Connect with us

Uncategorized

Supreem court On Social Media : ಜಾಲತಾಣದಲ್ಲಿ ಫೋಸ್ಟ್‌ ಹಾಕಿ ಬಳಿಕ ಕ್ಷಮೆಯಾಚಿಸಿ ಕೇಸ್‌ ನಿಂದ ಬಚಾವಾಗಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟು

ಸಾಮಾಜಿಕ ಮಾಧ್ಯಮಗಳನ್ನು ಬಳಸುವುದು ಅತ್ಯಗತ್ಯ ಎಂದು ಯಾರಿಗಾದರೂ ಅನಿಸಿದರೆ , ಆ ಬಳಿಕ ಅದರಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು ಕೂಡ ಬಳಕೆದಾರ ತಯರಾಗಿರಬೇಕು ಎಂದು ಸುಪ್ರೀಂ ಕೋರ್ಟು ಎಚ್ಚರಿಸಿದೆ.

Published

on

Ad Widget

Ad Widget

Ad Widget

Ad Widget

Supreem court On Social Media ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ (social media) ಅವಹೇಳನಕಾರಿ ಪೋಸ್ಟ್ (Objectionable Post) ಹಾಕುವವರಿಗೆ ಶಿಕ್ಷೆಯ ಅಗತ್ಯವಿದೆ. ಆರೋಪಿಗಳು ಕ್ಷಮೆಯಾಚಿಸಿ ಕ್ರಿಮಿನಲ್ ಮೊಕದ್ದಮೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅವರು ತಾವು ಹಾಕಿದ ಪೋಸ್ಟ್​ಗಳಿಗೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಖಡಕ್‌ ಸಂದೇಶವನ್ನು ಸುಪ್ರೀಂ ಕೋರ್ಟು (Supreem court) ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಕಲಾದ ಅಸಭ್ಯ ಮತ್ತು ಅವಹೇಳನಕಾರಿ ಪೋಸ್ಟ್ ವಿಚಾರಣೆಯ ಸಂದರ್ಭ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಪ್ರಶಾಂತ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ ನ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವಿಚಾರಣೆಯ ಸಂದರ್ಭ ನ್ಯಾಯಾಪೀಠ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಎಚ್ಚರಿಕೆ ವಹಿಸಬೇಕು .ಅದರ ಪ್ರಭಾವ ಮತ್ತು ವ್ಯಾಪ್ತಿಯ ಬಗ್ಗೆ ತಿಳಿದುಕೊಂಡು ಹೆಚ್ಚು ಜಾಗರೂಕತೆಯಿಂದ ಬಳಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಸಾಮಾಜಿಕ ಮಾಧ್ಯಮಗಳನ್ನು ಬಳಸುವುದು ಅತ್ಯಗತ್ಯ ಎಂದು ಯಾರಿಗಾದರೂ ಅನಿಸಿದರೆ , ಆ ಬಳಿಕ ಅದರಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು ಕೂಡ ಬಳಕೆದಾರ ತಯರಾಗಿರಬೇಕು ಎಂದು ಅದು ಎಚ್ಚರಿಸಿದೆ.

Ad Widget

Ad Widget alt="Ad Widget"/>

Ad Widget

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಪೋಸ್ಟ್ ಹಾಕಿರುವ ಪ್ರಕರಣ ಎದುರಿಸುತ್ತಿರುವ ತಮಿಳು ನಟ, ಮಾಜಿ ಶಾಸಕ ಎಸ್.ವಿ. ಶೇಖರ್ (72) ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನ್ಯಾಯಾಲಯ ಇದೆ ವೇಳೆ ನಿರಾಕರಿಸಿದೆ. ಪತ್ರಕರ್ತೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget <> Ad Widget

ಇದನ್ನು ಓದಿ : ಬಾಲಿವುಡ್ ಬೆಡಗಿ, ಬಳಕುವ ಬಳ್ಳಿ ಶಿಲ್ಪಾ ಶೆಟ್ಟಿ ವಯಸ್ಸು ಎಷ್ಟು ? ನಟಿಯ ಫಿಟ್‌ನೆಸ್ ಫೋಟೊ ನೋಡಿ ಚರ್ಚೆ

2018ರಲ್ಲಿ ಶೇಖರ್ ಫೇಸ್​ಬುಕ್​ನಲ್ಲಿ ಆಕ್ಷೇಪಾರ್ಹ ಪೋಸ್ಟ್ ವೊಂದನ್ನು ಹಾಕಿದ್ದರು. ಪತ್ರಕರ್ತೆ ಅಂದಿನ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಅಸಭ್ಯವಾಗಿ ಆರೋಪ ಮಾಡಿದ್ದರು. ಈ ಬಗ್ಗೆ ಶೇಖರ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅವರ ಪೋಸ್ಟ್ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಡಿಎಂಕೆ ನಾಯಕರು ಶೇಖರ್ ರಾಜೀನಾಮೆಗೆ ಒತ್ತಾಯಿಸಿದ್ದರು. ಆಗ ಅವರು ಕ್ಷಮೆಯಾಚಿಸಿ ಪೋಸ್ಟ್ ಹಿಂತೆಗೆದುಕೊಂಡಿದ್ದರು.

Ad Widget

Ad Widget

ಶೇಖರ್‌ ಪರ ವಕೀಲರು ನ್ಯಾಯಾಲಯದಲ್ಲಿ ಇದೆ ವಿಚಾರವನ್ನು ಬೊಟ್ಟು ಮಾಡಿ ರಿಲೀಫ್‌ ನೀಡುವಂತೆ ಕೋರಿದ್ದರು. . ಕಣ್ಣಿಗೆ ಔಷಧ ಹಾಕಿದ್ದರಿಂದ ದೃಷ್ಟಿ ತುಸು ಮಂಜಾಗಿತ್ತು. ಹೀಗಾಗಿ ಪೋಸ್ಟ್​ನಲ್ಲಿ ಏನು ಬರೆದಿದ್ದಾರೆ ಎಂಬುದನ್ನು ನೋಡಲು ಅವರಿಗೆ ಸಾಧ್ಯವಾಗಿರಲಿಲ್ಲ . ಅದರೆ ತನ್ನ ತಪ್ಪಿನ ಅರಿವಾದ ಕೂಡಲೇ ಶೇಖರ್ ಅವರು ಪೋಸ್ಟ್ ತೆಗೆದು ಬೇಷರತ್ ಕ್ಷಮೆಯಾಚಿಸಿದ್ದಾರೆಎಂದು ವಕೀಲರು ವಾದ ಮಂಡಿಸಿದರು.

ಇದನ್ನು ಓದಿ : MESCOM Recruitment 2023: ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ ? ಮೆಸ್ಕಾಂನ 200 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಚಾರಣೆಯ ಸಂದರ್ಭ ನ್ಯಾಯಾಪೀಠ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಎಚ್ಚರಿಕೆ ವಹಿಸಬೇಕು .ಅದರ ಪ್ರಭಾವ ಮತ್ತು ವ್ಯಾಪ್ತಿಯ ಬಗ್ಗೆ ತಿಳಿದುಕೊಂಡು ಹೆಚ್ಚು ಜಾಗರೂಕತೆಯಿಂದ ಬಳಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಸಾಮಾಜಿಕ ಮಾಧ್ಯಮಗಳನ್ನು ಬಳಸುವುದು ಅತ್ಯಗತ್ಯ ಎಂದು ಯಾರಿಗಾದರೂ ಅನಿಸಿದರೆ , ಆ ಬಳಿಕ ಅದರಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು ಕೂಡ ಬಳಕೆದಾರ ತಯರಾಗಿರಬೇಕು ಎಂದು ಅದು ಎಚ್ಚರಿಸಿದೆ.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!