ಸ್ಥಳೀಯ
Areca And Pepper Price Hike : ಅಡಿಕೆ ರೇಟ್ ಜಿಗಿತ – ಕಾಳು ಮೆಣಸು ನೆಗೆತ - ಖುಷಿಯಲ್ಲಿರುವ ರೈತ
Areca And Pepper Price Hike ಪುತ್ತೂರು: ಅಗಷ್ಟ್ 6 : August 6: ಕಳೆದೊಂದು ತಿಂಗಳಿನಿಂದ ಹೊಸ ಅಡಿಕೆ (Arecanut) ಮಾರುಕಟ್ಟೆಯಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು ರೈತರ ಮುಖದಲ್ಲಿ ಮದಹಾಸ ಮೂಡಿಸಿದೆ. ಈ ವರ್ಷದ ಆರಂಭದಿಂದಲೂ ಆಡಿಕೆ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಉತ್ಸಾಹ ಇರಲಿಲ್ಲ. ಕಳೆದ ವರ್ಷ ಇದೆ ಸಮಯದಲ್ಲಿ ಹೊಸ ಅಡಿಕೆ 500 ರ ಗಡಿ ತಲುಪಿದರೆ, ಹಳೆ ಅಡಿಕೆ 600 ರ ಅಸುಪಾಸಿಗೆ ಮುಟ್ಟಿತ್ತು. ಈ ಬಾರಿ ಆ ರಭಸ , ವೇಗ ಇಲ್ಲದೆ ಅಡಿಕೆ ಮಾರುಕಟ್ಟೆ ಮಂದಗತಿಯಲ್ಲಿ ಸಾಗಿತು.
ಇದರ ಮಧ್ಯೆ ಮಳೆಗಾಳ ಆರಂಭವಾಗದೇ ನೀರಿನ ಸಮಸ್ಯೆ ಎದುರಿಸಿದ ರೈತ , ಬಳಿಕ ದಿನಗಳಲ್ಲಿ ಕಾಡಿದ ಅತಿವೃಷ್ಠಿಯಿಂದಾಗಿ ಹೈರಾಣಾಗಿ ಹೋಗಿದ್ದ. ಏತನ್ಮಧ್ಯೆ ಹೊಸ ಅಡಿಕೆಗೆ ಬೆಲೆ ಏರಿರುವುದು ರೈತನಿಗೆ ಸಂತಸ ತಂದಿದೆ. ಹಾಗಿದ್ದೂ ಎಚ್ಚರಿಕೆಯ ಹೆಜ್ಜೆ ಇಡುತ್ತಿರುವ ಆತ ಅಳೆದು ತೂಗಿ ಅಡಿಕೆಯನ್ನು ಮಾರುಕಟ್ಟೆಗೆ ಬಿಡುತ್ತಿದ್ದಾನೆ. ಇದು ಮದ್ಯವರ್ತಿಗಳಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದ್ದು, ಗತ್ಯಂತರವಿಲ್ಲದೆ ನಿಧಾನವಾಗಿ ದರ ಏರಿಕೆ ಮಾಡುತ್ತಿದ್ದಾರೆ. ರೈತನ ಚತುರ ನಡೆಯಿಂದ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡು ಬರುತ್ತಿದೆ ಎನ್ನುವುದು ಮಾರುಕಟ್ಟೆ ತಜ್ಞರ ಅಭಿಪ್ರಾಯ.
ಜೂನ್ ಅಂತ್ಯದಲ್ಲಿ ಕೆಜಿಗೆ 400ರೂ ಇದ್ದ ಹೊಸ ಅಡಕೆ ಈಗ 50ರೂ ಏರಿಕೆಯಾಗಿ 450ರ ಗಡಿಗೆ ತಲುಪಿದೆ. ಹಾಗೆಂದು ಹಳೆ ಅಡಕೆಯ ಧಾರಣೆಯಲ್ಲಿ ಯಾವುದೇ ಏರಿಕೆಯಾಗದೆ 470ರೂ ಅಲ್ಲಿ ಉಳಿದುಕೊಂಡಿದೆ. ಇದು ಸ್ಟಾಕ್ ಇಟ್ಟು ಧಾರಣೆ ಏರಿಕೆ ಕಾಯುತ್ತಿರುವ ರೈತರಿಗೆ ತಲೆ ನೋವಾಗಿದೆ. ಈ ಹಿಂದೆ ಹಳೆ ಅಡಿಕೆ ಹಾಗೂ ಹೊಸ ಅಡಿಕೆಯ ಧಾರಣೆಯಲ್ಲಿ ಸರಿ ಸುಮಾರು 100 ರೂಪಾಯಿಗಳ ವ್ಯತ್ಯಾಸ ಇರುತಿತ್ತು. ಎಂಥಾ ಸಂದರ್ಭದಲ್ಲೂ ಇವೆರೆಡರ ಮಧ್ಯೆ 50 ರೂಪಾಯಿ ಅಂತರ ಇದ್ದೆ ಇರುತಿತ್ತು. ಆದರೆ ಈ ಬಾರಿ ಮಾತ್ರ ಈ ಅಂತರ 20 ರೂಪಾಯಿಗೆ ಕುಸಿದಿದೆ. ಚೌತಿ ಸಮೀಪಿಸುತ್ತಿದ್ದರೂ, ಹಳೆ ಅಡಕೆ ಮಾರುಕಟ್ಟೆಯಲ್ಲಿ ಬೇಡಿಕೆ ಕಾಣಿಸದಿರುವುದು ರೈತರ ಜತೆಗೆ ವ್ಯಾಪಾರಿ ವಲಯದಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ.

ಇದನ್ನು ಓದಿ : Home remedies For Throat Pain : ಗಂಟಲು ನೋವು ಶಮನಕ್ಕೆ ಇಲ್ಲಿದೆ ಸುಲಭ ಮನೆ ಮದ್ದು
ದಶಕಗಳಿಂದಲೂ ಗಣೇಶ ಚತುರ್ಥಿ ಹಬ್ಬವನ್ನು ಅಡಿಕೆ ಮಾರುಕಟ್ಟೆಯಲ್ಲಿ ʼಲ್ಯಾಂಡ್ ಮಾರ್ಕ್ʼ ರೀತಿ ಪರಿಗಣಿಸಲಾಗುತ್ತಿದೆ. ಚೌತಿ ಕಳೆಯುತ್ತಲೇ ಹಿಂದಿನ ಅಡಕೆಯನ್ನು ಚೋಲ್ ಅಡಕೆಯಾಗಿ ಪರಿಗಣಿಸಲಾಗುತ್ತಿತ್ತು. ಏಕೇಂದರೆ ಆ ಸಮಯಕ್ಕೆ ಹೊಸ ಅಡಿಕೆ ಮಾರುಕಟ್ಟೆಗೆ ಬರುತಿತ್ತು. ಇತ್ತೀಚಿನ ದಿನಗಳಲ್ಲಿ ದೀಪಾವಳಿ ಕಳೆದರೂ ಹಿಂದಿನ ಅಡಿಕೆಯನ್ನು ಸಿಂಗಲ್ ಚೋಲ್ ಆಗಿ ಪರಿಗಣಿಸಲಾಗುತ್ತಿಲ್ಲ ಎಂಬ ಆರೋಪ ರೈತರಲ್ಲಿದೆ. ಅದು ಏನೇ ಆದರೂ, ಚೌತಿ ಹಬ್ಬದ ಹತ್ತಿರದಲ್ಲೆ ಇದೆ. ಆದರೆ ಹಳೆ ಅಡಿಕೆ ದರ ಮಿಸುಕಾಡದಿರುವುದು ರೈತರ ಒಂದು ವರ್ಗದ ಕಳವಳಕ್ಕೆ ಕಾರಣವಾಗಿದೆ.
ಹೊಸ ಅಡಕೆ ಧಾರಣೆಯಲ್ಲಿ ನಿರಂತರ ಏರಿಕೆ ಕಾಣುತ್ತಿರುವುದರಿಂದ ಇನ್ನಷ್ಟು ಏರಿಕೆಯ ನಿರೀಕ್ಷೆಯಲ್ಲಿ ರೈತರು ಅಡಿಕೆಯನ್ನು ಮಾರಾಟಕ್ಕೆ ತರುತ್ತಿಲ್ಲ. ಸದ್ಯ ಶೇ.20ರಷ್ಟು ಹೊಸ ಅಡಕೆ ಮಾತ್ರ ಮಾರುಕಟ್ಟೆಗೆ ಬಂದಿದ್ದು, ಶೇ.80ರಷ್ಟು ರೈತರು ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಹಿಡಿದಿಟ್ಟಿದ್ದಾರೆಂಬ ಮಾತು ಕೇಳಿ ಬರುತ್ತಿದೆ. ಇನ್ನೂ ಹಳೆ ಅಡಿಕೆಯ ದಾರಣೆ ಯಥಾ ಸ್ಥಿತಿ ಇರುವುದರಿಂದ ಅಡಿಕೆ ಬೆಳೆಯುವ ದೊಡ್ಡ ಕುಳಗಳು ಕೂಡ ಅಡಿಕೆಯನ್ನು ಮಾರಾಟಕ್ಕೆ ಬಿಡುತ್ತಿಲ್ಲ. ತತ್ಪರಿಣಾಮ ಅಡಿಕೆಗೆ ಬೇಡಿಕೆ ಹೆಚ್ಚಾಗಿದ್ದು ಹೀಗಾಗಿ ಬೆಳೆಗಾರರು ಧಾರಣೆ ಏರಿಕೆ ಮಾಡುತ್ತಿದ್ದಾರೆ.
ಹೊಸ ಅಡಕೆ ಧಾರಣೆ ಏರಿಕೆಯಾಗುತ್ತಿದೆ. ಸದ್ಯ ಹೊಸ ಅಡಕೆ ಹಾಗೂ ಹಳೆ ಅಡಕೆ ಧಾರಣೆಯಲ್ಲಿ ಸುಮಾರು 20 ರೂಪಾಯಿ ವ್ಯತ್ಯಾಸ ಇದೆ. ಈಗ ಹೊಸ ಅಡಕೆ ಧಾರಣೆ ಏರಿಕೆ ನಿರೀಕ್ಷಿತ. ಮುಂದಿನ ಎರಡು ತಿಂಗಳ ಒಳಗಾಗಿ ಇದೇ ಅಡಕೆ ಹಳೆಯದಾಗುವುದರಿಂದ ಅಡಕೆ ಖರೀದಿ ಹಾಗೂ ದಾಸ್ತಾನು ನಡೆಯುತ್ತಿರುತ್ತದೆ. ಈಗಿನ ಧಾರಣೆ ಏರಿಕೆಯು ಸಣ್ಣ ಅಡಕೆ ಬೆಳೆಗಾರರಿಗೆ ಭಾರೀ ಪ್ರಯೋಜನ ಆಗದು. ಕಳೆದ ಬಾರಿಯ ಕೊಳೆರೋಗದ ಕಾರಣದಿಂದ ಅಡಕೆ ಫಸಲೂ ಕಡಿಮೆ ಇತ್ತು. ಈಗ ಅಡಕೆ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಬಿಟ್ಟು ಹೆಚ್ಚು ಧಾರಣೆಗೆ ಪ್ರಯತ್ನಿಸಿ ಧಾರಣೆಯನ್ನು ಸರಿದೂಗಿಸಿಕೊಳ್ಳುವುದು ಬೆಳೆಗಾರರ ಗುರಿಯಾಗಿರಬೇಕು.
ಮಹೇಶ್ ಪುಚ್ಚಪ್ಪಾಡಿ, ಕಾರ್ಯದರ್ಶಿ, ಅಖಿಲ ಭಾರತ ಅಡಕೆ ಬೆಳೆಗಾರರ ಸಂಘ

ಕಾಳು ಮೆಣಸು ನೆಗೆತ
ಕಾಳುಮೆಣಸು ಧಾರಣೆಯಲ್ಲಿ ಮತ್ತೆ ನೆಗೆತಕಾಣಿಸಿಕೊಂಡಿದ್ದು, ಸುಮಾರು 25 ರೂ. ಏರಿಕೆಯನ್ನು ಕಂಡಿದೆ. ವಾರದ ಹಿಂದೆ 560 ರೂ ಇದ್ದ ಕಾಳುಮೆಣಸಿಗೆ, ಜು.29ರಂದು 545ರೂ. ಗೆ ಇಳಿದಿತ್ತು. ಗುರುವಾರ 565ರೂ ಗೆ ಏರಿಕೆಯಾಗಿದ್ದು, ಶುಕ್ರವಾರ ಏಕಾಏಕಿ 590ರೂ ಗೆ ಏರಿಕೆಯಾಗಿದೆ. ಕೊಚ್ಚಿ ಮಾರುಕಟ್ಟೆಯಲ್ಲಿ ಬುಧವಾರ 597ರೂ. ಇದ್ದ ದರ, ಗುರುವಾರ 610ರೂ.ಗೆ ಏರಿಕೆಯಾದರೆ, ಶುಕ್ರವಾರ ಮತ್ತೆ ಏರಿಕೆಯಾಗಿ 618ರೂ. ಗೆ ಖರೀದಿ ನಡೆಯುತ್ತಿದೆ. ಶನಿವಾರ ಮತ್ತೆ 15 ರೂಪಾಯಿ ಏರಿಕೆಯಾಗಿದೆ. ಧಾರಣೆ ಸದ್ಯದಲ್ಲೆ 700 ತಲುಪಬಹುದು ಎಂಬ ನಿರೀಕ್ಷೆ ಇದೆ . ಹೀಗಿದ್ದರೂ ಕಳೆದ ವರ್ಷ ಇದೆ ಸಮಯದಲ್ಲಿ ಕರಿ ಚಿನ್ನದ ದರ ಏರಿಕೆಯಾಗಿ ಬಳಿಕ ಆಚಾನಕ್ ಕುಸಿದು ನಷ್ಟ ಅನುಭವಿಸಿದ್ದು, ಬೆಳೆಗಾರರನ್ನು ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಮಾಡಿದೆ.
ಇದನ್ನೂ ಓದಿ : India Post GDS Recruitment 2023 : ದೇಶದಾದ್ಯಂತ 30,041 ಹುದ್ದೆಗಳು : ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು
ರಬ್ಬರ್ ಧಾರಣೆಯಲ್ಲಿ ತಲಾ 1ರೂ. ಇಳಿಕೆಯಾಗಿ ಆರ್‌ಎಸ್‌ಎಸ್1ಎಕ್ಸ್ – 170, ಆರ್‌ಎಸ್‌ಎಸ್3 -148.50, ಆರ್‌ಎಸ್‌ಎಸ್4 – 148, ಆರ್‌ಎಸ್‌ಎಸ್5 – 141.50, ಲಾಟ್ – 125, ಸ್ಕಾöçಪ್ 1 -88, ಸ್ಕಾöçಪ್ 2 – 80 ಧಾರಣೆಯಿಂದ ಖರೀದಿಸಲಾಗುತ್ತಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು14 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ17 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ19 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್12 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ12 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಬಿಗ್ ನ್ಯೂಸ್19 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು13 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ14 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















