Connect with us

ದಕ್ಷಿಣ ಕನ್ನಡ

ಕೈ ಹಿಡಿದ ಪುಷ್ಪ..! ಕೋಡಿಂಬಾಡಿಯಲ್ಲಿ ಅಪರೇಷನ್‌ ಹಸ್ತ- ಬಿಜೆಪಿ ತಂತ್ರ ಅಸ್ತವ್ಯಸ್ತ ; ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿಗೆ ಅನೀರಿಕ್ಷಿತ ಸೋಲು ಉಂಟಾಗಿದ್ದು, ಆ ಬಳಿಕ ಪಕ್ಷ ನಿಧಾನವಾಗಿ ಕ್ಷೇತ್ರದಲ್ಲಿ ತನ್ನ ಹಿಡಿತವನ್ನು ಕಳಕೊಳ್ಳುತ್ತಿರುವಂತೆ ಗೋಚರಿಸುತ್ತಿದೆ. ಮೊದಲಿಗೆ ನಡೆದ ಎರಡು ಗ್ರಾ.ಪಂ ಚುನಾವಣೆಯಲ್ಲಿ ತನ್ನ ಹಿಡಿತಲ್ಲಿದ್ದ ಎರಡು ವಾರ್ಡ್‌ ನ್ನು ಕಳೆದುಕೊಂಡಿತ್ತು ಮಾತ್ರವಲ್ಲದೇ ಇತಿಹಾಸದಲ್ಲೆ ಮೊದಲ ಬಾರಿಗೆ 3 ನೇ ಸ್ಥಾನಕ್ಕೂ ಕುಸಿಯಿತು.

Ad Widget

Ad Widget

Ad Widget

Ad Widget

ಆದಾದ ಬಳಿಕ ಇದೀಗ ನಡೆಯುತ್ತಿರುವ ಗ್ರಾ. ಪಂನ ಎರಡನೇ ಅವಧಿಯ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಯಲ್ಲೂ ಹಿನ್ನಡೆ ಅನುಭವಿಸುತ್ತಿದೆ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಬಹುಮತದಲ್ಲಿ ಚುನಾಯಿತರಾಗಿದ್ದ ಗ್ರಾ. ಪಂ ನಲ್ಲೂ ಅದು ಅಡ್ಡಮತದಾನದ ಪರಿಣಾಮ ಅಘಾತ ಅನುಭವಿಸುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೊದಲು ಕೆದಿಲ ಗ್ರಾ.ಪಂ ಚುನಾವಣೆಯಲ್ಲಿ ಅಪರೇಷನ್‌ ಹಸ್ತದಿಂದ ಸೋಲು ಅನುಭವಿಸಿದರೇ ಬಳಿಕ ಉಪ್ಪಿನಂಗಡಿ ಗ್ರಾ. ಪಂನಲ್ಲೂ ಸೋಲುಂಡಿತ್ತು. ಇದೀಗ ಆ 16 ಬುಧವಾರದಂದು ನಡೆದ ಕೋಡಿಂಬಾಡಿ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲೂ ಸೋಲುಂಡಿತ್ತು. ಕಳೆದ ಬಾರಿ ಇಲ್ಲಿ ಬಿಜೆಪಿ ಬೆಂಬಲಿತರು ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Ad Widget

Ad Widget <> Ad Widget

ಇಂದು ನಡೆದ ಚುನಾವಣೆಯಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಅಶೋಕ್, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆಯಾಗಿದ್ದಾರೆ. ಇದು ಪುತ್ತೂರು ಕಾಂಗ್ರೆಸ್‌ ಶಾಸಕ ಅಶೋಕ್‌ ರೈಯವರ ತವರು ಪಂಚಾಯತ್‌ ಆಗಿರುವುದರಿಂದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಜಿದ್ದಾಜಿದ್ದಿನ ಕಣವಾಗಿ ಬದಲಾಗಿತ್ತು. ಕೊನೆ ಕ್ಷಣದಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆರೊಬ್ಬರು ಬಿಜೆಪಿ ಬೆಂಬಲಿತ ಅಧ್ಯಕ್ಷ ಉಪಾಧ್ಯಕ್ಷ ಅಭ್ಯರ್ಥಿಗೆ ಮತ ಚಲಾಯಿಸಿದ್ದು ಫಲಿತಾಂಶ ಅದಲು ಬದಲಾಗುವ ಹಾಗೇ ಮಾಡಿತ್ತು.



Ad Widget

ಕೋಡಿಂಬಾಡಿ ಗ್ರಾಮ ಪಂಚಾಯಿತಿ ಒಟ್ಟು 11 ಮಂದಿ ಸದಸ್ಯ ಬಲವನ್ನು ಹೊಂದಿದೆ. 6 ಬಿಜೆಪಿ ಮತ್ತು 5 ಕಾಂಗ್ರೆಸ್ ಬೆಂಬಲಿತರು ಜಯವನ್ನು ಗಳಿಸಿದ್ದರು. ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯೋರ್ವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಮತ ಚಲಾವಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.

Ad Widget

Ad Widget

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಉಷಾ ಲಕ್ಷ್ಮಣ ಪೂಜಾರಿ ಹಾಗು ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಎ ಪೂಜಾರಿ ಕಾಂತಳಿಕೆ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಯಪ್ರಕಾಶ್ ಬದಿನಾರು ಮತ್ತು ಬಿಜಿಪಿ ಬೆಂಬಲಿತ ಅಭ್ಯರ್ಥಿಯಾಗಿ ನಿಕಟಪೂರ್ವ ಅಧ್ಯಕ್ಷರಾದ ರಾಮಚಂದ್ರ ಪೂಜಾರಿ ಶಾಂತಿನಗರ ಸ್ಪರ್ಧಿಸಿದರು.
ಮಲ್ಲಿಕಾ ಎ ಪೂಜಾರಿ ಹಾಗೂ ಜಯಪ್ರಕಾಶ್ ಬದಿನಾರು ತಲಾ 6 ಮತಗಳನ್ನು ಪಡೆಯುವ ಮೂಲಕ ವಿಜಯಿಯಾದರು. ಉಷಾ ಲಕ್ಷ್ಮಣ ಪೂಜಾರಿ ಹಾಗು ರಾಮಚಂದ್ರ ಪೂಜಾರಿಯವರಿಗೆ ತಲಾ 5 ಮತಗಳು ಬಿದ್ದವು.

ಸೋಲು ಹೇಗಾಯಿತು ?

ಬೆಳ್ಳಿಪ್ಪಾಡಿ 1ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಪುಷ್ಪ ಲೋಕಯ್ಯ ನಾಯ್ಕ ಕೊಡಿಮರ ಅವರು ಕಾಂಗ್ರೆಸ್ ಬೆಂಬಲಿತರಾಗಿ ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದರೆಂದು ಹೇಳಲಾಗುತ್ತಿದೆ. ಹೀಗಾಗಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಬೆಂಬಲಿತರು ಅಧಿಕಾರ ಕಳೆದು ಕೂಳ್ಳುವಂತಾಯಿತು ಎಂಬ ಮಾತುಗಳು ಕೇಳಿ ಬರುತ್ತಿದೆ. ಚುನಾವಣೆಯ ಬಳಿಕ ಪುಷ್ಪ ಲೋಕಯ್ಯ ನಾಯ್ಕರವರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜತೆ ಫೋಟೊ ಕೂಡ ತೆಗೆಸಿಕೊಂಡರು. ಅಲ್ಲದೇ ಮತದಾನಕ್ಕೂ ಅವರು ಕಾಂಗ್ರೆಸ್‌ ಸದಸ್ಯರ ಜತೆ ಮತದಾನಕ್ಕೆ ಕೆಲವೇ ಸಮಯ ಬಾಕಿ ಇರುವಾಗ ಆಗಮಿಸಿದ್ದರು.

ಬಿಜೆಪಿ ತಂತ್ರ

ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಯನ್ನು ಶತಾಯಗತಾಯ ಗೆಲ್ಲಲೇ ಬೇಕೇಂದು ತಂತ್ರ ರೂಪಿಸಿದ್ದ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ “ಬ್ಯಾಟ್‌” ಪರ ಪ್ರಚಾರ ನಡೆಸುವ ಮೂಲಕ ಬಿಜೆಪಿ ವಿರುದ್ದ ಸಿಡಿದು ನಿಂತಿದ್ದರು ಎನ್ನಲಾದ ಉಷಾ ಲಕ್ಷ್ಮಣ ಪೂಜಾರಿ ಯವರನ್ನು ಕಣಕ್ಕಿಳಿಸಿತ್ತು. ಆದರೂ ಕೊನೆ ಕ್ಷಣದಲ್ಲಿ ಅವರ ಇನ್ನೊಬ್ಬ ಸದಸ್ಯೆ ಕೈ ಕೊಟ್ಟ ಕಾರಣ ಸೋಲು ಅನುಭವಿಸಿತ್ತು.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading