ದಕ್ಷಿಣ ಕನ್ನಡ
Job Interview : ಆ.16 ರಂದು ಪುತ್ತೂರು ಸುಳ್ಯದಲ್ಲಿ ವಿವಿಧ ಉದ್ಯೋಗಾವಕಾಶಗಳಿಗೆ ನೇರ ಸಂದರ್ಶನ
ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ (Vidyamata Acadamy) ಅ. 16 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಆಸಕ್ತರು ಬಯೋಡೇಟಾ , ಆಧಾರ್, ಪಾಸ್ಪೋರ್ಟ್ ಸೈಜ್ ಫೋಟೋ ದೊಂದಿಗೆ ಬೆಳಗ್ಗೆ 10 ರಿಂದ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಇದು ವಿದ್ಯಾಮಾತಾ ಅಕಾಡೆಮಿಯ ಉಚಿತ ಸೇವೆಯಾಗಿರುತ್ತದೆ.

ಹುದ್ದೆಗಳ ವಿವರ:
- ಕಚೇರಿ ಸಹಾಯಕಿ : ಯಾವುದೇ ಪದವಿಯಾಗಿರಬೇಕು.
- ಕಂಪ್ಯೂಟರ್ ಶಿಕ್ಷಕಿ : B.Com / M.Com ಪದವಿಯೊಂದಿಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- PRO(Public Relation Officer): ಪುರುಷ ಯಾ ಮಹಿಳಾ ಅಭ್ಯರ್ಥಿ. ಯಾವುದೇ ಪದವಿ ಜೊತೆ ಉತ್ತಮ ವಾಕ್ಚಾತುರ್ಯ / MSW / MBA.
4 . Web Developing Trainer : ವಾರದಲ್ಲಿ 2 ದಿನ ಪಾರ್ಟ್ ಟೈಮ್ ಮಾಡಲು ಇಚ್ಚಿಸುವವರಿಗೆ.ಉತ್ತಮ HTML, CSS, Javascript ಜ್ಞಾನ ಹೊಂದಿರತಕ್ಕದ್ದು.Web Development ನಲ್ಲಿ ಉತ್ತಮ ಅನುಭವವಿದ್ದು ವಾರಾಂತ್ಯದಲ್ಲಿ ಪಾರ್ಟ್ ಟೈಮ್ ಉದ್ಯೋಗ ಮಾಡಲಿಚ್ಛಿಸುವವರಿಗಾಗಿ.

- Accountant : B.Com / M.Com
- ಕಂಪ್ಯೂಟರ್ ಜ್ಞಾನದ ಜೊತೆಗೆ GST Tally ಜ್ಞಾನ ಹೊಂದಿರತಕ್ಕದ್ದು.
- Business Development Officer (BDO) : ಯಾವುದೇ ಪದವಿ
ಸಂದರ್ಶನ ವಿಳಾಸ :
ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎಪಿಯಂಸಿ ರಸ್ತೆ, (ಸಿಟಿ ಆಸ್ಪತ್ರೆ ಹತ್ತಿರ) ಪುತ್ತೂರು ದ.ಕ 574201.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?




















