ಚಿನ್ನ-ಬೆಳ್ಳಿ ದರ
Gold Rate Today : ತುಸು ಇಳಿದ ಚಿನ್ನದ ದರ -ಹೇಗಿದೆ ಇಂದಿನ ಚಿನ್ನ, ಬೆಳ್ಳಿ ರೇಟ್ ? ಇಲ್ಲಿದೆ ವಿವರ
Gold Silver Price Today ಬೆಂಗಳೂರು (Bangalore) : ಅಗಷ್ಟ್ 1, 2023; August 1, 2023: ಚಿನ್ನವೆಂದರೆ (Gold) ಭಾರತೀಯ ಮಹಿಳೆಯರಿಗೆ (Indian Women) ಅಚ್ಚುಮೆಚ್ಚು. ಹೀಗಾಗಿ ಬಹುತೇಕ ಮಧ್ಯಮ ವರ್ಗದವರು , ಅದರಲ್ಲೂ ವಿಶೇಷವಾಗಿ ಮಹಿಳೆಯರು ತಮ್ಮ ಉಳಿಕೆ ಹಣವನ್ನು ಬಂಗಾರದ ಮೇಲೆ ಹೂಡಿಕೆ ಮಾಡುತ್ತಾರೆ. ಕುಟುಂಬದ ಅಪತ್ ಕಾಲದಲ್ಲಿ ಅದು ತಮ್ಮ ಕೈ ಹಿಡಿಯುತ್ತದೆ ಎಂಬ ನಂಬಿಕೆ ಒಂದೆಡೆಯಾದರೆ, ಸಭೆ ಸಮಾರಂಭಗಳಲ್ಲಿ ತಮ್ಮ ಪ್ರತಿಷ್ಟೆಯನ್ನು ಹೆಚ್ಚಿಸುತ್ತದೆ ಎನ್ನುವುದು ಇನ್ನೊಂದು ಕಾರಣ. ಇದರ ಜತೆಗೆ ಭಾರತೀಯ ನಾರಿ ಸಾಮಾನ್ಯವಾಗಿ ಕಾರ್ಯಕ್ರಮಗಳಿಗೆ ಸೀರೆ ಉಡುತ್ತಿದ್ದು, ಇದಕ್ಕೆ ಚಿನ್ನಾಭರಣಗಳು ವಿಶೇಷ ಮೆರಗನ್ನು ನೀಡುತ್ತದೆ. ಇವೆಲ್ಲಾ ಕಾರಣಗಳು ಭಾರತೀಯರನ್ನು ಹಳದಿ ಲೋಹದೆಡೆಗೆ ಅಕರ್ಷಿಸಿದೆ.
ಭಾರತವು ತನ್ನ ಚಿನ್ನದ ಬೇಡಿಕೆಯ ಶೇಕಡಾ 90 ಕ್ಕಿಂತ ಹೆಚ್ಚನ್ನು ಆಮದುಗಳ ಮೂಲಕ ಪೂರೈಸುತ್ತದೆ. ಹೀಗಾಗಿ ಬುಲಿಯನ್ ಮಾರ್ಕೆಟ್ ನಲ್ಲಿ (Bullion Market) ಇದ ರ ದರವು ಬಹುತೇಕ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅವಲಂಬಿಸಿದೆ. ಡಾಲರ್ ದರ ಹೆಚ್ಚು ಕಡಿಮೆ ಆಗುವುದು ಅಥಾವ ಷೇರು ಮಾರುಕಟ್ಟೆಯಲ್ಲಿ ಆಗುವ ವ್ಯತ್ಯಾಸ ಚಿನ್ನದ ರೇಟ್ ಅನ್ನು ಹೆಚ್ಚು ಕಡಿಮೆ ಮಾಡುತ್ತದೆ. ಹೀಗಾಗಿ ಪ್ರತಿದಿನ ಬದಲಾಗುವ ಚಿನ್ನದ ದರವನ್ನು ಕೊಡುವ ಪ್ರಯತ್ನ ಇಲ್ಲಿ ಮಾಡುತ್ತೇವೆ. ದೇಶದ ಮಹಾನಗರಗಳ ಹಾಗೂ ರಾಜ್ಯದ ಪ್ರಮುಖ ನಗರಗಳ ದರವನ್ನು ನಿತ್ಯ ಬೆಳಿಗ್ಗೆ ಇಲ್ಲಿ ಪ್ರಕಟಿಸಲಾಗುವುದು.
Todays Gold rate : ಆಗಸ್ಟ್ 1 2023(August ̧1 2023: ಇಂದಿನ ಚಿನ್ನದ ಬೆಲೆಯಲ್ಲಿ (Gold Rates) ತುಸು ಇಳಿಕೆಯಾಗಿದೆ. ದೇಶದಲ್ಲಿ ಶುಭ ಸಮಾರಂಭಗಳ ಸೀಸನ್ ಇಲ್ಲದಿರುವುದರಿಂದ ಬೇಡಿಕೆ ಒಂದಷ್ಟು ಕುಗ್ಗಿದ್ದು ಹೀಗಾಗಿ ದರದಲ್ಲಿ ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೂ ಇತ್ತೀಚಿಗಿನ ದಿನಗಳಲ್ಲಿ ಇದು ಅಪರೂಪದ ವಿದ್ಯಮಾನವಾಗಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಏರುವ ಸಾಧ್ಯತೆ ಇದೆ. ಚಿನ್ನದ ಬೆಲೆ ಏರಿದರೂ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಇದನ್ನೂ ಓದಿ : Madras Eye : ವ್ಯಾಪಕವಾಗಿ ಹಬ್ಬುತ್ತಿದೆ ಕೆಂಗಣ್ಣು ಅಥಾವ ‘ಮದ್ರಾಸ್ ಐ’ – ಲಕ್ಷಣಗಳು ಹಾಗು ಪರಿಹಾರೋಪಾಯಗಳು
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 1ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,280 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,280 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 55,250 ರೂ
ಚೆನ್ನೈ: 55,500 ರೂ
ಮುಂಬೈ: 55,250 ರೂ
ದೆಹಲಿ: 55,400 ರೂ
ಕೋಲ್ಕತಾ: 55,250 ರೂ
ಕೇರಳ: 55,250 ರೂ
ಅಹ್ಮದಾಬಾದ್: 55,300 ರೂ
ಜೈಪುರ್: 55,400 ರೂ
ಲಕ್ನೋ: 55,400 ರೂ
ಭುವನೇಶ್ವರ್: 55,250 ರೂ
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
ಬೆಂಗಳೂರು: 7,550 ರೂ
ಚೆನ್ನೈ: 8,000 ರೂ
ಮುಂಬೈ: 7,700 ರೂ
ದೆಹಲಿ: 7,700 ರೂ
ಕೋಲ್ಕತಾ: 7,700 ರೂ
ಕೇರಳ: 8,000 ರೂ
ಅಹ್ಮದಾಬಾದ್: 7,700 ರೂ
ಜೈಪುರ್: 7,700 ರೂ
ಲಕ್ನೋ: 7,700 ರೂ
ಭುವನೇಶ್ವರ್: 8,000 ರೂ
ಗಮನಿಸಿ: ಪ್ರಕಟಿಸಲಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ವಿಶ್ವಾಸಪೂರ್ಣವಾಗಿದ್ದರೂ ನಿಖರ ಎಂದು ಹೇಳಲು ಸಾಧ್ಯವಿಲ್ಲ. ದೇಶದ ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದಾಗಿದೆ. ಖರೀದಿ ಸಂದರ್ಭಇದರ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.
.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ಬಿಗ್ ನ್ಯೂಸ್18 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್10 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ16 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು18 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized17 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್18 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ16 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















