Connect with us

ಉಡುಪಿ

Udupi Toilet Video | ಉಡುಪಿ : ಟಾಯ್ಲೆಟ್ ನಲ್ಲಿ ಕ್ಯಾಮರಾ ಇಟ್ಟ ಪ್ರಕರಣ – ಎಸ್ಪಿ ಹೇಳಿಕೆ ಪ್ರಕಟಿಸಿದ ಅಲ್ಟ್ ನ್ಯೂಸ್ – ಸುಳ್ಳು ಸುದ್ದಿ ಹರಡಿದ್ದಾರೆ ಎಂದು ರಶ್ಮಿ ಸಾಮಂತ್ ಮನೆಗೆ ರಾತ್ರೋ ರಾತ್ರಿ ಪೊಲೀಸ್ ದಾಳಿ : ರಾಜ್ಯ ಬಿಜೆಪಿ ತೀವ್ರ ಆಕ್ರೋಶ

Published

on



Ad Widget

Ad Widget

Ad Widget

Ad Widget

ಉಡುಪಿ: ಉಡುಪಿಯಲ್ಲಿ ಕಾಲೇಜ್ ಟಾಯ್ಲೆಟ್ ನಲ್ಲಿ ಕ್ಯಾಮರಾದ (Udupi Toilet Video) ಇಟ್ಟು ಅನ್ಯ ಧರ್ಮದ ವಿದ್ಯಾರ್ಥಿನಿಯರು ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ರಶ್ಮಿ ಸಾವಂತ್ ಮನೆಗೆ ರಾತ್ರೋ ರಾತ್ರಿ ಪೊಲೀಸ್ ದಾಳಿ ನಡೆದಿದೆ ಎಂದು ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ಉಡುಪಿಯ ಕಾಲೇಜ್ ನ ಟಾಯ್ಲೆಟ್ ನಲ್ಲಿ ಹಿಂದೂ ಹುಡುಗಿಯರ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ ಎಂದು ವರದಿಯಾಗಿತ್ತು. ಇದನ್ನು ಸಾಮಾಜಿಕ ಹೋರಾಟಗಾರ್ತಿ ರಶ್ಮಿ ಸಾವಂತ್ ಟ್ವಿಟರಲ್ಲಿ ಪ್ರಕಟಿಸಿದ್ದರು. ಈ ಪ್ರಕರಣವನ್ನು ಫ್ಯಾಕ್ಟ್ ಚೆಕ್ ಅಲ್ಟ್ ನ್ಯೂಸ್ ನ ಮಹಮ್ಮದ್ ಜುಬೇರ್ ರೀ ಟ್ವಿಟ್ ಮಾಡಿ , ಉಡುಪಿ ಎಸ್ಪಿ ಸಿದ್ದಲಿಂಗಪ್ಪ ಅವರ ಹೇಳಿಕೆಯನ್ನು ಪ್ರಕಟಿಸಿ, ಮಣಿಪುರದಂತೆ ಆಗುವ ಮೊದಲು ರಶ್ಮಿಯನ್ನು ಬಂಧಿಸಿ ಎಂದಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಉಡುಪಿ ಎಸ್ಪಿ ಸಿದ್ದಲಿಂಗಪ್ಪ ಅವರ ಹೇಳಿಕೆಯನ್ನು ದಿ ನ್ಯೂಸ್ ಮಿನಿಟ್ ಪ್ರಕಟಿಸಿದ್ದು, ತನಿಖೆ ಮಾಡಿದಾಗ ಆ ಹುಡುಗಿಯರ ಮೊಬೈಲ್ ನಲ್ಲಿ ಆ ತರಹದ ವಿಡಿಯೋ, ಪೋಟೋ ಅವರ ಮೊಬೈಲ್ ನಲ್ಲಿ ಇಲ್ಲ , ಎಲ್ಲೂ ಶೇರ್ ಆಗಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ ಎಂದು ರಾತ್ರಿ ರಶ್ಮಿ ಸಾವಂತ್ ಮನೆಗೆ ಪೊಲೀಸರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಈ ಬಗ್ಗೆ ಬಿಜೆಪಿ ಘಟನೆಯನ್ನು ಖಂಡಿಸಿ, ತನ್ನ ಫೇಸ್ಬುಕ್ ನಲ್ಲಿ ಪ್ರಕಟಿಸಿದ್ದು ಈ ರೀತಿ ಇದೆ,



Ad Widget

ರಾಜ್ಯದಲ್ಲಿ ಕಾಂಗ್ರೆಸ್ ಹಿಂದೂಗಳನ್ನು ವ್ಯವಸ್ಥಿತವಾಗಿ ಹಳಿಯುವ ಮತ್ತು ಅವರ ಮೇಲೆ ಸರ್ಕಾರಿ ಯಂತ್ರ ದುರ್ಬಳಕೆ ಮಾಡಿ ಆಕ್ರಮಿಸುವ ಕೆಲಸಕ್ಕೆ ಕೈ ಹಾಕಿದೆ.ಉಡುಪಿಯ ಕಾಲೇಜಿನಲ್ಲಿ ನಡೆದ ಅಮಾನುಷ ಘಟನೆ ಬಗ್ಗೆ ಸುಮ್ಮನಿರುವ ಸರ್ಕಾರವನ್ನು ಪ್ರಶ್ನಿಸಿದ, ಹಿಂದೂ ವಿದ್ಯಾರ್ಥಿಗಳ ಪರ ಧ್ವನಿಯಾದ ಉಡುಪಿಯ ನಿವಾಸಿ ರಶ್ಮಿ ಸಾಮಂತ ಎಂಬುವವರ ಮನೆಗೆ ತುಘಲಕ್ ಸರ್ಕಾರವು ಪೊಲೀಸರನ್ನು ಕಳುಹಿಸಿ ಬೆದರಿಸುವ ಕೆಲಸ ಮಾಡಿದೆ.

Ad Widget

Ad Widget

ಸುಳ್ಳು ಸುದ್ದಿ ಎಂಬ ವೃಥಾ ಆರೋಪ ಹೊರಿಸಿ ರಶ್ಮಿ ಸಾಮಂತರವರ ಮನೆಗೆ ರಾತ್ರೋ ರಾತ್ರಿ ಅಕ್ರಮವಾಗಿ ಪೊಲೀಸರು ನುಗ್ಗಿ ಕಿರುಕುಳ ನೀಡಲು ಯಾವ ಕಾನೂನಿನಲ್ಲಿ ಅವಕಾಶವಿದೆ.?

ಯಾವ ನ್ಯಾಯಾಲಯದ ಮೂಲಕ ವಾರೆಂಟ್ ಪಡೆದು ಪೊಲೀಸರು ಪರಿಶೀಲನೆ ಹೆಸರಲ್ಲಿ ದಬ್ಬಾಳಿಕೆ ನಡೆಸಿದ್ದಾರೆ?ಒಂದು ಟ್ವೀಟ್ ಮೂಲಕ ಸತ್ಯವನ್ನು ಬಹಿರಂಗಪಡಿಸಿದರೆ ತುಘಲಕ್ ಸರ್ಕಾರದ ಕಣ್ಣು ಕೆಂಪಾಗಿದ್ದು ಏಕೆ.?

ಸಿದ್ದರಾಮಯ್ಯರವರ ಸರ್ಕಾರ ಜಿಹಾದಿ ಮನಸ್ಥಿತಿಯ ಪಟಾಲಂಗಾಗಿ ಖುದ್ದು ಪೊಲೀಸರನ್ನು ಛೂ ಬಿಟ್ಟಿತ್ತೇ? ರಶ್ಮಿ ಪೋಷಕರಿಗೆ ರಾತ್ರಿ ವೇಳೆ ಪದೇ ಪದೆ ಕರೆ ಮಾಡಿ ಕಿರುಕುಳ ನೀಡಿದ್ದು ಕಾನೂನುಬಾಹಿರ..!

ಒಲೈಕೆಗಾಗಿ ಸಿದ್ದರಾಮಯ್ಯರವರ ಸರ್ಕಾರ ಕಾನೂನು ಕೈಗೆತ್ತಿಕೊಂಡರೆ, ಯಾರೂ ಕೈಕಟ್ಟಿ ಕೂರುವುದಿಲ್ಲ. ನಿಮ್ಮ ವಿರುದ್ಧ ಹೋರಾಟ ಶತಸಿದ್ದ..!

Ad Widget
Click to comment

Leave a Reply

ಉಡುಪಿ

Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.



Ad Widget

ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಕೆಳಗೆ ಬಿದ್ದ ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ.

ಸದ್ಯ ರಾಜೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ.

Ad Widget
Continue Reading

ಉಡುಪಿ

Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ

Published

on



Ad Widget

Ad Widget

Ad Widget

Ad Widget

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.



Ad Widget

ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಉಡುಪಿ

Murder-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ; ಕಾರಿನಲ್ಲಿ ತುಂಡು ತುಂಡಾದ ಮೃತದೇಹ ಪತ್ತೆ; ಪತ್ನಿ, ಅಪ್ರಾಪ್ತ ಮಗ ನಾಪತ್ತೆ

Published

on



Ad Widget

Ad Widget

Ad Widget

Ad Widget

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಉಡುಪಿ ಮೂಲದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಅವರು ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗನೊಂದಿಗೆ ವಾಸಿಸುತ್ತಿದ್ದರು. ಪ್ರಕಾಶ್ ಅವರ ಸಾವಿನ ಬಳಿಕ ಪತ್ನಿ ಹಾಗೂ ಮಗನ ಸಂಪರ್ಕವೂ ಲಭ್ಯವಾಗದಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

Ad Widget

Ad Widget <> Ad Widget

ವರದಿಗಳ ಪ್ರಕಾರ, ಜುಲೈ 20ರ ಸುಮಾರಿಗೆ ಪ್ರಕಾಶ್ ತಮ್ಮ ಸಹೋದರನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಅವರು, ಆ ದಿನ ಟೆಕ್ಸ್ಟ್ ಮೆಸೇಜ್ ಕಳುಹಿಸಿದ್ದರು. ಸಹೋದರರು ದೂರವಾಣಿ ಮೂಲಕ ಮಾತನಾಡುವಂತೆ ಒತ್ತಾಯಿಸಿದಾಗ ಸಂಭಾಷಣೆ ಕಡಿತಗೊಂಡಿತ್ತು ಎನ್ನಲಾಗಿದೆ.



Ad Widget

ಇದರಿಂದ ಆತಂಕಗೊಂಡ ಸಂಬಂಧಿಕರು ಪ್ರಕಾಶ್ ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಅವರು ಭಾರತಕ್ಕೆ ತೆರಳಿದ್ದಾರೆ ಎಂದು ಕಂಪನಿ ತಿಳಿಸಿತ್ತು. ಆದರೆ ಪ್ರಕಾಶ್ ತಮ್ಮ ಸ್ವಗ್ರಾಮಕ್ಕೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಅನುಮಾನ ಮೂಡಿದ್ದು, ಶಾರ್ಜಾ ಅಧಿಕಾರಿಗಳನ್ನು ಸಂಪರ್ಕಿಸಿ ನಾಪತ್ತೆ ದೂರು ನೀಡಿದ್ದಾರೆ.

Ad Widget

Ad Widget

ದೂರಿನ ಆಧಾರದ ಮೇಲೆ ಶಾರ್ಜಾ ಪೊಲೀಸರು ತನಿಖೆ ಆರಂಭಿಸಿದ್ದು, ಹುಡುಕಾಟದ ವೇಳೆ ಪ್ರಕಾಶ್ ಅವರದ್ದೇ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅವರನ್ನು ಕೊಲೆ ಮಾಡಲಾಗಿದ್ದು, ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಲಾಗಿತ್ತು ಎನ್ನಲಾಗಿದೆ.

ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಮಗ ಪ್ರಸ್ತುತ ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಗಮನ ಅವರತ್ತವೂ ಹರಿದಿದೆ. ಕೊಲೆ ಪ್ರಕರಣದಲ್ಲಿ ಟೀನಾ ಅವರ ಪಾತ್ರವಿದೆಯೇ ಅಥವಾ ಬೇರೆ ಕಾರಣಗಳಿಂದ ಅವರು ಮಗನೊಂದಿಗೆ ಶಾರ್ಜಾದಿಂದ ತೆರಳಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಶಾರ್ಜಾದಿಂದ ತೆರಳಿ ಭಾರತಕ್ಕೆ ಬಂದಿರುವ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಪ್ರಕಾಶ್ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಟೀನಾ ಶಿಕ್ಷಕಿಯಾಗಿ ಉದ್ಯೋಗದಲ್ಲಿದ್ದರು. ದಂಪತಿಗೆ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದು, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರನಿದ್ದಾನೆ.

ದಂಪತಿಗಳ ನಡುವೆ ಯಾವುದೇ ಗಂಭೀರ ವೈಮನಸ್ಸು ಅಥವಾ ವಿವಾದವಿದ್ದ ಬಗ್ಗೆ ತಿಳಿದಿರಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರಕಾಶ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತಕ್ಕೆ ಬಂದು ತೆರಳಿದ್ದರು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕಾಶ್ ಅವರ ಪತ್ನಿ ಹಾಗೂ ಮಗನ ಇರುವಿಕೆ ಸೇರಿದಂತೆ ಕೊಲೆಯ ಹಿಂದಿನ ನಿಖರ ಕಾರಣಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬಸ್ಥರು ಕಾಯುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading