ದಕ್ಷಿಣ ಕನ್ನಡ
ಪುತ್ತೂರಿನ ನಡು ಪೇಟೆಯಲ್ಲಿ ಸಂತ್ರಸ್ತರ ಕೈಗೆ ತಗಲಾಕ್ಕಿಕೊಂಡ, ಹಣ ಡೆಪಾಸಿಟ್ ಮಾಡಿಸಿ ಹಲವರಿಗೆ ಮಕ್ಮಲ್ ಟೋಪಿಯಿಟ್ಟು “ಕಾಣದಂತೆ ಮಾಯ”ವಾಗಿದ್ದ ಸೊಸೈಟಿ ಅಧ್ಯಕ್ಷ – ಮುಂದೇನಾಯಿತು ?
ಪಡೆದ ಠೇವಣಿಗಳು ಮೆಚ್ಯೂರಿಟಿಗೆ ಬರುತ್ತಲೇ ಪ್ರಧಾನ ಆರೋಪಿ ಗಿರೀಶ್ ಯಾರ ಕಣ್ಣಿಗೂ ಬೀಳದೆ ತಲೆ ಮರೆಸಿಕೊಂಡಿದ್ದ. ಹೀಗಾಗಿ ಮೋಸ ಹೋದ ಗ್ರಾಹಕರು ಮತ್ತು ಸಿಬ್ಬಂದಿಗಳು ಹೊಂಚು ಹಾಕಿ ಆತನಿಗೆ ಕಾಯುತ್ತಿದ್ದು ಶುಕ್ರವಾರ ಮಧ್ಯಾಹ್ನ ಕಲ್ಲಾರೆಯಲ್ಲಿರುವ ಐಸಿಐಸಿಐ ಬ್ಯಾಂಕ್ಗೆ ಬಂದಿದ್ದಾನೆ.
ಮೆಚ್ಯೂರಿಟಿ ಅವಧಿ ಮುಗಿದ ಠೇವಣಿಗಳ ಹಣ ಹಿಂದಿರುಗಿಸದೆ ಗ್ರಾಹಕರಿಗೆ ಮತ್ತು ಸಿಬ್ಬಂದಿಗಳಿಗೆ ಮಕ್ಮಲ್ ಟೋಪಿ ಹಾಕಿದ ಪ್ರಕರಣವೊಂದು ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಹಲವರಿಗೆ ಪಂಗನಾಮ ಹಾಕಿ “ಕಾಣದಂತೆ ಮಾಯ” ವಾಗಿದ್ದ ಸಂಸ್ಥೆಯ ಅಧ್ಯಕ್ಷ ಬೇರೊಂದು ಬ್ಯಾಂಕಿಗೆ ವಹಿವಾಟಿನ ನಿಮಿತ್ತ ಬಂದಾಗ ಸಂತ್ರಸ್ತರ ಕೈಗೆ ತಗಲಾಕ್ಕಿಕೊಂಡಿದ್ದು, ಬಳಿಕ ಆತನನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಪುತ್ತೂರು ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಘಟನೆ ಪುತ್ತೂರು ನಗರದಲ್ಲಿ ಆ.4ರಂದು ನಡೆದಿದೆ.
ಭಾರತ್ ಓನ್ ಸೌಹಾರ್ದ ಸಹಕಾರಿ ಸಂಘ ಮತ್ತು ಅದರ ಅದೀನ ಸಂಸ್ಥೆ “ಟಾರ್ಗೆಟ್ 2 ಸಕ್ಸಸ್” ಎಂಬ ಟ್ರೇಡಿಂಗ್ ವ್ಯವಹಾರ ಸಂಸ್ಥೆಯ ಅಧ್ಯಕ್ಷ ಗಿರೀಶ್ ರೈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಈತನನ್ನೆ ಗ್ರಾಹಕರು ಮತ್ತು ಸಿಬ್ಬಂದಿಗಳು ಠಾಣೆಗೆ ಒಪ್ಪಿಸಿದ್ದು . ಈತನ ಈ ಎರಡು ಸಂಸ್ಥೆಗಳು ಸುಮಾರು ಒಂದೂವರೆ ವರ್ಷಕ್ಕೂ ಅಧಿಕ ಸಮಯದಿಂದ ಪುತ್ತೂರು, ಎಪಿಎಂಸಿ ರಸ್ತೆಯ ಅಕ್ಷಯ ಕಾಂಪ್ಲೆಕ್ಸ್ನ ಪ್ರಥಮ ಮಹಡಿಯಲ್ಲಿ ಕಾರ್ಯಚರಿಸುತಿತ್ತು.
ಈ ವಂಚನೆ ಪ್ರಕರಣದಲ್ಲಿ ಗಿರೀಶ್ ರೈ ಜತೆ ಸಂಸ್ಥೆಯ ಉಪಾದ್ಯಕ್ಷರಾದ ವಿವಿಟ್ಟಾ ಟೆಲ್ಮಾ ಪಿಂಟೋ , ನಿರ್ದೇಶಕರಾದ ಸುದೇಶ್ ರೈ ಅಲೆಕ್ಕಾಡಿ, ಮ್ಯಾನೇಜರ್ ಸಂದೀಪ್ ಹಾಗೂ ಇತರ ನಿರ್ದೇಶಕರುಗಳ್ನು ಆರೋಪಿಗಳೆಂದು ಹೆಸರಿಸಲಾಗಿದೆ . ಈ ಕುರಿತು ಒಳಮೊಗ್ರು, ಗ್ರಾಮದ ನಿವಾಸಿಯಾದ ನಾರಾಯಣ ನಾಯ್ಕ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳ ವಿರುದ್ದ ಐಪಿಸಿ ಕಲಂ: 406,420 ಜೊತೆಗೆ 34 ಐ.ಪಿ.ಸಿ ಮತ್ತು 21,22 BANNING OF UNREGULATED DEPOSIT SCHEMES ACT 2019 ನಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : Gold Rate Today : ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ? ಇಳಿದ ಬೆಳ್ಳಿ ದರ
ಆರೋಪಿ ಗಿರೀಶ್ ರೈ ಗ್ರಾಹಕರಿಂದ ಡೆಪೋಸಿಟ್ ಪಡೆದು ಅದರ ಮೆಚ್ಯೂರಿಟಿ ಅವಧಿ ಮುಗಿದರೂ ಹಲವು ಗ್ರಾಹಕರಿಗೆ ಹಣ ಹಿಂದಿರುಗಿಸದೆ ವಂಚನೆ ಮಾಡಿದ್ದಾರೆ. ಇದರ ಜೊತೆಗೆ ಸಂಸ್ಥೆಯ ಸಿಬ್ಬಂದಿಗಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವ ಸಮಯ ಷರತ್ತು ವಿಧಿಸಿ ಡಿವೋಸಿಟ್ ಪಡೆದುಕೊಂಡಿದ್ದಾರೆ. ಬಳಿಕದ ದಿನಗಳಲ್ಲಿ ಸಿಬ್ಬಂದಿಗಳಿಗೆ ಸರಿಯಾದ ವೇತನ ನೀಡದೆ ಸಂಸ್ಥೆಯಲ್ಲಿ ಇಟ್ಟಿರುವ ಡೆಪೋಸಿಟ್ ಹಣವನ್ನೂ ಹಿಂತಿರುಗಿಸದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಕ್ಯಾಶಿಯರ್ ಆಗಿ ಆಪಾಯಿಂಟ್ಮೆಂಟ್ ಮಾಡಬೇಕಾದರೆ ರೂ.5 ಲಕ್ಷ ಡೆಪೋಸಿಟ್ ಇಡಬೇಕೆಂಬ ಷರತ್ತು ವಿಧಿಸಿದಂತೆ ಕವಿತಾ ಎಂಬವರು ಪರಿಚಯಸ್ಥರ ಮೂಲಕ ರೂ.5 ಲಕ್ಷ ಮತ್ತು ತನ್ನ ಸ್ವಂತದ ರೂ.50 ಸಾವಿರವನ್ನು ಡೆಪೋಸಿಟ್ ಇಟ್ಟಿದ್ದರು. ಹರ್ಷಿತಾ ಎಂಬವರು ಕ್ಲರ್ಕ್ ಹುದ್ದೆಗೆ ರೂ.1 ಲಕ್ಷ, ಗೋಪಾಲಕೃಷ್ಣ ಪಂಜ ಎಂಬವರು ರೂ.1 ಲಕ್ಷ. ಹರೀಶ್ ಎಂಬವರು ಅವರ ತಂಗಿಯ ಹೆಸರಿನಲ್ಲಿ ರೂ.1 ಲಕ್ಷ, ದೀಕ್ಷನ್ ಎಂಬವರು ರೂ.1 ಲಕ್ಷ, ನಾರಾಯಣ ಎಂಬವರು ಲಕ್ಷಾಂತರ ರೂಪಾಯಿ ಈ ಸೊಸೈಟಿಯಲ್ಲಿಟ್ಟು ಮೋಸ ಹೋಗಿರುವುದಾಗಿ ಮಾದ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಇದನ್ನು ಓದಿ : India Post GDS Recruitment 2023 : ದೇಶದಾದ್ಯಂತ 30,041 ಹುದ್ದೆಗಳು : ಎಸ್ಎಸ್ಎಲ್ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು
ಪಡೆದ ಠೇವಣಿಗಳು ಮೆಚ್ಯೂರಿಟಿಗೆ ಬರುತ್ತಲೇ ಪ್ರಧಾನ ಆರೋಪಿ ಗಿರೀಶ್ ಯಾರ ಕಣ್ಣಿಗೂ ಬೀಳದೆ ತಲೆ ಮರೆಸಿಕೊಂಡಿದ್ದ. ಹೀಗಾಗಿ ಮೋಸ ಹೋದ ಗ್ರಾಹಕರು ಮತ್ತು ಸಿಬ್ಬಂದಿಗಳು ಹೊಂಚು ಹಾಕಿ ಆತನಿಗೆ ಕಾಯುತ್ತಿದ್ದು ಶುಕ್ರವಾರ ಮಧ್ಯಾಹ್ನ ಕಲ್ಲಾರೆಯಲ್ಲಿರುವ ಐಸಿಐಸಿಐ ಬ್ಯಾಂಕ್ಗೆ ಬಂದಿದ್ದಾನೆ. ಕೂಡಲೇ ಚುರುಕಾದ ಸಂತ್ರಸ್ತರು ಆತನನ್ನು ಸುತ್ತುವರಿದು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಗಿರೀಶ್ ರೈ ಯವರನ್ನು ಠಾಣೆಗೆ ಕರೆದೊಯ್ದು ಮಾಹಿತಿ ತಿಳಿಯುತ್ತಲೇ, ಹಣ ಕಳೆದುಕೊಂಡಿದ್ದ ಗ್ರಾಹಕರು ಮತ್ತು ಸಿಬ್ಬಂದಿಗಳು ಠಾಣೆಗೆ ಬಂದು ವಂಚನೆಯ ಮಾಹಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಶಿಕ್ಷಣ
Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಮಂಗಳೂರು
Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.
“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
-
ಸ್ಥಳೀಯ9 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಅಪರಾಧ7 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಅಂತರ ರಾಜ್ಯ9 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಬಿಗ್ ನ್ಯೂಸ್9 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಪರಾಧ3 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಮಂಗಳೂರು3 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ರಾಜಕೀಯ7 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ
-
ರಾಜಕೀಯ2 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ


















