ಪುತ್ತೂರು
Puttur | ಬಡಗನ್ನೂರು ಬಿಜೆಪಿ ಮುಖಂಡ ವಾಮನ ಮೂಲ್ಯ ಕಾಂಗ್ರೆಸ್ ಸೇರ್ಪಡೆ
ಪುತ್ತೂರು: ಪುತ್ತೂರು ತಾಲೂಕಿನ (Puttur) ಬಡಗನ್ನೂರು ಗ್ರಾಮದ ಹಿರಿಯ ಬಿಜೆಪಿ ಮುಖಂಡ ವಾಮನಮೂಲ್ಯರವರು ತನ್ನ ಬೆಂಬಲಿಗರೊಂದಿಗೆ ಆ. 21 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕರು ಮತ್ತು ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರುರವರು ಪಕ್ಷದ ದ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ರಾಕೇಶ್ ರೈ ಕುದ್ಕಾಡಿ, ಪುರಂದರ್ ರೈ ಕುದ್ಕಾಡಿ, ಬಡಗನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ರವಿರಾಜ್ ರೈ ಸಜಂಕಾಡಿ, ಗ್ರಾಪಂ ಸದಸ್ಯರಾದ ಧರ್ಮೇಂದ್ರ ಕುಲಾಲ್, ಜ್ಯೋತಿ ಕಲಾವತಿ ಪಟ್ಲಡ್ಕ, ಗುರುಪ್ರಸಾದ್ ರೈ ಕುದ್ಕಾಡಿ, ಆಶಿಕ್ ಮೈಂದನಡ್ಕ, ಖಾದರ್ ಸುಳ್ಯಪದವು, ಕರೀಂ ಪಿಲಿಕ್ಕುಡೆ, ತ್ಯಾಗರಾಜ್, ಆಬಿದ್, ವಿಜಯ್, ಮತ್ತಿತರರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ದಕ್ಷಿಣ ಕನ್ನಡ
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

ಪುತ್ತೂರು: ವಾಸವಿಲ್ಲದ ಮನೆಯೊಂದಕ್ಕೆ ಬೆಂಕಿ ಬಿದ್ದು ಸುಮಾರು ₹10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಇದೇ ವೇಳೆ ಮನೆಯಲ್ಲಿದ್ದ ವಿದ್ಯುತ್ ತಂತಿ, ಸೀಲಿಂಗ್ ಫ್ಯಾನ್ ಸೇರಿದಂತೆ ಸುಮಾರು ₹30 ಸಾವಿರ ಮೌಲ್ಯದ ವಸ್ತುಗಳು ಕಳವಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು ಮೂಲದ ರಶ್ಮಿ ಬಿ. ಭಟ್ ಅವರಿಗೆ ಸೇರಿದ ಪುತ್ತೂರಿನ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ತಿಂಗಳಿಗೆ ಒಂದು ಅಥವಾ ಎರಡು ಬಾರಿ ಮಾತ್ರ ಅವರು ಮನೆಗೆ ಬಂದು ಹೋಗುತ್ತಿದ್ದರು. ಸೆ. 15ರಂದು ಮನೆಗೆ ಬಂದಿದ್ದ ಅವರು, ಬಳಿಕ ಅ. 11ರಂದು ಬೆಳಗ್ಗೆ 7 ಗಂಟೆಗೆ ಅವರ ದೊಡ್ಡಪ್ಪನ ಮಗ ಎನ್.ಟಿ. ಕಿಶೋರ್ ಅವರು ಮನೆಗೆ ಬೆಂಕಿ ಬಿದ್ದಿರುವುದಾಗಿ ಮಾಹಿತಿ ನೀಡಿದ್ದಾರೆ.
ಕೂಡಲೇ ಕಾಸರಗೋಡಿನಿಂದ ಪುತ್ತೂರಿಗೆ ಬಂದ ರಶ್ಮಿ ಭಟ್ ಅವರು ಮನೆ ಪರಿಶೀಲಿಸಿದಾಗ, ಮನೆಯ ಹಿಂಭಾಗದಲ್ಲಿದ್ದ ಎರಡು ಬೆಡ್ರೂಮ್ಗಳು, ಎರಡು ಬಾತ್ರೂಮ್ಗಳು ಹಾಗೂ ತೆರೆದ ಹಾಲ್ನಂತಹ ಛಾವಣಿಯ ಭಾಗ ಬೆಂಕಿಯಿಂದ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.
ಅಲ್ಲದೆ, ಮನೆಯ ಹಿಂಭಾಗದಲ್ಲಿರುವ ಅಡುಗೆಮನೆಯ ಬಾಗಿಲಿನ ಕೆಳಭಾಗದ ಒಂದು ಅಡ್ಡ ಹಲಗೆಯನ್ನು ತೆಗೆದಿರುವುದು ಕಂಡುಬಂದಿದೆ. ಮನೆಯ ಒಳಗಿನ ವಿದ್ಯುತ್ ಸ್ವಿಚ್ ಬೋರ್ಡ್ಗಳನ್ನು ಹಾನಿಗೊಳಿಸಿ, ವಿದ್ಯುತ್ ತಂತಿಗಳನ್ನು ತೆಗೆದುಕೊಂಡು ಹೋಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಐದು ಸೀಲಿಂಗ್ ಫ್ಯಾನ್ಗಳು ಹಾಗೂ ಬುಟ್ಟಿಯಲ್ಲಿಟ್ಟಿದ್ದ ದೇವರ ಪೂಜಾ ಸಾಮಗ್ರಿಗಳು ನಾಪತ್ತೆಯಾಗಿವೆ. ಫ್ರಿಡ್ಜ್ ಮತ್ತು ಮೈಕ್ರೋವೇವ್ಗಳನ್ನು ಕೂಡ ಕಳಚಿ ಪರಿಶೀಲಿಸಿರುವುದು ಕಂಡುಬಂದಿದೆ.
ಸೆ. 15ರಿಂದ ಅ. 11ರ ಬೆಳಗಿನ ಜಾವದ ನಡುವೆ ಯಾರೋ ಮನೆಯೊಳಗೆ ನುಗ್ಗಿ ವಸ್ತುಗಳನ್ನು ಕಳವು ಮಾಡಿ, ಬೆಂಕಿ ಹಚ್ಚಿರಬಹುದು ಎಂದು ರಶ್ಮಿ ಬಿ. ಭಟ್ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಕಳವಾದ ವಸ್ತುಗಳ ಅಂದಾಜು ಮೌಲ್ಯ ₹30 ಸಾವಿರವಾಗಿದ್ದು, ಬೆಂಕಿಯಿಂದ ಸುಮಾರು ₹10 ಲಕ್ಷ ನಷ್ಟವಾಗಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
ನಿಧನ ವಾರ್ತೆ19 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ24 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು22 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
Uncategorized17 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ19 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್19 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಮಂಗಳೂರು18 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ರಾಜಕೀಯ24 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್


















