ಆರೋಗ್ಯ
Papaya health benefits: ಪಪ್ಪಾಯಿ ಹಣ್ಣು ತಿಂದು ಬೀಜ ಬಿಸಾಡಬೇಡಿ – ಹಲವು ರೋಗಗಳಿಗೆ ಇದು ರಾಮ ಭಾಣ – ಇಲ್ಲಿದೆ ಸಂಪೂರ್ಣ ಮಾಹಿತಿ
Papaya health benefits : ಪಪ್ಪಾಯಿ ಹಣ್ಣು ಬಾಯಿಗೆ ಸ್ವಾದಿಷ್ಟಕರ. ಅದರಲ್ಲಿರುವ ಔಷಧಿಯ ಗುಣಗಳು ಆರೋಗ್ಯಕ್ಕೂ ಹಿತಕರ. ಉಳಿದ ಹಣ್ಣುಗಳಂತೆ ಈ ಪಪ್ಪಾಯಿ ಹಣ್ಣುಗಳು ವರ್ಷದ ಕೆಲ ತಿಂಗಳುಗಳು ಮಾತ್ರ ಲಭಿಸುವುದಲ್ಲ. ವರ್ಷವಿಡೀ ದೊರಕುವುದು ಇದರ ವಿಶೇಷತೆ
ಗರಿಷ್ಟ ಪ್ರಮಾಣದಲ್ಲಿ ಪೌಷ್ಠಿಕಾಂಶವನ್ನು ಒಳಗೊಂಡಿರುವ ಹಣ್ಣು ಮನುಷ್ಪನ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಭಾಣವಾಗಿದೆ. ಇದರ ಜತೆಗೆ ಪಪ್ಪಾಯಿ ಹಣ್ಣನ್ನು ಮುಖದ ಸೌಂದರ್ಯ ಹೆಚ್ಚಿಸಲು ಫೇಸ್ ಪ್ಯಾಕ್‌ಗಳಾಗಿಯೂ ಬಳಸಲಾಗುತ್ತದೆ.
ಆದರೆ ಹೆಚ್ಚಿನವರು ಪಪ್ಪಾಯಿಯ ತಿರುಳನ್ನು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಅವರು ಅದರ ಬೀಜಗಳು ನಿಷ್ಪ್ರಯೋಜಕ ಅಂತನೇ ತಿಳಿದುಕೊಂಡಿದ್ದಾರೆ. ಆದರೆ ಆ ಬೀಜಗಳು ಕೂಡ ಮನುಷ್ಯನ ಆರೋಗ್ಯ ಹೆಚ್ಚಿಸಲು ಉಪಕಾರವಾಗುತ್ತದೆ ಎಂಬುವುದು ನಿಮಗೆ ಗೊತ್ತೆ ?
ನಾಲಿಗೆಗೆ ಕಹಿ ಅನುಭವ ನೀಡುವ ಬೀಜಗಳನ್ನು ಮಿತವಾಗಿ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. “ಎಲ್ಲಾ ಬೀಜಗಳು ವಿಷಕಾರಿಯಲ್ಲ ಆದರೆ ಕೆಲವು ಬೀಜಗಳು ತುಂಬಾ ಕಹಿಯಾಗಿರುತ್ತವೆ, ಇದರಿಂದಾಗಿ ಅವು ಕೆಲವು ಗ್ಯಾಸ್ಟ್ರೊ-ಕರುಳಿನ ತೊಂದರೆಯನ್ನು ಉಂಟುಮಾಡುತ್ತವೆ.” ಇತರ ಅನೇಕ ಪೌಷ್ಟಿಕತಜ್ಞರ ಪ್ರಕಾರ, ಪಪ್ಪಾಯಿ ಬೀಜಗಳನ್ನು ತಿನ್ನಬಹುದು, ಅವುಗಳ ಆರೋಗ್ಯಕ್ಕೆ ಅನುಕೂಲವಾಗುವ ವಿವಿಧ ಗುಣಗಳನ್ನು ಹೊಂದಿದೆ
ಪಪ್ಪಾಯಿ ಬೀಜಗಳನ್ನು ಬಳಸಿ ಏನ್ನೇಲ್ಲ ಪ್ರಯೋಜನಗಳನ್ನು ಪಡೆಯಬಹುದು ಎಂದು ತಿಳಿದುಕೊಂಡು ಬರೋಣ
ಲಿವರ್ ಗೆ ಉಪಕಾರಿ
ಲಿವರ್ ಸಂಬಂಧಿತ ಸಮಸ್ಯೆಗಳನ್ನು ಹೊಂದಿದ್ದರೆ ಪಪ್ಪಾಯಿ ಬೀಜಗಳನ್ನು ಸೇವಿಸಿ. ಇದು ಯಕೃತ್ತನ್ನು ಬಲಪಡಿಸುತ್ತದೆ. ಇದಕ್ಕಾಗಿ ಪಪ್ಪಾಯಿ ಕಾಳುಗಳನ್ನು ಬಿಸಿಲಿನಲ್ಲಿ ಒಣಗಿಸಿ ಮಿಕ್ಸಿಯಲ್ಲಿ ರುಬ್ಬಿಕೊಂಡು ಪುಡಿ ತಯಾರಿಸಿಕೊಳ್ಳಿ. ಈ ಪುಡಿಯಲ್ಲಿ ನಿಂಬೆ ರಸದಲ್ಲಿ ಬೆರೆಸಿ ಪ್ರತಿದಿನ ಸೇವಿಸಿ.
ಜೀರ್ಣಾಂಗ ವ್ಯವಸ್ಥೆ :
ಪಪ್ಪಾಯಿ ಬೀಜಗಳು ಬ್ಯಾಕ್ಟೀರಿಯಾ ವಿರೋಧಿಯಾಗಿದ್ದು, ಹೊಟ್ಟೆಗೆ ಸಂಬಂಧಿಸಿದ ಇತರ ಕಾಯಿಲೆಗಳನ್ನು ಗುಣಪಡಿಸುತ್ತದೆ. ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. ಇದಕ್ಕಾಗಿ ಪಪ್ಪಾಯಿ ಬೀಜದ ಪುಡಿಯನ್ನು ಬಿಸಿ ನೀರಿನಲ್ಲಿ ಸೇವಿಸಿ.
ಮೂತ್ರಪಿಂಡಗಳಿಗೆ ಪ್ರಯೋಜನಕಾರಿ :
ಪಪ್ಪಾಯಿ ಬೀಜಗಳು ಕಿಡ್ನಿ ಸ್ಟೋನ್ ಸಮಸ್ಯೆ ಇದ್ದಲ್ಲಿ ಪಪ್ಪಾಯಿ ಬೀಜದ ಪುಡಿಯನ್ನು ನಿಯಮಿತವಾಗಿ ಕೆಲವು ದಿನಗಳವರೆಗೆ ಸೇವಿಸುತ್ತಿರಿ.
ಹೊಳೆಯುವ ತ್ವಚೆ :
ಯಾವುದೇ ತ್ವಚೆ ಸಂಬಂಧಿತ ಸಮಸ್ಯೆಯನ್ನು ಗುಣಪಡಿಸಲು ಪಪ್ಪಾಯಿ ಬೀಜಗಳು ತುಂಬಾ ಪ್ರಯೋಜನಕಾರಿ. ಅಲ್ಲದೆ ಇದು ನಿಮ್ಮ ತ್ವಚೆಯ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಸುಕ್ಕುಗಳನ್ನೂ ಹೋಗಲಾಡಿಸುತ್ತದೆ.
ತೂಕ ಇಳಿಸಲು ಸಹಕಾರಿ :
ತೂಕ ಇಳಿಸಲು ಬಯಸಿದರೆ ಪಪ್ಪಾಯಿ ಬೀಜಗಳನ್ನು ಸೇವಿಸುವುದು ಉತ್ತಮ ಆಯ್ಕೆಗಳಲ್ಲಿ ಒಂದು. 10 ರಿಂದ 15 ದಿನಗಳ ಕಾಲ ನಿರಂತರವಾಗಿ ಪಪ್ಪಾಯಿ ಬೀಜಗಳನ್ನು ಸೇವಿಸಿದರೆ ತೂಕದಲ್ಲಿ ವ್ಯತ್ಯಾಸ ಕಾಣಬಹುದಾಗಿದೆ.
ಕೆಟ್ಟ ಕೊಲೆಸ್ಟ್ರಾಲ್ ದೂರ
ಪಪ್ಪಾಯಿಯ ಬೀಜಗಳು ಆರೋಗ್ಯಕರ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ, ವಿಶೇಷವಾಗಿ, ಒಲೀಕ್ ಆಮ್ಲ , ಇದು ಹೆಚ್ಚಿನ ಮಟ್ಟದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೂರಮಾಡುತ್ತದೆ.
ಶೀತ, ಕೆಮ್ಮಿಗೂ ಪರಿಹಾರ
ಪಪ್ಪಾಯಿ ಬೀಜಗಳು ಪಾಲಿಫಿನಾಲ್‌ಗಳು, ಫ್ಲೇವನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ತುಂಬಿವೆ ಇದು ಶೀತ ಮತ್ತು ಕೆಮ್ಮಿನಂತಹ ಸಾಮಾನ್ಯ ಸೋಂಕುಗಳಿಂದ ಮತ್ತು ಅನೇಕ ದೀರ್ಘಕಾಲದ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ.
ಪಪ್ಪಾಯಿ ಬೀಜಗಳು ಕರುಳಿನಲ್ಲಿರುವ ಬ್ಯಾಕ್ಟೀರಿಯಾ ಮತ್ತು ಪರಾವಲಂಬಿಗಳನ್ನು ಕೊಲ್ಲುವ ಪ್ರೋಟಿಯೋಲೈಟಿಕ್ ಕಿಣ್ವಗಳನ್ನು ಹೊಂದಿರುತ್ತವೆ, ಇದರಿಂದಾಗಿ ಹೊಟ್ಟೆ ಮತ್ತು ಕರುಳನ್ನು ಆರೋಗ್ಯವಾಗಿರಿಸುತ್ತದೆ ಎಂದು ಕೆಲವು ಅಧ್ಯಯನಗಳು ಹೇಳುತ್ತವೆ. ಪಪ್ಪಾಯಿಯಲ್ಲಿ ಇರುವಂತಹ ವಿಟಮಿನ್ ಎ ಚರ್ಮದಲ್ಲಿನ ಸತ್ತ ಕೋಶಗಳ ಪ್ರೋಟೀನ್ ನ್ನು ಕಾರ್ಯ ನಿರ್ವಹಿಸದಂತೆ ಮಾಡುವುದು. ಪಪ್ಪಾಯಿಯಲ್ಲಿ ಇರುವಂತಹ ಕಿಣ್ವ ಪಪೈನ್ ಇದಕ್ಕೆ ಮುಖ್ಯ ಕಾರಣವಾಗಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized14 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು11 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ಬಿಗ್ ನ್ಯೂಸ್8 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
Uncategorized12 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ12 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ13 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ12 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್13 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















