ದಕ್ಷಿಣ ಕನ್ನಡ
Belthangady Congress | ಬೆಳ್ತಂಗಡಿ ಕಾಂಗ್ರೆಸ್ಸಿನ ಬಣ ರಾಜಕೀಯಕ್ಕೆ ಬ್ರೇಕ್ – ದಿಡೀರ್ ಬೆಳವಣಿಗೆಯಲ್ಲಿ ಎರಡು ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ : 2018ರಲ್ಲಿ ಪೂಂಜಾ ಮತ್ತು 2023 ರಲ್ಲಿ ರಕ್ಷಿತ್ ಅಭ್ಯರ್ಥಿಯಾದಾಗ ಸೈಲೆಂಟ್ ನಡೆ ಅನುಸರಿಸಿ ಎರಡು ಪಕ್ಷದ ಅಧ್ಯಕ್ಷ ಸ್ಥಾನದಿಂದಲೂ ಕಿಕ್ ಔಟ್ ಆದ ಜಿಲ್ಲೆಯ ಏಕೈಕ ರಾಜಕಾರಣಿ ರಂಜನ್ ಗೌಡ..!
ಬೆಳ್ತಂಗಡಿ : ಬೆಳ್ತಂಗಡಿ ಕಾಂಗ್ರೆಸ್ (Belthangady Congress) ಪಕ್ಷದ ಬಣ ರಾಜಕೀಯ ಮುಗಿಲು ಮುಟ್ಟುವ ಮೊದಲೇ ಕೆಪಿಸಿಸಿ ಚಿವುಟಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ನೋಟಿಸ್ ಜಾರಿಗೊಂಡ ಕೆಲವೇ ದಿನದಲ್ಲಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರು ನಾಯಕರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ.
ಕಳೆದ ವಾರ ನಡೆದ ಕಾಂಗ್ರೆಸ್ ಪಕ್ಷದ ಗಲಾಟೆ ಗದ್ದಲ ವಿಚಾರ ಕೆಪಿಸಿಸಿಗೆ ನೇರವಾಗಿ ನೈಜ ವಿಚಾರಗಳು ತಲುಪಿತ್ತು. ಇದೀಗ ಗಂಭೀರವಾಗಿ ಚರ್ಚೆ ನಡೆಸಿ ಕೊನೆಗೂ ಕೆಪಿಸಿಸಿ ಅಸ್ತ್ರ ಪ್ರಯೋಗ ಮಾಡಿ ಇಬ್ಬರಿಗೆ ಗೇಟ್ ಪಾಸ್ ಮಾಡುವ ಮೂಲಕ ಬೆಳ್ತಂಗಡಿಯ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಶಾಕ್ ನೀಡಿದೆ.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಮಾಡುವ ಮೂಲಕ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಬಣ ರಾಜಕೀಯಕ್ಕೆ ಬ್ರೇಕ್ ಹಾಕಿದ್ದಾರೆ.ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಕುಮಾರ್ ರವರನ್ನು ಬದಲಾವಣೆ ಮಾಡಿ ಮಾಜಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಪೆರಾಡಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ನ ನೇಮಕವಾಗಿದ್ದಾರೆ.
ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಗಂಗಾಧರ ಗೌಡ ಪುತ್ರ ರಂಜನ್ ಜಿ ಗೌಡ ಅವರನ್ನು ಬದಲಾವಣೆ ಮಾಡಿ ಲಾಯಿಲ ಸೌಹಾರ್ದ ಕೋ-ಆಪರೆವಟಿವ್ ಸೊಸೈಟಿ (ಲಿ) ಅಧ್ಯಕ್ಷರು ಶ್ರೀ ಸ್ವಾಮಿಪ್ರಸಾದ್ ಅಸೋಸಿಯೇಟ್ಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಅವರನ್ನು ಕೆಪಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಇಬ್ಬರು ಅಧ್ಯಕ್ಷರಿಗೆ ಈಗಾಗಲೇ ಕೆಪಿಸಿಸಿ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿಯಾಗಿ. ಚುನಾವಣೆಯ ಸಮಯ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು.
ಗುಂಡುರಾವ್ ಸರ್ಕಾರದಲ್ಲಿ ಸಚಿವರಾಗಿದ್ದ ಗಂಗಾಧರ ಗೌಡರ ಪುತ್ರ ರಂಜನ್ ಗೌಡ 2013 ಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಸಂತ ಬಂಗೇರರ ವಿರುದ್ದ ಸೋಲುಂಡಿದ್ದರು. 2018 ರಲ್ಲಿ ಹರೀಶ್ ಪೂಂಜಾ ಬಿಜೆಪಿ ಅಭ್ಯರ್ಥಿಯಾದಾಗ ಆ ಚುನಾವಣೆಯಲ್ಲಿ ದುಡಿಯದೆ ಮೌನವಾಗಿದ್ದರು ನಂತರ 2019ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ಸಿನಲ್ಲಿ 2023ರಲ್ಲಿ ರಕ್ಷಿತ್ ಶಿವರಾಂ ಅಭ್ಯರ್ಥಿಯಾದ ಇಲ್ಲೂ ಹಳೆಯ ರೀತಿಯಲ್ಲಿ ದುಡಿಯದೆ ಮೌನವಾದರು..!
ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ , ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ನಂತರ ಕಾಂಗ್ರೇಸ್ ಸೇರಿದ ರಂಜನ್ ಗೌಡ ಇದೀಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನವೂ ಕೈತಪ್ಪಿದೆ. ಎಲ್ಲಾ ಪಕ್ಷದಲ್ಲೂ ಸ್ಥಾನ ಸಿಕ್ಕಿದರೂ ಅದೃಷ್ಟ ಕೈ ಹಿಡಿದಿಲ್ಲ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ7 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು5 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ7 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ7 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
Uncategorized8 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ8 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
ಅಂತರ ರಾಜ್ಯ7 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















