ರಾಜಕೀಯ
ಮತ್ತೆ ಮೋದಿ ಪ್ರಧಾನಿಯಾಗಲು ಪಕ್ಷ ಬಿಟ್ಟವರನ್ನು ಮತ್ತೆ ಸೇರಿಸಿಕೊಳ್ಳುವ ಅಗತ್ಯವಿದೆ : ಶೋಭಾ ಕರಂದ್ಲಾಜೆ | ಈ ಪಟ್ಟಿಯಲ್ಲಿ ಪುತ್ತಿಲರು ಬರುತ್ತಾರ ? ನಾಳೆ ಪುತ್ತೂರಿನಲ್ಲಿ ಮಹತ್ವದ ಸಭೆ
ಕರಂದ್ಲಾಜೆಯವರು , ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನ ಗಳಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನೆಟ್ಟಿನಲ್ಲಿ ಪಕ್ಷ ತೊರೆದವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷವನ್ನು ಸದೃಢ ಮಾಡಬೇಕಾದ ಅಗತ್ಯವಿದೆ ಎಂದರು.
ಚಿಕ್ಕಮಗಳೂರು : ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡುವ ನಿಟ್ಟಿನಲ್ಲಿ ಪಕ್ಷ ಬಿಟ್ಟವರನ್ನು ಮತ್ತೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಶೋಭಾ ಕರಂದ್ಲಾಜೆಯವರು (Shobha karandlaje) ಚಿಕ್ಕಮಗಳೂರು ಜಿಲ್ಲೆಯಲ್ಲಿ ಆ 19 ಶನಿವಾರ ಹೇಳಿದರು.
ಕೇಂದ್ರ ಸಚಿವೆಯ ಹೇಳಿಕೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಪಾಳಯದಲ್ಲೂ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಾಧ್ಯತೆಯಿದೆ. ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಬಿಜೆಪಿ ಕಾರ್ಯಕರ್ತರು ಇಲ್ಲಿ ಎರಡು ಹೋಳುಗಳಾದ ಪರಣಾಮ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಗೆಲ್ಲುವಂತಾಗಿತ್ತು. ಸಂಘ ಪರಿವಾರದ ಸಂಘಟನೆಗಳಲ್ಲಿ ಈ ಹಿಂದೆ ಗುರುತಿಸಿಕೊಂಡಿದ್ದ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಳಿಕ ಪುತ್ತೂರು ಬಿಜೆಪಿ ಒಡೆದ ಮನೆಯಾಯಿತ್ತು. ಅದು ವಿಧಾನಸಭಾ ಚುನಾವಣೆಯ ಬಳಿಕವು ಮುಂದುವರಿದಿದ್ದು , ಗ್ರಾ. ಪಂ ಉಪ ಚುನಾವಣೆಯಲ್ಲಿ ಅದು ಸ್ಪಷ್ಟವಾಗಿ ಗೋಚರಿಸಿತ್ತು.
ಚುನಾವಣೆಯ ಬಳಿಕ ಬಿಜೆಪಿಯ ರಾಷ್ಟ್ರೀಯ ಮುಖಂಡರು, ಜಿಲ್ಲಾ ಮುಖಂಡರ ಮಧ್ಯೆ ಹಲವು ಸುತ್ತಿನ ಮಾತುಕತೆ ನಡೆದಿತ್ತಾದರೂ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಇತ್ತಂಡಗಳ ಮಧ್ಯೆ ಒಮ್ಮತ ಮೂಡದ ಕಾರಣ ಈ ಪ್ರಕ್ರಿಯೆ ನೆನೆಗುದಿಗೆ ಬಿತ್ತು ಎನ್ನಲಾಗಿದೆ. ಆದರೆ ಶನಿವಾರ ಚಿಕ್ಕಮಗಳೂರುನಲ್ಲಿ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ಮತ್ತೆ ಹೊಸ ಮಾತುಕತೆಗೆ ರಹದಾರಿಯಾಗಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಅಲ್ಲದೇ ಅರುಣ್ ಪುತ್ತಿಲರವರು ಈ ಹಿಂದೆ ಶೋಭಾ ಕರಂದ್ಲಾಜೆಯವರ ಆಪ್ತ ವಲಯದಲ್ಲಿ ಗುರುತಿಸಕೊಂಡಿದ್ದದ್ದು ಈ ಹೇಳಿಕೆಗೆ ಹೆಚ್ಚಿನ ಮಹತ್ವ ತಂದು ಕೊಟ್ಟಿದೆ. ನಾಳೆ ಪುತ್ತೂರಿನಲ್ಲಿ ಪುತ್ತಿಲ ಪರವಾರದ ಬೂತ್ ಮಟ್ಟದ ನಾಯಕರ ಸಭೆಯು ನಡೆಯಲಿದ್ದು ಈ ಹೇಳಿಕೆಯ ಬಳಿಕ ಆ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.
ಕೇಂದ್ರ ಸಚಿವೆ ಏನು ಹೇಳಿದರು ?
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಕರಂದ್ಲಾಜೆಯವರು , ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನ ಗಳಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನೆಟ್ಟಿನಲ್ಲಿ ಪಕ್ಷ ತೊರೆದವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷವನ್ನು ಸದೃಢ ಮಾಡಬೇಕಾದ ಅಗತ್ಯವಿದೆ ಎಂದರು.
ದೇಶಕ್ಕೆ ಮತ್ತು ವಿಶ್ವಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ. ವಿಶ್ವದ ಹಲವು ದೇಶಗಳು ಮೋದಿಯನ್ನು ಎದುರು ನೋಡುತ್ತೇವೆ. ಭಾರತವನ್ನು ಮತ್ತ ಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರ ಬೇಕು ಎಂದರು.
ಆ 20 ರಂದು ಪುತ್ತಿಲ ಪರಿವಾರದ ಸಭೆ:
ಏತನ್ಮಧ್ಮೆ ಪುತ್ತಿಲ ಪರಿವಾರದ ಪುತ್ತೂರು ನಗರ ಮತ್ತು ಗ್ರಾಮಾಂತರದ ಬೂತ್ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಆ.20ರಂದು ಮಧ್ಯಾಹ್ನ ಗಂಟೆ 2.30ಕ್ಕೆ ಕೋಟೆಚಾ ಹಾಲ್ ನಲ್ಲಿ ನಡೆಯಲಿದೆ.
ಪುತ್ತಿಲ ಪರಿವಾರದ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಗ್ರಾಮ ಸಮಿತಿ ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ 220 ಬೂತ್ ನ ಅಧ್ಯಕ್ಷ, ಕಾರ್ಯದರ್ಶಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ ತಿಳಿಸಿದ್ದಾರೆ. ಈ ಸಭೆಯಲ್ಲಿ ಪುತ್ತಿಲ ಬಿಜೆಪಿ ಸೇರುವ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ರಾಜಕೀಯ
2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ನಡೆಸಲಾಗಿದ್ದು, ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ.
ಎರಡು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ರಾಜ್ಯ ಸರಕಾರ ಮನವಿ ಸಲ್ಲಿಸಿತ್ತು. ರಾಜ್ಯದಲ್ಲಿ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದೆ.ಚುನಾವಣಾ ಆಯೋಗ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದ ಬಳಿಕ ಆ ಸಂಬಂಧ ಕರಡು ಅಧಿಸೂಚನೆ ಹೊರಬೀಳಲಿದೆ.
ಸಾರ್ವಜನಿಕ ಆಕ್ಷೇಪ ಪರಿಗಣಿಸಿದ ಬಳಿಕ ಡಿಸೆಂಬರ್ ಮಧ್ಯದಲ್ಲಿ ವಾರ್ಡುವಾರು ಮೀಸಲಾತಿ ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟವಾಗಲಿದ್ದು. ಜನವರಿ ಮೊದಲ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಮುಂದಾಗಿದ್ದೇವೆ. ಈ ಚುನಾವಣೆಯ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.
ಸ್ಥಳೀಯ
UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.
ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.
ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.
ರಾಜಕೀಯ
DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗದ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.
ಪದಕ ವಿಜೇತರ ಬಹುಮಾನ ಮೊತ್ತ ಭಾರೀ ಹೆಚ್ಚಳ
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನೀಡುತ್ತಿದ್ದ ನಗದು ಬಹುಮಾನವನ್ನು ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನೀಡಲಾಗುತ್ತಿತ್ತು.
ಇನ್ನು ಮುಂದೆ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ.
ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ನೇರ ನೇಮಕಾತಿ
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಒಲಿಂಪಿಕ್ಸ್ ತಯಾರಿಗೆ ತಲಾ ₹10 ಲಕ್ಷ
ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ಪ್ರೋತ್ಸಾಹ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್. ಹಾಗೂ ಶ್ರೇಯಾಂಕಾ ಪಾಟೀಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು 2026-27ನೇ ಸಾಲಿನ ‘ಗುರಿ ಒಲಿಂಪಿಕ್ಸ್’ ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ.
ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ
ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಹಾಗೂ ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026ರಂದು ಅಧಿಸೂಚನೆ ಹೊರಡಿಸಲಾಗಿದೆ.
8 ಪದಕ ವಿಜೇತ ಕ್ರೀಡಾಪಟುಗಳು
ಶ್ರೇಯಾಂಕ ಆರ್. ಪಾಟೀಲ್ – ಮಹಿಳಾ ಕ್ರಿಕೆಟ್ ತಂಡ, ಚಿನ್ನ
ಎಂ.ಆರ್. ಪೂವಮ್ಮ – 4×400 ಮೀ. ಮಿಶ್ರ ರಿಲೇ, 4×400 ಮೀ. ಮಹಿಳಾ ರಿಲೇ – ಚಿನ್ನ ಮತ್ತು ಬೆಳ್ಳಿ
ತಿಲೋತ್ತಮಾ ಸೇನ್ – ಮಹಿಳೆಯರ 50 ಮೀ. ರೈಫಲ್, ಬೆಳ್ಳಿ
ಆಯುಷ್ ಆರ್. ಶೆಟ್ಟಿ – ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ
ಸ್ನೇಹಾ ಎಸ್.ಎಸ್. – 4×100 ಮೀ. ಮಿಶ್ರ ರಿಲೇ, ಕಂಚು
ಅದಿತಿ ಅಶೋಕ್ – ಮಹಿಳಾ ತಂಡ ಗಾಲ್ಫ್, ಬೆಳ್ಳಿ
ಪ್ರಣವಿ ಎಸ್. ಅರಸ್ – ಮಹಿಳಾ ತಂಡ ಗಾಲ್ಫ್ ಹಾಗೂ ವೈಯಕ್ತಿಕ ಸ್ಪರ್ಧೆ, ಬೆಳ್ಳಿ ಮತ್ತು ಚಿನ್ನ
ಮೋಹಿತ್ ಎಚ್.ಎಸ್. – ಪುರುಷರ ಹಾಕಿ ತಂಡ, ಚಿನ್ನ
ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು
ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಆಯುಷ್ ಶೆಟ್ಟಿ, ಶ್ರೇಯಾಂಕ ಆರ್. ಪಾಟೀಲ್, ಕೀರ್ತಿ ರಂಗಸ್ವಾಮಿ, ಫವಾದ್ ಮಿರ್ಜಾ, ಅದಿತಿ ಅಶೋಕ್, ಪ್ರಣವಿ ಎಸ್. ಅರಸ್, ಮೋಹಿತ್ ಎಚ್.ಎಸ್., ತಿಲೋತ್ತಮಾ ಸೇನ್, ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಯಶಸ್ವಿನಿ ಘೋರ್ಪಡೆ, ಸಿಂಧುಶ್ರೀ ಹಾಗೂ ದೀಪು ಮಲ್ಲೇಶ್ ಅವರು ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದಿದ್ದಾರೆ.
-
Uncategorized19 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ13 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ19 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ20 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ19 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ12 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್18 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು19 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















