ಕೊಡಗು
General Thimmayya | ಮಡಿಕೇರಿ ಪೇಟೆಯ ಜನರಲ್ ತಿಮ್ಮಯ್ಯ ಪ್ರತಿಮೆಗೆ ಬಸ್ ಡಿಕ್ಕಿ – ನೆಲಕ್ಕುರುಳಿದ ದಂಡನಾಯಕನ ಪ್ರತಿಮೆ – ಸರ್ಕಲ್ ನಲ್ಲಿದ್ದವ ಪವಾಡಸದೃಶ್ಯ ಪಾರು ವಿಡಿಯೋ ವೈರಲ್
ಮಡಿಕೇರಿ ಪಟ್ಟಣದಲ್ಲಿರುವ ಜನರಲ್ ತಿಮ್ಮಯ್ಯ (General Thimmayya) ಪ್ರತಿಮೆಗೆ ರಾತ್ರಿ KSRTC ಬಸ್ ಡಿಕ್ಕಿಯಾಗಿದೆ ಪ್ರತಿಮೆ ನೆಲಕ್ಕುರುಳಿದೆ.
ಮಡಿಕೇರಿಯ ಜನರಲ್ ತಿಮ್ಮಯ್ಯ ವೃತದಲ್ಲಿರುವ ವೀರ ಸೇನಾನಿಯ ಪ್ರತಿಮೆಗೆ ನಿಯಂತ್ರಣ ತಪ್ಪಿ ಬಸ್ ಡಿಕ್ಕಿಯಾದ ಪರಿಣಾಮ ಪ್ರತಿಮೆ ನೆಲಕ್ಕೆ ಬಿದ್ದಿದ್ದು, ಮಡಿಕೇರಿ ಡಿಪ್ಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನಕ್ಕೆ ಅಪಘಾತ ಆಗುವುದನ್ನು ತಪ್ಪಿಸಲು ಹೋಗಿ ಪ್ರತಿಮೆಗೆ ಡಿಕ್ಕಿಯಾಗಿದೆ. ಅಪಘಾತ ಸಂದರ್ಭ ಸರ್ಕಲ್ ಬಳಿ ಇದ್ದ ವ್ಯಕ್ತಿಯೊಬ್ಬರು ಪವಾಡ ರೀತಿ ಪಾರದ ಸಿಸಿಟಿವಿಯ ದೃಶ್ಯ ವೈರಲ್ ಆಗಿದೆ.
ಅಪಘಾತದಿಂದ ಚಾಲಕ ನಿರ್ವಾಹಕ ಪುಟ್ಟಗಾಯಗಳಾಗಿದೆ.ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪದ್ಮ ಭೂಷಣ ಜನರಲ್ ಕೆ ಎಸ್ ತಿಮ್ಮಯ್ಯ ಅವರು ಭಾರತದ ಭೂಸೇನೆಯ ದಂಡನಾಯಕರಾಗಿದ್ದರು. ಅವರ ಪ್ರತಿಮೆಯನ್ನು 21 ಏಪ್ರಿಲ್ 1973 ರಲ್ಲಿ ಫೀಲ್ಡ್ ಮಾರ್ಷಲ್ ಸ್ಯಾಮ್ ಮನಿಕ್ಷಾ ಅವರು ಉದ್ಘಾಟಿಸಿದ್ದರು.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ21 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್5 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು21 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















