ಸುಳ್ಯ
ಸುಳ್ಯದ ಪೂಜಾಲಕ್ಷ್ಮಣ್ ಗೌಡರಿಗೆ ಒಲಿಯಿತು ರಾಜ್ಯಮಟ್ಟದ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿ ಬಿರುದು
ಕರ್ನಾಟಕ ಜನಸ್ಪಂದನ ಟ್ರಸ್ಟ್ (ರಿ) ಕರ್ನಾಟಕ ರಾಜ್ಯ ಸಂಸ್ಥೆ ಟಿ.ದಾಸರಹಳ್ಳಿ ಬೆಂಗಳೂರು ಇದರ 6ನೇ ವಾರ್ಷಿಕೋತ್ಸವದ ಪ್ರಯುಕ್ತ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜು 23 ರಂದು ಬೆಂಗಳೂರಿನ ಬಾಗಲಗುಂಟೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಇದರಲ್ಲಿ ಸುಳ್ಯ ತಾಲೂಕು ಪಂಜ ನಿವಾಸಿ “ಪೂಜಾಲಕ್ಷ್ಮಣ್ ಗೌಡ” ರಿಗೆ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಮಸೂತಿ ವಿಜಯಪುರ ಜಿಲ್ಲೆ ಇವರ ದಿವ್ಯ ಸಾನಿಧ್ಯ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಹನುಮಂತಪ್ಪ ಎಸ್ ಮೇಡೆಗಾರ ಶಾಸಕರುಗಳಾದ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಎಸ್ ಮುನಿರಾಜು ಎಸ್ ಮುನಿರಾಜು ಹಾಗೂ ಕನ್ನಡ ಜನಪದ ಪರಿಷತ್ತು ಅಧ್ಯಕ್ಷರರಾದ ವೈ ಬಿ ಎಚ್ ಜಯದೇವ್ ಉಪಸ್ಥಿತರಿದ್ದರು
ಪೂಜಾಲಕ್ಷ್ಮಣ್ ಗೌಡ ರವರು ಸುಳ್ಯ ತಾಲೂಕಿನ ಪಂಜ ಸಮೀಪದ ನಿವಾಸಿ ಮಾಜಿ ಸೈನಿಕರಾದ ಲಕ್ಷ್ಮಣ ಗೌಡ ಬೇರ್ಯ ಮತ್ತು ರಾಜಶ್ರೀ ದಂಪತಿಗಳ ಮೂರನೇ ಮಗಳು. ಇವರು ಹುಟ್ಟೂರು ಬೇರ್ಯದಲ್ಲಿ ಪ್ರಾಥಮಿಕ ಶಿಕ್ಷಣ ವಿದ್ಯಾಬೋದಿನಿ ಶಾಲೆ ಬಾಳಿಲದಲ್ಲಿ ಪ್ರೌಢ ಶಿಕ್ಷಣವನ್ನು ಕಲಿತರು. ಪಿಯುಸಿ ವಿದ್ಯಾಭ್ಯಾಸವನ್ನು ಶಾರದಾ ಮಹಿಳಾ ಕಾಲೇಜ್ ಸುಳ್ಯ, ಪದವಿ ಶಿಕ್ಷಣವನ್ನು ಪ್ರಥಮ ದರ್ಜೆ ಕಾಲೇಜ್ ಕೋಡಿಯಾಲ್ ಬೈಲ್ ಸುಳ್ಯದಲ್ಲಿ ಕಲಿತು ಪಿಜಿಡಿಸಿಸಿ ಕೋರ್ಸ್ ಅನ್ನು ಪೂರ್ಣಗೊಳಿಸಿರುತ್ತಾರೆ. ಅಭಿನಯವಲ್ಲದೇ ಇವರು ರೂಪದರ್ಶಿ ಯಾಗಿಯೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಜೆ.ಸಿ.ಐ ಸಪ್ತಾಹ ಬೆಳ್ತಂಗಡಿ ಆಯೋಜಿಸಿದ ಸ್ಪರ್ಧೆಯಲ್ಲಿ ಮಿಸ್ ತುಳುನಾಡ್ ರನ್ನರ್ ಆಪ್ ಪ್ರಶಸ್ತಿ . MRS ಇಂಡಿಯಾ ಕರ್ನಾಟಕ ಟ್ರೈನರ್ ಮಂಗಳೂರು 2022-23 ಆಗಿ ಸೆಲೆಕ್ಟ್ ಆಗಿರುತ್ತಾರೆ.ರೂಪದರ್ಶಿಯಾದ ಇವರು ಕೆಲವೊಂದು ಸಂಸ್ಥೆಯ ಜಾಹಿರಾತುಗಳಲ್ಲಿ ನಟನೆ ಮತ್ತು ಛಾಯಾಗ್ರಹಣ ಕ್ಕೆ ಮೆರಗನ್ನು ನೀಡಿದ್ದಾರೆ.ಇವರು ಪಿಲಿ ಎಂಬ ತುಳು ಮೂವಿ ಪರದೆಯಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇವರು ಉತ್ತಮ ನಿರೂಪಕಿಯೂ ಹೌದು ಮಾತೇ ಮುತ್ತು ಮಾತೇ ಮಾಣಿಕ್ಯ ಎಂಬ ತತ್ವದಡಿಯಲ್ಲಿ ತನ್ನ ಮಾತಿನ ಸೊಬಗನ್ನು ಹತ್ತೂರ ಪಸರಿಸುತ್ತಾ ಬರುತ್ತಿದ್ದು ಪ್ರಸ್ತುತ ಕೆಲವು ಚಾನೆಲ್ ಗಳಲ್ಲಿ ನಿರೂಪಕಿಯಾಗಿಯು ಕಾರ್ಯ ನಿರ್ವಹಿಸಿದ್ದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ನಿಧನ ವಾರ್ತೆ17 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್11 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ16 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ16 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ16 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್11 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ16 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ14 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು


















