Connect with us

ಬೆಂಗಳೂರು

Daivaradhane | ಯುವ ಕಾಂಗ್ರೇಸ್‍ ಸಮಾವೇಶದಲ್ಲಿ ದೈವರಾಧನೆ ಪ್ರದರ್ಶನ – ವ್ಯಾಪಕ ಆಕ್ರೋಶ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ಕೆಲ ದಿನಗಳ ಹಿಂದೆ ವಿಪಕ್ಷಗಳ ಒಕ್ಕೂಟ ಸಭೆ ನಡೆಸಿ ಇಂಡಿಯಾ ಎಂದು ನಾಮಕರಣ ಮಾಡಿದ ಬಳಿಕ ಒಂದೇ ತಿಂಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ “ಉತ್ತಮ ಭಾರತದ ಅಡಿಪಾಯ” ಶೀರ್ಷಿಕೆಯಡಿ ರಾಷ್ಟ್ರೀಯ ಯುವ ಸಮಾವೇಶ ನಡೆಯಿತು.

Ad Widget

Ad Widget

Ad Widget

Ad Widget

ಈ ಸಮಾವೇಶ ಕಳೆದ ವಾರದ ಬುಧವಾರ ಆರಂಭವಾಗಿದ್ದು ಮೂರು ದಿನಗಳ ಕಾಲ ನಡೆಯಿತು.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಬಿ ವಿ ಶ್ರೀನಿವಾಸ್ ಸಹಿತ ಹಲವು ಘಟಾನುಘಟಿ ನಾಯಕರು ಭಾಗವಹಿಸಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ವೇದಿಕೆಯಲ್ಲಿ ತುಳುನಾಡಿನ ದೈವರಾಧನೆ ಅನುಕು ಪ್ರದರ್ಶನ (Daivaradhane) ನಡೆಸಿದ್ದು, ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ಯುವ ಕಾಂಗ್ರೇಸ್‍ನ ನಾಯಕ ಮಹಮ್ಮದ್ ನಲಪ್ಪಾಡ್ ಸಹಿತ ಹಲವು ನಾಯಕರು ದೈವದ ಪಾತ್ರಧಾರಿಯ ಪೋಟೋ ಕ್ಲಿಕ್ಕಿಸುವ ಪೋಟೋ ವೈರಲ್ ಆಗಿದೆ.



Ad Widget

ದೈವರಾಧನೆಯನ್ನು ವೇದಿಕೆಯಲ್ಲಿ ಪ್ರದರ್ಶನಗೊಳಿಸುವ ವಸ್ತುವಲ್ಲ ಎಂದು ತುಳುನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಕಾಂಗ್ರೇಸ್‍ ನಾಯಕರು ಸಹಿತ ಹಲವು ಖಂಡಿಸಿದ್ದಾರೆ.

Ad Widget

Ad Widget

ಈ ಹಿಂದೆ ಬಿಜೆಪಿ ನಾಯಕ ತೇಜಸ್ವಿ ಸೂರ್ಯನೂ ಕಾರ್ಯಕ್ರಮದ ವೇದಿಕೆಯಲ್ಲಿ ದೈವರಾಧನೆ ಪ್ರದರ್ಶಿಸಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು.

ಕಳೆದ ವಿಧಾನಸೌಧದಲ್ಲಿ ಯುಟಿ ಖಾದರ್ ತುಳು ದೈವ ಭಾಷೆ ಎಂದಾಗ ಬಿಜೆಪಿ ನಾಯಕ ಮಾಧುಸ್ವಾಮಿ ಅಣಕಿಸಿದ್ದಕ್ಕೂ ಭಾರಿ ವಿರೋಧ ವ್ಯಕ್ತವಾಗಿತ್ತು

Ad Widget

ಅಪರಾಧ

FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR

Published

on



Ad Widget

Ad Widget

Ad Widget

Ad Widget

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್‌ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.



Ad Widget

ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.

Continue Reading

ಬಿಗ್ ನ್ಯೂಸ್

Athletes-ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ; ಸರ್ಕಾರದಿಂದ ಅಧಿಸೂಚನೆ

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಸಿವಿಲ್‌ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮ’ಗಳಿಗೆ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿತ್ತು. 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಎಲ್ಲ ವರ್ಗಗಳಿಗೂ ಅನ್ವಯ
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.



Ad Widget

ಮೀಸಲಾತಿ ಪಡೆಯಲು ಅರ್ಹರಾಗುವ ಕ್ರೀಡಾಪಟುಗಳು ನಿರ್ದಿಷ್ಟ ಕ್ರೀಡೆ ಅಥವಾ ಸ್ಪರ್ಧೆಯಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿರಬೇಕು. ಇತರ ರಾಜ್ಯಗಳು ಅಥವಾ ಭಾರತೀಯ ರೈಲ್ವೆಯಂತಹ ಸಂಸ್ಥೆಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಕನಿಷ್ಠ ಒಂದು ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಅಥವಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸಿರುವುದು ಅಗತ್ಯವಾಗಿರುತ್ತದೆ.

Ad Widget

Ad Widget

ಅರ್ಹ ಕ್ರೀಡಾಪಟುಗಳಿಗೆ ಅವರ ಕ್ರೀಡಾ ಸಾಧನೆಗೆ ಅನುಗುಣವಾಗಿ ಕೃಪಾಂಕಗಳನ್ನು ನೀಡಲಾಗುತ್ತದೆ. ಒಲಿಂಪಿಕ್ಸ್‌ ಅಥವಾ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 50, ಬೆಳ್ಳಿ ಪದಕ ಪಡೆದವರಿಗೆ 49 ಹಾಗೂ ಕಂಚಿನ ಪದಕ ವಿಜೇತರಿಗೆ 48 ಕೃಪಾಂಕಗಳನ್ನು ನಿಗದಿಪಡಿಸಲಾಗಿದೆ. ಇದೇ ರೀತಿ ಅಧಿಸೂಚಿತ 34 ಕ್ರೀಡೆಗಳಲ್ಲಿ ಸಾಧನೆಗೆ ಅನುಗುಣವಾಗಿ ಕೃಪಾಂಕ ನೀಡಲಾಗುತ್ತದೆ.

‘ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಬೆಂಬಲ’
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಜಿ. ಪರಮೇಶ್ವರ, “ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ” ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನದ ಮೊತ್ತವನ್ನು ಇತರ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಮೊತ್ತಕ್ಕೆ ಹೋಲಿಕೆ ಮಾಡಿ ಪರಿಷ್ಕರಿಸಲಾಗುವುದು ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.

Ad Widget
Continue Reading

ರಾಜಕೀಯ

DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ

Published

on



Ad Widget

Ad Widget

Ad Widget

Ad Widget

ಏಷ್ಯನ್ ಗೇಮ್ಸ್‌ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಏಷ್ಯನ್ ಗೇಮ್ಸ್‌ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ
ಏಷ್ಯನ್ ಗೇಮ್ಸ್‌ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗದ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.

Ad Widget

Ad Widget <> Ad Widget

ಪದಕ ವಿಜೇತರ ಬಹುಮಾನ ಮೊತ್ತ ಭಾರೀ ಹೆಚ್ಚಳ
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನೀಡುತ್ತಿದ್ದ ನಗದು ಬಹುಮಾನವನ್ನು ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನೀಡಲಾಗುತ್ತಿತ್ತು.



Ad Widget

ಇನ್ನು ಮುಂದೆ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ.

Ad Widget

Ad Widget

ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ನೇರ ನೇಮಕಾತಿ
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಒಲಿಂಪಿಕ್ಸ್ ತಯಾರಿಗೆ ತಲಾ ₹10 ಲಕ್ಷ
ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ಪ್ರೋತ್ಸಾಹ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್. ಹಾಗೂ ಶ್ರೇಯಾಂಕಾ ಪಾಟೀಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು 2026-27ನೇ ಸಾಲಿನ ‘ಗುರಿ ಒಲಿಂಪಿಕ್ಸ್’ ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ
ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಹಾಗೂ ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026ರಂದು ಅಧಿಸೂಚನೆ ಹೊರಡಿಸಲಾಗಿದೆ.

8 ಪದಕ ವಿಜೇತ ಕ್ರೀಡಾಪಟುಗಳು
ಶ್ರೇಯಾಂಕ ಆರ್. ಪಾಟೀಲ್ – ಮಹಿಳಾ ಕ್ರಿಕೆಟ್ ತಂಡ, ಚಿನ್ನ
ಎಂ.ಆರ್. ಪೂವಮ್ಮ – 4×400 ಮೀ. ಮಿಶ್ರ ರಿಲೇ, 4×400 ಮೀ. ಮಹಿಳಾ ರಿಲೇ – ಚಿನ್ನ ಮತ್ತು ಬೆಳ್ಳಿ
ತಿಲೋತ್ತಮಾ ಸೇನ್ – ಮಹಿಳೆಯರ 50 ಮೀ. ರೈಫಲ್, ಬೆಳ್ಳಿ
ಆಯುಷ್ ಆರ್. ಶೆಟ್ಟಿ – ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ
ಸ್ನೇಹಾ ಎಸ್.ಎಸ್. – 4×100 ಮೀ. ಮಿಶ್ರ ರಿಲೇ, ಕಂಚು
ಅದಿತಿ ಅಶೋಕ್ – ಮಹಿಳಾ ತಂಡ ಗಾಲ್ಫ್, ಬೆಳ್ಳಿ
ಪ್ರಣವಿ ಎಸ್. ಅರಸ್ – ಮಹಿಳಾ ತಂಡ ಗಾಲ್ಫ್ ಹಾಗೂ ವೈಯಕ್ತಿಕ ಸ್ಪರ್ಧೆ, ಬೆಳ್ಳಿ ಮತ್ತು ಚಿನ್ನ
ಮೋಹಿತ್ ಎಚ್.ಎಸ್. – ಪುರುಷರ ಹಾಕಿ ತಂಡ, ಚಿನ್ನ

ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು
ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಆಯುಷ್ ಶೆಟ್ಟಿ, ಶ್ರೇಯಾಂಕ ಆರ್. ಪಾಟೀಲ್, ಕೀರ್ತಿ ರಂಗಸ್ವಾಮಿ, ಫವಾದ್ ಮಿರ್ಜಾ, ಅದಿತಿ ಅಶೋಕ್, ಪ್ರಣವಿ ಎಸ್. ಅರಸ್, ಮೋಹಿತ್ ಎಚ್.ಎಸ್., ತಿಲೋತ್ತಮಾ ಸೇನ್, ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಯಶಸ್ವಿನಿ ಘೋರ್ಪಡೆ, ಸಿಂಧುಶ್ರೀ ಹಾಗೂ ದೀಪು ಮಲ್ಲೇಶ್ ಅವರು ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading