Connect with us

Uncategorized

ಸಂಪಾಜೆ : ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸವಾರ ಮೃತ್ಯು

Published

on



Ad Widget

Ad Widget

Ad Widget

Ad Widget

ಸುಳ್ಯ : ಡಿ 4 : ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟ ಭೀಕರ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಡಿ.3 ರ ಮಧ್ಯರಾತ್ರಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23) ಮೃತಪಟ್ಟ ಬೈಕ್‌ ಸವಾರ.   ಗೂನಡ್ಕ ಬಳಿಯ ಪರ್ಲಡ್ಕದ ತಿರುವಿನಲ್ಲಿ ಅಪಘಾತ ನಡೆದಿದೆ

Ad Widget

Ad Widget

Ad Widget alt="Ad Widget"/>

Ad Widget

ಸವಣೂರು ನಿಂದ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಗೂಡ್ಸ್ ಗಾಡಿಗ ಹಾಗೂ ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಬೈಕ್   ಪರಸ್ಪರ ಡಿಕ್ಕಿ  ಹೊಡೆದು ಕೊಂಡಿದೆ.  ಅಪಘಾತದ ತೀವ್ರತೆಯಲ್ಲಿ ಬೈಕಿನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದೆ.  

Ad Widget

Ad Widget <> Ad Widget

 ಡಿಕ್ಕಿಯ ವೇಳೆ ರಸ್ತೆಗೆ ಎಸೆಯಲ್ಪಟ್ಟ  ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.  ಅತಿ ವೇಗವಾದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.



Ad Widget
Ad Widget
Click to comment

Leave a Reply

Uncategorized

Philomena-ವಿಶ್ವವಿದ್ಯಾನಿಲಯ ಮಟ್ಟದ ಯೂತ್ ರೆಡ್‌ಕ್ರಾಸ್ ಪ್ರೇರಣಾ ಶಿಬಿರ-2026: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಗರಿ

Published

on



Ad Widget

Ad Widget

Ad Widget

Ad Widget

ಪುತ್ತೂರು, ಅ. 8: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಹಯೋಗದಲ್ಲಿ, ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಅಕ್ಟೋಬರ್ 8ರಿಂದ 10ರವರೆಗೆ ನಡೆದ ಮೂರು ದಿನಗಳ ಪ್ರೇರಣಾ ಶಿಬಿರದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ಅಹಮ್ಮದ್ ಜೌಹರ್ ಹಾಗೂ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಮನೋನ್ಮಯಿ ಭಾಗವಹಿಸಿ ಆಶುಭಾಷಣ ಸ್ಪರ್ಧೆಯಲ್ಲಿ ಅಹಮ್ಮದ್ ಜೌಹರ್ ದ್ವಿತೀಯ ಬಹುಮಾನ ಗಳಿಸಿ, ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಇವರು ಪ್ರತಿನಿಧಿಸಿದ್ದ ತಂಡವು ಸ್ಪರ್ಧೆಯಲ್ಲಿ ‘ಅತ್ಯುತ್ತಮ ತಂಡ’ (Best Team Award) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

Ad Widget

Ad Widget

Ad Widget

Ad Widget

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕರು ಶುಭ ಹಾರೈಸಿದ್ದಾರೆ

Ad Widget

Ad Widget

Ad Widget alt="Ad Widget"/>

Ad Widget
Ad Widget
Continue Reading

Uncategorized

Inspection-ರಾಜ್ಯದಲ್ಲಿ 80 ಸಿಹಿ ತಯಾರಿಕಾ ಘಟಕಗಳ ತಪಾಸಣೆ, 10 ಘಟಕಗಳಿಗೆ ನೋಟಿಸ್

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ.15: ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಆರೋಗ್ಯ ಸಚಿವರ ನಿರ್ದೇಶನದ ಮೇರೆಗೆ ರಾಜ್ಯದಾದ್ಯಂತ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ಅನೈರ್ಮಲ್ಯ, ಪರವಾನಗಿ ಕೊರತೆ ಪತ್ತೆ
ರಾಜ್ಯದ ವಿವಿಧೆಡೆ ಒಟ್ಟು 80 ಸಿಹಿ ತಯಾರಿಕಾ ಹಾಗೂ ಮಾರಾಟ ಘಟಕಗಳನ್ನು ಪರಿಶೀಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವು ಘಟಕಗಳಲ್ಲಿ ಆಹಾರ ತಯಾರಿಕೆ ಮತ್ತು ಸಂಗ್ರಹಣಾ ಸ್ಥಳಗಳನ್ನು ಅನೈರ್ಮಲ್ಯಕರವಾಗಿ ನಿರ್ವಹಿಸುತ್ತಿರುವುದು ಪತ್ತೆಯಾಗಿದೆ.



Ad Widget

ಇದಲ್ಲದೆ, ಆಹಾರ ನಿರ್ವಹಣೆಯಲ್ಲಿ ತೊಡಗಿರುವ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರಗಳನ್ನು ಹೊಂದಿರದಿರುವುದು ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಪರವಾನಗಿ ಅಥವಾ ನೋಂದಣಿ ಪಡೆಯದಿರುವುದೂ ಕಂಡುಬಂದಿದೆ.

Ad Widget

Ad Widget

ಪ್ರಯೋಗಾಲಯಕ್ಕೆ 125 ಆಹಾರ ಮಾದರಿ
ತಪಾಸಣೆ ವೇಳೆ ಸಂಗ್ರಹಿಸಿದ 125 ಆಹಾರ ಮಾದರಿಗಳನ್ನು ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಪಾಲನೆಯನ್ನು ಪರಿಶೀಲಿಸಲು ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ಸಂಬಂಧಿತ 2011ರ ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುವ ಸಿಹಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ವಿರುದ್ಧ ನಿರಂತರ ತಪಾಸಣೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತ ಕೆ. ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

Uncategorized

Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ‌ ಬಹುಮಾನ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ  ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್,

Ad Widget

Ad Widget <> Ad Widget

ಸಂಪ್ಯದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ ಆರ್ ಪ್ರಥಮ ಸ್ಥಾನವನ್ನು ಗಳಿಸಿ, ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ ಜಿ  ಎಫ್ ಐ ( ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.



Ad Widget

14ರ ವಯೋಮಾನದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ  ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ. ಶೈನಿ ಪಾಯಸ್  ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ  ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading