ದಕ್ಷಿಣ ಕನ್ನಡ
Big Breaking : ʼಜಿಲ್ಲೆಗೆ ಪುತ್ತಿಲ ಪರಿವಾರ ವಿಸ್ತರಣೆʼ – ಸಮಾಗಮ ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅರುಣ್ ಪುತ್ತಿಲರಿಂದ ಮಹತ್ವದ ಘೋಷಣೆ
ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತಿಲ ಪರಿವಾರವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು ಎಂದು ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಘೋಷಿಸಿದ್ದಾರೆ. ಅವರು ಪುತ್ತಿಲ ಪರಿವಾರ ಶತ ದಿನ ಪೂರೈಸಿದ ಹಿನ್ನಲೆಯಲ್ಲಿ ಪುತ್ತೂರು ಕೋಟೆಚಾ ಹಾಲ್ ನಲ್ಲಿ ಆಯೋಜಿಸಲಾಗಿದ್ದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಪುತ್ತಿಲ ಪರಿವಾರದ ಸಮಾಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಪುತ್ತಿಲ ಪರಿವಾರವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಸ್ಥಾಪಿಸಿರುವುದಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ,ಸುಶಿಕ್ಷಿತ ಸಮಾಜ ನಿರ್ಮಾಣ ಸಮಾಜದ ಅಶಕ್ತರ ಸಮಸ್ಯೆಗಳಿಗೆ ಸ್ಪಂದಿಸುವುದು, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯ ಮಾಡುವುದು ಈ ಪರಿವಾರದ ಘನ ಉದ್ದೇಶ. ಕಳೆದ 100 ದಿನಗಳಲ್ಲಿ ಆಶಕ್ತರಿಗೆ 5 ಲಕ್ಷ ರೂಪಾಯಿ ಧನ ಸಹಾಯ ಹಾಗೂ ಸುಮಾರು 5 ಲಕ್ಷ ರೂಪಾಯಿಯಷ್ಟು ಶಾಲಾ ಪುಸ್ತಕ ಇತ್ಯಾದಿ ಸಾಹಿತ್ಯಗಳನ್ನು ನೀಡುವ ಕಾರ್ಯ ಮಾಡಲಾಗಿದೆ. ಇದೀಗ ಪುತ್ತಿಲ ಪರಿವಾರದ QR ಕೋಡ್ ಅನ್ನು ಬಿಡುಗಡೆ ಮಾಡಲಾಗಿದ್ದು, ಅದರ ಮೂಲಕ ಧನ ಸಂಗ್ರಹಿಸಿ ಅದನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನೀಡುವ ಕಾರ್ಯ ಮಾಡಲಾಗುವುದು. ಪ್ರತಿ 6 ತಿಂಗಳಿಗೊಮ್ಮೆ ಇದರ ಲೆಕ್ಕ ಪತ್ರ ಒದಗಿಸಲಾಗುವುದು ಎಂದರು.

ಕಳೆದ 100 ದಿನಗಳಲ್ಲಿ ಹಲವು ಪ್ರತಿರೋಧಗಳ ನಡುವೆಯೂ ಶ್ರೇಷ್ಠ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದನ್ನು ತೋರಿಸಿಕೊಡುವ ಕಾರ್ಯ ಮಾಡಲಾಗಿದೆ. ವಿಧಾನಸಭೆ ಚುನಾವಣೆಯ ಬಳಿಕ ಗ್ರಾ. ಪಂ ಚುನಾವಣೆಯನ್ನು ಅಧಿಕಾರ , ಹಣ ಇಲ್ಲದಿದ್ದರೂ ಸಮರ್ಥವಾಗಿ ಎದುರಿಸಿದ್ದೇವೆ. ಸಾಮಾಜಿಕ ಬದ್ಧತೆಯ ಜತೆಗೆ ಹೊಸ ನಾಯಕರನ್ನು ಸೃಷ್ಟಿಸಲಾಗುವುದು. ಸೋಲು ಮತ್ತು ಸವಾಲುಗಳನ್ನು ಪರಿವಾರದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಎದುರಿಸಬೇಕು ಎಂದರು.

ಉದ್ದೇಶ, ಗುರಿಯನ್ನು ಇಟ್ಟುಕೊಂಡು ಜತೆಯಾಗಿ ಸಾಗುವ ಕಾರ್ಯವಾಗಬೇಕು. ಬದ್ಧತೆ, ದೃಢ ನಿರ್ಧಾರದಿಂದ ಮುನ್ನಡೆದಾಗ ಸವಾಲುಗಳನ್ನು ಎದುರಿಸಬಹುದಾಗಿದೆ. ಒಗ್ಗಟ್ಟಿನಿಂದ ಮಾಡುವ ಕೆಲಸದಲ್ಲಿ ಯಶಸ್ಸು ಲಭಿಸುತ್ತದೆ. ಸಾಮಾಜಿಕ ಚಟುವಟಿಕೆಯಿಂದ ನಿಜವಾದ ಸಂತೋಷವನ್ನು ಗಳಿಸಬಹುದು. ಜಯ ಸಿಗುವ ತನಕ ಪ್ರಯತ್ನವನ್ನು ಕೈಬಿಡಬಾರದು. ನಾಯಕರಾಗ ಬಯಸುವವರು ಸೋಲು ಟೀಕೆ ಮತ್ತು ಸವಾಲುಗಳನ್ನು ಎದುರಿಸಲು ಕಲಿಯಬೇಕು ಎಂದು ನಿವೃತ್ತ ಪ್ರಾಂಶುಪಾಲ ಬಿ. ವಿ. ಸೂರ್ಯನಾರಾಯಣ ಹೇಳಿದರು.

ಸಭೆಯಲ್ಲಿ ದೇಶ ಸೇವೆಯ ಸಂದರ್ಭ ಕಾಶ್ಮೀರದ ಲಡಾಕ್ ನಲ್ಲಿ ಅಪಘಾತದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಜಲಿ ಸಲ್ಲಿಸಲಾಯಿತು. ವಿವಿಧ ಗ್ರಾಮದ ಪುತ್ತಿಲ ಪರಿವಾರದಿಂದ ಕೈಗೊಂಡ ಸಾಮಾಜಿಕ ಚಟುವಟಿಕೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಪುತ್ತಿಲ ಪರಿವಾರದ ಸಾಮಾಜಿಕ ಚಟುವಟಿಕೆಗೆ ಸಹಾಯ ನೀಡುವವರ ಅನುಕೂಲಕ್ಕಾಗಿ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಲಾಯಿತು. ಮಹಿಳಾ ಪರಿವಾರದ ಪದಾಧಿಕಾರಿಗಳನ್ನು ಘೋಷಿಸಲಾಯಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ವಹಿಸಿದ್ದರು. ಧಾರ್ಮಿಕ ಚಿಂತಕ ಶ್ರೀಕೃಷ್ಣ ಉಪಾಧ್ಯಾಯ, ಗೌರವ ಸಲಹೆಗಾರ ಸುನಿಲ್ ಬೋರ್ಕರ್, ಭೀಮ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಶರಣ್ಯ, ಶ್ರಾವ್ಯ ಪ್ರಾರ್ಥಿಸಿದರು. ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿ ಕುಮಾರ್ ಮಠ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಪ್ರಸ್ತಾವನೆಗೈದರು. ನಗರ ಅಧ್ಯಕ್ಷ ಅನಿಲ್ ತೆಂಕಿಲ ವಂದಿಸಿದರು. ಮಾಧ್ಯಮ ವಕ್ತಾರ ನವೀನ್ ರೈ ಪಂಜಳ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.
ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.
ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.
ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.
ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.
ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.
ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.
ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.
ನಿಧನ ವಾರ್ತೆ
Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.
ತರಬೇತಿ ಮುಗಿದ ಬಳಿಕ ಶ್ರೇಯಸ್ ಹಾಗೂ ಸ್ನೇಹಿತರು ಸ್ಟೇಟ್ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.
ಶ್ರೇಯಸ್ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್ ಕುಟುಂಬಸ್ಥರಿಗೆ ತಿಳಿದುಬಂದಿದೆ.
ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
-
ದಕ್ಷಿಣ ಕನ್ನಡ16 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized21 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ22 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ23 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ15 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಅಪರಾಧ22 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು22 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















