾಯಾಳು ಜೋಗೀಶ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

“ಪ್ರಿಯಕರನಿಗೆ ಚಾಕು ಇರಿದ ಮಹಿಳೆ ಪರಾರಿಯಾಗಲು ಯತ್ನಿಸಿದ್ದಳು. ಆದರೆ ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ. ಘಟನೆಯಲ್ಲಿ ಪ್ರಿಯಕರ ಜೋಗೇಶ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

Ad Widget
Click to comment

Leave a Reply

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

Uncategorized

Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!

Published

on

Ad Widget

Ad Widget

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget

Ad Widget

Ad Widget

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget alt="Ad Widget"/>

Ad Widget

ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.

Ad Widget

Ad Widget <> Ad Widget

ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.

ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

Ad Widget

Ad Widget

ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.

ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.

ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.

ಮಾರ್ಗ ಬದಲಾವಣೆ ಕುರಿತು ಎಫ್‌ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್‌ಗಳು
ಹುಳಿಮಾವು ಜಂಕ್ಷನ್‌ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!