Connect with us

ಉಡುಪಿ

Toilet Video | ಶೌಚಾಲಯ ವಿಡಿಯೋ ಪ್ರಕರಣ – ಉಡುಪಿಯ ಹಿಂದೂ ವಿದ್ಯಾರ್ಥಿನಿಯರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ತರಗತಿಗಳನ್ನು ಬಹಿಷ್ಕರಿಸಿ – ಹಿಂದೂ ಯುವ ಸೇನೆ ಕರೆ

Published

on

Ad Widget

Ad Widget

Ad Widget

Ad Widget

ಉಡುಪಿ: ಉಡುಪಿಯ ನೇತ್ರಾ ಜ್ಯೊತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದ ಹುಡುಗಿಯರು ಶೌಚಾಲಯ ಬಳಸುವ ದೃಶ್ಯವನ್ನು ಅನ್ಯ ಧರ್ಮದ ಸಹಪಾಠಿ ಹುಡುಗಿಯರು ಗೌಪ್ಯವಾಗಿ ಚಿತ್ರೀಕರಿಸಿ (Toilet Video) ವ್ಯವಸ್ಥಿತವಾಗಿ ಹಂಚಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೀಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

Ad Widget

Ad Widget

Ad Widget

Ad Widget

ಘಟನೆಯನ್ನು ಖಂಡಿಸಿರುವ ಹಿಂದೂ ಯುವ ಸೇನೆ
ಉಡುಪಿ ಜಿಲ್ಲಾಧ್ಯಕ್ಷ ಅಜಿತ್ ಕುಮಾರ್ , ಇದು ಕಾಲೇಜುಗಳಲ್ಲಿ ನಮ್ಮ ಹಿಂದೂ ಹುಡುಗಿಯರನ್ನು ಸ್ಪಷ್ಟವಾಗಿ ಗುರಿಯಾಗಿಸಿಕೊಂಡು ವಿಡಿಯೋ ಮಾಡಿ ಬ್ಲಾಕ್ಮೇಲ್ ನಡೆಸಿ ಲವ್ ಜಿಹಾದ್ ಗೆ ಬಲಿಯಾಗಿಸುವ ಷಡ್ಯಂತ್ರದಂತೆ ಗೋಚರಿಸುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆದ್ದರಿಂದ ಈ ಘಟನೆಯ ಬಗ್ಗೆ ಸಮರ್ಪಕವಾಗಿ ತನಿಖೆ ನಡೆದು, ಇದರ ಹಿಂದೆ ಇರುವ ಷಡ್ಯಂತ್ರದ ಜಾಲ ಬಯಲಾಗಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಹಿಂದೂ ವಿದ್ಯಾರ್ಥಿನಿಯರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ತರಗತಿಗಳನ್ನು ಬಹಿಷ್ಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

Ad Widget
Click to comment

Leave a Reply

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಉಡುಪಿ

H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ

Published

on

Ad Widget

Ad Widget

Ad Widget

Ad Widget

ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget alt="Ad Widget"/>

Ad Widget

ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.

ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

ಕೊಲ್ಲೂರು ಬಳಿಕ ಕಾಪು ಹೊಸ ಮಾರಿಗುಡಿ ದೇವಿ ಸನ್ನಿಧಾನದಕ್ಕೆ ಹೆಚ್ ಡಿಕೆ ಕುಟುಂಬ ಭೇಟಿ ನೀಡಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!