Connect with us

ಆರೋಗ್ಯ

Cooking Food iN pressure cooker : ಅನ್ನ, ಮೊಟ್ಟೆ ಹಾಲಿನ ಉತ್ಪನ್ನಗಳನ್ನು ಈ ಪಾತ್ರೆಯಲ್ಲಿ ಬೇಯಿಸಲೇ ಬಾರದು…! ರುಚಿಯು ಹಾಳು- ಆರೋಗ್ಯಕ್ಕೂ ತೀವ್ರ ಹಾನಿ

Published

on



Ad Widget

Ad Widget

Ad Widget

Ad Widget

Cooking Food in pressure cooker :ಆಹಾರವನ್ನು ಬೇಯಿಸಿ ತಿಂದಾಗ ಮಾತ್ರ ಅದರಲ್ಲಿರುವ ಪೋಷಕಾಂಶಗಳು ದೇಹಕ್ಕೆ ಪೂರ್ಣ ಪ್ರಮಾಣದಲ್ಲಿ ದೊರೆಯುತ್ತದೆ. ಆಹಾರವನ್ನು ಹಲವು ವಿಧಗಳಲ್ಲಿ ಬೇಯಿಸಿ ತಿನ್ನಬಹುದಾದ್ದರೂ ಬೇಕಾಬಿಟ್ಟಿಯಾಗಿ ಬೇಯಿಸಿದರೆ ರುಚಿಯು ಕೆಡುತ್ತದೆ ಜತೆಗೆ ಆರೋಗುವು ಹಾಳಾಗುವ ಸಾಧ್ಯತೆಯಿದೆ. ಕಳೆದೆರಡು ದಶಕಗಳಲ್ಲಿ ಅಡುಗೆ ಮನೆ ಬಹಳಷ್ಟು ಬದಲಾಗಿದ್ದು, ಹಲವು ನೂತನ ಸಾಧನಗಳು ಅಡುಗೆ ಕೆಲಸವನ್ನು ಸುಲಭಗೊಳಿಸಿವೆ.

Ad Widget

Ad Widget

Ad Widget

Ad Widget

ಇದರಲ್ಲೂಂದು ನಾವು ನಿತ್ಯ ಬಳಸುವ ಪ್ರೆಶರ್ ಕುಕ್ಕರ್ . ಇದರ ಬಳಕೆಯಿಂದ ಸಮಯ ಹಾಗೂ ಇಂಧನ ಉಳಿಯುತ್ತದೆ. ಆದರೆ ಅದೇ ವೇಳೆ ಇದರಿಂದ ಆಹಾರದ ಟೇಸ್ಟ್‌ ಬದಲಾಗುತ್ತದೆ. ಹಿಂದೆ ಮಣ್ಣಿನ ಪಾತ್ರೆಯಲ್ಲಿ ಬೇಯಿಸಿ ತಿನ್ನುತ್ತಿದ್ದಾಗ ಸಿಗುತ್ತಿದ್ದ ರುಚಿಗೂ ಕುಕ್ಕರ್‌ ನಲ್ಲಿ ಬೇಯಿಸಿದ ಆಹಾರದ ರುಚಿಗೂ ಅಜಗಜಾಂತರ ವ್ಯತ್ಯಾಸವಿದೆ. ರುಚಿಯ ಮಾತು ಬಿಟ್ಟು ಬಿಡಿ ಕೆಲವು ಆಹಾರಗಳನ್ನು ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದರೆ ಅದು ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಲೇ ಬೇಕಾದ ಐದು ಆಹಾರಗಳ ಪಟ್ಟಿ ಇಲ್ಲಿ ಕೊಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅನ್ನ :

Ad Widget

Ad Widget <> Ad Widget

ನೀವು ಅನ್ನ ಬೇಯಿಸಲು ಪ್ರೆಶರ್ ಕುಕ್ಕರ್ ಬಳಸುವವರಾಗಿದ್ದರೆ ನೀವು ಈ ಲೇಖನವನ್ನು ಓದಲೇ ಬೇಕು. ಅಕ್ಕಿಯಲ್ಲಿರುವ ಪಿಷ್ಟವು ಅಕ್ರಿಲಮೈಡ್ ಎಂಬ ಹಾನಿಕಾರಕ ರಾಸಾಯನಿಕವನ್ನು ಬಿಡುಗಡೆ ಮಾಡುತ್ತದೆ. ಇದು ಕೆಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ರಾಸಾಯನಿಕವನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾನ್ಸರ್, ಬಂಜೆತನ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇನ್ನು ಮಂಡಿ ನೋವು, ಗಂಟು ನೋವು ಇದ್ದವರಂತೂ ಕುಕ್ಕರ್ ಬದಲು ಸಾಮಾನ್ಯ ಪಾತ್ರೆಗಳಲ್ಲಿ ಅನ್ನ ಬೇಯಿಸಿ, ನೀರನ್ನು ಬಸಿದು ಸೇವಿಸುವುದು ಉತ್ತಮ ಎಂದು ಹೇಳಲಾಗುತ್ತದೆ.



Ad Widget

ಇದನ್ನೂ ಓದಿದ್ದೀರಾ ? India Post GDS Recruitment 2023 : ದೇಶದಾದ್ಯಂತ 30,041 ಹುದ್ದೆಗಳು : ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು

Ad Widget

Ad Widget

ಮೀನು :
ಮೀನು ತುಂಬಾ ಸೂಕ್ಷ್ಮವಾಗಿದ್ದು, ಕುಕ್ಕರ್‌ನಲ್ಲಿ ಬೇಯಿಸುವುದು ಖಂಡಿತಾ ತಪ್ಪು. ಮೀನನ್ನು ಕುಕ್ಕರ್ ನಲ್ಲಿಟ್ಟರೆ ಅದು ಮೀನಿನ ಘಮ ಕಳೆದುಕೊಳ್ಳುವುದರ ಜೊತೆಗೆ ರುಚಿಯಲ್ಲಿ ಕೂಡಾ ಒಣ ಮೀನಿನಂತೆ ಆಗಬಹುದು.

ಹಾಲಿನ ಉತ್ಪನ್ನ
ಹಾಲಿನ ಉತ್ಪನ್ನಗಳು ಕುಕ್ಕರ್‌ನಲ್ಲಿ ಡೈರಿ ಉತ್ಪನ್ನಗಳನ್ನು ಬೇಯಿಸುವುದನ್ನು ತಪ್ಪಿಸಬೇಕು. ಕುಕ್ಕರ್‌ನಲ್ಲಿ ಬೇಯಿಸಲು ಹೆಚ್ಚು ಸಮಯ ತೆಗೆದುಕೊಳ್ಳುವ ಆಹಾರವನ್ನು ಬೇಯಿಸುವುದು ಒಳ್ಳೆಯದು. ಆದರೆ ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಕಡಿಮೆ ಸಮಯದಲ್ಲಿ ಬಿಸಿಯಾಗುತ್ತವೆ. ಕೆನೆ ಬೇಸ್ ಹೊಂದಿರುವ ಯಾವುದೇ ಆಹಾರಗಳನ್ನು ಬೇಯಿಸಲು ಪ್ರೆಶರ್ ಕುಕ್ಕರ್‌ ಬಳಸಬಾರದು. ಯಾವ ಅಡುಗೆಯಲ್ಲಿ ಹಾಲು, ಚೀಸ್ ಮೊಸರಿನಂತಹ ಡೈರಿ ಉತ್ಪನ್ನಗಳನ್ನು ಬಳಸುತ್ತೇವೆಯೋ ಆ ಅಡುಗೆಯನ್ನು ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಬಾರದು.

ಇದನ್ನೂ ಓದಿದ್ದೀರಾ ? Gold Rate Today : ಮತ್ತಷ್ಟೂ ಇಳಿಯಿತು ಚಿನ್ನದ ದರ, ಸಾಥ್‌ ನೀಡಿತು ಸಿಲ್ವರ್‌ -ಹೇಗಿದೆ ಇಂದಿನ ಚಿನ್ನ, ಬೆಳ್ಳಿ ರೇಟ್‌ ?

ಆಲೂಗಡ್ಡೆ :
ಆಲೂಗೆಡ್ಡೆಯನ್ನು ಬೇಯಿಸಲು ಹಲವರು ಪ್ರೆಶರ್ ಕುಕ್ಕರ್ ಅನ್ನು ಬಳಸುತ್ತಿದ್ದು, ಅದು ಕೂಡ ಅಕ್ಕಿಯಂತೆ ಅಧಿಕ ಪ್ರಮಾಣದಲ್ಲಿ ಪಿಷ್ಟವನ್ನು ಹೊಂದಿರುತ್ತದೆ. ಅದಕ್ಕಾಗಿಯೇ ಅವುಗಳನ್ನು ಪ್ರೆಶರ್ ಕುಕ್ಕರ್‌ನಲ್ಲಿ ಕುದಿಸುವುದು ಅಥವಾ ಬೇಯಿಸುವುದು ಸರಿಯಲ್ಲ.

ಪಾಸ್ತಾ​ :
ಹೆಚ್ಚು ಬಳಸುವ ಪಾಸ್ಟಾದಲ್ಲಿ ಕೂಡಾ ಅಧಿಕ ಪ್ರಮಾಣದಲ್ಲಿ ಪಿಷ್ಟ ಅಡಗಿದೆ. ಇದನ್ನೂ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದರೆ ಅದು ಹಾನಿಕಾರಕ ರಾಸಾಯನಿಕಗಳನ್ನು ಬಿಡುಗಡೆ ಮಾಡುತ್ತದೆ. ಪಾಸ್ತಾವನ್ನು ಬಾಣಲೆಯಲ್ಲಿ ಬೇಯಿಸಿ ಮಾಡುವುದೇ ಆರೋಗ್ಯಕರ ಮತ್ತು ರುಚಿಕರ ವಿಧಾನ.

ಮೊಟ್ಟೆ
ಕೆಲವರು ಮೊಟ್ಟೆಗಳನ್ನು ಕುಕ್ಕರ್‌ನಲ್ಲಿ ಬೇಯಿಸುತ್ತಾರೆ. ಆದರೆ ಕುಕ್ಕರ್‌ನಲ್ಲಿ ಮೊಟ್ಟೆಗಳನ್ನು ಬೇಯಿಸುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಬಹುದು. ಸಾಮಾನ್ಯವಾಗಿ ಮೊಟ್ಟೆಗಳನ್ನು ಯಾವಾಗಲೂ ಹೆಚ್ಚಿನ ಶಾಖದಲ್ಲಿ ಬೇಯಿಸಬೇಕು. ಹೆಚ್ಚಿನ ಶಾಖ ಅಂದರೆ ಕುಕ್ಕರ್‌ನಲ್ಲಿ ಮೊಟ್ಟೆಗಳನ್ನು ಬೇಯಿಸುವುದು ಅಲ್ಲ. ಪಾತ್ರೆಯಲ್ಲಿ ಬೇಯಿಸುವುದು ಉತ್ತಮ.

ಇದನ್ನೂ ಓದಿದ್ದೀರಾ ? Home remedies For Throat Pain : ಗಂಟಲು ನೋವು ಶಮನಕ್ಕೆ ಇಲ್ಲಿದೆ ಸುಲಭ ಮನೆ ಮದ್ದು

Ad Widget

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.



Ad Widget

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಆರೋಗ್ಯ

HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ

Published

on



Ad Widget

Ad Widget

Ad Widget

Ad Widget

ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.



Ad Widget

ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.

Ad Widget

Ad Widget

ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್‌ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.

Ad Widget
Continue Reading

ಆರೋಗ್ಯ

Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.

Ad Widget

Ad Widget <> Ad Widget

ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.



Ad Widget

ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).

Ad Widget

Ad Widget

ರಿಯಾಯಿತಿ ದರದ ಪರೀಕ್ಷೆ: ಕೊಲೆಸ್ಟರಾಲ್ ಪರೀಕ್ಷೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾಡಿಸಿಕೊಳ್ಳಲು ಅವಕಾಶವಿದೆ.

ಈ ರೋಗನಿರ್ಣಯ ಶಿಬಿರದ ಪ್ರಯೋಜನವನ್ನು ಪುತ್ತೂರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 94814 51929

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading