ಉಡುಪಿ
Khushboo in Udupi | ಉಡುಪಿ ಶೌಚಾಲಯ ವಿಡಿಯೋ ಪ್ರಕರಣ : ಪ್ರಕರಣಕ್ಕೆ ಕೋಮು ಬಣ್ಣ ಬಳಿಯಬೇಡಿ – 40 ಗಂಟೆ ಮೊಬೈಲ್ ರೆಟ್ರಿವ್ ಮಾಡಿದರೂ ಏನೂ ಪತ್ತೆಯಾಗಿಲ್ಲ- ನಾವೇ ನ್ಯಾಯಾಧೀಶರಾಗಿ ತೀರ್ಪು ಕೊಡುವ ಅಗತ್ಯವಿಲ್ಲ : ಉಡುಪಿಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ , ನಟಿ, ಬಿಜೆಪಿ ನಾಯಕಿ ಖುಷ್ಬೂ
ಉಡುಪಿ: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು (Udupi College Case) ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Kushboo in Udupi) ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ವಿಮಾನ ನಿಲ್ದಾಣದಲ್ಲಿ ಅವರೊಂದಿಗೆ ಭದ್ರತಾ ಪಡೆಯ ಶ್ವಾನ ಆಟವಾಡಿದ ಪೋಟೋ ವೈರಲ್ ಆಗಿದೆ.
ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ. ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ. ನಮ್ಮದು ಮಹಿಳೆಯರ ರಕ್ಷಣೆಗೆ ಇರುವ ಸಂಸ್ಥೆ ಎಂದ ಅವರು ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಬೇಡಿ, ನಮಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಯಾವುದೇ ಫೋಟೋ ಅಥವಾ ವಿಡಿಯೋ ಲಭ್ಯವಿಲ್ಲ. ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಸ್ಪಷ್ಟತೆ ಸಿಗಬೇಕು ಎಂದರು.
ಈ ಪ್ರಕರಣ ಇಷ್ಟೊಂದು ವೈರಲ್ ಆಗಲು ಕಾರಣವೇನು ಎಂಬುದರ ಬಗ್ಗೆ ಗಮನ ಹರಿಸಬೇಕು. ಅನೇಕ ಸಂಗತಿಗಳ ಕುರಿತು ತನಿಖೆ ಆಗಬೇಕಾಗಿದೆ. ಪೂರಕ ಸಾಕ್ಷಿಗಳ ಸಂಗ್ರಹ ಮಾಡಬೇಕಾಗಿದೆ. ನಾಳೆ ನಾನು ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿಯ ಜೊತೆ ಮಾತನಾಡಬೇಕಾಗಿದೆ. ಆ ಬಳಿಕ ಘಟನೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ ಎಂದರು.
ಈ ಘಟನೆಯನ ಇಟ್ಟುಕೊಂಡು ಅನೇಕ ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಹರಿದಾಡುತ್ತಿರುವ ಈ ವಿಡಿಯೋಗಳು ಯಾವುದು ಕೂಡ ಸತ್ಯವಲ್ಲ. ಇವರಿಗೆ ಯಾವುದೇ ವಿಡಿಯೋ ಸಾಕ್ಷ್ಯ ಲಭ್ಯವಾಗಿಲ್ಲ. ವಿದ್ಯಾರ್ಥಿನಿಯರ ಮೊಬೈಲ್ ನಲ್ಲಿ ಯಾವುದೇ ವಿಡಿಯೋ ಕಂಡು ಬಂದಿಲ್ಲ. ಸಂಬಂಧಪಟ್ಟ ಮೊಬೈಲ್ ಗಳನ್ನು ಪೊಲೀಸರು ರೆಟೀವ್ ಮಾಡಿದ್ದಾರೆ. 40 ಗಂಟೆಗಳ ಕಾಲ ರೆಟ್ರಿವ್ ಮಾಡಿದರೂ ಏನು ಪತ್ತೆಯಾಗಿಲ್ಲ. ಮೂರು ಮೊಬೈಲ್ ಗಳ ಡಾಟಾ ಸಂಗ್ರಹ ಮಾಡಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್ ಕಳುಹಿಸಬೇಕಾಗಿದೆ. ಅಲ್ಲಿ ಸಾಕ್ಷ್ಯ ಲಭ್ಯವಾದರೆ ವಿಡಿಯೋ ಬಗ್ಗೆ ಸ್ಪಷ್ಟತೆ ಸಿಗಬಹುದು ಎಂದು ಅವರು ತಿಳಿಸಿದರು.
ಸೂಕ್ತ ಸಾಕ್ಷಿ ಸಿಗದೇ ಹೋದರೆ ಚಾರ್ಜ್ ಶೀಟ್ ಮಾಡಲು ಸಾಧ್ಯವಿಲ್ಲ. ಸಾಕ್ಷ್ಯವಿಲ್ಲದಿದ್ದರೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸದ್ಯ ಆ ವಿದ್ಯಾರ್ಥಿನಿಯರನ್ನು ನಾವು ಕೇವಲ ಆರೋಪಿತರು ಎಂದು ಕರೆಯಬಹುದು. ಈ ಪ್ರkಕರಣದಲ್ಲಿ ಭಾಗಿಯಾದ ಮೂರು ವಿದ್ಯಾರ್ಥಿನಿಯರ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದರು.
ಈ ಪ್ರಕರಣಕ್ಕೆ ಉಗ್ರರ ಲಿಂಕ್ ಇದೆ ಎಂದು ವಾಟ್ಸಾಪ್ ಸಂದೇಶಗಳು ಹರಿದಾಡುತ್ತಿವೆ. ಪ್ರಕರಣದ ಹಿಂದೆ ಅನೇಕ ಸಂಶಯಾಸ್ಪದ ಸಂಗತಿಗಳನ್ನು ಹರಿಬಿಡಲಾಗಿದೆ. ಘಟನೆಯ ಹಿಂದೆ ದೊಡ್ಡ ಕತೆ ಇದೆ ಎಂದು ಸದ್ಯ ಭಾವಿಸುವುದು ಬೇಡ. ನಾವೇ ನ್ಯಾಯಾಧೀಶರಾಗಿ ತೀರ್ಪು ಕೊಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.
ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಎಳೆಯ ಮನಸ್ಸುಗಳು ಒಳಗೊಂಡಿವೆ. ಸರಿಯಾದ ಹಾದಿಯಲ್ಲಿ ಪ್ರಕರಣದ ತನಿಖೆ ಆಗಬೇಕು. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದರು.
ಎಫ್‌ಐಆರ್ ವಿಳಂಬ ವಿಚಾರ ಬಗ್ಗೆ ಪ್ರತಿಕ್ರಿಸಿದ ಅವರು, ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ. ಸಂತ್ರಸ್ತೆ ದೂರು ಕೊಟ್ಟಿಲ್ಲ. ತಾನು ದೂರು ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದರು.
ವಿಡಿಯೋ ಇತ್ತು ಮತ್ತು ಅದನ್ನು ನಾವು ಡಿಲೀಟ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ವಿಡಿಯೋ ಡಿಲೀಟ್ ಆಗಿದೆ ಎಂಬ ವಿಚಾರ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸುಳಿವು ಇಲ್ಲದೆ ಪೊಲೀಸರು ಪ್ರಕರಣ ದಾಖಲಿಸುವುದು ಹೇಗೆ? ಹಿಂದೆ ನಿಂತು ಪೊಲೀಸರನ್ನು ದೂರುವುದು ಸುಲಭ. ಈಗ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅವರಿಗೆ ಸ್ವಾತಂತ್ರ್ಯ ನೀಡಬೇಕು ಎಂದು ಅವರು ಹೇಳಿದರು.
ಪ್ರಕರಣದ ತನಿಖೆಯಲ್ಲಿ ವಿಳಂಬವಾದರೆ ಮಹಿಳಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಸದ್ಯ ನಾವು ಸುಮೋಟೋ ಪ್ರಕರಣ ದಾಖಲಿಸಲು ನಿರ್ಧರಿಸಿಲ್ಲ. ಮಾಹಿತಿ ಸಂಗ್ರಹದ ಬಳಿಕ ನಿರ್ಧಾರ ತಿಳಿಸುತ್ತೇವೆ ಎಂದು ಖುಷ್ಟೂ ತಿಳಿಸಿದರು
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ7 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















