Uncategorized
Soujanya Rape and Murder Case : ವಿದ್ಯಾರ್ಥಿನಿ ಸೌಜನ್ಯಳ ಸಾವಿಗೆ ನ್ಯಾಯ ಕೊಡಿಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆಯವರಿಂದ ಸರಕಾರಕ್ಕೆ ಒತ್ತಾಯ ; ಸಾರ್ವಜನಿಕರಿಗೆ ನೀಡಿದ ಸಂದೇಶವೇನು ?
Soujanya Rape and Murder Case: ಅಗಷ್ಟ್ 2 : ಧರ್ಮಸ್ಥಳ (Dharmasthala) : ಸರಿಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳ (Dharmasthala) ಠಾಣಾ ವ್ಯಾಪ್ತಿಯಲ್ಲಿ ನಡೆದ 17ರ ಹರೆಯದ ವಿದ್ಯಾರ್ಥಿನಿ ಸೌಜನ್ಯಳ ಆಮಾನುಷ ಕೊಲೆ ಹಾಗೂ ಅತ್ಯಾಚಾರ ಪ್ರಕರಣ (Soujanya Rape and Murder Case) ಇದೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಆಗಷ್ಟ 1ರಂದು ರಾಜ್ಯದ ಸಿಎಂ ಸಿದ್ದರಾಮಯ್ಯ (CM Siddaramaiah)_ಭೇಟಿಯ ವೇಳೆಯು ಈ ವಿಚಾರ ಅನುರಣಿಸಿತ್ತು.
ತಿಂಗಳ ಹಿಂದೆಯಷ್ಟೇ ಸೌಜನ್ಯ ಹತ್ಯೆ ಪ್ರಕರಣದ ತೀರ್ಪನ್ನು ಸಿಬಿಐ ಕೋರ್ಟು ಪ್ರಕಟಿಸಿದ್ದು ಕೃತ್ಯದ ಏಕೈಕ ಆರೋಪಿ ಸಂತೋಷ್ ರಾವ್ ಗೆ (Santhosh Rao) ನ್ಯಾಯಾಲಯ ಕ್ಲಿನ್ ಚಿಟ್ ನೀಡಿ ಖುಲಾಸೆ ಮಾಡಿತ್ತು. ಅದಾದಾ ಬಳಿಕ ಸೌಜ್ಯನ್ಯಳನ್ನು ಹತ್ಯೆ ಮಾಡಿದ ಆರೋಪಿ ಯಾರು ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿ ನ್ಯಾಯಕ್ಕಾಗಿ ಕೂಗು ಎಬ್ಬಿತ್ತು. ಇದೆ ವೇಳೆ ಈ ಸಂದರ್ಭದ ಲಾಭ ಎತ್ತಿದ್ದ ಕೆಲ ಕಿಡಿಗೆಡಿಗಳು ಧರ್ಮಸ್ಥಳ ದೇವಸ್ಥಾನ (Dharmasthala Temple) ಹಾಗೂ ಧರ್ಮಾಧಿಕಾರಿ (Dharmadhikaari) ಡಾ. ಡಿ. ವೀರೇಂದ್ರ ಹೆಗ್ಗಡೆ (dr veerendra heggade) ಗುರಿಯಾಗಿಸಿ ವ್ಯವಸ್ಥಿತ ಅಪಪ್ರಚಾರಕ್ಕೆ ತೊಡಗಿಸಿಕೊಂಡಿದ್ದರು . ಇದು ಅಲ್ಲಿನ ಭಕ್ತರನ್ನು ಹಾಗೂ ಶ್ರದ್ದಾ ಕೇಂದ್ರಕ್ಕೆ ತಲೆ ತಲಾಂತರದಿಂದ ನಡಕೊಳ್ಳುವವರಿಗೆ ನೋವಾಗಿದ್ದು ಪ್ರತಿಭಟನೆಗೂ ಮುಂದಾಗಿದ್ದಾರೆ.
ಏತನ್ಮಧ್ಯೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಾರ್ವಜನಿಕ ಪ್ರಕಟನೆ ಹೊರಡಿಸಿ ಸೌಜನ್ಯಳಿಗೆ ನ್ಯಾಯ ಒದಗಿಸಿಕೊಡಬೇಕು ಸರಕಾರವನ್ನು ಎಂದು ಕೋರಿದ್ದಾರೆ. ಅಲ್ಲದೇ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗು ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿಯೂ ವಿನಂತಿಸಿದ್ದಾರೆ.
ಇದನ್ನೂ ಓದಿ : Gold Rate Today : ಮತ್ತೆ ಏರಿಕೆಯತ್ತ ಮುಖ ಮಾಡಿದ ಚಿನ್ನ ಬೆಳ್ಳಿ ದರ – ಇಲ್ಲಿದೆ ಇಂದಿನ ರೇಟ್ ವಿವರ
ಪತ್ರದ ಪೂರ್ಣ ಪಾಠ ಇಂತಿದೆ
2012 ರಲ್ಲಿ ನಡೆದ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು ಹಾಗು ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ.
ಇದನ್ನೂ ಓದಿ :Home Remedies for Gastroenteritis : ಗ್ಯಾಸ್ಟ್ರಿಕ್ ಹೊಟ್ಟೆ ಉಬ್ಬರ, ಎದೆಯುರಿ ಶಮನ ಮಾಡಲು ಇಲ್ಲಿದೆ ಸುಲಭ ಮನೆಮದ್ದುಗಳು
ನಂತರದಲ್ಲಿ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಸದರಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗು ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗು ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ಖೇದ ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗು ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು ಹಾಗು ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.
ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಸದರಿ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಕು. ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಮಾನ್ಯ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ. ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಹಾಗು ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗು ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ.

Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
Uncategorized18 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ24 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಕ್ರೈಂ5 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಅಂತರ ರಾಜ್ಯ24 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ24 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ24 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ನಿಧನ ವಾರ್ತೆ5 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್5 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















