ಮಂಗಳೂರು
SDPI-BJP | ಉಳ್ಳಾಲ : ಬಿಜೆಪಿ ಸದಸ್ಯರ ಬೆಂಬಲದಿಂದ ಎಸ್ಡಿಪಿಐ ಪಾಲದ ಗ್ರಾ.ಪಂ ಅಧ್ಯಕ್ಷ ಸ್ಥಾನ : ವಿಜಯೋತ್ಸವಕ್ಕೆ ಹೂಹಾರ ತಂದಿದ್ದ ಬಿಜೆಪಿ ಕಾರ್ಯಕರ್ತರಿಗೆ ತೀವ್ರ ನಿರಾಸೆ
ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ತಲಪಾಡಿ ಗ್ರಾ.ಪಂ ಎರಡನೇ ಅವಧಿಗೆ ಎಸ್ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ (SDPI-BJP) ಆಯ್ಕೆಯಾಗಿದ್ದಾರೆ.
ಬಿಜೆಪಿ ಬೆಂಬಲಿತರು ಎಸ್ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರೀಕ್ಷಿತ ಅಭ್ಯರ್ಥಿಯಾಗಿದ್ದ ಸತ್ಯರಾಜ್ ಪರಾಭವಗೊಂಡಿದ್ದಾರೆ. ಗ್ರಾಮದ ಆಡಳಿತದಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಾಗಿದ್ದರು.
ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ವೈ. ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. SDPIಯ ಟಿ ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಸಮಬಲ ಮತವನ್ನು ಆರಂಭದ ಹಂತದಲ್ಲಿ ಪಡೆದುಕೊಂಡಿದ್ದರು.
ನಂತರ ಚುನಾವಣಾಧಿಕಾರಿಗಳ ಆದೇಶದಂತೆ ಚೀಟಿ ಎತ್ತುವ ಪ್ರಕ್ರಿಯೆಯಲ್ಲಿ ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತರ ಸಂಖ್ಯೆ ಹೆಚ್ಚಿದ್ದರೂ , ಅಲ್ಲಿದ್ದ ಇಬ್ಬರು ಎಸ್ ಡಿಪಿಐ ಬೆಂಬಲಿತರಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಸಮಬಲ ಬಂದಿದೆ. ಬಿಜೆಪಿಯ ಸತ್ಯರಾಜ್ ಅವರು ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ಬೇರೆ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ನಿರಾಶೆಗೊಂಡರು.
ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
ಮಂಗಳೂರು
Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.
“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
-
ಸ್ಥಳೀಯ9 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಅಪರಾಧ8 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಅಂತರ ರಾಜ್ಯ9 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಬಿಗ್ ನ್ಯೂಸ್9 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಪರಾಧ4 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಮಂಗಳೂರು4 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ರಾಜಕೀಯ3 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ರಾಜಕೀಯ8 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ


















