ದಕ್ಷಿಣ ಕನ್ನಡ
Soujanya Case | ಸೌಜನ್ಯ ಹೋರಾಟಕ್ಕೆ ಬಿಜೆಪಿ ಎಂಟ್ರಿ – ಆ.27 ರಂದು ಬೆಳ್ತಂಗಡಿಯಲ್ಲಿ ಎರಡು ಜಿಲ್ಲೆಗಳ ಶಾಸಕರು ಸೇರಿ ಬೃಹತ್ ಪ್ರತಿಭಟನೆ : ನಮ್ಮ ಹೋರಾಟ ಯಾರಾ ಟಾರ್ಗೆಟ್ ಅಲ್ಲ ಎಂದ ಕಟೀಲ್ ಬೇರೆ ಹೋರಾಟಗಾರರ ಬಗ್ಗೆ ಹೇಳಿದ್ದೇನೂ..?
ಮಂಗಳೂರು: 2012ರಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ (Soujanya Case) ಪ್ರಕರಣದ ಹೋರಾಟಕ್ಕೆ ಕೊನೆಗೂ ಬಿಜೆಪಿ ಧುಮುಕಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ಸಿಬಿಐ ಕೋರ್ಟ್ ನಿಂದ ಖುಲಾಸೆಗೊಂಡ ನಂತರ ರಾಜ್ಯದಾದ್ಯಂತ ಮತ್ತೆ ಹೋರಾಟ ಪ್ರಾರಂಭವಾಗಿದೆ.
ಯಾರನ್ನು ಟಾರ್ಗೆಟ್ ಮಾಡದೆ ಪ್ರಕರಣವನ್ನು ಮರುತನಿಖೆಗೆ ಕೊಟ್ಟು ನೈಜ ಆರೋಪಿಯನ್ನು ಪತ್ತೆ ಹಚ್ಚುವಂತೆ ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಆ.27 ರಂದು ಬಿಜೆಪಿ ಯಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರನ್ನೊಳಗೊಂಡು ಪ್ರತಿಭಟನೆ ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದರು.
ಹೋರಾಟದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖರು ಭಾಗಿಯಾಗಲಿದ್ದಾರೆ. ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಪೊಲೀಸ್ ತನಿಖೆ ಆಗಿದೆ, ಸಿಐಡಿ ಬಳಿಕ ಹೋರಾಟ ನಡೆದು ಸಿಬಿಐ ತನಿಖೆ ಕೂಡ ಆಗಿದೆ, ಕೊನೆಗೆ ಸಿಬಿಐ ಬಂಧಿತ ವ್ಯಕ್ತಿ ಆರೋಪಿ ಅಲ್ಲ ಅಂತ ಹೇಳಿದೆ ಎಂದು ಕಟೀಲ್ ಹೇಳಿದರು.
ಆವತ್ತು ಕೂಡ ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮಾಡಿತ್ತು, ಇದೀಗ ಮತ್ತೆ ಬಿಜೆಪಿ ಇಡೀ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತದೆ, ಘಟನೆಯ ಬಳಿಕದ ಹೋರಾಟಗಳು, ಕುಟುಂಬದ ಆಗ್ರಹಗಳ ತನಿಖೆ ಆಗಬೇಕು ಎಂದರು.ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು, ಬಿಜೆಪಿ ಪ್ರಕರಣದ ಮರು ತನಿಖೆಗೆ ಸಿಎಂಗೆ ಒತ್ತಾಯ ಮಾಡಲಿದೆ ಎಂದರು.
ಆ. 27ರಂದು ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ. ಆ ಬಳಿಕ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ ಕೊಡಲಿದ್ದೇವೆ, ದ.ಕ ಮತ್ತು ಉಡುಪಿ ಜಿಲ್ಲೆಯ ಕಾರ್ಯಕರ್ತರ ಸೇರಿಸಿ ಬೃಹತ್ ಹೋರಾಟ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಆ.27ರಂದು ನಡೆಯಲಿದೆ ಎಂದರು.
ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯ ಮರು ದಿನ ಶಾಸಕರ ನಿಯೋಗ ಸಿಎಂ ಭೇಟಿಯಾಗಲಿದೆ ಎಂದರು. ಸೌಜನ್ಯ ಕೇಸ್ ನಲ್ಲಿ ಸಿಬಿಐಗೆ ಹೋದರೂ ಆರೋಪಿಗಳು ಯಾರು ಅನ್ನೋದು ಆಗಿಲ್ಲ.
ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಷಯ ಇಲ್ಲ ಎಂದು ಸ್ಪಷ್ಟ ಪಡಿಸಿದರು. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಉದ್ದೇಶ ಎಂದ ಕಟೀಲ್ ಬೇರೆ ಬೇರೆ ರೀತಿಯ ಹೋರಾಟಗಾರರು ಬೇರೆ ಹೋರಾಟ ಮಾಡಬಹುದು ಎನ್ನುವ ಮೂಲಕ ಸೌಜನ್ಯ ಪ್ರಕರಣದ ಹೋರಾಟಗಾರ ಬಗ್ಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ23 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು22 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ22 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ18 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ23 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















