ದೇಶವನ್ನು […]" />  ದೇಶವನ್ನು […]"> ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಆಹಿಂಸೆಯ ಹೋರಾಟದಿಂದಲ್ಲ – ಸಾವರ್ಕರ್‌ಗೆ ಜಯ ಘೋಷ ವಿರೋಧಿಸಿರುವುದು ಖಂಡನೀಯ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ - Nikhara News | Kannada News Website
Connect with us

ಮಂಗಳೂರು

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಆಹಿಂಸೆಯ ಹೋರಾಟದಿಂದಲ್ಲ – ಸಾವರ್ಕರ್‌ಗೆ ಜಯ ಘೋಷ ವಿರೋಧಿಸಿರುವುದು ಖಂಡನೀಯ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌

Published

on

Ad Widget

Ad Widget

Ad Widget

Ad Widget

ಪುತ್ತೂರು: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಆಹಿಂಸೆಯ ಹೋರಾಟದಿಂದಲ್ಲ. ವೀರ್‌ ಸಾವರ್ಕರ್‌, ಭಗತ್‌ ಸಿಂಗ್‌ ಮುಂತಾದ ಕ್ರಾಂತಿ ವೀರರ ಹೋರಾಟದಿಂದ . ಕೇವಲ ಆಹಿಂಸೆಯ ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು ಎಂಬ ಸುಳ್ಳು ಇತಿಹಾಸ  ಬೋಧಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡಬಿದಿರೆ ಹೇಳಿದರು.

Ad Widget

Ad Widget

Ad Widget

Ad Widget

ಅವರು ಶುಕ್ರವಾರ ಪುತ್ತೂರು ಟೌನ್ ಬ್ಯಾಂಕ್ ನಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ತಿರಂಗ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

 ದೇಶವನ್ನು 6 ದಶಕಗಳಿಂದ ಆಳಿದ ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳು ಬ್ರಿಟೀಷ್ ಚಿಂತನೆಯನ್ನು ಮುಂದುವರಿಸಿತ್ತು.  . ಆದರೆ  ಅಧ್ಯಾತ್ಮಿಕ ಚಿಂತನೆಗಳ ಮೂಲಕ ಜಗತ್ತಿಗೆ ಹಲವು ಮಜಲುಗಳನ್ನು ನೀಡಿದ ಭಾರತ ಇದರಿಂದಾಗಿ ಹಿಂದೆ ಉಳಿಯಿತು. ಆದರೆ ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ  ಭಾರತ ಬೆಳಗುತ್ತಿದೆ.  ಪೆಟ್ರೋಲ್, ಡ್ರಗ್, ವೆಫನ್ ಸೇರಿ ಮೂರು ಮಾಫಿಯಾಗಳು ಜಗತ್ತಿನ್ನು ಆಳುತ್ತಿದ್ದು, ಇದನ್ನು ಮೋದಿ ನೇತೃತ್ವದ ಸರ್ಕಾರ ದಿಟ್ಟತನದಿಂದ ಎದುರಿಸಿ ನಿಂತಿದೆ ಎಂದರು.

Ad Widget

Ad Widget <> Ad Widget

 ರಾಷ್ಟ್ರೀಯ ವಿಚಾರ ಧಾರೆಯನ್ನು ಬಿಟ್ಟು ರಾಜಕೀಯ ಮಾಡಿದವರು ನೆಲಕಚ್ಚಿದ್ದಾರೆ. ಸಾವಿರಾರು ಜನರ ಕ್ರಾಂತಿಕಾರಿ ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದೆ. ಭೂಮಿಯನ್ನು ಮಾತೃಸ್ವರೂಪಿಯನ್ನಾಗಿ ನೋಡುವ ದೇಶ ಬೇರಿಲ್ಲ. ಸಾವಿರಾರು ವರ್ಷ ದಾಳಿಗಳು ನಡೆದರೂ, ದೇಶದ ಸಂಪತ್ತು ನಾಶವಾಗಿಲ್ಲ ಮತ್ತು ಸಂಸ್ಕೃತಿ ಜೀವಂತವಾಗಿ ಉಳಿದಿದೆ. ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಭಾರತದಿಂದ ಉತ್ತರವನ್ನು ನಿರೀಕ್ಷೆ ಮಾಡುವ ರೀತಿಯಲ್ಲಿ ಬೆಳೆದು ನಿಂತಿದೆ ಎಂದು ತಿಳಿಸಿದರು.

ಜಯ ಘೋಷ ವಿರೋಧಿಸಿರುವುದು ಖಂಡನೀಯ!

Ad Widget

Ad Widget

ಸಮಾಜದ ಸಾಮರಸ್ಯ ಹಾಳು ಮಾಡುವ ನಿಟ್ಟಿನಲ್ಲಿ ಬೇರೆ ಬೇರೆ ಶಕ್ತಿಗಳು ಕೆಲಸವನ್ನು ಮಾಡುತ್ತಿವೆ. ವಿಟ್ಲದ ಶಾಲೆಯೊಂದರಲ್ಲಿ  ವಿದ್ಯಾರ್ಥಿಗಳು ಸಾವರ್ಕರಿಗೆ ಜೈಕಾರ ಹಾಕಿದನ್ನು  ಮತಾಂಧ ವ್ಯಕ್ತಿಗಳು ವಿರೋಧಿಸಿದ್ದು ಕೇಳಿ ಬಂದಿದೆ. ಮತಾಂಧ ಶಕ್ತಿಗಳ ಈ ಕೃತ್ಯವನ್ನು  ಖಂಡಿಸುತ್ತೇನೆ. ಸ್ವಾತಂತ್ರ್ಯ ವೀರನಿಗೆ ಜಯಘೋಷ ಹಾಕಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಸುದರ್ಶನ್‌ ಹೇಳಿದರು

ಅಮರ್ ಜವಾನ್ ಜ್ಯೋತಿ ಬಳಿಯಿಂದ ತಿರಂಗ ಹಿಡಿದು ಟೌನ್ ಬ್ಯಾಂಕ್ ವರೆಗೆ ಮೆರವಣಿಗೆ ಮೆರವಣಿಗೆ ನಡೆಯಿತು. ಸೇನಾ ಕರ್ತವ್ಯದಲ್ಲಿರುವ ಸೂರಜ್ ಹಾಗೂ ಸೇನಾ ಸೇವೆಯಿಂದ ನಿವೃತ್ತರಾದ ಬಿ. ನವೀನ್ ರೈ ಅವರನ್ನು ಸನ್ಮಾನಿಸಲಾಯಿತು.ಮಂಗಳೂರು ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಉಪಾಧ್ಯಕ್ಷ ಬುಡಿಯಾರು ರಾಧಾಕೃಷ್ಣ ರೈ, ಬಿಜೆಪಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು.

ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ಸ್ವಾಗತಿಸಿದರು. ಯುವರಾಜ್ ಪೆರಿಯತ್ತೋಡಿ ವಂದಿಸಿದರು. ನಿತೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ನಿಧನ ವಾರ್ತೆ

Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು

Published

on

Ad Widget

Ad Widget

Ad Widget

Ad Widget

ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.

Ad Widget

Ad Widget

Ad Widget

Ad Widget

ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.

Ad Widget

Ad Widget <> Ad Widget

ನ.25ರಂದು ಸಂಜೆ ಸುಮಾರು 4.15ರ ವೇಳೆಗೆ ಶಾಲೆ ಮುಗಿದ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದಲ್ಲಿರುವ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ತೆರಳಲು ನಿಂತಿದ್ದ ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಏಕಾಏಕಿ ಬಸ್ಸನ್ನು ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ ಎನ್ನಲಾಗಿದೆ.

ಬಸ್ಸಿನ ಬಲಭಾಗ ಬಾಲಕನಿಗೆ ಡಿಕ್ಕಿಯಾದ ಪರಿಣಾಮ ಆತ ರಸ್ತೆಗೆ ಎಸೆಯಲ್ಪಟ್ಟಿದ್ದು, ಬಸ್ಸಿನ ಬಲ ಹಿಂಬದಿಯ ಚಕ್ರ ಬಾಲಕನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.50ರ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ.

Ad Widget

Ad Widget

ಬಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಪುತ್ರನ ಸಾವಿಗೆ ಕಾರಣವಾಗಿದ್ದು, ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕನ ತಾಯಿ ಲಕ್ಷ್ಮೀ ಕಲಹಾಲ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Ad Widget
Continue Reading

ಮಂಗಳೂರು

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget alt="Ad Widget"/>

Ad Widget

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.

Ad Widget

Ad Widget <> Ad Widget

ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

Ad Widget

Ad Widget

ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.

ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.

ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ

ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.

ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು

ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.

ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.

ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.

Ad Widget
Continue Reading

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!