Connect with us

ಪುತ್ತೂರು

Sowmya Bhat | ಪುತ್ತೂರು: ಸೌಮ್ಯ ಭಟ್ ಕೊಲೆಯಾಗಿ 26 ವರ್ಷ – ಪುತ್ತಿಲ ಪರಿವಾರದಿಂದ ‘ಸೌಮ್ಯ ಸ್ಮೃತಿ’ ಸ್ವಚ್ಛಗೊಳಿಸಿ ನಮನ

Published

on



Ad Widget

Ad Widget

Ad Widget

Ad Widget

1997ರಲ್ಲಿ ಕರಾವಳಿಯನ್ನೇ ಬೆಚ್ಚಿಬೀಳಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಸೌಮ್ಯ ಭಟ್ (Sowmya Bhat) ಕೊಲೆಯಾಗಿ ಇಂದಿಗೆ 26 ವರ್ಷ ಪೂರ್ಣಗೊಂಡಿದೆ.

Ad Widget

Ad Widget

Ad Widget

Ad Widget

ಕಬಕ ಒಳ ರಸ್ತೆಯಲ್ಲಿ 1997ರ ಆಗಸ್ಟ್ 7 ರಂದು ಅಶ್ರಫ್ ಯಾನೆ ಮಿಲಿಟ್ರಿ ಅಶ್ರಫ್ ನಿಂದ 32 ಬಾರಿ ಇರಿತಕ್ಕೊಳಕ್ಕಾಗಿ ಸೌಮ್ಯ ಬರ್ಬರ ಹತ್ಯೆಯಾದರು.

Ad Widget

Ad Widget

Ad Widget alt="Ad Widget"/>

Ad Widget

ಆ ನಂತರ ಬಂಧನಕೊಳ್ಕಕಾದ ಅಶ್ರಫ್ ಎರಡೆರಡು ಭಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡವ ಇನ್ನೂ ಕೂಡ ನಾಪತ್ತೆಯಾಗಿದ್ದಾನೆ.

Ad Widget

Ad Widget <> Ad Widget

26ನೇ ವರ್ಷದ ನೆನಪಿನ ಅಂಗವಾಗಿ ಪುತ್ತಿಲ ಪರಿವಾರದ ವತಿಯಿಂದ ಕಬಕ ಸಮೀಪ ಕೊಲೆಯಾದ ಸ್ಥಳದಲ್ಲಿರುವ ‘ಸೌಮ್ಯ ಸ್ಮೃತಿ’ ಕಟ್ಟೆಗೆ ಭೇಟಿ ನೀಡಿ ಕಟ್ಟೆ ಸ್ವಚ್ಚಗೊಳಿಸಿ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು.



Ad Widget

ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಡಾ.ಶಶಿಧರ್ ಕಜೆ , ಪುತ್ತಿಲ ಪರಿವಾರದ ತಾಲೂಕು ಅಧ್ಯಕ್ಷರಾದ ಪ್ರಸನ್ನ ಮಾರ್ತಾ, ಜೊತೆ ಕಾರ್ಯದರ್ಶಿ ಉಮೇಶ್ ಗೌಡ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ, ವಸಂತ ಕಬಕ, ಗಣೇಶ್ ಕಬಕ, ಸಚಿನ್ , ವಿದ್ಯಾಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Click to comment

Leave a Reply

ಶಿಕ್ಷಣ

Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget

Ad Widget

ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget alt="Ad Widget"/>

Ad Widget

ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ‌ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

Ad Widget

Ad Widget <> Ad Widget

ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ‌ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.



Ad Widget

ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು‌ ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.

Continue Reading

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಅಪರಾಧ

Puttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2026ರ ಅಕ್ಟೋಬರ್ 14ರಂದು ಸಂಜೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ವಾಸು ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅಂಗಡಿ ಮಾಲೀಕ, ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬವರು ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ತಂದು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget <> Ad Widget

ಇದೇ ದಿನ ಪುತ್ತೂರು ಕಸಬ ಗ್ರಾಮದ ಲಿನೆಟ್ ಜಂಕ್ಷನ್ ಬಳಿಯ ಪಾನ್ ಸ್ಟಾಲ್ ಒಂದರಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸಹಾಯಕ ಪೊಲೀಸ್ ಉಪನಿರೀಕ್ಷಕ ಗಂಗಾಧರ ಎ.ಬಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅಂಗಡಿ ಮಾಲೀಕ, ಪುತ್ತೂರು ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಎಂಬವರ ಬಳಿ ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳದಿಂದ ಲಾಟರಿ ಟಿಕೆಟ್‌ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



Ad Widget

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading