Uncategorized
Arun Kumar Puttila : ಜಿಲ್ಲಾ ಉಪಾಧ್ಯಕ್ಷ ಹುದ್ದೆ ಆಫರ್ ಮಾಡಿದ ಬಿಜೆಪಿ – ನಿರಾಕರಿಸಿದ ಪುತ್ತಿಲ…!
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಗೆ (Puttur Bjp) ಮಗ್ಗುಲ ಮುಳ್ಳಾಗಿ ಕಾಡಿ ಪಕ್ಷದ ಹೀನಾಯ ಪ್ರದರ್ಶನಕ್ಕೆ ಕಾರಣವಾದ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲರಿಗೆ (Arun Kumar Puttila) ಪಕ್ಷ ಜಿಲ್ಲಾ ಮಟ್ಟದ ಹುದ್ದೆಯನ್ನು ಆಫರ್ ಮಾಡಿದ್ದು ಅದನ್ನವರು ತಿರಸ್ಕರಿಸಿರುವುದಾಗಿ ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಅಸೆಂಬ್ಲಿ ಚುನಾವಣೆಯ ಬಳಿಕ ಈ ವಿದ್ಯಮಾನ ನಡೆದಿದೆ ಎಂದು ಹೇಳಲಾಗಿದೆ.
ಚುನಾವಣೆ ಮುಗಿದ ಬಳಿಕ ಪುತ್ತಿಲರವರು ತಮ್ಮ ತಂಡದ ಮುಂಚೂಣಿ ನಾಯಕರ ಜತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ (Prahalad Joshi), ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santosh) ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಹಾಗೂ ಸೂಕ್ತ ಸ್ಥಾನಮಾನದ ಕುರಿತು ಮಾತುಕತೆ ನಡೆಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಬಿಜೆಪಿಯ ಜಿಲ್ಲಾ ಮಟ್ಟದ ನಾಯಕರು ಹಾಗೂ ಪುತ್ತೂರಿನ ಪಕ್ಷದ ಅಗ್ರಗಣ್ಯ ಮುಖಂಡರು ಕೆಲ ಬೈಠಕ್ ಗಳನ್ನು ನಡೆಸಿ ಪುತ್ತಿಲರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಹಾಗೂ ಅವರಿಗೆ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ನಡೆಸಿದರು.
ಜೂನ್ ತಿಂಗಳ ಮಧ್ಯ ಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Bjp State president Nalin Kumar kateel), ಜಿಲ್ಲಾಧ್ಯಕ್ಷ ಸುದರ್ಶನ್ ಅವರು ಸೇರಿದಂತೆ ಜಿಲ್ಲೆಯ ಹಲವು ಮುಖಂಡರಿದ್ದ ಸಭೆಗೆ ಪುತ್ತಿಲರನ್ನು ಕರೆಸಿ ಪಕ್ಷ ಸೇರ್ಪಡೆ ಕುರಿತು ಚರ್ಚೆ ನಡೆಸಲಾಗಿದೆ. ಈ ರೀತಿಯ ಎರಡು ಅಥಾವ ಮೂರು ಸಭೆ ನಡೆದಿದ್ದು ಅದರಲ್ಲಿ ಪುತ್ತಿಲರ ಮನವೊಲಿಸುವ ಪ್ರಕ್ರಿಯೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈ ವೇಳೆ ಪುತ್ತಿಲರಿಗೆ ಜಿಲ್ಲಾ ಉಪಾಧ್ಯಕ್ಷ ಹುದ್ದೆ ನೀಡುವು ಆಫರ್ ನ್ನು ಕೂಡ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಈ ಆಫರ್ ಅನ್ನು ಪುತ್ತಿಲರವರು ನಿರಾಕರಿಸಿರುವುದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಮಾತುಕತೆ ನಡೆದಿರುವುದನ್ನು ಪುತ್ತಿಲ ಪರಿವಾರದ ಮೂಲಗಳು ಖಚಿತ ಪಡಿಸಿದೆ. ಆ ಬಳಿಕ ನಡೆದ ವಿದ್ಯಮಾನದಲ್ಲಿ ಗ್ರಾ. ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ನಿಡ್ಪಳ್ಲಿ ಹಾಗೂ ಆರ್ಯಾಪು ವಾರ್ಡ್ ನಲ್ಲಿ ಅಭ್ಯರ್ಥಿ ಇಳಿಸಿತ್ತು . ಇದರಿಂದ ಮಾತುಕತೆ ಮುರಿದಿರುವುದು ಸ್ಪಷ್ಟಗೊಳ್ಳುತ್ತದೆ.
ಹಗ್ಗಜಗ್ಗಾಟಕ್ಕೆ ಕಾರಣವೇನು?
ಈ ಹಿಂದೆ ಪುತ್ತಿಲರ ಅಗತ್ಯವೇ ಪಕ್ಷಕ್ಕಿಲ್ಲ ಎಂದು ಆಂತರಿಕವಾಗಿ ಹೇಳುತ್ತಿದ್ದ ಕೆಲ ಬಿಜೆಪಿ ಮುಖಂಡರು ಕಳೆದ ವಿಧಾನಸಭೆ ಚುನಾವಣೆಯ ಬಳಿಕ ಅನಿವಾರ್ಯವಾಗಿ ತಮ್ಮ ಪಟ್ಟು ಸಡಿಲಿಸುವ ಸ್ಥಿತಿಗೆ ಬಂದಿದ್ದಾರೆ. ಹಾಗಾಂತ ಪುತ್ತಿಲ ಹಾಗೂ ಅವರ ತಂಡಕ್ಕೆ ನಿರ್ಣಾಯಕ ಹುದ್ದೆ ಕೊಡುವುದು ಈ ಮುಖಂಡರಿಗೆ ಈಗಲೂ ಸುತಾರಂ ಇಷ್ಟವಿಲ್ಲ ಎನ್ನುತ್ತಾರೆ ಪಕ್ಷದ ಒಳ ಹೊರಗನ್ನು ಚೆನ್ನಾಗಿ ಬಲ್ಲವರು. ಒಂದೊಮ್ಮೆ ಪುತ್ತಿಲರಿಗೆ ಜಿಲ್ಲಾಧ್ಯಕ್ಷ ಹುದ್ದೆ ನೀಡಿದರೆ ಮುಂದಿನ ದಿನಗಳಲ್ಲಿ ಅವರು ತಮ್ಮನ್ನು ಹಾಗೂ ತಮ್ಮ ಬೆಂಬಲಿಗರನ್ನು ಮೂಲೆಗುಂಪು ಮಾಡಬಹುದು ಎಂಬ ಭಯವು ಪುತ್ತಿಲ ವಿರೋಧಿ ಮುಖಂಡರನ್ನು ಕಾಡುತ್ತಿದೆ.
ಇನ್ನು ಕೆಲವು ಪಕ್ಷದ ಹಿರಿಯ ಮುಖಂಡರ ಪ್ರಕಾರ ” ಪುತ್ತಿಲ ಕನಿಷ್ಟ ಒಂದು ವರ್ಷವಾದರೂ ಉಪಾಧ್ಯಕ್ಷ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲಿ. ಅವರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲ್ಲಿ. ಆಗ ಅವರಿಗೆ ಪಕ್ಷದ ಕಾರ್ಯ ವೈಖರಿ ಅದು ಕಾರ್ಯ ನಿರ್ವಹಿಸುವ ವಿಧಾನದ ಸ್ಪಷ್ಟ ಮಾಹಿತಿ ಸಿಗುತ್ತದೆ. ಬಳಿಕ ಅವರು ಜಿಲ್ಲಾಧ್ಯಕ್ಷ ಹುದ್ದೆಯಂತಹ ನಿರ್ಣಾಯಕ ಹುದ್ದೆ ಪಡೆದುಕೊಳ್ಳಲಿ. ಈಗ ಪಕ್ಷ ಸಂಘಟನೆಯ ಎಳ್ಳಷ್ಟು ಅನುಭವವಿಲ್ಲದ ಅವರಿಗೆ ಜಿಲ್ಲಾಧ್ಯಕ್ಷದಂತಹ ಅಯಕಟ್ಟಿನ ಹುದ್ದೆ ಕೊಡುವುದು ಹೇಗೆ ಎಂಬ ಗಂಭೀರ ಪ್ರಶ್ನೆಯನ್ನು ಅವರು ಹರಿ ಬಿಡುತ್ತಿದ್ದಾರೆ.
ಹಲವು ಬಾರಿ ಪುತ್ತಿಲರಿಗೆ ಪಕ್ಷದ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಹುದ್ದೆ ಕೊಡುವ ಭರವಸೆಯನ್ನು ಕೊಡಲಾಗಿತ್ತು. 2018ರ ವಿದಾನಸಭಾ ಚುನಾವಣೆಯ ಸಂದರ್ಭ ಉಪಾಧ್ಯಕ್ಷ ಹುದ್ದೆ ನೀಡಿರುವ ಪಕ್ಷದ ಲೆಟರ್ ಹೆಡ್ ಅನ್ನು ತೋರಿಸಲಾಗಿತ್ತು. ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಸ್ವಾಮೀಜಿ, ಮಾಜಿ ಎಂಎಲ್ಸಿ ಗಣೇಶ್ ಕಾರ್ಣಿಕ್ ಹಾಗೂ ಅರ್‌ಎಸ್‌ಎಸ್ ನ ಜಿಲ್ಲೆಯ ಹಿರಿಯ ಮುಖಂಡ ನಾ ಸೀತಾರಾಮ್ ಮುಂತಾದವರು ಆಗಮಿಸಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. 2019ರ ಲೋಕಸಭಾ ಚುನಾವಣೆಯ ಸಂದರ್ಭ ಮತ್ತೆ ಜಿಲ್ಲಾ ಉಪಾಧ್ಯಕ್ಷ ಹುದ್ದೆ ನೀಡುವ ಪ್ರಸ್ತಾಪ ಮಾಡಲಾಗಿತ್ತು. ಆದರೆ ಪ್ರತಿ ಬಾರಿಯೂ ಚುನಾವಣೆ ಕಳೆದ ಬಳಿಕ ಾವಕಾಶ ನೀಡದೆ ವಂಚಿಸಲಾಗಿತ್ತು. ಹೀಗಾಗಿ ಈ ಬಾರಿ ಭರವಸೆ ಯಾ ಅಶ್ವಾಸನೆಗಳನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಅನ್ನುತ್ತಾರೆ ಪುತ್ತಿಲ ಪರಿವಾರದ ಪ್ರಮುಖರು.
ಹೀಗೆ ಎರಡು ತಂಡದ ನಡುವೆ ಪರಸ್ಪರ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಈ ಹಿಂದೆ ಬಂಡಾಯ ಶಮನಕ್ಕೆ ನೀಡಿದ ಸುಳ್ಳು ಭರವಸೆಗಳೆ ಈಗ ಎರಡು ತಂಡದ ನಡುವೆ ಅವಿಶ್ವಾಸ ಮೂಡಲು ಪ್ರಮುಖ ಕಾರಣವಾಗಿದೆ. ಇತ್ತಂಡದವರು ಯಾವುದೇ ಮದ್ಯಮ ಮಾರ್ಗಕ್ಕೆ ಒಪ್ಪಿಕೊಳ್ಳದಿರುವುದರಿಂದ ಹಗ್ಗ ಜಗ್ಗಾಟ ಮುಂದುವರಿದಿದೆ.
ತಾ.ಪಂ, ಜಿ ಪಂ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಸ್ಪರ್ಧೆಗೆ ಪುತ್ತಿಲ ಪರಿವಾರ ಸಿದ್ದತೆ ?
ಈ ಸಮಸ್ಯೆ ತಕ್ಷಣ ಶಮನಗೊಳ್ಳದಿದ್ದರೇ ಮುಂದಿನ ಜಿ.ಪಂ ತಾ.ಪಂ ಚುನಾವಣೆಯಲ್ಲೂ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಬಹುದು. ಈ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಅಭ್ಯರ್ಥಿ ಇಳಿಸಿ ಮುಂದಿನ ಲೋಕಸಭೆಗೂ ಮೊದಲು ಶಕ್ತಿ ಪರೀಕ್ಷೆ ಮಾಡಿಕೊಳ್ಳಲು ಪುತ್ತಿಲ ಪರಿವಾರ ಸಿದ್ದತೆ ನಡೆಸಿದೆಯೆಂದು ಮೂಲಗಳಿಂದ ತಿಳಿದು ಬಂದಿದೆ. ಹೀಗೊಮ್ಮೆಯಾದರೆ ಜಿಲ್ಲೆಯಾದ್ಯಂತ ಬಿಜೆಪಿಯಲ್ಲಿ ಎರಡು ಬಣಗಳು ಸೃಷ್ಟಿಯಾಗುವುದು ಖಚಿತ. ಮುಂದಿನ ದಿನಗಳಲ್ಲಿ ಇದು ಬಿಜೆಪಿಗೆ ದೊಡ್ಡ ಪೆಟ್ಟು ಕೊಡಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಅದೆ ರೀತಿ ಪುತ್ತಿಲ ಪರಿವಾರ ಕೂಡ ಇದೇ ರೀತಿಯ ಕಾವನ್ನು ಇನ್ನೆಷ್ಟು ಸಮಯ ಉಳಿಸಿಕೊಂಡಿತು ? ಅಷ್ಟು ಸಂಪನ್ಮೂಲ ಅದರ ಬಳಿ ಇರಬಹುದೇ ಎನ್ನುವುದು ಕೂಡ ಚರ್ಚೆಯ ವಿಷಯವಾಗಿದೆ.
ಸುಮಾರು 20ಕ್ಕೂ ಅಧಿಕ ವರ್ಷಗಳಿಂದ ಪುತ್ತಿಲರವರು ಸಂಘ ಪರಿವಾರದ ಭಾಗವಾಗಿದ್ದರೂ, ಅವರಿಗೆ ಬಿಜೆಪಿ ಯಾವುದೇ ಪೋಸ್ಟ್ ನೀಡಿಲ್ಲ.ಇವರೆಗೆ ಕನಿಷ್ಟ ತಾಲೂಕು ಯಾ ಬೂತ್ ಮಟ್ಟದಲ್ಲೂ ಬಿಜೆಪಿ ಅವರಿಗೆ ಪಕ್ಷ ಸಂಘಟನೆಯಲ್ಲಿ ಹುದ್ದೆ ನೀಡಿ ತೊಡಗಿಸಿಕೊಂಡಿಲ್ಲ. 2013ರಲ್ಲೊಮ್ಮೆ ಅವರಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಹುದ್ದೆ ಆಫರ್ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆಯಾದರೂ ಪಕ್ಷ ಮತ್ತು ಪುತ್ತಿಲ ಇದನ್ನು ಗಟ್ಟಿ ಧ್ವನಿಯಲ್ಲಿ ಒಪ್ಪಿಕೊಳ್ಳುವುದೂ ಇಲ್ಲ , ನಿರಾಕರಿಸುವುದೂ ಇಲ್ಲ. 2023ರ ವಿಧಾನಸಭಾ ಚುನಾವಣೆಯ ಸಂದರ್ಭ ಪುತ್ತೂರಿನ ಸಂಘ ಪರಿವಾರದ ಮುಂಚೂಣಿಯ ನಾಯಕರಲ್ಲೊಬ್ಬರಾದ ಡಾ | ಪ್ರಸಾದ್ ಬಂಡಾರಿಯವರು ಈ ಹುದ್ದೆ ಪುತ್ತಿಲರಿಗೆ ಆಫರ್ ಮಾಡಲಾಗಿತ್ತು ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು. ಆದರೆ ಉಳಿದ ಮುಖಂಡರು ಅವರು ಪಕ್ಷದ ಕಾರ್ಯಕರ್ತನೇ ಅಲ್ಲ ಎಂದು ತಿಳಿಸಿದ್ದರು.
" ಜಿಲ್ಲಾ ಉಪಾಧ್ಯಕ್ಷ ಹುದ್ದೆ ಕೊಡುವುದಾಗಿ ಹೇಳಿ ಪತ್ರ ತೋರಿಸಿ ತಮ್ಮ ಕೆಲಸವಾದ ಬಳಿಕ ಅದನ್ನು ಹರಿದು ಹಾಕುವ ಕಾರ್ಯವನ್ನು ಪಕ್ಷದ ಪ್ರಮುಖರೊಬ್ಬರು ಈ ಹಿಂದೆಯೇ ಮಾಡಿದ್ದು ಅದು ನಮ್ಮ ಕಾರ್ಯಕರ್ತರಿಗೆ ಗೊತ್ತಿರುವ ವಿಷಯ. ಈಗ ಇನ್ನೊಮ್ಮೆ ಜಿಲ್ಲಾ ಉಪಾಧ್ಯಕ್ಷ ಹುದ್ದೆ ಕೊಡುತ್ತೇವೆ ಎಂದು ಹೇಳಿ, 2 ತಿಂಗಳ ಬಳಿಕ ಹೊಸ ಸಮಿತಿ ರಚನೆಯಾಗುವಾಗ ಮತ್ತೆ ಮೂಲೆಗುಂಪು ಮಾಡುವ ಹುನ್ನಾರ ಇದರ ಹಿಂದಿರುವುದು. ಈ ರೀತಿಯ ಕಾರ್ಯಗಳು ಈ ಹಿಂದೆಯೂ ಹಲವು ಬಾರಿ ನಡೆದಿದೆ. ಹೀಗಾಗಿ ಈ ಬಾರಿ ಅದನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ದೇವ ದುರ್ಲಭ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಹುದ್ದೆ ಅಥಾವ ಎಂಪಿ ಟಿಕೆಟ್ ಕೊಡಲಿ ಎನ್ನುವದಷ್ಟೆ ನಮ್ಮ ಬೇಡಿಕೆ ಇರುವುದು. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. "
ಅರುಣ್ ಕುಮಾರ್ ಪುತ್ತಿಲ
" ಸರಿ ಸುಮಾರು ಒಂದೂವರೆ ತಿಂಗಳ ಹಿಂದೆ ಪಕ್ಷದ ಜಿಲ್ಲಾ ಮುಖಂಡರು ಅರುಣ್ ಪುತ್ತಿಲ ಸೇರ್ಪಡೆ ಕುರಿತು ಪುತ್ತೂರು ಗ್ರಾಮಾಂತರ ಮಂಡಲದ ಅಭಿಪ್ರಾಯ ಕೇಳಿದ್ದರು . ನಾವು ಅದಕ್ಕೆ ಒಪ್ಪಿಗೆ ಸೂಚಿಸಿ ಅವರಿಗೆ ಯಾವುದೇ ಹುದ್ದೆ ಕೊಡಲು ನಮ್ಮ ಆಕ್ಷೇಪವಿಲ್ಲ ಎಂದು ತಿಳಿಸಿದ್ದೇವೆ . ಅವರನ್ನು ಪಕ್ಷಕ್ಕೆ ಸೇರಿಸಿ ಸ್ಥಾನಮಾನ ನೀಡುವ ಕುರಿತ ಮುಂದಿನ ನಿರ್ಧಾರ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ನಡೆಯಬೇಕಿದೆ."
ಸಾಜ ರಾಧಕೃಷ್ಣ ಆಳ್ವ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರು
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್17 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ22 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
Uncategorized24 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ರಾಜಕೀಯ23 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಆರೋಗ್ಯ19 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ23 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಕಾರ್ಯಕ್ರಮಗಳು24 hours agoPuttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ















