ಆರೋಗ್ಯ
Pepper Price Hike : ಕಾಳುಮೆಣಸು ಧಾರಣೆ ಲಾಂಗ್ ಜಂಪ್ – 2 ದಿನದಲ್ಲಿ ದಿಢೀರ್ ಬೆಲೆ ಏರಿಕೆ
ಕಾಸರಗೋಡು: ಕಾಳುಮೆಣಸು ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಎರಡು ದಿನಗಳ ಅಂತರದಲ್ಲಿ ಲಾಂಗ್ ಜಾಪ್ ಹೊಡೆದಿರುವ ಪೆಪ್ಪರ್ ಕೆಜಿಗೆ 18 ರೂಪಾಯಿ ಹೆಚ್ಚಾಗಿದೆ. .ಗಾರ್ಬಲ್ಡ್ ಕಾಳುಮೆಣಸು ಪ್ರತಿ ಕೆಜಿಗೆ 540 ರೂ.ಹಾಗೂ ಅನ್ ಗಾರ್ಬಲ್ಡ್ ಗೆ 520ರೂ.ಗೆ ಏರಿಕೆಯಾಗಿದೆ.
ಕಳೆದ ಕೆಲವು ವಾರಗಳಿಂದ ಯಥಾ ಸ್ಥಿತಿಯಲ್ಲಿದ್ದ ಪೆಪ್ಪರ್ ಬೆಲೆಯಲ್ಲಿಣ ದಿಢೀರ್ ಏರಿಕೆ ಕಾಣಿಸಿದೆ. ಹವಾಮಾನ ಬದಲಾವಣೆ ಕಾರಣ ಮುಂದಿನ ವರ್ಷ ಕೇರಳ ಮತ್ತು ಕರ್ನಾಟಕದಲ್ಲಿ ಕಾಳುಮೆಣಸು ಉತ್ಪಾದನೆ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಲಿದೆ ಎಂಬ ಅನುಮಾನ ಸಾರ್ವತ್ರಿಕವಾಗಿ ಕಾಣಿಸಿಕೊಂಡ ಹಿನ್ನೆಲೆ ದಿಢೀರ್ ಬೆಲೆ ಏರಿಕೆಯಾಗಿದೆ ಎಂದು ಮಾರುಕಟ್ಟಿ ತಜ್ಞರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಉತ್ತರ ಭಾರತದ ಕಾಳು ಮೆಣಸು ಖರೀದಾರರು ಕೊಚ್ಚಿಯಲ್ಲಿ ನಡೆಸಿದ ಲಾಬಿ ಬೆಲೆ ಏರಿಕೆಗೆ ಕಾರಣವಾಗಿವೆ ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ.
ಮುಂಗಾರು ಆರಂಭಿಕ ಹಂತದಲ್ಲಿ ಮಳೆಯ ಕೊರತೆ ಹಾಗೂ ಬಳಿಕ ಬಂದ ಭಾರಿ ಮಳೆ ಬೆಳೆ ಹಾನಿಗೆ ಕಾರಣವಾಗಿದೆ. ಈ ವರ್ಷ ಉತ್ಪಾದನೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವುದಾಗಿ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ದೊಡ್ಡ ಮಸಾಲೆ ಕಂಪನಿಗಳು ಕಾಳು ಮೆಣಸಿನ ಸಂಗ್ರಹ ಆರಂಭಿಸಿವೆ. ಬೇಡಿಕೆ ಹೆಚ್ಚಾದಂತೆ ಬೆಲೆ ಏರಿದೆ.
ಕಳೆದ ಒಂದು ವಾರದಲ್ಲಿ ಪ್ರತಿ ಕೆಜಿ ಗೆ 20ರೂ ಹೆಚ್ಚಿದೆ. ದೆಹಲಿ, ಜೈಪುರ ಮತ್ತು ಇಂದೋರ್ ಮಾರುಕಟ್ಟೆಗಳನ್ನು ಕೇಂದ್ರೀಕರಿಸಿ ಉತ್ತರ ಭಾರತದ ವ್ಯಾಪಾರಿಗಳು ಕಾಳುಮೆಣಸು ಖರೀದಿಗೆ ಗುಂಪಾಗಿ ಬರಲಾರಂಭಿಸಿದ್ದು ಬೆಲೆ ಏರಿಕೆಗೆ ಕಾರಣವಾಗಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಮಂಗಳೂರು13 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ17 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ18 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್11 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಬಿಗ್ ನ್ಯೂಸ್19 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ11 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು12 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ14 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















