ಬೆಂಗಳೂರು
Bangalore Kambala | ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ‘ರಾಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಜೊಡುಕರೆ ಕಂಬಳ’ – ಮೈಸೂರು ಅರಸರಿಂದ ಅನುಮತಿ : ಬೆಂಗಳೂರು ಕಂಬಳದ ಸಂಪೂರ್ಣ ಮಾಹಿತಿ ಇಲ್ಲಿದೆ
ಮೊಟ್ಟಮೊದಲ ಬಾರಿ ತುಳುನಾಡಿನ ಕಂಬಳ ಕೋಣಗಳು ರಾಜಧಾನಿ ಬೆಂಗಳೂರಿಗೆ ಸಂಚರಿಸಲಿವೆ. ಇದೇ ಅವಿಭಾಜಿತ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದ ಕಂಬಳ ಕೂಟ ಇದೇ ಮೊದಲ ಬಾರಿ ರಾಜಧಾನಿ ಬೆಂಗಳೂರಿನಲ್ಲಿ (Bangalore Kambala) ನಡೆಯಲಿದೆ.
ಬೆಂಗಳೂರು ತುಳು ಕೂಟ ಇದರ 50ನೇ ವರ್ಷದ ಸಂಭ್ರಮಾಚರಣೆಯ ನೆನಪಿಗಾಗಿ ಬೆಂಗಳೂರಿನಲ್ಲಿ ತುಳುನಾಡಿನ ಐತಿಹಾಸಿಕ ಕಂಬಳ ಕೂಟ ಆಯೋಜಿಸುತ್ತದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕಂಬಳ ಕೂಟದ ನೇತೃತ್ವ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ವಹಿಸಿಕೊಳ್ಳಲಿದ್ದಾರೆ.
ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾಗಿರುವ ಅಶೋಕ್ ರೈ ಹಾಗೂ ಬೆಂಗಳೂರಿನ ತುಳುಕೂಟ ಸಮಿತಿ 50 ನೇ ವರ್ಷವನ್ನು ಇದೇ ವರ್ಷದ ನವೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಆಯೋಜಿಸುವ ಯೋಜನೆ ಹಾಕಿಕೊಂಡಿದ್ದು, ಕಂಬಳ ಕೂಟದೊಂದಿಗೆ ವಿಶ್ವ ತುಳು ಸಮ್ಮೇಳನ ಕೂಡ ಆಯೋಜಿಸಲಿದೆ.
ಅರಮನೆ ಮೈದಾನದಲ್ಲಿ ನಡೆಸಲುದ್ದೇಶಿಸಿದ ಕಂಬಳಕ್ಕೆ ‘ರಾಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಜೊಡುಕರೆ ಕಂಬಳ’ ಎಂದು ನಾಮಕರಣ ಮಾಡುವ ತೀರ್ಮಾನಿಸಲಾಗಿದೆ. ಕರೆ ನಿರ್ಮಿಸುವ ಜಾಗವನ್ನು ಅಶೋಕ್ ರೈ ಸಹಿತ ತುಳುಕೂಟದ ಪ್ರಮುಖರು ವೀಕ್ಷಣೆ ಮಾಡಿದ್ದಾರೆ.
ಮೈಸೂರಿನ ಒಡೆಯರ್ ಕುಟುಂಬದ ಜಾಗವಾದ ಅರಮನೆ ಮೈದಾನದಲ್ಲಿ ಕಂಬಳ ಮಾಡುವ ಬಗ್ಗೆ ಈಗಾಗಲೇ ಮೈಸೂರು ಮಹಾರಾಣಿ ಹಾಗೂ ಯುವರಾಜರ ಅನುಮತಿ ಕೂಡ ಸಿಕ್ಕಿದ್ದು, ಸರ್ಕಾರದ ಅನುಮತಿ ಸಿಗಲು ಬಾಕಿಯಿದೆ.
ರೈಲಿಗೇರಳಿದೆ ಕೋಣಗಳು: ಕಂಬಳ ಕೂಟಕ್ಕೆ ಕೋಣಗಳನ್ನು ಸಾಗಿಸುವ ಬಗ್ಗೆ ಈಗಾಗಲೆ ಮೊದಲ ಹಂತದ ಮಾತುಕತೆ ನಡೆಯುತ್ತಿದೆ. ಕೋಣಗಳನ್ನು ಲಾರಿಯಲ್ಲಿ ಸಾಗಿಸುವುದಕ್ಕೆ ವೆಚ್ಚ ಜಾಸ್ತಿ ಆಗ್ತದೆ. ಜೊತೆಗೆ ಕೋಣಗಳಿಗೆ ಆಯಾಸವು ಆಗಬಹುದು. ಅದಕ್ಕಾಗಿ ರೈಲಿನಲ್ಲಿ ಸಾಗಿಸುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಸೆಮಿ ಫೈನಲ್ ಹಂತಕ್ಕೆ ಬಂದ 50 ಜೋಡಿಗಳಷ್ಟು ಕೋಣಗಳನ್ನು ಬೆಂಗಳೂರಿನ ಕೂಟದಲ್ಲಿ ಓಡಿಸುವ ಯೋಜನೆ ಹಾಕಿಕೊಳ್ಳಲಾಗಿದೆ.
ನಿಖರ ನ್ಯೂಸ್ ಜೊತೆ ಮಾತನಾಡಿದ ಶಾಸಕ ಅಶೋಕ್ ರೈ ನಮ್ಮ ಸಂಸ್ಕೃತಿಯ ಪ್ರತೀಕವಾದ ಕಂಬಳ ಕೂಟವನ್ನು ರಾಜಧಾನಿಯಲ್ಲಿ ಅದ್ದೂರಿಯಾಗಿ ಆಯೋಜಿಸುವ ಯೋಜನೆ ಹಾಕಿಕೊಂಡಿದ್ದೇವೆ. ತುಳುನಾಡಿನ ಕಂಬಳ ಸಮಿತಿಯವರ ಜೊತೆ ಮಾತುಕತೆ ನಡೆಸಿ ಮುಂದಿನ ಯೋಜನೆ ಹಾಕಿಕೊಳ್ಳುತ್ತೇವೆ ಎಂದರು.
ನಿಖರ ನ್ಯೂಸ್ ಜೊತೆ ಮಾತನಾಡಿದ ಬೆಂಗಳೂರಿನ ತುಳುಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ತುಳುಕೂಟಕ್ಕೆ 50 ವರ್ಷ ಪೂರ್ತಿಯಾಗಿರುವುದರಿಂದ ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಕೂಟ ನಡೆಸುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ. ಇದಕ್ಕಾಗಿ ಸ್ಥಳ ವೀಕ್ಷಣೆ ಆಗಿದೆ ಎಂದರು.
ಕೋಣಗಳಿಗೆ ದಕ್ಷಿಣ ಕನ್ನಡದ ನೀರಿನಲ್ಲಿ ಓಡಿ , ಅದನ್ನು ಕುಡಿದು ಅಭ್ಯಾಸವಿದೆ. ಬೆಂಗಳೂರಿನ ಗಡಸು ನೀರನಲ್ಲಿ ಕೋಣಗಳು ಸೇವಿಸಬಹುದೇ ಎನ್ನುವ ಪರೀಕ್ಷೆ ನಡೆಸುತ್ತಿದ್ದೇವೆ. ಈಗಾಗಲೇ ಪುಣೆಯ ಲ್ಯಾಬ್ ಹಾಗೂ ಬೆಂಗಳೂರಿನ ಲ್ಯಾಬ್ ಗೆ ಪರೀಕ್ಷೆಗೆ ನೀರನ್ನು ಕಳುಹಿಸಿದ್ದೇವೆ ಎಂದಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡದಲ್ಲಿ ನಡೆಯುವ ಕಂಬಳಕ್ಕಿಂತ 1 ಅಡಿಯಾದರೂ ಜಾಸ್ತಿಯ ಕರೆ ನಿರ್ಮಿಸಿ ಅದ್ದೂರಿಯಾಗಿ ಆಯೋಜಿಸುವ ಅಭಿಲಾಷೆ ಅಶೋಕ್ ರೈ ಹೊಂದಿದ್ದಾರೆ ಎಂದು ಸುಂದರ್ ರಾಜ್ ರೈ ಹೇಳಿದರು.
ದೇಶದ ಯಾವೂದೇ ರಾಜರು ನೀಡದಷ್ಟು ಕೊಡುಗೆ ರಾಜ್ಯಕ್ಕೆ ಮೈಸೂರು ಒಡೆಯರ್ ನೀಡಿರುವುದರಿಂದ ಐತಿಹಾಸಿಕ ಕಂಬಳಕ್ಕೆ ಅವರ ಹೆಸರೇ ಇಡಲಾಗಿದೆ ಎಂದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ 35 ಎಕ್ರೆ ವಿಸ್ತೀರ್ಣದಲ್ಲಿ ಮೂರು ದಿನ ಕಾರ್ಯಕ್ರಮ ನಡೆಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ಸ್ಥಳ ವೀಕ್ಷಣೆ ಸಂದರ್ಭ ಬೆಂಗಳೂರಿನ ಬಿಬಿಎಂಪಿ ಸದಸ್ಯರಾದ ರಾಜೇಂದ್ರ ಕುಮಾರ್, ಸಂಪತ್ ಕುಮಾರ್ ಎಸ್, ಬೆಂಗಳೂರು ತುಳುಕೂಟ ಅಧ್ಯಕ್ಷರಾದ ಸುಂದರ್ ರಾಜ್ ರೈ , ಬೆಂಗಳೂರು ಬಂಟ್ಸ್ ಸಂಘದ ಅಧ್ಯಕ್ಷರಾದ ಚಂದ್ರಹಾಸ ರೈ, ಮಾಜಿ ಅಧ್ಯಕ್ಷರಾದ ಜಯರಾಮ ಸೂಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
ಬಿಗ್ ನ್ಯೂಸ್
Athletes-ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ; ಸರ್ಕಾರದಿಂದ ಅಧಿಸೂಚನೆ
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮ’ಗಳಿಗೆ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿತ್ತು. 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು.
ಎಲ್ಲ ವರ್ಗಗಳಿಗೂ ಅನ್ವಯ
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.
ಮೀಸಲಾತಿ ಪಡೆಯಲು ಅರ್ಹರಾಗುವ ಕ್ರೀಡಾಪಟುಗಳು ನಿರ್ದಿಷ್ಟ ಕ್ರೀಡೆ ಅಥವಾ ಸ್ಪರ್ಧೆಯಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿರಬೇಕು. ಇತರ ರಾಜ್ಯಗಳು ಅಥವಾ ಭಾರತೀಯ ರೈಲ್ವೆಯಂತಹ ಸಂಸ್ಥೆಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಕನಿಷ್ಠ ಒಂದು ರಾಷ್ಟ್ರೀಯ ಚಾಂಪಿಯನ್‌ಷಿಪ್ ಅಥವಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸಿರುವುದು ಅಗತ್ಯವಾಗಿರುತ್ತದೆ.
ಅರ್ಹ ಕ್ರೀಡಾಪಟುಗಳಿಗೆ ಅವರ ಕ್ರೀಡಾ ಸಾಧನೆಗೆ ಅನುಗುಣವಾಗಿ ಕೃಪಾಂಕಗಳನ್ನು ನೀಡಲಾಗುತ್ತದೆ. ಒಲಿಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 50, ಬೆಳ್ಳಿ ಪದಕ ಪಡೆದವರಿಗೆ 49 ಹಾಗೂ ಕಂಚಿನ ಪದಕ ವಿಜೇತರಿಗೆ 48 ಕೃಪಾಂಕಗಳನ್ನು ನಿಗದಿಪಡಿಸಲಾಗಿದೆ. ಇದೇ ರೀತಿ ಅಧಿಸೂಚಿತ 34 ಕ್ರೀಡೆಗಳಲ್ಲಿ ಸಾಧನೆಗೆ ಅನುಗುಣವಾಗಿ ಕೃಪಾಂಕ ನೀಡಲಾಗುತ್ತದೆ.
‘ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಬೆಂಬಲ’
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಜಿ. ಪರಮೇಶ್ವರ, “ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ” ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನದ ಮೊತ್ತವನ್ನು ಇತರ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಮೊತ್ತಕ್ಕೆ ಹೋಲಿಕೆ ಮಾಡಿ ಪರಿಷ್ಕರಿಸಲಾಗುವುದು ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರಾಜಕೀಯ
DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗದ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.
ಪದಕ ವಿಜೇತರ ಬಹುಮಾನ ಮೊತ್ತ ಭಾರೀ ಹೆಚ್ಚಳ
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನೀಡುತ್ತಿದ್ದ ನಗದು ಬಹುಮಾನವನ್ನು ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನೀಡಲಾಗುತ್ತಿತ್ತು.
ಇನ್ನು ಮುಂದೆ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ.
ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ನೇರ ನೇಮಕಾತಿ
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಒಲಿಂಪಿಕ್ಸ್ ತಯಾರಿಗೆ ತಲಾ ₹10 ಲಕ್ಷ
ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ಪ್ರೋತ್ಸಾಹ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್. ಹಾಗೂ ಶ್ರೇಯಾಂಕಾ ಪಾಟೀಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು 2026-27ನೇ ಸಾಲಿನ ‘ಗುರಿ ಒಲಿಂಪಿಕ್ಸ್’ ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ.
ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ
ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಹಾಗೂ ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026ರಂದು ಅಧಿಸೂಚನೆ ಹೊರಡಿಸಲಾಗಿದೆ.
8 ಪದಕ ವಿಜೇತ ಕ್ರೀಡಾಪಟುಗಳು
ಶ್ರೇಯಾಂಕ ಆರ್. ಪಾಟೀಲ್ – ಮಹಿಳಾ ಕ್ರಿಕೆಟ್ ತಂಡ, ಚಿನ್ನ
ಎಂ.ಆರ್. ಪೂವಮ್ಮ – 4×400 ಮೀ. ಮಿಶ್ರ ರಿಲೇ, 4×400 ಮೀ. ಮಹಿಳಾ ರಿಲೇ – ಚಿನ್ನ ಮತ್ತು ಬೆಳ್ಳಿ
ತಿಲೋತ್ತಮಾ ಸೇನ್ – ಮಹಿಳೆಯರ 50 ಮೀ. ರೈಫಲ್, ಬೆಳ್ಳಿ
ಆಯುಷ್ ಆರ್. ಶೆಟ್ಟಿ – ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ
ಸ್ನೇಹಾ ಎಸ್.ಎಸ್. – 4×100 ಮೀ. ಮಿಶ್ರ ರಿಲೇ, ಕಂಚು
ಅದಿತಿ ಅಶೋಕ್ – ಮಹಿಳಾ ತಂಡ ಗಾಲ್ಫ್, ಬೆಳ್ಳಿ
ಪ್ರಣವಿ ಎಸ್. ಅರಸ್ – ಮಹಿಳಾ ತಂಡ ಗಾಲ್ಫ್ ಹಾಗೂ ವೈಯಕ್ತಿಕ ಸ್ಪರ್ಧೆ, ಬೆಳ್ಳಿ ಮತ್ತು ಚಿನ್ನ
ಮೋಹಿತ್ ಎಚ್.ಎಸ್. – ಪುರುಷರ ಹಾಕಿ ತಂಡ, ಚಿನ್ನ
ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು
ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಆಯುಷ್ ಶೆಟ್ಟಿ, ಶ್ರೇಯಾಂಕ ಆರ್. ಪಾಟೀಲ್, ಕೀರ್ತಿ ರಂಗಸ್ವಾಮಿ, ಫವಾದ್ ಮಿರ್ಜಾ, ಅದಿತಿ ಅಶೋಕ್, ಪ್ರಣವಿ ಎಸ್. ಅರಸ್, ಮೋಹಿತ್ ಎಚ್.ಎಸ್., ತಿಲೋತ್ತಮಾ ಸೇನ್, ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಯಶಸ್ವಿನಿ ಘೋರ್ಪಡೆ, ಸಿಂಧುಶ್ರೀ ಹಾಗೂ ದೀಪು ಮಲ್ಲೇಶ್ ಅವರು ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದಿದ್ದಾರೆ.
-
ಮಂಗಳೂರು10 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ14 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು16 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ14 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
Uncategorized7 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ9 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ರಾಜಕೀಯ16 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಉದ್ಯೋಗ11 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening


















