ಮಂಗಳೂರು
Mangalore AJ Hospital : ಬೆಳ್ತಂಗಡಿಯ ಬಾಣಂತಿ ಸಾವು – ರಣರಂಗವಾದ ಮಂಗಳೂರಿನ ಎಜೆ ಆಸ್ಫತ್ರೆ
ಮಂಗಳೂರು : ಜು 26 : ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿರುವುದಾಗಿ ಆರೋಪಿಸಿ ಮಹಿಳೆಯ ಕುಟುಂಬ ಸದಸ್ಯರು ಹಾಗೂ ಆಪ್ತರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ. ಮಹಿಳೆಯ ಸಾವಿಗೆ ಕಾರಣವಾಗಿದೆ ಎಂದು ಆರೋಪ ವ್ಯಕ್ತವಾಗುತ್ತಿರುವ ಮಂಗಳೂರಿನ ಎ.ಜೆ. ಆಸ್ಪತ್ರೆ ಪ್ರತಿಭಟನಕಾರರ ಆಕ್ರೋಶಕ್ಕೆ ಅಕ್ಷರಶ: ರಣರಂಗವಾಗಿ ಬದಲಾಗಿತ್ತು.
ಮಂಗಳೂರಿನಲ್ಲಿ ಇಂದು ವರುಣನ ಆರ್ಭಟವಿದ್ದರೂ ನೊಂದ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮಳೆಯ ಮಧ್ಯೆಯೆ ಪ್ರತಿಭಟನೆ ನಡೆಸಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ ಮಹಿಳೆ. ಇವರ ಮೃತದೇಹ ಆಸ್ಪತ್ರೆಯಿಂದ ಸಾಗಿಸಲು ಬಿಡದೇ ಕುಟುಂಬಸ್ಥರು ಮತ್ತು ಸಾರ್ವಜನಿಕರ ಆಸ್ಫತ್ರೆಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ನಡೆದಿದೆ.
ಭಾನುವಾರವಾದ ಕಾರಣ ಬರಲ್ಲ ಅಂದಿದ್ದರು ವೈದ್ಯರು…!
ಶಿಲ್ಪಾ ಆಚಾರ್ಯರವರು ಹೆರಿಗೆ ನೋವಿನ ಹಿನ್ನಲೆ ಜುಲೈ 2ರಂದು ಮಂಗಳೂರಿನ ಕುಂಟಿಕಾನ ಬಳಿಯ ಎ. ಜೆ. ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು. ಆವತ್ತು ಆಕೆಯನ್ನು ಪರೀಕ್ಷಿಸಿದ ಡ್ಯೂಟಿ ಡಾಕ್ಟರ್ ಸಿಜೆರಿಯನ್ ಮಾಡಿ ಡೆಲಿವರಿ ಮಾಡಬೇಕೆಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಮಹಿಳೆಯ ಮನೆಯವರು ವೈದ್ಯೆ ವೀಣಾರವರಿಗೆ ಕರೆ ಮಾಡಿ ರೋಗಿಯನ್ನು ಪರೀಕ್ಷಿಸುವಂತೆ ಮನವಿ ಮಾಡಿದ್ದು , ಆದರೇ ಭಾನುವಾರವಾದ ಕಾರಣ ಬರಲ್ಲ ಎಂದು ಖಡಕ್ಕಾಗಿ ಹೇಳಿರುವುದಾಗಿ ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಏನಿದು ಪ್ರಕರಣ ?
ಶಿಲ್ಪಾ ಆಚಾರ್ಯರವರು ಹೆರಿಗೆ ನೋವಿನ ಹಿನ್ನಲೆ ಜುಲೈ 2ರಂದು ಮಂಗಳೂರಿನ ಕುಂಟಿಕಾನ ಬಳಿಯ ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು. ಆವತ್ತು ಪರೀಕ್ಷಿಸಿದ ಡ್ಯೂಟಿ ಡಾಕ್ಟರ್ ಸಿಜೆರಿಯನ್ ಮಾಡಿ ಡೆಲೆವರಿ ಮಾಡಬೇಕೆಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಮಹಿಳೆಯ ಮನೆಯವರು ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು
ಶಿಲ್ಪಾರ ಕುಟುಂಬದ ಮೂಲದ ಪ್ರಕಾರ ಅದೇ ದಿನ ಡಾ. ವೀಣಾ ಅನುಪಸ್ಥಿತಿಯಲ್ಲಿ ಬೇರೆ ವೈದ್ಯರು ಶಿಲ್ಪಾ ರಿಗೆ ಎಜೆ ಆಸ್ಫತ್ರೆಯಲ್ಲಿ ಸಿಜೆರಿಯನ್ ಮಾಡಿ ಡೆಲೆವರಿ ಮಾಡಿದ್ದಾರೆ. ಆ ಬಳಿಕ ಹೆಣ್ಣು ಮಗು ಆಗಿದೆ, ಆದರೇ ಗರ್ಭಕೋಶವನ್ನು ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಎರಡು ದಿನಗಳ ನಂತರ ಶಿಲ್ಪಾಗೆ ಜ್ವರ ಬಂದಿದೆ ಎಂದು ಚಿಕಿತ್ಸೆ ನೀಡಿದ್ದಾರೆ. 5 ದಿನಗಳ ನಂತರ ಬ್ರೆನ್ ಮೇಜರ್ ಡ್ಯಾಮೇಜ್ ಆಗಿದೆ ನೆಂದು ವೈದ್ಯರು ತಿಳಿಸಿರುವುದಾಗಿ ಮೃತರ ಪತಿ ಪ್ರದೀಪ್ ಆಚಾರ್ಯ ಮಾಹಿತಿ ನೀಡಿದ್ದಾರೆ.
ಪತಿಯಿಂದ ಠಾಣೆಗೆ ದೂರು
ಜುಲೈ 25ರಂದು ಐಸಿಯುನಲ್ಲಿ ಶಿಲ್ಪಾ ಸಾವನ್ನಪ್ಪಿದ್ದಾಗಿ ಆಸ್ಫತ್ರೆಯವರು ಮಾಹಿತಿ ನೀಡಿದ್ದಾರೆ. ಆದರೆ ನನ್ನ ಪತ್ನಿಯ ಸಾವಿಗೆ ಸಾವಿಗೆ ವೈದ್ಯರ ನಿರ್ಲಕ್ಷ್ಯ ಹಾಗೂ ಬೇರೆ ವೈದ್ಯರಿಂದ ಡೆಲಿವರಿ ಮಾಡಿಸಿದ್ದೆ ಕಾರಣವೆಂದು ಆರೋಪಿಸಿ ಶಿಲ್ಪಾ ಪತಿ ಪ್ರದೀಪ್ ಆಚಾರ್ಯರವರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎ. ಜೆ ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್ ಹಾಗೂ ಡೀನ್ ಅಶೋಕ ಹೆಗಡೆ, ಅನಸ್ತೇಶಿಯಾ ವೈದ್ಯರು, ಆಡಳಿತ ವರ್ಗ ಹಾಗೂ ಸಿಬ್ಬಂಧಿಗಳ ವಿರುದ್ದ ನಿರ್ಲಕ್ಷ್ಯತನದ ಆರೋಪವನ್ನು ದೂರಿನಲ್ಲಿ ಹೊರಿಸಲಾಗಿತ್ತು. ದೂರು ಸ್ವೀಕರಿಸಿದ ಪೊಲೀಸರು ಸದ್ಯ 174(3)(vi) ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಿಸಿ ಕೊಂಡಿದ್ದರು.
ಇಂದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲು ಪೊಲೀಸರು ಬಂದಿದ್ದು, ಈ ವೇಳೆ ಎ.ಜೆ. ಆಸ್ಪತ್ರೆ ಬಳಿ ಮೃತದೇಹ ತಡೆದು ಸಂಬಂಧಿಕರು, ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದ ಅವರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದಾರೆ. ಮೃತ ದೇಹವಿದ್ದ ಅಂಬ್ಯುಲೆನ್ಸ್ ಪ್ರತಿಭಟನಾಕಾರರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ತಲ್ಲಾಟ ನಡೆದಿದೆ. ಆಕ್ರೋಶಿತರು ಪೊಲೀಸರ ವಿರುದ್ದ ಧಿಕ್ಕಾರ ಕೂಗಿದ ಘಟನೆಯೂ ಈ ವೇಳೆ ನಡೆಯಿತು. ಕೊನೆಗೂ ಪೊಲೀಸ್ ಬಲ ಪ್ರಯೋಗಿಸಿ ಮೃತದೇಹವನ್ನು ಅಲ್ಲಿಂದ ವೆನ್ ಲಾಕ್ ಆಸ್ಫತ್ರೆಗೆ ರವಾನಿಸಲಾಯಿತು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ದಕ್ಷಿಣ ಕನ್ನಡ13 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ11 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ13 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
ಕಾರ್ಯಕ್ರಮಗಳು5 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
Uncategorized11 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್12 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ11 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು12 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ



















Gururaj tanthry
July 26, 2023 at 4:33 pm
I am Dr.Gururaj Tantri,
I am no way concerned with the treatment or surgery of deceased,Please do get the facts right before publishing and defaming my name.otherwise I will have to look forward to go ahead legally