ಬಿಗ್ ನ್ಯೂಸ್
Ration Rice Scandal : ಬಂಟ್ವಾಳದ ಗೋದಾಮಿನಲ್ಲಿ ಗೋಲ್ ಮಾಲ್ : ಕೋಟ್ಯಾಂತರ ರೂ. ಮೌಲ್ಯದ, ಸಾವಿರಾರು ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆ – ಮೇಲ್ವಿಚಾರಕ ಪೊಲೀಸ್ ವಶ – ಡಿಸಿ, ಎಸ್ಪಿ ದೌಡು
ಕೆಎಫ್ಸಿಎಸ್ಸಿಯ ಅಧಿಕಾರಿ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ ಇದು ಒಂದು ತಿಂಗಳ ಅಂತರದಲ್ಲಿ ನಡೆದಿರುವ ಕೃತ್ಯವಾಗಿದ್ದು, ಬರೀ ಒಂದು ತಿಂಗಳಲ್ಲಿ ಕೇವಲ ನಿಗಮದ ಕಿರಿಯ ಸಹಾಯಕನಿಂದ ಇಷ್ಟೊಂದು ದೊಡ್ಡ ಪ್ರಮಾಣದ ಅವ್ಯವಹಾರ ಹೇಗೆ ಸಾಧ್ಯವಾಯಿತು, ಇದರ ಹಿಂದೆ ಯಾರಿದ್ದಾರೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
Ration Rice Scandal at Bantwala : ಆಹಾರ ನಿಗಮದಿಂದ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಬಂಟ್ವಾಳ ತಾಲೂಕಿಗೆ ಕಳುಹಿಸಲಾದ ಅಕ್ಕಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸಾವಿರಾರು ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಅವ್ಯವಹಾರ ನಡೆದ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿರೋಡಿನ ತಲಪಾಡಿಯಲ್ಲಿರುವ ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೈ ಜಿಲ್ಲಾ ಎಸ್.ಪಿ. ಸಿ.ಬಿ.ರಿಷ್ಯಂತ್ ದೌಡಾಯಿಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.
ಬಂಟ್ಬಾಳ ತಾಲೂಕಿನ ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಡಿಪೋದ ಮುಂಭಾಗದಲ್ಲಿರುವ ಗೋದಾಮಿನಲ್ಲಿ ದಾಸ್ತಾನು ಇಡಲಾಗಿದ್ದ ಅಕ್ಕಿಯ ಲೆಕ್ಕಾಚಾರದಲ್ಲಿ ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892 ಕ್ವಿಂಟಾಲ್ ಅಕ್ಕಿಯ ಕೊರತೆ ಕಾಣಿಸಿದೆ. ಈ ಕುರಿತು ಪರಿಶೀಲನೆ ನಡೆಸಿದ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮದ ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೊಂಡಾ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಅವ್ಯವಹಾರ ನಡೆದಿರುವುದಾಗಿ ದೂರು ನೀಡಿದ್ದಾರೆ.
ನಿಗಮದ ಮಾಹಿತಿಯಂತೆ ಫಿಸ್ಟ್ ತಂತ್ರಾಂಶದ ಪ್ರಕಾರ ಸಗಟು ಮಳಿಗೆಯಲ್ಲಿ 4,888.95 ಕ್ವಿಂಟಾಲ್ ಅಕ್ಕಿ ಹಾಗೂ 16.55 ಕ್ವಿಂ. ಗೋಧಿ ದಾಸ್ತಾನು ಇರಬೇಕಿದ್ದು, ಆದರೆ ಪರಿಶೀಲನೆಯ ವೇಳೆ ಕೇವಲ 996 (1,992 ಚೀಲಗಳು) ಕ್ವಿಂ. ಅಕ್ಕಿ ಸಂಗ್ರಹ ಕಂಡುಬಂದಿದೆ. ಆದರೆ ಗೋಧಿ ಮಾತ್ರ ನಿಗದಿಗಿಂತಲೂ ಹೆಚ್ಚಿದ್ದು, 17.5 ಕ್ವಿಂ.(35 ಚೀಲಗಳು) ಪತ್ತೆಯಾಗಿದೆ. ಪ್ರಸ್ತುತ ಅಕ್ಕಿಯ ಸಂಗ್ರಹದಲ್ಲೇ ದೊಡ್ಡ ಮಟ್ಟದ ಅವ್ಯವಹಾರ ಕಂಡಿದ್ದು, 1,32,36,030 ರೂ.ಗಳ ಬರೋಬ್ಬರಿ 3,892.95 ಕ್ವಿಂ. ಅಕ್ಕಿ ದಾಸ್ತಾನು ಕೊರತೆ ಕಂಡುಬಂದಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಕೊರತೆ ಕಂಡು ಬಂದಿರುವ ಸತ್ಯಾಸತ್ಯತೆ ಏನು ಎಂಬುದು ತನಿಖೆಯ ಬಳಿಕಷ್ಟೇ ತಿಳಿದುಬರಬೇಕಿದೆ. ಪ್ರತಿ ಕ್ವಿಂಟಾಲ್ಗೆ ಎಫ್ಸಿಐ ನಿಗದಿ ಪಡಿಸಿರುವ 3,400 ರೂ.ನಂತೆ ಕೊರತೆಯಾಗಿರುವ ಅಕ್ಕಿಯ ಮೌಲ್ಯವನ್ನು ಗುರುತಿಸಲಾಗಿದೆ.
ಇದನ್ನೂ ಓದಿ : 24 GB RAM, 1TB ಸ್ಟೋರೆಜ್ ಸಾಮರ್ಥ್ಯದ OnePlus Acer 2 Pro ಸ್ಮಾರ್ಟ್ ಫೋನ್ ಕೈಗೆಟಕುವ ಬೆಲೆಯಲ್ಲಿ
ಕಿರಿಯ ಸಹಾಯಕ ವಶ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮು ಮೇಲ್ವಿಚಾರಕ ವಿಜಯ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಶಕ್ಕೆ ಪಡೆದಿದ್ದಾರೆ. ಉಳಿದಂತೆ ವಿಜಯ್ ನೀಡಿದ ಮಾಹಿತಿ ಆಧರಿಸಿ ಈ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸುವ ಬಗ್ಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ತಿಂಗಳ ಅಂತರದಲ್ಲಿ ಕೃತ್ಯ
ಕೆಎಫ್ಸಿಎಸ್ಸಿಯ ಅಧಿಕಾರಿ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ ಇದು ಒಂದು ತಿಂಗಳ ಅಂತರದಲ್ಲಿ ನಡೆದಿರುವ ಕೃತ್ಯವಾಗಿದ್ದು, ಬರೀ ಒಂದು ತಿಂಗಳಲ್ಲಿ ಕೇವಲ ನಿಗಮದ ಕಿರಿಯ ಸಹಾಯಕನಿಂದ ಇಷ್ಟೊಂದು ದೊಡ್ಡ ಪ್ರಮಾಣದ ಅವ್ಯವಹಾರ ಹೇಗೆ ಸಾಧ್ಯವಾಯಿತು, ಇದರ ಹಿಂದೆ ಯಾರಿದ್ದಾರೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ದೂರಿನಲ್ಲಿ ಹೇಳುವಂತೆ ಜುಲೈ 4ರಂದು ತಂತ್ರಾಂಶದ ಪ್ರಕಾರ ಅಕ್ಕಿಯ ದಾಸ್ತಾನನ್ನು ಪರಿಶೀಲಿಸಿದಾಗ ಸರಿಯಾಗಿಯೇ ಇದ್ದು, ಆದರೆ ದೂರುಗಳು ಕೇಳಿ ಬಂದ ಬಳಿಕ ಅಧಿಕಾರಿಗಳು ಆ. 17ರಂದು ಗೋದಾಮಿಗೆ ಬಂದು ಪರಿಶೀಲಿಸಿದಾಗ ಅಕ್ಕಿಯ ದಾಸ್ತಾನಿನಲ್ಲಿ ಕೊರತೆ ಮತ್ತು ಅವ್ಯವಹಾರದ ನಿಜಾಂಶ ಬೆಳಕಿಗೆ ಬಂದಿದೆ. ಬಡವರಿಗೆ ವಿತರಿಸಲು ಸರಕಾರ ಉಚಿತವಾಗಿ ನೀಡುವ ಅಕ್ಕಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿರುವುದು ಸಾರ್ವಜನಿಕವಲಯದಲ್ಲಿ ಆಕ್ರೋಶ ಉಂಟು ಮಾಡಿದೆ.
ಕೆ.ಎಸ್.ಎಫ್.ಸಿ.ಅಧಿಕಾರಿಗಳಿಂದ ತನಿಖೆ
ಸ್ಥಳಕ್ಕೆ ದೌಡಾಯಿಸಿದ ಡಿಸಿಯವರು ” ಇಲ್ಲಿನ ಗೊಡೌನ್ ನಲ್ಲಿ ಇರಿಸಲಾದ ಅಕ್ಕಿಯಲ್ಲಿ ವ್ಯತ್ಯಾಸವಿದೆ ಎಂಬ ಅನುಮಾನದ ಮೇರೆಗೆ ಆಹಾರ ನಿರೀಕ್ಷಕರು ತನಿಖೆ ನಡೆಸಿದ್ದಾರೆ. ಈ ವೇಳೆ ದಾಸ್ತಾನಿರುವ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕೆ.ಎಸ್.ಎಫ್.ಸಿ. ಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಕೆ.ಎಸ್.ಎಫ್.ಸಿ. ಮೇಲಾಧಿಕಾರಿಗಳ ಸೂಚನೆಯಂತೆ ನಿಗಮದ ಜಿಲ್ಲಾ ಅಧಿಕಾರಿ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ ಎಂದರು
ದಾಸ್ತಾನು ಕೊಠಡಿಯಲ್ಲಿ ಯಾಕೆ ಈ ತರಹದ ವ್ಯತ್ಯಾಸ ಆಗಿದೆ ಎಂಬುದರ ಮೇಲೆ ಇಲ್ಲಿನ ಗೋಡೌನ್ ಮೇಲ್ವಿಚಾರಕನ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ಈ ಪ್ರಕರಣ ಕಂಡು ಬಂದಿರುವ ಎಸ್.ಪಿ ಜೊತೆ ಸ್ಥಳಕ್ಕೆ ಬೇಟಿ ನೀಡಿದ್ದೇನೆ. ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದೇನೆ. ಯಾವ ರೀತಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂಬುದರ ಬಗ್ಗೆ ಸೂಕ್ತವಾದ ತನಿಖೆ ನಡೆಸಿದ ಬಳಿಕ ಸಂಪೂರ್ಣವಾದ ಚಿತ್ರಣ ಕಂಡು ಬರಬಹುದು. ಬಹಳ ದಿನಗಳ ಸಮಸ್ಯೆಗಳು ಇರಬಹುದು . ಕೆ.ಎಸ್.ಎಫ್.ಸಿ.ಯ ರಾಜ್ಯಮಟ್ಟದಲ್ಲಿ ರುವ ಅಧಿಕಾರಿಗಳನ್ನು ಸ್ಥಳಕ್ಕೆ ಬೇಟಿ ನೀಡಲು ಸೂಚಿಸಿದ್ದೇನೆ. ಅವರು ಬಂದು ನೋಡಿ ವರದಿ ನೀಡುತ್ತಾರೆ ಎಂದವರು ತಿಳಿಸಿದರು.

ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಎಸ್.ಬಿ.ಕೂಡಲಗಿ, ಉಪತಹಶೀಲ್ದಾರ್ ನವೀನ್ ಬೆಂಜನಪದವು, ಪಿಎಸ್ಐಗಳಾದ ರಾಮಕೃಷ್ಣ, ಕಲೈಮಾರ್, ಕೆಎಫ್ಸಿಎಸ್ಸಿ ಅಧಿ ಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗೆ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಪತ್ರ!
ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ವಿತರಣೆಯಾದ ಅಕ್ಕಿ ಅವ್ಯವಹಾರವಾಗಿರುವ ಬಗ್ಗೆ ಸಾರ್ವಜನಿಕ ದೂರುಗಳು ಕೇಳಿ ಬಂದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ.
ಸಂಬಂದಪಟ್ಟ ಬಂಟ್ವಾಳ ತಾಲೂಕಿನ ಪಡಿತರದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಸರಬರಾಜಾದ ಪಡಿತರ ಅಕ್ಕಿಯು ಗೋದಾಮಿನಲ್ಲಿ ದುರುಪಯೋಗ ನಡೆದು ಅವ್ಯವಹಾರ ಆಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಗುಮಾನಿ ಇದೆ. ಈ ಕುರಿತು ನನಗೆ ದೂರುಗಳು ಬಂದಿರುತ್ತವೆ. ಆದುದರಿಂದ ತಾವು ತಕ್ಷಣ ಈ ಕುರಿತು ವೈಯಕ್ತಿಕ ಗಮನ ಹರಿಸಿ ಅಕ್ಕಿ ದಾಸ್ತಾನು ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಿಗ್ ನ್ಯೂಸ್
Virupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.
ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.
ಪುತ್ತೂರು ವಾರ್ತಾಭವನದಲ್ಲಿ ನ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. ಸಮರ್ಪಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ನಡೆಸಿರುವುದು, ಹಣಕಾಸಿನ ನಿರ್ವಹಣೆಯಲ್ಲಿ ಲೋಪದೋಷಗಳು ಹಾಗೂ ದೇವಸ್ಥಾನದ ದೈನಂದಿನ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.
ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ವಿಚಾರವಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್ ಮತ್ತು ದಿನೇಶ್ ಜೈನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 32628/2026ರಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯವು ನ.23ರಂದು ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅವರು ವಿವರಿಸಿದರು.
ಅಭಿವೃದ್ಧಿ ಸಮಿತಿ ರಚನೆ ಬಗ್ಗೆಯೂ ಆಕ್ಷೇಪ
ದೇವಸ್ಥಾನದಲ್ಲಿ ರಚಿಸಲಾಗಿರುವ ಅಭಿವೃದ್ಧಿ ಸಮಿತಿಯ ರಚನೆಯೇ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಿಗೆ ಅನುಗುಣವಾಗಿಲ್ಲ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆಯದ ಜೀರ್ಣೋದ್ಧಾರ ಅಥವಾ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹಿಸುವುದು, ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಅನಧಿಕೃತ ಸಭೆಗಳನ್ನು ನಡೆಸುವುದು ನಿಯಮಬಾಹಿರವಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು.
ಅನುಮೋದನೆ ಪಡೆಯದ ಸಮಿತಿಯ ಹೆಸರಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದು ಮತ್ತು ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಗಳನ್ನು ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಯ ಅಧಿಕೃತ ಅನುಮೋದನೆ ಹಾಗೂ ನಿಗದಿತ ಪ್ರಕ್ರಿಯೆಗಳನ್ನು ಪಾಲಿಸದೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿದರು.
ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಆಕ್ಷೇಪ
ದೇವಸ್ಥಾನದ ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರ ಬಗ್ಗೆಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು, ತಡೆಯಾಜ್ಞೆಗಳಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.
ಐದು ಕಟ್ಟೆಗಳ ತೆರವು, ನೂತನ ಶಿಲಾಮಯ ಕಟ್ಟಡ ನಿರ್ಮಾಣ
ದೇವಸ್ಥಾನದ ಹೊರಾಂಗಣದಲ್ಲಿದ್ದ ಐದು ಹಳೆಯ ಕಟ್ಟೆಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ನೂತನ ಶಿಲಾಮಯ ಕಟ್ಟಡ ನಿರ್ಮಿಸಲಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಸರಕಾರದ ನಿಯಮಾವಳಿಗಳನ್ನು ಪಾಲಿಸದೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ದೂರಿದರು.
ಇದಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ನವಗ್ರಹ ಗುಡಿ, ಅಯ್ಯಪ್ಪ ಸನ್ನಿಧಿ ಹಾಗೂ ನಟರಾಜ ವೇದಿಕೆ ಸಭಾಂಗಣವನ್ನು ತೆರವುಗೊಳಿಸುವ ಸಂದರ್ಭದಲ್ಲಿಯೂ ಸರಕಾರದ ನಿಯಮದಂತೆ ಟೆಂಡರ್ ಪ್ರಕ್ರಿಯೆ ಮತ್ತು ಮೌಲ್ಯಮಾಪನ ನಡೆಸಿಲ್ಲ. ಅಗತ್ಯ ಇಲಾಖಾ ಅನುಮೋದನೆಯನ್ನೂ ಪಡೆದಿಲ್ಲ ಎಂದು ಅವರು ಆರೋಪಿಸಿದರು.
ಚಿನ್ನದ ಮುಖವಾಡಕ್ಕೆ ಚಿನ್ನ ಸಂಗ್ರಹ: ಸಮರ್ಪಕ ಮಾಹಿತಿ ಇಲ್ಲವೆಂಬ ಆರೋಪ
ಶ್ರೀ ದೇವರಿಗೆ ಚಿನ್ನದ ಮುಖವಾಡ ನಿರ್ಮಿಸುವ ಉದ್ದೇಶದಿಂದ ಭಕ್ತರಿಂದ ಕಾಣಿಕೆ ರೂಪದಲ್ಲಿ ಚಿನ್ನ ಸಂಗ್ರಹಿಸಲಾಗುತ್ತಿದೆ. ಆದರೆ ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಸಮರ್ಪಕ ಅನುಮತಿ ಪಡೆಯಲಾಗಿದೆಯೇ, ಆಗಮ ಪಂಡಿತರ ಅಭಿಪ್ರಾಯ ಹಾಗೂ ವರದಿ ಪಡೆಯಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಗ್ರಹಿಸಲಾದ ಚಿನ್ನದ ನಿರ್ವಹಣೆ ಮತ್ತು ಅದರ ಲೆಕ್ಕಪತ್ರಗಳ ಕುರಿತು ದೇವಸ್ಥಾನದಲ್ಲಿ ಸಮರ್ಪಕ ಮಾಹಿತಿ ಲಭ್ಯವಿಲ್ಲ ಎಂಬ ವಿಚಾರವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ದೇವಸ್ಥಾನದ ಆಡಳಿತ ಸಮಿತಿ ನೇಮಕಗೊಂಡ ಬಳಿಕ ನಿರ್ವಹಿಸಲಾದ ವಾರ್ಷಿಕ ಲೆಕ್ಕಪತ್ರಗಳಲ್ಲಿನ ಲೋಪದೋಷಗಳ ಬಗ್ಗೆಯೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ದೇವಸ್ಥಾನದ ಆಡಳಿತದಲ್ಲಿ ಇಲಾಖಾ ನಿಯಮಗಳ ಉಲ್ಲಂಘನೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧಿಕಾರ ಬಳಕೆಯಲ್ಲಿನ ಲೋಪಗಳ ಬಗ್ಗೆಯೂ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ನ್ಯಾಯಾಲಯದ ಆದೇಶ ಪಾಲನೆಗೆ ಆಗ್ರಹ
ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಪ್ರಕಾರ, ಮುಂದಿನ ವಿಚಾರಣೆಯವರೆಗೆ ಇಲಾಖೆಯ ಅನುಮತಿ ಇಲ್ಲದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈಗಾಗಲೇ ಕರೆಯಲಾಗಿರುವ ನಿಯಮಬಾಹಿರ ಟೆಂಡರ್ ಪ್ರಕ್ರಿಯೆಗಳನ್ನು ಮುಂದುವರಿಸುವಂತಿಲ್ಲ. ಅನುಮೋದನೆ ಪಡೆಯದ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಡೆಸಲು ಅಥವಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳನ್ನು ಮುಂದುವರಿಸಲು ಅವಕಾಶವಿಲ್ಲ. ಕಾಮಗಾರಿಗಳ ಹೆಸರನ್ನು ಬದಲಾಯಿಸಿ ಆದೇಶದ ವ್ಯಾಪ್ತಿಯಿಂದ ಹೊರಬಂದು ಮುಂದುವರಿಸುವ ಪ್ರಯತ್ನವೂ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶದ ಆಶಯವಾಗಿದೆ ಎಂದು ವಿರೂಪಾಕ್ಷ ಭಟ್ ತಿಳಿಸಿದರು.
ನ್ಯಾಯಾಲಯದ ಆದೇಶವನ್ನು ಪ್ರತಿವಾದಿಗಳು ಗೌರವಿಸಬೇಕು. ಆದೇಶದ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ, ಮುಂದಿನ ದಿನಗಳಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಕಾನೂನುಬದ್ಧ ಅನುಮೋದನೆ ಮತ್ತು ಪಾರದರ್ಶಕ ಟೆಂಡರ್ ಪ್ರಕ್ರಿಯೆಯ ಮೂಲಕವೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ದೇವಸ್ಥಾನದ ಅಭಿವೃದ್ಧಿಗೆ ವಿರೋಧವಿಲ್ಲ
ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಯಾವುದೇ ವಿರೋಧವಿಲ್ಲ. ದೇವಸ್ಥಾನ ಇನ್ನಷ್ಟು ಅಭಿವೃದ್ಧಿಯಾಗಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬುದೇ ನಮ್ಮ ಆಶಯ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಇಲಾಖಾ ನಿಯಮಗಳನ್ನು ಮೀರಿ, ಕಾನೂನುಬಾಹಿರವಾಗಿ ಕಾಮಗಾರಿಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗದೆ ಪಾರದರ್ಶಕ ವ್ಯವಸ್ಥೆ ಇರಬೇಕು. ಭಕ್ತರ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ ದೇವಸ್ಥಾನದ ಆಡಳಿತ ನಡೆಯಬೇಕು. ಕಾನೂನುಬದ್ಧ ಅನುಮೋದನೆ, ನಿಯಮಾನುಸಾರ ಹಣಕಾಸಿನ ನಿರ್ವಹಣೆ ಹಾಗೂ ಪಾರದರ್ಶಕತೆಯೊಂದಿಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ಒತ್ತಾಯಿಸಿದರು.
ಅಂತರ ರಾಜ್ಯ
Chennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ತಿರುಪತಿ: ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ಚೆನ್ನೈನ ವರ್ಧಮಾನ್ ಜೈನ್ ಮತ್ತು ರಾಧಿಕಾ ಜೈನ್ ದಂಪತಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅರ್ಚಕರು ಹಾಗೂ ಪ್ರತಿನಿಧಿಗಳಿಗೆ ಈ ಅಮೂಲ್ಯ ಆಭರಣಗಳನ್ನು ಔಪಚಾರಿಕವಾಗಿ ಹಸ್ತಾಂತರಿಸಿದರು. ವಜ್ರಖಚಿತ ಚಿನ್ನಾಭರಣಗಳನ್ನು ಒಳಗೊಂಡ ಈ ಕಾಣಿಕೆ ದೇವಾಲಯದ ಇತಿಹಾಸದಲ್ಲಿನ ಗಮನಾರ್ಹ ದಾನಗಳಲ್ಲಿ ಒಂದಾಗಿದೆ.
ಸಮಾರಂಭದಲ್ಲಿ ದಂಪತಿಯ ಭಕ್ತಿಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, 206 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಶ್ರೀ ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿರುವುದು ಅಪರೂಪದ ಹಾಗೂ ಅಸಾಧಾರಣ ಭಕ್ತಿಯ ಪ್ರತೀಕವಾಗಿದೆ. ದೇವರ ಮೇಲಿನ ಅಪಾರ ಭಕ್ತಿ ಮತ್ತು ದೈವಿಕ ಪ್ರೇರಣೆಯಿಂದ ಈ ದಂಪತಿ ಇಂತಹ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ತಮ್ಮ ಸೌಭಾಗ್ಯ ಎಂದು ಹೇಳಿದರು.
ತಿರುಮಲವು ನಂಬಿಕೆ, ಭಕ್ತಿ ಹಾಗೂ ಆಧ್ಯಾತ್ಮಿಕ ಸಂತೃಪ್ತಿಯ ಸಂಕೇತವಾಗಿದ್ದು, ಶ್ರೀ ಕೃಷ್ಣದೇವರಾಯರ ಕಾಲದಿಂದ ಇಂದಿನವರೆಗೂ ಭಕ್ತರ ಕಾಣಿಕೆ ಮತ್ತು ಭಕ್ತಿಪರಂಪರೆ ನಿರಂತರವಾಗಿ ಮುಂದುವರಿದಿದೆ ಎಂದು ನಾಯ್ಡು ಹೇಳಿದರು. ಪಲ್ಲವರು, ಚೋಳರು, ಚೇರರು, ಪಾಂಡ್ಯರು ಹಾಗೂ ಮೈಸೂರು ಮತ್ತು ಮರಾಠಾ ಅರಸರು ಹಿಂದಿನ ಕಾಲದಲ್ಲಿ ದೇವಾಲಯಕ್ಕೆ ಬೆಲೆಬಾಳುವ ಆಭರಣಗಳು ಮತ್ತು ಕಾಣಿಕೆಗಳನ್ನು ಅರ್ಪಿಸಿ ಶ್ರೀಮಂತಗೊಳಿಸಿರುವುದನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಅಲಿಪಿರಿ ಬಾಂಬ್ ದಾಳಿಯಿಂದ ತಾವು ಪಾರಾದ ಘಟನೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದವೇ ತಮಗೆ ಮರುಜನ್ಮ ನೀಡಿತು ಎಂದು ಭಾವುಕರಾಗಿ ನುಡಿದರು.
ದೇವಾಲಯದ ಪಾವಿತ್ರ್ಯ ಕಾಪಾಡುವುದರ ಜೊತೆಗೆ ಗೋರಕ್ಷಣೆ, ವೈದಿಕ ಪರಂಪರೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಟಿಟಿಡಿಗೆ ಸೂಚಿಸಿದ ನಾಯ್ಡು, ‘ವೃಕೋ ಗೋವಿಂದಂ’ ಉಪಕ್ರಮಕ್ಕೆ ಉತ್ತೇಜನ ನೀಡುವುದಾಗಿ ತಿಳಿಸಿದರು. ಅಲ್ಲದೆ, ದೇವಾಲಯದ ಮೂಲಸೌಕರ್ಯ ವಿಸ್ತರಣೆ ಹಾಗೂ ಟಿಟಿಡಿ ಸಹಯೋಗದೊಂದಿಗೆ ಆಂಧ್ರಪ್ರದೇಶದಾದ್ಯಂತ 5,000 ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನೂ ಪ್ರಕಟಿಸಿದರು.
‘ಮಾನವ ಸೇವೆಯೇ ಮಾಧವ ಸೇವೆ’ ಎಂಬ ತತ್ವದಡಿ ಅನ್ನದಾನ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಉಪಕ್ರಮಗಳನ್ನು ಸರ್ಕಾರ ಮತ್ತಷ್ಟು ಬಲಪಡಿಸಲಿದೆ. ಶ್ರೀಮಂತರು ತಮ್ಮ ಸಂಪತ್ತನ್ನು ಸಮಾಜ ಕಲ್ಯಾಣ, ಆಧ್ಯಾತ್ಮಿಕ ಕಾರ್ಯಗಳು ಹಾಗೂ ಬಡವರ ಸೇವೆಗೆ ಬಳಸುವಂತೆ ಜೈನ ದಂಪತಿಯ ದಾನವನ್ನು ಮಾದರಿಯಾಗಿ ಉಲ್ಲೇಖಿಸಿ ಮುಖ್ಯಮಂತ್ರಿ ಕರೆ ನೀಡಿದರು.
-
ನಿಧನ ವಾರ್ತೆ13 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್7 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ12 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ13 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ12 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ13 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಬಿಗ್ ನ್ಯೂಸ್7 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ10 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















