ಬೆಂಗಳೂರು
Spandana Vijay | ಸ್ಪಂದನಾ ವಿಜಯರಾಘವೇಂದ್ರ ಅಂತ್ಯಕ್ರಿಯೆ ಬೆಳ್ತಂಗಡಿಯಲ್ಲಿಯ? ಬೆಂಗಳೂರಿನಲ್ಲಿಯ..? ಇಲ್ಲಿದೆ ಕುಟುಂಬದ ಸ್ಪಷ್ಟನೆ
ಬೆಂಗಳೂರು: ತೀವ್ರ ಹೃದಯಾಘಾತದಿಂದ ಮೃತಪಟ್ಟ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana Vijay) ಅಂತ್ಯಕ್ರಿಯೆ ಹುಟ್ಟೂರು ಬೆಳ್ತಂಗಡಿಯಲ್ಲಿ ನಡೆಯಲಿದೆಯ? ಅಥವಾ ಬೆಂಗಳೂರಿನಲ್ಲೇ ನಡೆಯಲಿದೆಯ ಎನ್ನುವ ಬಗ್ಗೆ ಚರ್ಚೆ ಪ್ರಾರಂಭವಾಗುತ್ತಿದ್ದಂತೆ ಕುಟುಂಬ ವರ್ಗ ಮಾಧ್ಯಮ ಪ್ರಕಟನೆ ಹೊರಡಿಸಿದೆ.
ಬೆಳ್ತಂಗಡಿಯ ಮೊಗ್ಗ ಗುತ್ತು ಕುಟುಂಬದ ಹೆರಾಜೆ ಮನೆಯವರಾದ ಸ್ಪಂದನಾ
ರವರು ಪೊಲೀಸ್ ಅಧಿಕಾರಿಯಾಗಿದ್ದ ಬಿ.ಕೆ ಶಿವರಾಂಯವರ ಪುತ್ರಿ . ಸ್ಪಂದನಾರ ಮೃತದೇಹವನ್ನು ಕುಟುಂಬದ ಮನೆಗೆ ತರುವುದೆನ್ನುವ ಬಗ್ಗೆ ಚರ್ಚೆಯಾಗಿತ್ತು.
ಕನ್ನಡ ಚಲನಚಿತ್ರ ರಂಗದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಹಾಗೂ ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಅವರ ಪುತ್ರಿ ಶ್ರೀಮತಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ಥೈಲ್ಯಾಂಡ್ ಪ್ರವಾಸದಲ್ಲಿ ಹೃದಯಘಾತವಾಗಿ ನಮ್ಮನ್ನಗಲಿದ್ದಾರೆ.
ಶ್ರೀಮತಿ ಸ್ಪಂದನಾ ವಿಜಯ್ ರಾಘವೇಂದ್ರ ಅವರ ಪಾರ್ಥಿವ ಶರೀರ ಆಗಸ್ಟ್ 8ರ ರಾತ್ರಿ ಹನ್ನೆರಡು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತಲುಪಲಿದೆ.
ವಿಮಾನ ನಿಲ್ದಾಣದ ಪ್ರಕ್ರಿಯೆ ನಂತರ ಪಾರ್ಥಿವ ಶರೀರವನ್ನು ಬಿಕೆ ಶಿವರಾಂ No.34, 4ನೇ ದೇವಸ್ಥಾನ ರಸ್ತೆ, 15ನೇ ಅಡ್ಡರಸ್ತೆ, ಮಲ್ಲೇಶ್ವರ ಬೆಂಗಳೂರಿನ ಸ್ವಗೃಹಕ್ಕೆ ತರಲಾಗುತ್ತದೆ.
ಇಂದು ಮಧ್ಯರಾತ್ರಿಯಿಂದ ಆಗಸ್ಟ್ 9 ಬುಧವಾರ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.
ನಂತರ ನಗರದ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಸಕಲ ವಿಧಿವಿಧಾನದಂತೆ ಅಂತ್ಯಕ್ರಿಯೆ ನೇರವೇರಿಸಲಾಗುವುದು ಎಂದು ಎಸ್ ಎ ಚಿನ್ನೇಗೌಡ ಹಾಗೂ ಬಿಕೆ ಶಿವರಾಂ ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ 2023ರ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿಯ ಕಾಂಗ್ರೇಸ್ ಅಭ್ಯರ್ಥಿಯಾಗಿದ್ದರು. ತಂದೆ ಬಿ.ಕೆ ಶಿವರಾಂರವರ ಸಹೋದರ ಬಿ.ಕೆ ಹರಿಪ್ರಸಾದ್ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. 2007ರಲ್ಲಿ ವಿಜಯರಾಘವೇಂದ್ರ ರನ್ನು ಪ್ರೀತಿಸಿ ಮದುವೆಯಾಗಿದ್ದರು.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಬಿಗ್ ನ್ಯೂಸ್
Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
-
ನಿಧನ ವಾರ್ತೆ17 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್11 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ16 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ16 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ16 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್11 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ16 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ14 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















