Connect with us

ಕ್ರೈಂ

Moral Policing : ಕಾರ್ಕಳ : ಪುರುಷ – ಮಹಿಳಾ ವೈದ್ಯರು ಜತೆಗಿದ್ದ ಕಾರನ್ನು ತಡೆದು ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ರೌಡಿಸಂ – ಐವರ ಬಂಧನ

Published

on



Ad Widget

Ad Widget

Ad Widget

Ad Widget

ಕಾರ್ಕಳ : Karkala : ಅ 2 : ಹಿಂದೂತ್ವವಾದಿ ಸಂಘಟನೆಯೊಂದರ ಕಾರ್ಯಕರ್ತರು ಮಂಗಳೂರಿನ ಹೆಸರಾಂತ ಕಾಲೇಜ್‌ ವೊಂದರ ವೈದ್ಯರು ಹಾಗೂ ಪ್ರಾಧ್ಯಾಪಕರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ರೌಡಿಸಂ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಎಂಬಲ್ಲಿ ನಡೆದಿದೆ. ಈ ಸಂಬಂಧ ಹಿಂದೂ ಜಾಗರಣೆ ವೇದಿಕೆಗೆ ಸೇರಿದ ಐವರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಬಂಧಿತ ಆರೋಪಿಗಳು. ಇವರು ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತರು ಎಂದು ತಿಳಿದು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಜು.29ರಂದು ಕಾರೊಂದರಲ್ಲಿ ಶೃಂಗೇರಿಗೆ ತೆರಳಿದ್ದು, ಅಲ್ಲಿಂದ ವಾಪಸ್ಸು ಬರುತ್ತಿದ್ದ ವೇಳೆ ಕಾರ್ಕಳದ ಕುಂಟಲ್ಪಾಡಿ ಸಮೀಪ ಕೃತ್ಯ ನಡೆದಿದೆ. ಕುಂಟಲ್ಪಾಡಿ ಸಮೀಪದ ಎಸ್‌ಕೆ ಬಾರ್ಡರ್‌ ಬಳಿ ವೈದ್ಯರಿದ್ದ ಕಾರು ತಲುಪುತ್ತಲೇ ಹಿಂದೂ ಸಂಘಟನೆಯ ಯುವಕರ ಕಣ್ಣು ಆ ಕಾರಿನ ಮೇಲೆ ಬಿದ್ದಿದೆ. ಅದರಲ್ಲಿ ಯುವಕರು ಹಾಗೂ ಯುವತಿಯರು ಇರುವುದನ್ನು ಗಮನಿಸಿದ ಸಂಘಟನೆಯ ಕಾರ್ಯಕರ್ತರು ಇನ್ನೊಂದು ಕಾರಿನಲ್ಲಿ ಆ ಕಾರನ್ನು ಬೆನ್ನಟ್ಟಿದ್ದಾರೆ.

Ad Widget

Ad Widget <> Ad Widget

ಇದನ್ನೂ ಓದಿ : Gold Rate Today : ಮತ್ತೆ ಏರಿಕೆಯತ್ತ ಮುಖ ಮಾಡಿದ ಚಿನ್ನ ಬೆಳ್ಳಿ ದರ – ಇಲ್ಲಿದೆ ಇಂದಿನ ರೇಟ್ ವಿವರ



Ad Widget

ಕಾರು ಕಾರ್ಕಳದ ಕುಂಟಲ್ಪಾಡಿ ತಲುಪುತ್ತಿದ್ದಂತೆಯೇ ಸಮಘಟನೆಯವರ ಕಾರು ವೈದ್ಯರ ಕಾರನ್ನು ಅಡ್ಡಗಟ್ಟಿದೆ.
ನೀವೆಲ್ಲ ಬೇರೆ ಬೇರೆ ಧರ್ಮಕ್ಕೆ ಸೇರಿದವರು, ಎಲ್ಲಿ ಹೋಗಿದ್ದೀರಿ? ಹಿಂದು ಹೆಣ್ಮಕ್ಕಳನ್ನು ಹಾಳು ಮಾಡುತ್ತಿದ್ದೀರಿ ಎಂದೆಲ್ಲ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಮುಂದಾದರು. ಈ ವೇಳೆ ಸಮಯ ಪ್ರಜ್ಞೆ ಮೆರೆದ ಕಾರಿನಲ್ಲಿದ್ದ ಮಹಿಳೆಯೊಬ್ಬರು ಪೊಲೀಸ್‌ ಸಂಪರ್ಕ ಸಂಖ್ಯೆ 112ಗೆ ಕರೆ ಮಾಡಿ ಘಟನೆಯನ್ನು ವಿವರಿಸಿದ್ದಾರೆ.

Ad Widget

Ad Widget

ಸ್ವಲ್ಪ ಹೊತ್ತಿನಲ್ಲಿ ಘಟನಾ ಸ್ಥಳಕ್ಕೆ ದೌಡಯಿಸಿದ್ದು ಅಲ್ಲಿ ವೈದ್ಯರಿಗೆ ಕಿರುಕುಳ ನೀಡುತ್ತಿದ್ದ ಐವರನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಅರವಿಂದ್ ಕಲಗುಜ್ಜೆ, ಸರ್ಕಲ್ ಇನ್‌ಸ್ಪೆಕ್ಟರ್‌ ನಾಗರಾಜ್ ಅವರು ಕೂಡಾ ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿದರು. ನೈತಿಕ ಪೊಲೀಸ್‌ಗಿರಿ ಮೆರೆದ ಬಂಧಿತರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ : Home Remedies for Gastroenteritis : ಗ್ಯಾಸ್ಟ್ರಿಕ್ ಹೊಟ್ಟೆ ಉಬ್ಬರ, ಎದೆಯುರಿ ಶಮನ ಮಾಡಲು ಇಲ್ಲಿದೆ ಸುಲಭ ಮನೆಮದ್ದುಗಳು

Ad Widget
Click to comment

Leave a Reply

ಸ್ಥಳೀಯ

Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ

Published

on



Ad Widget

Ad Widget

Ad Widget

Ad Widget

ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.



Ad Widget

ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಕೊಲೆ ಬಳಿಕ ಪ್ರಕರಣವನ್ನು ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎನ್ನಲಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೂರ್ಯಕಾಂತ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್

Published

on



Ad Widget

Ad Widget

Ad Widget

Ad Widget

ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.

Ad Widget

Ad Widget

Ad Widget

Ad Widget

ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.



Ad Widget

ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.

Ad Widget

Ad Widget

ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.

ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.

ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.‌

Ad Widget
Continue Reading

ಕ್ರೈಂ

Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ

Published

on



Ad Widget

Ad Widget

Ad Widget

Ad Widget

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.



Ad Widget

ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.

Ad Widget

Ad Widget

ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading