ದಕ್ಷಿಣ ಕನ್ನಡ
ಸೆ. 03 ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಬರೆಯುತ್ತಿದ್ದೀರಾ? ವಿದ್ಯಾಮಾತಾ ಅಕಾಡೆಮಿ ನೀಡುತ್ತಿದೆ ಆನ್ಲೈನ್ ತರಬೇತಿ
ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆಯಾಗಿ ನಡೆಸಲಾಗುತ್ತದೆ.
ಸರಕಾರವು ಸೆಪ್ಟೆಂಬರ್ 03ಕ್ಕೆ KAR TET ಪರೀಕ್ಷೆಯನ್ನು ನಡೆಸಲು ಸಿದ್ಧತೆ ನಡೆಸಿದ್ದು, ಕೆಲವು ಸಮಯಗಳ ಹಿಂದೆ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಲೂ ಕೂಡ KAR TET ಪರೀಕ್ಷೆಯನ್ನು ಕಡ್ಡಾಯ ಮಾಡುವ ಮುನ್ಸೂಚನೆಯನ್ನು ನೀಡಿದ್ದನ್ನು ಗಮನಿಸಬಹುದು. ಈ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯು (TET) ಮಹತ್ವಪೂರ್ಣವಾಗಿದೆ.
ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ಸಂಸ್ಥೆಯಾಗಿರುವ , ವಿದ್ಯಾಮಾತಾ ಅಕಾಡೆಮಿಯು TET ಬರೆಯುವ ಶಿಕ್ಷಕರಿಗಾಗಿ ಆನ್ಲೈನ್ ತರಗತಿಯನ್ನು ನಡೆಸಲಿದೆ. ಕಳೆದ 3 TET ಪರೀಕ್ಷೆಗಳಲ್ಲಿ 70 ಕ್ಕೂ ಮಿಕ್ಕಿದ ಅಭ್ಯರ್ಥಿಗಳು ಉತ್ತಮ ಅಂಕಗಳೊಂದಿಗೆ , TET ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿರುತ್ತಾರೆ.
ಅಲ್ಲದೇ 2022-23 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (GPSTR) ಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 5 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.
KAR TET ಪರೀಕ್ಷೆಗೆ ಪೂರ್ವ ತಯಾರಿಯನ್ನು ನಡೆಸುವ ಅಭ್ಯರ್ಥಿಗಳು ಆನ್ಲೈನ್ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಆನ್ಲೈನ್ ತರಗತಿಗಳು ಪ್ರತಿದಿನ ರಾತ್ರಿ 08ರಿಂದ 09ರವರೆಗೆ (ದಿನನಿತ್ಯ ಒಂದು ಗಂಟೆ) ಕನ್ನಡ,ಇಂಗ್ಲೀಷ್,ಹಿಂದಿ, ಶಿಶು ವಿಕಸನ ಮತ್ತು ಬೋಧನಾ ಕ್ರಮ,ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ನುರಿತ ತರಬೇತುದಾರರಿಂದ ತರಬೇತಿಯನ್ನು ನಡೆಸಲಾಗುವುದು.
ಆಸಕ್ತರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಿ ಪ್ರವೇಶಾತಿ ಪಡೆದುಕೊಳ್ಳಬಹುದು ಇಲ್ಲವೇ ನೇರವಾಗಿ ಭೇಟಿ ಕೊಡಬಹುದು
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
-
ಬಿಗ್ ನ್ಯೂಸ್19 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು21 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ19 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು20 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ21 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ21 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ20 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ2 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















